ತುಮಕೂರು | ಕ್ರೀಡಾ ಚಟುವಟಿಕೆ ಉತ್ತೇಜಿಸಲು ಅಗತ್ಯ ಸೌಲಭ್ಯ : ಜಿಲ್ಲಾಧಿಕಾರಿ ಶುಭಕಲ್ಯಾಣ್

Date:

ತುಮಕೂರು ಜಿಲ್ಲೆಯಲ್ಲಿ ಕ್ರೀಡಾ ಚಟುವಟಿಕೆಗಳನ್ನು ಉತ್ತೇಜಿಸಲು ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಕರ್ನಾಟಕ ಒಲಂಪಿಕ್ ಅಸೋಸಿಯೇಷನ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಯೋಗದಲ್ಲಿ ಕೈಗೊಳ್ಳಲಾಗುತ್ತಿದೆ ಎಂದು ತುಮಕೂರು ಜಿಲ್ಲಾಧಿಕಾರಿ ಶುಭಕಲ್ಯಾಣ ತಿಳಿಸಿದ್ದಾರೆ.

- Advertisement -

ತುಮಕೂರಿನ ಮಹಾತ್ಮಾಗಾಂಧಿ ಕ್ರೀಡಾಂಗಣದ ಆವರಣದಲ್ಲಿರುವ ಡಾ.ಜಿ.ಪರಮೇಶ್ವರ್ ಒಳಾಂಗಣ ಕ್ರೀಡಾಂಗಣದಲ್ಲಿ ತುಮಕೂರು ಜಿಲ್ಲಾ ಬಾಸ್ಕೆಟ್‌ ಬಾಲ್ ಅಸೋಸಿಯೇಶನ್‌ ವತಿಯಿಂದ ಆಯೋಜಿಸಿದ್ದ ಬಾಸ್ಕೆಟ್‌ ಬಾಲ್ ಬೇಸಿಗೆ ಶಿಬಿರ ಉದ್ಟಾಟಿಸಿ ಮಾತನಾಡಿದ ಅವರು, ಜಿಲ್ಲಾಡಳಿತದ ಒತ್ತಾಸೆಯ ಫಲವಾಗಿ ಹೆಚ್ಚು ಹೆಚ್ಚು ಕ್ರೀಡಾ ಚಟುವಟಿಕೆಗಳು ಆರಂಭಗೊಂಡಿವೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...

ಎಚ್ಚೆತ್ತುಕೊಳ್ಳುತ್ತಿವೆ DMK, YSRCP; ಡಿಲಿಮಿಟೇಷನ್‌ ಮಸೂದೆ ಮತ್ತೆ ಸೋಲುವ...

ಮೋದಿಯವರ ಅಹಂಕಾರದ ಆಡಳಿತಕ್ಕೆ ದಕ್ಷಿಣ ಭಾರತವು ಎಂದಿಗೂ ತಲೆಬಾಗುವುದಿಲ್ಲ, ಮತ್ತು ಈ ಬಾರಿಯ ಅವರ ಹತಾಶೆಯ ರಾಜಕೀಯ ಕುತಂತ್ರಗಳು ಅವರ ಪಾಲಿಗೆ ತಿರುಗುಬಾಣವಾಗಿ ದೇಶದ ಪ್ರಜಾಪ್ರಭುತ್ವವು ಗೆಲ್ಲುವುದು ಖಚಿತ ಮಹಿಳಾ ಮೀಸಲಾತಿ ಎಂಬ ಪವಿತ್ರ...

ಮಹಾತ್ಮಗಾಂಧಿ ಕ್ರೀಡಾಂಗಣವನ್ನು ಹೊಸದಾಗಿ ಸ್ಮಾರ್ಟ್ ಸಿಟಿ ವತಿಯಿಂದ ನಿರ್ಮಿಸಿದ ಸಂದರ್ಭದಲ್ಲಿ ಹಳೆಯ ಬಾಸ್ಕೆಟ್‌ ಬಾಲ್ ಅಂಕಣವನ್ನು ತೆರವುಗೊಳಿಸಲಾಗಿತ್ತು. ತುಮಕೂರು ಬಾಸ್ಕೆಟ್‌ ಬಾಲ್ ಅಸೋಸಿಯೇಷನ್‌ ಕೊರಿಕೆ ಮೇರೆಗೆ ಸುಮಾರು ರೂ.10 ಲಕ್ಷ ವೆಚ್ಚದಲ್ಲಿ ಹೊಸದಾಗಿ ಬಾಸ್ಕೆಟ್‌ ಬಾಲ್ ಅಂಕಣ ಸಿದ್ದಪಡಿಸಿ ನೀಡಿದ್ದೇವೆ. ಸಿಮೆಂಟ್ ಅಂಕಣ ಜಾರುತ್ತಿರುವ ಹಿನ್ನೆಲೆಯಲ್ಲಿ ಸಿಂಥೆಟಿಕ್ ಬಣ್ಣ ಮಾಡಿಸಿಕೊಡಲು ಅಸೋಸಿಯೇಷನ್ ಪದಾಧಿಕಾರಿಗಳು ಮನವಿ ಮಾಡಿ ಒಲಂಪಿಕ್ ಅಸೋಸಿಯೇಷನ್‌ ಮೂಲಕ ಶೀಘ್ರವಾಗಿ ಸಿಂಥೆಟಿಕ್ ಕೋರ್ಟ್ ಗೆ ವ್ಯವಸ್ಥೆ ಮಾಡಲಾಗುವುದು ಎಂದು ಭರವಸೆ ನೀಡಿದರು.

ತುಮಕೂರು ಅಮಾನಿಕೆರೆಯಲ್ಲಿ ಕಯಾಕಿಂಗ್ ತರಬೇತಿ ಸಹ ಆರಂಭಗೊಂಡಿದೆ. ಕರ್ನಾಟಕ ಒಲಿಂಪಿಕ್ ಅಸೋಸಿಯೇಷನ್‌ ನ ನುರಿತ ತಜ್ಞರು ತರಬೇತಿ ನೀಡುತ್ತಿದ್ದಾರೆ. ಹಾಗೆಯೇ ಬಾಸ್ಕೆಟ್‌ ಬಾಲ್ ಬೇಸಿಗೆ ಶಿಬಿರ ಅರಂಭಗೊಂಡಿದೆ‌. ನೂರಾರು ಮಕ್ಕಳು ಮೊಬೈಲ್ ಬಿಟ್ಟು ಅಂಕಣಕ್ಕೆ ಇಳಿದಿರುವುದು ಒಳ್ಳೆಯ ಬೆಳವಣಿಗೆ. ಈ ಉತ್ಸಾಹ ಮತ್ತು ಆಸಕ್ತಿಯನ್ನು ಹೆಚ್ಚು ಮಾಡಲು ಜಿಲ್ಲಾಡಳಿತ ಎಲ್ಲಾ ಕ್ರಮಗಳನ್ಬು ಮುಂದಿನ ದಿನಗಳಲ್ಲಿ ಕೈಗೊಳ್ಳಲಿದೆ ಎಂದು ತಿಳಿಸಿದರು.

ತುಮಕೂರು ಜಿಲ್ಲಾ ಬಾಸ್ಕೆಟ್‌ ಬಾಲ್ ಅಸೋಸಿಯೇಷನ್ ನ ಅನಿಲ್ ಕುಮಾರ್ ಮಾತನಾಡಿ, ಜಿಲ್ಲಾಡಳಿತದ ನೆರವಿನಿಂದ ಎಂಟು ವರ್ಷಗಳ ನಂತರ ಬಾಸ್ಕೆಟ್‌ ಬಾಲ್ ಅಂಕಣ ಆಟಗಾರರಿಗೆ ದೊರೆತಿದೆ. ಇದಕ್ಕಾಗಿ ಜಿಲ್ಲಾಧಿಕಾರಿಗಳಿಗೆ ಅಸೋಸಿಯೇಷನ್ ಪರವಾಗಿ ಅಭಿನಂದನೆ ಸಲ್ಲಿಸುತ್ತೇವೆ. ಬಾಸ್ಕೆಟ್‌ ಬಾಲ್ ಬೇಸಿಗೆ ಶಿಬಿರದಲ್ಲಿ 6 ರಿಂದ 16 ವರ್ಷ ವಯಸ್ಸಿನ 35ಕ್ಕೂ ಹೆಚ್ಚು ಮಕ್ಕಳು ಭಾಗವಹಿಸಿದ್ದು, ಹಿರಿಯ ಆಟಗಾರರು ತರಬೇತಿ ನೀಡಲಿದ್ದಾರೆ. ತುಮಕೂರು ಬಾಸ್ಕೆಟ್‌ ಬಾಲ್ ಅಸೋಸಿಯೇಷನ್ ಎಲ್ಲಾ ವಯೋಮಾನದ ಬಲಿಷ್ಠ ತಂಡ ಕಟ್ಟಲು ಸಹಕಾರಿಯಾಗಲಿದೆ ಎಂದರು.

 ಇದಕ್ಕೆ ಸಹಕಾರ ನೀಡಿದ ಅಸೋಸಿಯೇಷನ್ ನ ಎಲ್ಲಾ ಸದಸ್ಯರಿಗೆ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು.

ಬೋರ್ಡ್ ಸದಸ್ಯರಾದ ಮಧುಸೂಧನ್.ಬಿ, ರಕ್ಷಿತ ವಿ., ಆರ್.ಕಾರ್ತಿಕ್ ಗೌಡ, ಹರ್ಷ ಮತ್ತು ಸಾಗರ್.ಆರ್ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಪತ್ರಿಕೋದ್ಯಮದಲ್ಲಿ ಸತ್ಯನಿಷ್ಠೆಯೇ ಅಡಿಪಾಯ: ಕಾವ್ಯ ಎನ್

 ಪತ್ರಿಕೋದ್ಯಮದಲ್ಲಿ ಯಶಸ್ಸು ಸಾಧಿಸಲು ಭಾಷೆಯ ಮೇಲಿನ ಹಿಡಿತ, ಪರಿಣಾಮಕಾರಿ ಬರವಣಿಗೆ ಹಾಗೂ...

ತುಮಕೂರು | ಜಾಗತೀಕರಣದ ನಡುವೆ ಪ್ರಾದೇಶಿಕ ಅಸ್ಮಿತೆ ಉಳಿಸುವ ಶಕ್ತಿ ರಂಗಭೂಮಿಗಿದೆ : ರಂಗನಿರ್ದೇಶಕ ಲಕ್ಷ್ಮಣ್ ಕೆ.ಪಿ.

 ಜಾಗತೀಕರಣದ ಪ್ರಭಾವದಿಂದ ಪ್ರಾದೇಶಿಕ ಭಾಷೆ, ಸಂಸ್ಕೃತಿ ಮತ್ತು ಅಸ್ಮಿತೆಗಳು ಅಳಿಸಿಹೋಗುವ ಆತಂಕ...

ತುಮಕೂರು | ಸ್ಟಿಂಗ್ ಪ್ರಕರಣದ ಕುರಿತು ತನಿಖೆಯಾಗಲಿ : ಕೆ.ಎನ್. ರಾಜಣ್ಣ

 ಸ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರು ಕಂಡುಬಂದಲ್ಲಿ ಅವರ...

ತುಮಕೂರು | ಸಚಿವ ಸೋಮಣ್ಣ ಭಾಷಣದ ವೇಳೆ ಚುನಾವಣಾ ಪ್ರಚಾರಕ್ಕೆ ಆಕ್ಷೇಪ; ಸಭೆಯಲ್ಲಿ ವಾಗ್ವಾದ

ತುಮಕೂರು ನಗರದ ಶ್ರೀ ಮುರುಘ ರಾಜೇಂದ್ರ ಸಭಾಂಗಣದಲ್ಲಿ ವೀರಶೈವ ಲಿಂಗಾಯತ  ಸಮಾಜದ...