ತುಮಕೂರು | ಸ್ವಯಂ ಗಣತಿಯಲ್ಲಿ ಭಾಗವಹಿಸಿ ಅಭಿವೃದ್ಧಿಗೆ ಕೈಜೋಡಿಸಿ : ಶುಭ ಕಲ್ಯಾಣ್

Date:

 ಏಪ್ರಿಲ್ 1ರಿಂದ ಆರಂಭವಾಗಿರುವ ಸ್ವಯಂ ಗಣತಿಯಲ್ಲಿ ಸಾರ್ವಜನಿಕರು ಭಾಗವಹಿಸುವ ಮೂಲಕ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದು ಜಿಲ್ಲಾಧಿಕಾರಿ ಶುಭಕಲ್ಯಾಣ್ ಕರೆ ನೀಡಿದ್ದಾರೆ.

- Advertisement -

ತುಮಕೂರು ನಗರದ ವಿವಿಧ ಬಡಾವಣೆಗಳಿಗೆ ಗುರುವಾರ ಅಧಿಕಾರಿಗಳೊಂದಿಗೆ ಭೇಟಿ ನೀಡಿದ ಅವರು ಮೊಬೈಲ್ ಮೂಲಕ ನಾಗರಿಕರು ಸ್ವಯಂ ಗಣತಿ ಮಾಡುವುದು ಹೇಗೆ ಎಂಬುದನ್ನು ಖುದ್ದು ತಿಳಿಸಿಕೊಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪ್ರತಿ ಹತ್ತು ವರ್ಷಗಳಿಗೊಮ್ಮೆ ಭಾರತ ಸರ್ಕಾರ ಜನಗಣತಿ ಮಾಡುತ್ತದೆ. ಅಂತೆಯೇ ಇದೀಗ 2027ರ ಜನಗಣತಿ ಏಪ್ರಿಲ್ 1ರಿಂದ ಆರಂಭವಾಗಿದ್ದು ಏಪ್ರಿಲ್ 15ರವರೆಗೆ ಸ್ವಯಂ ಗಣತಿ ನಂತರ ಗಣತಿದಾರರು ಮನೆ ಮನೆಗೆ ಭೇಟಿ ನೀಡಿ ಗಣತಿ ಕಾರ್ಯ ಮಾಡಲಿದ್ದಾರೆ ಎಂದರು.

ದೇಶದ ಅಭಿವೃದ್ಧಿ ದೃಷ್ಟಿಯಿಂದ ಗಣತಿ ಕಾರ್ಯ ಪ್ರಮುಖ ಪಾತ್ರವಿದೆ ಎಂದ ಅವರು ದೆಶದ ಜನಸಂಖ್ಯೆ ಮಾಹಿತಿ ಪಡೆದು ಅದಕ್ಕನುಗುಣವಾಗಿ ಜನರ ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿಗತಿಗಳಿಗನುಸಾರ ನೀತಿಗಳನ್ನು ರೂಪಿಸಲು ಗಣತಿ ಅಂಕಿ ಅಂಶಗಳು ಮುಖ್ಯವಾಗಿದೆ. ಈ ಹಿನ್ನೆಲೆಯಲ್ಲಿ ದೇಶದ ಎಲ್ಲ ಜನರು ಜನಗಣತಿಯಲ್ಲಿ ಪಾಲ್ಗೊಳಬೇಕಿದೆ ಎಂದರು.

ಪ್ರಸ್ತುತ ಏಪ್ರಿಲ್ 1ರಿಂದ 15ರವರೆಗೆ ಸ್ವಯಂ ಗಣತಿ ಆರಂಭವಾಗಿದ್ದು ಸಾರ್ವಜನಿಕರು ತಮ್ಮ ಮೊಬೈಲ್ ಮೂಲಕ ವಿವರಗಳನ್ನು ದಾಖಲಿಸಬೇಕಿದೆ. ಈ ದಾಖಲೆಗಳು ಅತ್ಯಂತ ಗೌಪ್ಯವಾಗಿರಿಸಲಾಗುವುದು ಮತ್ತು ಇದು ಸರ್ಕಾರದ ಯೋಜನಗಳ ರೂಪಿಸುವ ಉದ್ದೇಶಕ್ಕೆ ಮಾತ್ರ ಬಳಕೆ ಆಗಲಿದೆ ಎಂದರು.

ತಮ್ಮ ಮೊಬೂಲ್ ನಲ್ಲಿ https://Se.census.gov.in ಈ ಲಿಂಕನ್ನು ತೆರೆದು ಅಲ್ಲಿ ತಮ್ಮ ಕುಟುಂಬ ಮುಖ್ಯಸ್ಥರು ವಿವರಗಳನ್ನು ದಾಖಲಿಸಬೇಕಿದೆ. ಕೇವಲ 33 ಪ್ರಶ್ನೆಗಳಿಗೆ 3 ನಿಮಿಷದಲ್ಲಿ ಉತ್ತರಿಸಿ ಗಣತಿ ಕಾರ್ಯವನ್ನು ಸುಲಭವಾಗಿ ಯಶಸ್ವಿಯಾಗಿ ಪೂರ್ಣಗೊಳಿಸಬಹುದು ಎಂದರು.

ಪ್ರಕ್ರಿಯೆ ಪೂರ್ಣಗೊಳಿಸಿದ ನಂತರ ಒಂದು ಐಡಿ ನಂಬರ್ ಬರುತ್ತದೆ ಅದನ್ನು ಸ್ಕ್ರೀನ್ ಷಾಟ್ ತೆಗೆದಿಟ್ಟುಕೊಂಡು ಏಪ್ರಿಲ್16ರಿಂದ ಗಣತಿದಾರರು ಮನೆ ಮನೆಗೆ ಗಣತಿಗಾಗಿ ಆಗಮಿಸಿದಾಗ ಈ ಐಡಿ ನಂಬರನ್ನು ತೋರಿಸಿದಲ್ಲಿ ಅದನ್ನು ಒಮ್ಮೆ ಪರಿಶೀಲಿಸಿ ಆಗಿದೆ ಎಂದು ನಮೂದಿಸಿಕೊಳ್ಳುತ್ತಾರೆ. ಈಗ ಮಾಡಿಲ್ಲದವರು ಗಣತಿದಾರರಿಗೆ ಮಾಹಿತಿ ನೀಡಬೇಕಾಗುತ್ತದೆ ಎಂದು ಅವರು ತಿಳಿಸಿದರು.

1872ರಲ್ಲಿ ದೇಶದಲ್ಲಿ‌ ಮೊದಲ ಜನಗಣತಿ ಮಾಡಲಾಗಿದ್ದು ಆ ನಂತರ ಪ್ರತಿ ಹತ್ತು ವರ್ಷಗಳಿಗೊಮ್ಮೆ ಮಾಡಲಾಗುತ್ತದೆ. ಅಲ್ಲದೆ 1948ರ ಗಣತಿ ಕಾಯ್ದೆಯಂತೆ ಈ ಪ್ರಕ್ರಿಯೆ ನಡೆಯಲಿದ್ದು ಸಾರ್ವಜನಿಕರು ಸಹಕರಿಸಬೇಕು ಹಾಗೂ ಗಣತಿ ಕಾರ್ಯದಲ್ಲಿ ಪಾಲ್ಗೊಳ್ಳಬೇಕು ಎಂದರು.

ತುಮಕೂರು ಮಹಾನಗರ ಪಾಲಿಕೆ ಆಯುಕ್ತೆ ಶುಭ ಬಿ. ಮಾತನಾಡಿ, ಏಪ್ರಿಲ್ 1ರಿಂದ ತಮ್ಮ ಸಿಬ್ಬಂದಿ ಗಣತಿ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಏಪ್ರಿಲ್ 16ರಿಂದ ಗಣತಿದಾರರು ಮನೆ ಮನೆಗೆ ಭೇಟಿ ನೀಡಲಿದ್ದಾರೆ. ಐಡಿ ಕಾರ್ಡಿನೊಂದಿ ಅವರು ಬರಲಿದ್ದಾರೆ ಅದನ್ನು ಪರಿಶೀಲಿಸಿ ಸಾರ್ವಜನಿಕರು ಗಣತಿಗೆ ಮಾಹಿತಿ ನೀಡಬೇಕು ಎಂದರು.

ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು ವಿವಿಯಿಂದ ವರುಣ್‌ರಾಜ್ ಜಿ ಅವರಿಗೆ ಪಿಎಚ್‌.ಡಿ. ಪದವಿ ಪ್ರದಾನ

ತುಮಕೂರು ವಿಶ್ವವಿದ್ಯಾನಿಲಯದ ಡಾ. ಡಿ.ವಿ. ಗುಂಡಪ್ಪ ಕನ್ನಡ ಅಧ್ಯಯನ ಕೇಂದ್ರದ ಪ್ರಾಧ್ಯಾಪಕ...

ಗುಬ್ಬಿ | ಸಿಂಹಾದ್ರಿ ಹತ್ಯೆ ಖಂಡಿಸಿ ದಲಿತಪರ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ

 ಮಧುಗಿರಿ ತಾಲ್ಲೂಕು ಕಾಸಾಪುರ ಗ್ರಾಮದಲ್ಲಿ ಗಣೇಶ ವಿಸರ್ಜನಾ ಮಹೋತ್ಸವದಲ್ಲಿ ದಲಿತ ಯುವಕ...

ತುಮಕೂರು | ರೈತರ ಸಂಕಷ್ಟಕ್ಕೆ ಸ್ಪಂದಿಸಿ : ವೈಜ್ಞಾನಿಕ ಬರ ಪರಿಹಾರಕ್ಕೆ ಆಗ್ರಹ

ಭೀಕರ ಬರಗಾಲದಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದರೂ ಕೇಂದ್ರ ಮತ್ತು ರಾಜ್ಯ...

ತುಮಕೂರು | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ಪಡೆಯಬೇಕು ಹಾಗೂ ಇದುವರೆಗೆ...