ತುಮಕೂರು | ಹೊಸ ವರ್ಷಾಚರಣೆ : ಸಾರ್ವಜನಿಕರ ಪ್ರವೇಶ ನಿರ್ಬಂಧ

Date:

ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಡಿಸೆಂಬರ್ 31ರ ಸಂಜೆ 6 ರಿಂದ 2026ರ ಜನವರಿ 1ರ ಬೆಳಿಗ್ಗೆ 8 ಗಂಟೆಯವರೆಗೆ ಹಾಗೂ ಜನವರಿ 1ರ ಸಂಜೆ 6 ರಿಂದ ಜನವರಿ 2ರ ಬೆಳಿಗ್ಗೆ 8 ಗಂಟೆಯವರೆಗೆ ಕ್ಯಾತ್ಸಂದ್ರ ಠಾಣೆ ಸರಹದ್ದು, ನಾಮದ ಚಿಲುಮೆ, ಬಸದಿ ಬೆಟ್ಟ ಹಾಗೂ ದೇವರಾಯನದುರ್ಗ ಪ್ರದೇಶಗಳಿಗೆ ಸಾರ್ವಜನಿಕರು, ಪ್ರವಾಸಿಗರು ಹಾಗೂ ವಾಹನಗಳ ಪ್ರವೇಶವನ್ನು ನಿರ್ಬಂಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಶುಭ ಕಲ್ಯಾಣ್ ಆದೇಶ ಹೊರಡಿಸಿದ್ದಾರೆ. 

- Advertisement -

 ಕ್ಯಾತ್ಸಂದ್ರ ಠಾಣೆ ಸರಹದ್ದು, ನಾಮದ ಚಿಲುಮೆ, ಬಸದಿ ಬೆಟ್ಟ ಹಾಗೂ ದೇವರಾಯನದುರ್ಗ ಬೆಟ್ಟಕ್ಕೆ 2026ರ ಹೊಸ ವರ್ಷಾಚರಣೆ ನಿಮಿತ್ತ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು/ಪ್ರವಾಸಿಗರು ಭೇಟಿ ನೀಡಲಿದ್ದು, ಸಂಭ್ರಮಾಚರಣೆ ಸಮಯದಲ್ಲಿ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗುವ ಸಂಭವವಿರುವ ಹಿನ್ನೆಲೆಯಲ್ಲಿ ಈ ಆದೇಶವನ್ನು ಹೊರಡಿಸಲಾಗಿದೆ.  

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

 ಸಾರ್ವಜನಿಕರು ಮದ್ಯಪಾನ ಮಾಡಿ ಹಾಗೂ ಜಾಲಿರೈಡ್ ನೆಪದಲ್ಲಿ ವಾಹನಗಳನ್ನು ಚಾಲನೆ ಮಾಡುವುದರಿಂದ ಮಾರಣಾಂತಿಕ ರಸ್ತೆ ಅಪಘಾತ ಸಂಭವಿಸುವ ಹಾಗೂ ಈ ಪ್ರದೇಶಗಳು ಸುರಕ್ಷಿತ ಅರಣ್ಯ ಆವೃತ ಪ್ರದೇಶಗಳಾಗಿದ್ದು, ಪ್ರವಾಸಿಗರ ಮೇಲೆ ಕಾಡು ಪ್ರಾಣಿಗಳು ದಾಳಿ ಮಾಡುವ ಸಾಧ್ಯತೆ ಇರುತ್ತದೆ.  

ಹೊಸ ವರ್ಷದ ಆಚರಣೆಯ ಹಿನ್ನೆಲೆಯಲ್ಲಿ ನಾಮದ ಚಿಲುಮೆ, ಬಸದಿ ಬೆಟ್ಟ, ದೇವರಾಯನದುರ್ಗ ಪ್ರದೇಶಗಳಿಗೆ ಸಾರ್ವಜನಿಕರು ಕಾನೂನು ಬಾಹಿರ ಚಟುವಟಿಕೆಯಲ್ಲಿ ತೊಡಗಿ ಗುಂಪು ಘರ್ಷಣೆಗಳಾಗಿ ಕಾನೂನು ಹಾಗೂ ಸುವ್ಯವಸ್ಥೆಗೆ ಧಕ್ಕೆ ಉಂಟಾಗುವ ಸಂಭವವಿರುವುದರಿಂದ ಈ ನಿರ್ಬಂಧವನ್ನು ಹೇರಲಾಗಿದೆ. ಆದರೆ ನಿರ್ಬಂಧಿತ ಅವಧಿಯಲ್ಲಿ ಮೇಲ್ಕಾಣಿಸಿದ ಮಾರ್ಗವಾಗಿ ದೈನಂದಿನ ಚಟುವಟಿಕೆಗಳಿಗೆ ತೆರಳುವ ಸ್ಥಳೀಯರು ಸದರಿ ಮಾರ್ಗ ಮಧ್ಯೆ ರಸ್ತೆಯಲ್ಲಿ ವಾಹನಗಳನ್ನು ನಿಲ್ಲಿಸದಂತೆ ತೆರಳಲು ಅನುಮತಿ ನೀಡಲಾಗಿದೆ. ಈ ಆದೇಶವನ್ನು ಉಲ್ಲಂಘಿಸುವ ವ್ಯಕ್ತಿಗಳ ವಿರುದ್ಧ ಕಾನೂನು ರೀತ್ಯಾ ಕ್ರಮವಹಿಸಲು ಅವರು ಸೂಚನೆ ನೀಡಿದ್ದಾರೆ. 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಎಸ್‌ಐಆರ್‌ ಹೆಸರಿನಲ್ಲಿ ಮತದಾರರ ಹಕ್ಕು ಕಸಿಯುವ ಆರೋಪ: ಸೆ.28ಕ್ಕೆ ಕಾಂಗ್ರೆಸ್ ಬೃಹತ್ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯಲ್ಲಿ ಬಡವರು, ದಲಿತರು,...

ತುಮಕೂರು | ಎಸ್‌ಐಆರ್ ರದ್ದುಪಡಿಸಿ, ಜ್ಞಾನೇಶ್ ಕುಮಾರ್‌ರನ್ನು ಪದಚ್ಯುತಿಗೊಳಿಸಿ : ಪ್ರಕಾಶ್ ರಾಜ್

ಜನರನ್ನು ಗೊಂದಲಕ್ಕೆ ಸಿಲುಕಿಸಿ ಅರ್ಹರ ಮತಹಕ್ಕು ಕಸಿಯುವ ಸಾಧ್ಯತೆ ಇರುವ ಎಸ್‌ಐಆರ್‌...

ಮಧುಗಿರಿಯಲ್ಲಿ ಲೋಕಾಯುಕ್ತ ಬೇಟೆ : ₹30 ಸಾವಿರ ಲಂಚ ಪಡೆಯುವಾಗ ಆರ್‌ಐ ಬಂಧನ

 ಪೌತಿ ಖಾತೆ ಮಾಡಿಕೊಡಲು ರೈತನಿಂದ ₹1 ಲಕ್ಷ ಲಂಚದ ಬೇಡಿಕೆ ಇಟ್ಟಿದ್ದ...

ತುಮಕೂರು | ಪಿಟಿಸಿಎಲ್ ಕಾಯ್ದೆ ಹೋರಾಟ ಸಮಿತಿ ಜಿಲ್ಲಾ ಅಧ್ಯಕ್ಷರಾಗಿ ಶೆಟ್ಟಿಹಳ್ಳಿ ಮಹೇಶ್ ಅವಿರೋಧ ಆಯ್ಕೆ

ಪಿಟಿಸಿಎಲ್ ಕಾಯ್ದೆಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯಗಳ ವಿರುದ್ಧ ಹೋರಾಟ...