ತುಮಕೂರು |  ಅಭಿವೃದ್ಧಿಯ ಹೆಸರಿನಲ್ಲಿ ನದಿಗಳ ವಿನಾಶ : ಶಿವಾನಂದ ಕಳವೆ

Date:

ನದಿಗಳು ನಮಗೆ ಬದುಕು, ಭಾಷೆ, ಸಂಸ್ಕöÈತಿ ಹಾಗೂ ಉದ್ಯಮಗಳನ್ನು ಕಲಿಸಿದವು. ಆದರೆ ಇಂದು ಅವುಗಳನ್ನು ಮರೆಯುವ ಹಂತಕ್ಕೆ ಬಂದಿದ್ದೇವೆ. ಅಭಿವೃದ್ಧಿಯ ಹೆಸರಿನಲ್ಲಿ ನದಿಗಳ ವಿನಾಶವಾಗುತ್ತಿರುವುದು ಶೋಚನೀಯ ಎಂದು ಶಿರಸಿಯ ಪರಿಸರ ಕಾರ್ಯಕರ್ತ ಶಿವಾನಂದ ಕಳವೆ ಕಳವಳ ವ್ಯಕ್ತಪಡಿಸಿದರು.

- Advertisement -

ತುಮಕೂರು ವಿಶ್ವವಿದ್ಯಾನಿಲಯದ ಪ್ರೊ. ಎಂ.ಡಿ. ನಂಜುಂಡಸ್ವಾಮಿ ಅಧ್ಯಯನ ಪೀಠ, ಸಮಾಜಕಾರ್ಯ ಅಧ್ಯಯನ ಮತ್ತು ಸಂಶೋಧನಾ ವಿಭಾಗ ಹಾಗೂ ಆದರ್ಶ್ ಮತ್ತು ಧಾನ್ಯ ಸಂಸ್ಥೆಗಳ ಸಹಯೋಗದೊಂದಿಗೆ ಮೇ 16 ಶನಿವಾರದಂದು ಆಯೋಜಿಸಿದ್ದ ಜಯಮಂಗಲಿ ನದಿ ಪುನಶ್ಚೇತನ ವಿಷಯದ ಕುರಿತ ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಅಭಿವೃದ್ಧಿಯ ಪಥದಲ್ಲಿ ಸಾಗುವ ಭರದಲ್ಲಿ ಕೆರೆ-ಕುಂಟೆಗಳ ನೀರನ್ನು ಸಂರಕ್ಷಿಸುವುದನ್ನು ನಾವು ಮರೆತಿದ್ದೇವೆ. ನದಿಗಳನ್ನು ಮತ್ತು ನೀರಿನ ಮೂಲಗಳನ್ನು ಹಾಳು ಮಾಡುವಲ್ಲಿ ಮಾನವನೇ ಮೊದಲ ಸ್ಥಾನದಲ್ಲಿದ್ದಾನೆ ಎಂದರು. ನದಿ ದಂಡೆಯ ಮರಗಳ ನಾಶದಿಂದಾಗಿ ಇತ್ತೀಚಿನ ದಿನಗಳಲ್ಲಿ ಮಳೆಗಾಲದಲ್ಲಿ ಪ್ರವಾಹ ಹಾಗೂ ಬೇಸಿಗೆಯಲ್ಲಿ ಟ್ಯಾಂಕರ್ ನೀರಿನ ಪದ್ಧತಿಯನ್ನು ಅನುಸರಿಸುವಂತಾಗಿದೆ. ಗ್ರಾನೈಟ್ ಬಳಕೆ, ನದಿಗಳನ್ನು ಮರೆತು ಕೊಳವೆಬಾವಿಗಳಿಗೆ ಮುಗಿಬಿದ್ದಿರುವುದು, ನದಿ ನೀರಿಗೆ ಕೊಳಚೆ ನೀರು ಹರಿಸುತ್ತಿರುವುದು, ಜಾಲಿ ಗಿಡಗಳ ವ್ಯಾಪಕ ಬೆಳವಣಿಗೆ, ಕೆರೆಗಳಲ್ಲಿ ಹೂಳು ಎತ್ತದಿರುವುದು ಹಾಗೂ ಅಕ್ರಮ ಮರಳು ದಂಧೆಗಳು ನದಿಗಳನ್ನು ಸಂಪೂರ್ಣವಾಗಿ ಹಾಳು ಮಾಡಿವೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.

ಕೆರೆ ನಿರ್ಮಿಸುವುದು, ಹೂಳು ಎತ್ತುವುದು, ಕಾಡು ಬೆಳೆಸುವುದು ಹಾಗೂ ಹಳೆಯ ಮತ್ತು ಹೊಸ ಕ್ರಮಗಳನ್ನು ಸುಧಾರಿಸಿಕೊಳ್ಳುವ ಮೂಲಕ ನದಿ ಪುನಶ್ಚೇತನಕ್ಕೆ ನಾವೆಲ್ಲರೂ ಚಿಂತಿಸಬೇಕಿದೆ. ಮುಖ್ಯವಾಗಿ, ಇತ್ತೀಚೆಗೆ ದಾರಿತಪ್ಪಿ ಹರಿವಿಲ್ಲದೆ ಸಾಗುತ್ತಿರುವ ಯುವಕರು ಕೆರೆ – ನದಿಗಳ ಸಂರಕ್ಷಣೆಯ ಜವಾಬ್ದಾರಿಯನ್ನು ವಹಿಸಿಕೊಳ್ಳಬೇಕು ಎಂದು ಕರೆ ನೀಡಿದ ಅವರು, ಶಾಲೆ, ಕಾಲೇಜು ಮತ್ತು ವಿಶ್ವವಿದ್ಯಾನಿಲಯಗಳ ಮಟ್ಟದಲ್ಲಿ ಜಾಗೃತಿ ಅಭಿಯಾನಗಳು ನಡೆಯಬೇಕು ಎಂದರು. 

1003305050

ತುಮಕೂರು ವಿವಿ ಹಮ್ಮಿಕೊಂಡಿರುವ ಇಂತಹ ಜಯಮಂಗಲಿ ನದಿ ಪುನಶ್ಚೇತನದ ಕಾರ್ಯಗಳು ದೇಶದ ಎಲ್ಲೆಡೆ ನಡೆದರೆ ಒಳ್ಳೆಯದು ಎಂದು ಆಶಿಸಿದರು.

ತುಮಕೂರು ವಿವಿ ಮೌಲ್ಯಮಾಪನ ಕುಲಸಚಿವರಾದ ಪ್ರೊ. ಮೋಹನ ಹೆಚ್.ಎಸ್. ಮಾತನಾಡಿ, ನಾಗರಿಕತೆಯ ತೊಟ್ಟಿಲುಗಳಾದ ನದಿಗಳ ಮೂಲಕವೇ ಹಿಂದೆ ಜನರನ್ನು ಗುರುತಿಸಲಾಗುತ್ತಿತ್ತು. ಇಂದು ನದಿಗಳು, ಹಳ್ಳ-ಕೊಳ್ಳಗಳು ಕಣ್ಮರೆಯಾಗುತ್ತಿರುವುದು ನೋವಿನ ಸಂಗತಿಯಾಗಿದೆ. ಸಾರ್ವಜನಿಕರ ಪರವಾಗಿ ಸದಾ ನಿಲ್ಲುವ ತುಮಕೂರು ವಿಶ್ವವಿದ್ಯಾನಿಲಯವು, ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳನ್ನು ಒಟ್ಟುಗೂಡಿಸಿ ನದಿಗಳ ಸ್ವಚ್ಛತೆ ಮಾಡುವ ಕಾರ್ಯಕ್ಕೆ ಸಾಕ್ಷಿಯಾಗಲಿದೆ ಎಂದು ಭರವಸೆ ನೀಡಿದರು.

ಆರ್ಡರ್ ಸಂಸ್ಥೆಯ ಯೋಜನಾ ನಿರ್ದೇಶಕರಾದ ಡಿ.ವಿ. ರಘು ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಬದುಕಿನ ಉಳಿವಿಗಾಗಿ ಹಳ್ಳ-ಕೊಳ್ಳ, ಕೆರೆ-ಕಟ್ಟೆ ಹಾಗೂ ಹುಲ್ಲುಗಾವಲುಗಳನ್ನು ಕಾಪಾಡುವುದು ಅತ್ಯಗತ್ಯ. ಈ ನಿಟ್ಟಿನಲ್ಲಿ ಸಾರ್ವಜನಿಕರಷ್ಟೇ ಅಲ್ಲದೆ ಸ್ಥಳೀಯ ಸರ್ಕಾರಗಳು ಕೂಡ ಗಂಭೀರವಾಗಿ ಗಮನ ಹರಿಸಬೇಕು ಎಂದರು.

ತುಮಕೂರು ವಿವಿ ಕಲಾ ನಿಕಾಯದ ಡೀನ್ ಹಾಗೂ ಸಮಾಜಕಾರ್ಯ ಅಧ್ಯಯನ ಮತ್ತು ಸಂಶೋಧನ ವಿಭಾಗದ ಮುಖ್ಯಸ್ಥರಾದ ಪ್ರೊ. ಕೆ. ಜಿ. ಪರಶುರಾಮ್ ಸ್ವಾಗತಿಸಿದರು. ಪ್ರೊ. ಎಂ.ಡಿ. ನಂಜುಂಡಸ್ವಾಮಿ ಅಧ್ಯಯನ ಪೀಠದ ನಿರ್ದೇಶಕರಾದ ಡಾ. ಮುನಿರಾಜು ಎಂ. ವಂದಿಸಿದರು. ಧ್ಯಾನ ಸಂಸ್ಥೆಯ ಕೃಷಿ ಮತ್ತು ಜಲ ತಜ್ಞರಾದ ಮಲ್ಲಿಕಾರ್ಜುನ ಹೊಸಪಾಳ್ಯ ಉಪಸ್ಥಿತರಿದ್ದರು. 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಎಸ್‌ಐಆರ್ ರದ್ದುಪಡಿಸಿ, ಜ್ಞಾನೇಶ್ ಕುಮಾರ್‌ರನ್ನು ಪದಚ್ಯುತಿಗೊಳಿಸಿ : ಪ್ರಕಾಶ್ ರಾಜ್

ಜನರನ್ನು ಗೊಂದಲಕ್ಕೆ ಸಿಲುಕಿಸಿ ಅರ್ಹರ ಮತಹಕ್ಕು ಕಸಿಯುವ ಸಾಧ್ಯತೆ ಇರುವ ಎಸ್‌ಐಆರ್‌...

ಮಧುಗಿರಿಯಲ್ಲಿ ಲೋಕಾಯುಕ್ತ ಬೇಟೆ : ₹30 ಸಾವಿರ ಲಂಚ ಪಡೆಯುವಾಗ ಆರ್‌ಐ ಬಂಧನ

 ಪೌತಿ ಖಾತೆ ಮಾಡಿಕೊಡಲು ರೈತನಿಂದ ₹1 ಲಕ್ಷ ಲಂಚದ ಬೇಡಿಕೆ ಇಟ್ಟಿದ್ದ...

ತುಮಕೂರು | ಪಿಟಿಸಿಎಲ್ ಕಾಯ್ದೆ ಹೋರಾಟ ಸಮಿತಿ ಜಿಲ್ಲಾ ಅಧ್ಯಕ್ಷರಾಗಿ ಶೆಟ್ಟಿಹಳ್ಳಿ ಮಹೇಶ್ ಅವಿರೋಧ ಆಯ್ಕೆ

ಪಿಟಿಸಿಎಲ್ ಕಾಯ್ದೆಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯಗಳ ವಿರುದ್ಧ ಹೋರಾಟ...

ತುಮಕೂರು | ಸಿಂಹಾದ್ರಿ ಹತ್ಯೆ: ಆರೋಪಿಗಳ ಬಂಧನಕ್ಕೆ ಒಳಮೀಸಲಾತಿ ಹೋರಾಟ ಸಮಿತಿ ಆಗ್ರಹ

ಮಧುಗಿರಿ ತಾಲ್ಲೂಕಿನ ಕಸಾಪುರ ಗ್ರಾಮದ ದಲಿತ ಯುವಕ ಸಿಂಹಾದ್ರಿ ಹತ್ಯೆಯನ್ನು ಖಂಡಿಸಿರುವ...