ತುಮಕೂರು | ಪುಸ್ತಕ ಪ್ರಕಟಣೆಗೆ ಸರ್ಕಾರದ ನೆರವು ಇಲ್ಲ: ಪ್ರೊ. ರಾಜಪ್ಪ ದಳವಾಯಿ ಬೇಸರ

Date:

ಸರ್ಕಾರ ಪುಸ್ತಕಗಳ ಪ್ರಕಟಣೆಗೆ ಅಗತ್ಯ ಹಣಕಾಸಿನ ನೆರವು ನೀಡದೇ, ಅಭಿವೃದ್ಧಿ ಕಾಮಗಾರಿಗಳ ಹೆಸರಿನಲ್ಲಿ ಅನಗತ್ಯ ವೆಚ್ಚಗಳಿಗೆ ಆದ್ಯತೆ ನೀಡುತ್ತಿದೆ ಎಂದು ಸಂಸ್ಕೃತಿ ಚಿಂತಕ ಪ್ರೊ. ರಾಜಪ್ಪ ದಳವಾಯಿ ಕಳವಳ ವ್ಯಕ್ತಪಡಿಸಿದರು.

- Advertisement -

ಅರುಣೋದಯ ಗ್ರಾಮೀಣಾಭಿವೃದ್ಧಿ ಟ್ರಸ್ಟ್, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ಕರ್ನಾಟಕ ಲೇಖಕಿಯರ ಸಂಘ (ಜಿಲ್ಲಾ ಶಾಖೆ), ಆಕೃತಿ ಪ್ರಕಾಶ ಹಾಗೂ ಜಲಜಂಬೂ ಲಿಂಕ್ಸ್ ಸಹಯೋಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಾ. ರವಿಕುಮಾರ್ ನೀಹ ಅವರ “ನೀಗೊನಿ” ಕಾದಂಬರಿ ಹಾಗೂ ಮೂರ್ತಿ ತಿಮ್ಮನಹಳ್ಳಿ ಅವರ “ಕರುಪ್ಡಿ” ಕಥಾಸಂಕಲನ ಬಿಡುಗಡೆ ಮಾಡಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ಹನಿ ನೀರಿಗೂ ಪರದಾಡುತ್ತಿರುವ ದಣ್ಣೂರು...

ಎರಡು ನಳಗಳ ಮುಂದೆ ಖಾಲಿ ಕೊಡ ಹಿಡಿದು ಗಂಟೆಗಟ್ಟಲೆ ಕಾಯುವ ಮಹಿಳೆಯರು; ಬೆಳೆ ನಷ್ಟ, ಜಾನುವಾರು ಮಾರಾಟ, ಉದ್ಯೋಗದ ಕೊರತೆಯಿಂದ ಗ್ರಾಮ ತೊರೆಯುತ್ತಿರುವ ಕುಟುಂಬಗಳು ಒಂದು ಕೊಡ ನೀರಿಗಾಗಿ ಮನೆಮನೆಯ ಮುಂದೆ ಕಾಯಬೇಕು....

‘ನನ್ನೊಳಗೆ ನೀವೊ ನಿಮ್ಮೊಳಗೆ ನಾನೊ’

ಲೇಹ್ ಲಡಾಕಿನ ಪರ್ವತ ಶ್ರೇಣಿಗಳ ನಡುವೆ ನಮ್ಮ ಕಾರು ನಿಧಾನವಾಗಿ ಸಾಗುತ್ತಿತ್ತು. ಬೇರೆ ಬೇರೆ ಬಣ್ಣಗಳ ಪರ್ವತ ಶಿಖರಗಳು, ಕೆಳಗಡೆ ಕಿಲೋಮಿಟರ್ ಉದ್ದದ ಕಿರಿದಾದ ರಸ್ತೆ, ಪಕ್ಕದಲ್ಲಿ ಸ್ವಲ್ಪ ಎಚ್ಚರ ತಪ್ಪಿದರೂ ಕಾಣುವ...

ಕಾರ್ಪೊರೇಟ್‌ ಕಾಳಗ | ಮಸ್ಕ್‌ನ ಸ್ಟಾರ್‌ಲಿಂಕ್ ಮಣಿಸಿ ಅಂಬಾನಿಯ...

ಎಲಾನ್ ಮಸ್ಕ್ ಒಡೆತನದ ‘ಸ್ಟಾರ್‌ಲಿಂಕ್’ ಉಪಗ್ರಹ ಇಂಟರ್ನೆಟ್ ಭಾರತಕ್ಕೆ ಕಾಲಿಡುತ್ತಿದ್ದಂತೆ ರಿಲಯನ್ಸ್ ಜಿಯೋದ ಮಾರುಕಟ್ಟೆ ಏಕಸ್ವಾಮ್ಯಕ್ಕೆ ಭಾರಿ ಪೈಪೋಟಿ ಎದುರಾಗುವಂತೆ ಕಾಣುತ್ತಿದೆ. ಈ ಬೆನ್ನಲ್ಲೇ, ರಾಷ್ಟ್ರೀಯ ಭದ್ರತೆ ಮತ್ತು ದತ್ತಾಂಶ ಸುರಕ್ಷತೆಯ ನೆಪವೊಡ್ಡಿ...

ಕನ್ನಡ ಪುಸ್ತಕಗಳಿಗೆ ಓದುಗರಿಗಿಂತ ನೋಡುಗರೇ ಹೆಚ್ಚು ಇದ್ದಾರೆ. ಪುಸ್ತಕಗಳನ್ನು ಖರೀದಿಸುವ ಸಂಸ್ಕೃತಿ ಕ್ಷೀಣಿಸುತ್ತಿದ್ದು, ಲೇಖಕರು ಸಾವಿರ ಪ್ರತಿಗಳನ್ನು ಮುದ್ರಿಸಿದರೂ ಅವನ್ನು ಉಚಿತ ಪ್ರತಿಗಳಾಗಿ ಹಂಚಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಕೇರಳದಲ್ಲಿ ಲೇಖಕರ ಮೊದಲ ಕೃತಿಯೇ ಹತ್ತು ಸಾವಿರ ಪ್ರತಿಗಳ ಮುದ್ರಣ ಕಾಣುತ್ತದೆ. ಅಲ್ಲಿನ ಬಲಿಷ್ಠ ಪುಸ್ತಕ ವಿತರಣಾ ವ್ಯವಸ್ಥೆ ಗ್ರಾಮೀಣ ಭಾಗಗಳಿಗೂ ತಲುಪಿದೆ. ಆದರೆ ಕರ್ನಾಟಕದಲ್ಲಿ ಜಿಲ್ಲಾ ಕೇಂದ್ರಗಳಿಗೂ ಪುಸ್ತಕ ತಲುಪಿಸುವುದೇ ಸವಾಲಾಗಿದೆ ಎಂದು ಹೇಳಿದರು.

ಉತ್ತಮ ಕಥೆಗಾರನಿಗೆ ಪಾತ್ರಗಳನ್ನು ಜೀವಂತವಾಗಿ ಕಟ್ಟಿಕೊಡುವ ಸಾಮರ್ಥ್ಯ ಇರಬೇಕು. ಆ ಗುಣಗಳು ಡಾ. ರವಿಕುಮಾರ್ ನೀಹ ಹಾಗೂ ಮೂರ್ತಿ ತಿಮ್ಮನಹಳ್ಳಿ ಅವರ ಕೃತಿಗಳಲ್ಲಿ ಕಾಣಿಸುತ್ತವೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

‘ನೀಗೊನಿ’ ಕಾದಂಬರಿಯಲ್ಲಿ ಸಮಾಜದ ನಿರಂತರ ಚಲನಶೀಲತೆ, ಇತಿಹಾಸ ಮತ್ತು ಸಾಮಾಜಿಕ ಸಂಘರ್ಷಗಳನ್ನು ಪರಿಣಾಮಕಾರಿಯಾಗಿ ಚಿತ್ರಿಸಲಾಗಿದೆ. ಮತಾಂತರದಂತಹ ಸೂಕ್ಷ್ಮ ವಿಚಾರಗಳನ್ನು ಅರ್ಥೈಸಿಕೊಳ್ಳುವಾಗ ಇತಿಹಾಸದ ಹಿನ್ನೆಲೆಯನ್ನು ಸಮಗ್ರವಾಗಿ ಗ್ರಹಿಸಬೇಕೆಂದು ಅವರು ಅಭಿಪ್ರಾಯಪಟ್ಟರು.

ಸಮಾಜ ವಿಜ್ಞಾನಿ ಡಾ. ಸಿ.ಜಿ. ಲಕ್ಷ್ಮೀಪತಿ ಮಾತನಾಡಿ, ‘ನೀಗೊನಿ’ ಒಂದು ಚಾರಿತ್ರಿಕ ಕಾದಂಬರಿಯಾಗಿದ್ದು, ಮೌಖಿಕ ಇತಿಹಾಸವನ್ನು ಸಾಹಿತ್ಯ ರೂಪಕ್ಕೆ ತಂದಿರುವ ಮಹತ್ವದ ಕೃತಿ ಎಂದು ಹೇಳಿದರು. ಬ್ರಿಟಿಷರ ಆಡಳಿತ, ಗ್ರಾಮೀಣ ಸಮಾಜದ ಬದುಕು, ಜಾತಿ ವ್ಯವಸ್ಥೆ ಮತ್ತು ಸಾಮಾಜಿಕ ಅಸಮಾನತೆಗಳನ್ನು ಕಾದಂಬರಿ ಪರಿಣಾಮಕಾರಿಯಾಗಿ ತೆರೆದಿಡುತ್ತದೆ ಎಂದು ವಿವರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಸ್. ಸಿದ್ದಲಿಂಗಪ್ಪ ವಹಿಸಿದ್ದರು. ಕಾದಂಬರಿಕಾರ ಮೋದೂರು ತೇಜ ಹಾಗೂ ಕಥೆಗಾರ ಡಾ. ಗೋವಿಂದರಾಜು ಎಂ. ಕಲ್ಲೂರು ಕೃತಿಗಳ ಕುರಿತು ವಿಮರ್ಶಾತ್ಮಕವಾಗಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಕರ್ನಾಟಕ ಲೇಖಕಿಯರ ಸಂಘದ ಜಿಲ್ಲಾ ಶಾಖೆ ಅಧ್ಯಕ್ಷೆ ಡಾ. ಆಶಾರಾಣಿ ಬಗ್ಗನಡು, ಲೇಖಕರಾದ ಡಾ. ರವಿಕುಮಾರ್ ನೀಹ, ಮೂರ್ತಿ ತಿಮ್ಮನಹಳ್ಳಿ, ಪ್ರಕಾಶಕ ಗುರುಪ್ರಸಾದ್ ಹೆಜ್ಜಾಜಿ ಸೇರಿದಂತೆ ಸಾಹಿತ್ಯಾಸಕ್ತರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು ದಸರಾ: ವಿಐಪಿಗಳಿಗೆ ರಾಜಮರ್ಯಾದೆ, ಸಾಮಾನ್ಯರ ಮೇಲೆ ಪೊಲೀಸ್ ದರ್ಪ!

 ಅಧಿಕಾರಿಗಳ ಕುಟುಂಬಸ್ಥರಿಗೆ ವಿಶೇಷ ಆತಿಥ್ಯ, ಜನ ಸಾಮಾನ್ಯರು ನಿಂತುಕೊಂಡು ಕಾರ್ಯಕ್ರಮ ನೋಡಲು...

ತುಮಕೂರು | ಬಣ್ಣದ ಚಿತ್ತಾರದಲ್ಲಿ ಅರಳಿದ ಮಹಿಳೆಯರ ಸೃಜನಶೀಲತೆ ; ಮಹಿಳಾ ದಸರಾಗೆ ಡಾ.ಜಿ.ಪರಮೇಶ್ವರ್ ಚಾಲನೆ

 ಬಣ್ಣಬಣ್ಣದ ರಂಗೋಲಿ ಚಿತ್ತಾರ, ಕ್ರೀಡಾ ಸ್ಪರ್ಧೆಗಳ ಸಂಭ್ರಮ, ಮಹಿಳೆಯರ ಉತ್ಸಾಹದ ಪಾಲ್ಗೊಳ್ಳುವಿಕೆ....

ತುಮಕೂರು | ಕವಿಗಳು ಸಮಾಜವನ್ನು ತಿದ್ದುವ ಕೆಲಸ ಮಾಡಲಿ: ಮುಕುಂದರಾಜ್

 ಕವಿಗಳು ಸಮಾಜದ ನೋವು, ನಲಿವು, ಸಂಘರ್ಷ ಹಾಗೂ ಸಮಸ್ಯೆಗಳಿಗೆ ಧ್ವನಿಯಾಗುವ ಮೂಲಕ...

ತುಮಕೂರು | ಪತ್ರಿಕೋದ್ಯಮದಲ್ಲಿ ಸತ್ಯನಿಷ್ಠೆಯೇ ಅಡಿಪಾಯ: ಕಾವ್ಯ ಎನ್

 ಪತ್ರಿಕೋದ್ಯಮದಲ್ಲಿ ಯಶಸ್ಸು ಸಾಧಿಸಲು ಭಾಷೆಯ ಮೇಲಿನ ಹಿಡಿತ, ಪರಿಣಾಮಕಾರಿ ಬರವಣಿಗೆ ಹಾಗೂ...