ತುಮಕೂರು | ಎಲ್ಲೆಡೆ ರಂಜಾನ್ ಸಂಭ್ರಮ : ಸಾಮೂಹಿಕ ಪ್ರಾರ್ಥನೆ

Date:

 ಮುಸ್ಲಿಂ ಬಾಂಧವರ ಪವಿತ್ರ ಹಬ್ಬ ಈದ್ ಉಲ್ ಫಿತರ್ ರಂಜಾನ್ ಹಬ್ಬವನ್ನು ತುಮಕೂರು ನಗರ ಸೇರಿದಂತೆ ಜಿಲ್ಲೆಯಾದ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಯಿತು.

- Advertisement -

ತುಮಕೂರು ಜಿಲ್ಲೆಯಾದ್ಯಂತ ರಂಜಾನ್ ಪ್ರಯುಕ್ತ ಮಸೀದಿಗಳು, ದರ್ಗಾಗಳನ್ನು ವಿದ್ಯುತ್ ದೀಪಾಲಂಕಾರದಿಂದ ವಿಶೇಷವಾಗಿ ಸಿಂಗರಿಸಲಾಗಿತ್ತು.   ನಗರ, ಪಟ್ಟಣ ಹಾಗೂ ಗ್ರಾಮೀಣ ಪ್ರದೇಶಗಳಲ್ಲೂ ಸಹ ಮುಸ್ಲಿಂ ಬಾಂಧವರು ರಂಜಾನ್ ಹಬ್ಬವನ್ನು ಅತ್ಯಂತ ಶ್ರದ್ಧಾ ಭಕ್ತಿಯಿಂದ ಅದ್ದೂರಿಯಾಗಿ ಆಚರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ನಗರದ ಕುಣಿಗಲ್ ರಸ್ತೆಯಲ್ಲಿರುವ ಈದ್ಗಾ ಮೈದಾನದಲ್ಲಿ ಜಮಾಯಿಸಿದ ಸಾವಿರಾರು ಮುಸ್ಲಿಂ ಬಾಂಧವರು ಈ ಬಾರಿ ಬಿಸಿಲಿನ ತಾಪ ಹೆಚ್ಚಾಗಿರುವುದರಿಂದ ಬೆಳಿಗ್ಗೆ 10ಕ್ಕೆ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ, ಪರಸ್ಪರ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು. ಹೊಸ ಉಡುಪುಗಳನ್ನು ಧರಿಸಿ, ಒಬ್ಬರಿಗೊಬ್ಬರು ಆಲಿಂಗನ ಮಾಡಿ ಹಬ್ಬದ ಶುಭಾಶಯ ಕೋರಿದ್ದು ವಿಶೇಷವಾಗಿತ್ತು. 

ರಂಜಾನ್ ಹಬ್ಬದ ಸಂಭ್ರಮ ಹಿಂದೂ ಮತ್ತು ಮುಸ್ಲಿಂ ಬಾಂಧವರ ಭಾವೈಕ್ಯತೆಯ ಸಂಕೇತವಾಗಿ ಮಾರ್ಪಟ್ಟಿದ್ದು, ಮುಸ್ಲಿಂ ಬಾಂಧವರಿಗೆ ಹಿಂದೂ ಸಮುದಾಯದವರು ಸಹ ಹಬ್ಬದ ಶುಭಾಶಯ ಕೋರುವ ಮೂಲಕ ಭಾವೈಕ್ಯತೆಯನ್ನು ಸಾರಿದರು.

1003014786

ಈದ್ಗಾ ಮೈದಾನದಲ್ಲಿ ರಂಜಾನ್ ಹಬ್ಬದ ಶುಭಾಶಯ ಕೋರಿ ಮಾತನಾಡಿದ ಕಾಂಗ್ರೆಸ್ ಮುಖಂಡ ಇಕ್ಬಾಲ್ ಅಹಮದ್, ಪ್ರಪಂಚದಾದ್ಯಂತ ರಂಜಾನ್ ಹಬ್ಬದಲ್ಲಿ 30 ವ್ರತಗಳನ್ನು ಆಚರಿಸಿ, ನಾವೆಲ್ಲರೂ ಅನ್ನ, ಆಹಾರ ಬಿಟು, ಕೆಡಕನ್ನು ಬಿಟ್ಟು ಸಹೋದರತ್ವ, ಸಹಬಾಳ್ವೆಯಿಂದ 30 ದಿನಗಳನ್ನು ಕಳೆದಿದ್ದೇವೆ ಎಂದರು.

1003014785

ನಾವೆಲ್ಲರೂ 30 ದಿನಗಳ ಉಪವಾಸ ಇದ್ದು, ಜಕಾತ್‌ನ್ನು ಕೂಡ ಆಚರಿಸಿದ್ದೇವೆ. ಜಕಾತ್ ಎಂದರೆ ಪ್ರಪಂಚದ ಮಾನವರಲ್ಲಿ ಅಸಮತೋಲನ ಇದೆ, ಬಡವರು, ವಿಧವೆಯವರು, ಸಂಪತ್ತು ಉಳ್ಳವರು. ಉಳ್ಳವರು ಬಡವರಿಗೆ ತಮ್ಮ ದುಡಿಮೆಯ ಒಂದಷ್ಟು ಭಾಗವನ್ನು ಜಕಾತ್ ನೀಡಿ ಅವರಿಗೂ ಕೂಡ ನಮ್ಮ ಜತೆ ಸಮಪಾಲು-ಸಮಬಾಳು ಒದಗಿಸಿಕೊಡುವುದು ರಂಜಾನ್ ಧ್ಯೇಯ ಎಂದರು.

ಪ್ರಪಂಚದಲ್ಲಿ ನಡೆಯುತ್ತಿರುವ ಯುದ್ಧಗಳು ನಿಲ್ಲಲಿ, ಮಾನವೀಯತೆಯ ಸಂದೇಶ ಎಲ್ಲರಿಗೂ ಹೋಗಲಿ. ಶಾಂತಿ ನೆಲೆಸಲಿ, ಮಳೆ-ಬೆಳೆಯಾಗಲಿ. ಯಾರು ಮೇಲಲ್ಲ, ಯಾರೂ ಕೀಳಲ್ಲ, ನಾವೆಲ್ಲರೂ ಒಂದೇ ಎಂಬುದು ರಂಜಾನ್ ಸಂದೇಶವಾಗಿದೆ ಎಂದು ಅವರು ತಿಳಿಸಿದರು.

1003014786 1

ನಗರಸಭೆ ಮಾಜಿ ಅಧ್ಯಕ್ಷ ಅಸ್ಲಾಂಪಾಷ ಮಾತನಾಡಿ, ನಾವೆಲ್ಲಾ 30 ದಿನಗಳ ಕಾಲ ಉಪವಾಸ ವ್ರತ ಮಾಡಿ ರಂಜಾನ್ ಹಬ್ಬವನ್ನು ಆಚರಿಸಿದ್ದೇವೆ. ಹಿಂದೂ-ಮುಸ್ಲಿಂ ಬಾಂಧವರು ಎಲ್ಲರೂ ಒಂದೇ ಎಂಬ ಭಾವೈಕ್ಯತೆಯನ್ನು ಸಾರಿದ್ದೇವೆ ಎಂದು ಹೇಳಿ, ರಂಜಾನ್ ಹಬ್ಬದ ಶುಭಾಶಯ ಕೋರಿದರು. ಹಬ್ಬದ ಪ್ರಯುಕ್ತ ಕುಣಿಗಲ್ ರಸ್ತೆಯಲ್ಲಿರುವ ಈದ್ಗಾ ಮೈದಾನದ ಸುತ್ತಮುತ್ತ ಬಿಗಿ ಪೊಲೀಸ್ ಬಂದೋ ಬಸ್ತ್ ವ್ಯವಸ್ಥೆ ಮಾಡಲಾಗಿತ್ತು.

ಈದ್ಗಾ ಮೈದಾನಕ್ಕೆ ಮಾಜಿ ಶಾಸಕರಾದ ಡಾ. ರಫೀಕ್ ಅಹಮದ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಡಿವೈಎಸ್ಪಿ ಚಂದ್ರಶೇಖರ್, ಸರ್ಕಲ್ ಇನ್ಸ್ಪೆಕ್ಟರ್ ರಾಘವೇಂದ್ರ, ಮುಖಂಡರಾದ ಇಕ್ಬಾಲ್ ಅಹಮದ್, ಅಸ್ಲಾಂಪಾಷ, ನಯಾಜ್ ಅಹಮದ್, ರೇವಣಸಿದ್ದಯ್ಯ, ನಯಾಜ್, ಸೇವಾ ದಳದ ಶಿವಪ್ರಸಾದ್, ಗುರುಪ್ರಸಾದ್, ನಟರಾಜಶೆಟ್ಟಿ, ಮಹಮದ್ ಸೈಫ್, ತೋಸಿಫ್, ಫಯಾಜ್ ಅಹಮದ್, ಇರ್ಫಾನ್ ಮತ್ತಿತರರು ಭೇಟಿ ನೀಡಿ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭಾಶಯ ಕೋರಿದರು.

ಮಾರ್ಗ ಬದಲಾವಣೆ

ರಂಜಾನ್ ಹಬ್ಬದ ಅಂಗವಾಗಿ ಮುಸ್ಲಿಂ ಬಾಂಧವರು ಕುಣಿಗಲ್ ರಸ್ತೆಯಲ್ಲಿರುವ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸುವುದರಿಂದ ಯಾವುದೇ ರೀತಿಯ ಅಡಚಣೆಗಳು ಉಂಟಾಗದಂತೆ ಮುಂಜಾಗ್ರತಾ ಕ್ರಮವಾಗಿ ಈ ಮಾರ್ಗದಲ್ಲಿ ಸಂಚರಿಸುವ ವಾಹನಗಳಿಗೆ ಬದಲಿ ಮಾರ್ಗದ ವ್ಯವಸ್ಥೆ ಮಾಡಲಾಗಿತ್ತು. 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಎಸ್‌ಐಆರ್ ರದ್ದುಪಡಿಸಿ, ಜ್ಞಾನೇಶ್ ಕುಮಾರ್‌ರನ್ನು ಪದಚ್ಯುತಿಗೊಳಿಸಿ : ಪ್ರಕಾಶ್ ರಾಜ್

ಜನರನ್ನು ಗೊಂದಲಕ್ಕೆ ಸಿಲುಕಿಸಿ ಅರ್ಹರ ಮತಹಕ್ಕು ಕಸಿಯುವ ಸಾಧ್ಯತೆ ಇರುವ ಎಸ್‌ಐಆರ್‌...

ಮಧುಗಿರಿಯಲ್ಲಿ ಲೋಕಾಯುಕ್ತ ಬೇಟೆ : ₹30 ಸಾವಿರ ಲಂಚ ಪಡೆಯುವಾಗ ಆರ್‌ಐ ಬಂಧನ

 ಪೌತಿ ಖಾತೆ ಮಾಡಿಕೊಡಲು ರೈತನಿಂದ ₹1 ಲಕ್ಷ ಲಂಚದ ಬೇಡಿಕೆ ಇಟ್ಟಿದ್ದ...

ತುಮಕೂರು | ಪಿಟಿಸಿಎಲ್ ಕಾಯ್ದೆ ಹೋರಾಟ ಸಮಿತಿ ಜಿಲ್ಲಾ ಅಧ್ಯಕ್ಷರಾಗಿ ಶೆಟ್ಟಿಹಳ್ಳಿ ಮಹೇಶ್ ಅವಿರೋಧ ಆಯ್ಕೆ

ಪಿಟಿಸಿಎಲ್ ಕಾಯ್ದೆಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯಗಳ ವಿರುದ್ಧ ಹೋರಾಟ...

ತುಮಕೂರು | ಸಿಂಹಾದ್ರಿ ಹತ್ಯೆ: ಆರೋಪಿಗಳ ಬಂಧನಕ್ಕೆ ಒಳಮೀಸಲಾತಿ ಹೋರಾಟ ಸಮಿತಿ ಆಗ್ರಹ

ಮಧುಗಿರಿ ತಾಲ್ಲೂಕಿನ ಕಸಾಪುರ ಗ್ರಾಮದ ದಲಿತ ಯುವಕ ಸಿಂಹಾದ್ರಿ ಹತ್ಯೆಯನ್ನು ಖಂಡಿಸಿರುವ...