ತುಮಕೂರು | ಸಾಹೇ ವಿವಿಗೆ ‘ಸ್ಪರ್ಧಿ’ ರಾಷ್ಟ್ರೀಯ ಪ್ರಶಸ್ತಿಯ ಗರಿ

Date:

ಕೇಂದ್ರ ಸರ್ಕಾರದ ಶಿಕ್ಷಣ ಇಲಾಖೆಯಡಿಯಲ್ಲಿ ಆಯಾ ರಾಜ್ಯಗಳಲ್ಲಿ ತಾಂತ್ರಿಕ ಶಿಕ್ಷಣವನ್ನು ಕಲಿಸುವ ಮತ್ತು ಬಲಪಡಿಸುವ ಸಲುವಾಗಿ ‘ರಾಷ್ಟ್ರೀಯ ತಾಂತ್ರಿಕ ಶಿಕ್ಷಣ ಅಭಿವೃದ್ಧಿ ಕಲಿಕೆ’ ಕಾರ್ಯಕ್ರಮದಡಿಯಲ್ಲಿ ಅತಿ ಹೆಚ್ಚು ವಿದ್ಯಾರ್ಥಿಗಳು ನೊಂದಾಯಿಸಿ-ಕಲಿಸುವಲ್ಲಿ ಸಾಧನೆ ಮಾಡಿದ ಸಾಹೆ ವಿಶ್ವವಿದ್ಯಾಲಯಕ್ಕೆ ಕೇಂದ್ರ ಸರ್ಕಾರದ ಶಿಕ್ಷಣ ಇಲಾಖೆ ಕೊಡಮಾಡುವ 2026ನೇ ವರ್ಷದ ರಾಷ್ಟ್ರ ಮಟ್ಟ ‘ಸ್ಪರ್ಧಿ ಪ್ರಶಸ್ತಿ’ ಗೆ  ಪಾತ್ರವಾಗಿದೆ.  

- Advertisement -

ದಕ್ಷಿಣ ಭಾರತದ ರಾಜ್ಯಗಳಲ್ಲಿ, ಅದರಲ್ಲೂ ಕರ್ನಾಟಕದ ಪ್ರಶಸ್ತಿ ಕಾಲೇಜುಗಳಲ್ಲಿ ಸಾಹೇ ವಿವಿ ವ್ಯಾಪ್ತಿಗೆ ಬರುವ ಶ್ರೀ ಸಿದ್ದಾರ್ಥ ಇಂಜಿನಿಯರಿಂಗ್ ಕಾಲೇಜು ಪ್ರಮುಖ ಸ್ಥಾನಪಡೆದಿದೆ. ಪ್ರಶಸ್ತಿ ಪಡೆದ ಪ್ರಸಕ್ತ ಸಾಲಿನ ವರ್ಷದಲ್ಲಿ ರಾಷ್ಟ್ರೀಯ ತಾಂತ್ರಿಕ ಶಿಕ್ಷಣ ಅಭಿವೃದ್ದಿ ಕಾರ್ಯಕ್ರಮ ದಡಿಯಲ್ಲಿ  ಸುಮಾರು 1800 ವಿದ್ಯಾರ್ಥಿಗಳು ನೊಂದಣಿ ಮಾಡಿಕೊಂಡು, ಆನ್‌ಲೈನ್ ಮೂಲಕ ಪರೀಕ್ಷೆಯಲ್ಲಿ ಭಾಗವಹಿಸಿರುವುದು ಮಹತ್ವ ಪಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶ್ರೀ ಸಿದ್ದಾರ್ಥ ಇಂಜಿನಿಯರಿಂಗ್ ಕಾಲೇಜಿನಲ್ಲಿ ಅತಿ ಹೆಚ್ಚಿನ ವಿದ್ಯಾರ್ಥಿಗಳು ‘ರಾಷ್ಟ್ರೀಯ ತಾಂತ್ರಿಕ ಶಿಕ್ಷಣ ಅಭಿವೃದ್ಧಿ ಕಲಿಕೆ’ ಯೋಜನೆಯಲ್ಲಿ ಭಾಗವಹಿಸಿರುವ ಹಿನ್ನೆಲೆಯಲ್ಲಿ ಇತ್ತೀಚಿಗೆ ಬಾಂಬೆಯ ಐಐಟಿಯಲ್ಲಿ ನಡೆದ ರಾಷ್ಟ್ರೀಯ ಕಾರ್ಯಕ್ರಮದಲ್ಲಿ ಸಾಹೇ ನೋಡಲ್ ಅಧಿಕಾರಿ ಡಾ. ಪ್ರವೀಣ್ ಕುಮಾರ್. ಸಿ,  ಭಾಗವಹಿಸಿ ಕೇಂದ್ರ ಸರ್ಕಾರದ ಶಿಕ್ಷಣ ಇಲಾಖೆಯ ‘ಸ್ಪರ್ಧಿ ಪ್ರಶಸ್ತಿ’ ಪ್ರಶಸ್ತಿಯನ್ನು ಸ್ವೀಕರಿಸಿದರು.

1002809572

ಯೋಜನೆಯ ಸಂಯೋಜಕ ಡಾ.ಪ್ರವೀಣ್ , ಬಾಂಬೆಯ ಐಐಟಿಯಲ್ಲಿ ಪಡೆದ ಪ್ರಶಸ್ತಿಯನ್ನು ಸಾಹೇ ವಿಶ್ವವಿದ್ಯಾಲಯದ ಉಪಕುಲಪತಿ ಡಾ.ಕೆ.ಬಿ.ಲಿಂಗೇಗೌಡ, ರಿಜಿಸ್ಟ್ರಾರ್ ಡಾ.ಅಶೋಕ್ ಮೆಹ್ತಾ, ಕುಲಾಧಿಪತಿಗಳ ಸಲಹೆಗಾರರಾದ ಡಾ.ವಿವೇಕ್ ವೀರಯ್ಯ, ಪ್ರಾಂಶುಪಾಲರಾದ ಡಾ. ಮಹಾಂತೇಶ್ ಎಂ.ನಡಕಟ್ಟಿ, ಡೀನ್ ಡಾ.ರೇಣುಕಾಲತಾ, ಡಾ.ರಾಜಾನಾಯಕ್ ಅವರ ಸಮ್ಮುಖದಲ್ಲಿ ಸಾಹೇ ವಿವಿಗೆ ಹಸ್ತಾಂತ್ತರಿಸಿದರು. 

ಸಾಹೇ ವಿವಿಯ ಯೋಜನೆಯ ಸಂಯೋಜಕ ಡಾ.ಪ್ರವೀಣ್, ಕಾಲೇಜಿನ ಸಂಯೋಜಕಿ ಡಾ.ರೂಪಾ ಸೇರಿದಂತೆ ತಂಡದ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಡಾ. ಜಿ.ಪರಮೇಶ್ವರ ಶ್ಲಾಘನೆ:

ಉನ್ನತ ಶಿಕ್ಷಣದಲ್ಲಿ ಗುಣಮಟ್ಟ, ಉತ್ಕೃಷ್ಟತೆ ಮತ್ತು ನಾವೀನ್ಯತೆಯನ್ನು ಅಳವಡಿಸಿಕೊಳ್ಳಲು ಮತ್ತು ಪ್ರಗತಿಯತ್ತ ದಾಪುಗಾಲು ಹಾಕುವ ನಿಟ್ಟಿನಲ್ಲಿ ಸಾಹೇ ವಿಶ್ವವಿದ್ಯಾಲಯವೂ ಅನೇಕ ಶೈಕ್ಷಣಿಕ ಸುಧಾರಣಾ ಯೋಜನೆಗಳ ಜಾರಿಗೆ ಮುಂಚೂಣಿಯಲ್ಲಿ ನಿಲ್ಲುತ್ತದೆ. ಈ ನಿಟ್ಟಿನಲ್ಲಿ ರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾಗಿರುವುದು ಇನ್ನಷ್ಟು ಉರುಪನ್ನು ತರುತ್ತದೆ ಎಂದು ಕಾಲೇಜು ಮತ್ತು ಯೋಜನೆಯ ಪ್ರಗತಿಯಲ್ಲಿ ಭಾಜನರಾದ ಪ್ರಾಧ್ಯಾಪಕ ತಂಡದ ಕಾರ್ಯವನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ.

ಸಾಹೇ ವಿಶ್ವವಿದ್ಯಾಲಯದ ಉಪಕುಲಪತಿ ಡಾ.ಕೆ.ಬಿ.ಲಿಂಗೇಗೌಡ ಅವರು ಪ್ರತಿಕ್ರಿಯೆ ವ್ಯಕ್ತಪಡಿಸಿ, ಬದಲಾಗುತ್ತಿರುವ ಜಗತ್ತಿಗೆ ಹೊಸತನದ ಶಿಕ್ಷಣದ ಕಲಿಕೆ ಅಗತ್ಯ. ‘ರಾಷ್ಟ್ರೀಯ ತಾಂತ್ರಿಕ ಶಿಕ್ಷಣ ಅಭಿವೃದ್ಧಿ ಕಲಿಕೆ’ ಯ ಕೋರ್ಸ್ ಗಳು ವಿಶೇಷವಾಗಿ ಎಂಜಿನಿಯರಿಂಗ್ ಮತ್ತು ವಿಜ್ಞಾನದಲ್ಲಿ ಉತ್ತಮ ಗುಣಮಟ್ಟದ, ವಿಶೇಷ ಕೌಶಲ್ಯಗಳನ್ನು ಪಡೆಯಲು ಮತ್ತು ವೃತ್ತಿ ನಿರೀಕ್ಷೆಗಳನ್ನು ಹೆಚ್ಚಿಸಲು ವಿಪುಲವಾದ ಅವಕಾಶಗಳನ್ನು ನೀಡುತ್ತವೆ. ಹಾಗಾಗಿ ಇಂತಹ ಕೋರ್ಸ್ ಗಳ ಕಲಿಕೆ ವಿದ್ಯಾರ್ಥಿಗಳಿಗೆ ಕಾಲೇಜಿನಲ್ಲಿ ಉತ್ತೇಜನ ನೀಡಲಾಗುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ದೇಶದ ಎಲ್ಲಾ ತಾಂತ್ರಿಕ ವಿದ್ಯಾರ್ಥಿಗಳು ತಮ್ಮ ಆಲೋಚನೆ ಅಭಿವೃದ್ಧಿ ಗುಣಮಟ್ಟದ ವಿಷಯಗಳನ್ನು ಕಲಿಯುವುದಕ್ಕೆ ಈ ತಾಂತ್ರಿಕ ಮಾಹಿತಿ ಭಂಡಾರವನ್ನು ಬಳಸಿಕೊಳ್ಳುತ್ತಿದ್ದಾರೆ. ಅದೇ ರೀತಿ ಶ್ರೀ ಸಿದ್ದಾರ್ಥ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಸಾಹೇ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೆಡಿಕಲ್ ಹಾಗೂ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಈ ಯೋಜನೆಯ ಸದಾವಕಾಶವನ್ನು ಬಳಸಿಕೊಳ್ಳುತ್ತಿದ್ದಾರೆ.ಎನ್ನುತ್ತಾರೆ ಸಾಹೇ ವಿವಿ ರಿಜಿಸ್ಟರ್ ಡಾ.ಅಶೋಕ್ ಮೆಹ್ತಾ.

1002809571

ಕಾಲೇಜಿನಲ್ಲಿ ಹರ್ಷ:

ಅದಕ್ಕಾಗಿ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಅನುಕೂಲಕ್ಕೆ ಈ ವೇದಿಕೆಯನ್ನು ಸಿದ್ಧಪಡಿಸಲಾಗಿದೆ ಎಂದಿರುವ ಶ್ರೀ ಸಿದ್ದಾರ್ಥ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಮಹಾಂತೇಶ್ ಎಂ.ನಡಕಟ್ಟಿಯವರು ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ವಿದ್ಯಾರ್ಥಿಗಳು ಎನ್‌ಪಿಟಿಇಎಲ್ ಕಾರ್ಯಕ್ರಮದಲ್ಲಿ ನೊಂದಾಯಿಸಲು ಹೆಚ್ಚಿನ ಆಸಕ್ತಿ ತೆಗೆದುಕೊಳ್ಳಲಾಗುವುದು. ಇದು ವಿದ್ಯಾರ್ಥಿಗಳ ತಾಂತ್ರಿಕ ಉನ್ನತಿಗೆ ಹಾಗೂ ಉನ್ನತ ಸಂಸ್ಥೆಗಳಲ್ಲಿನ ನೌಕರಿಗೆ ಸಹಾಯಕವಾಗಲಿದೆ ಅಭಿಪ್ರಾಯಪಟ್ಟಿದ್ದಾರೆ.

ಎನ್‌ಪಿಟಿಇಲ್ ಯೋಜನೆ ಭಾರತ ಸರ್ಕಾರದ ಶಿಕ್ಷಣ ಸಚಿವಾಲಯದಿಂಧ ಧನಸಹಾಯ ಪಡೆದ ಐಐಟಿ ಮತ್ತು ಐಐಎಸ್‌ಸಿ ಸಂಸ್ಥೆಗಳ ಜಂಟಿಯಾಗಿ ದೇಶದ ಮೂಲೆ ಮೂಲೆಗಳಿಗೆ ಗುಣಮಟ್ಟದ ಶಿಕ್ಷಣವನ್ನು ಕೊಂಡೊಯ್ಯುವ ಯೋಜನೆಯಾಗಿದೆ. ಪ್ರತಿ ಸೆಮಿಸ್ಟರ್‌ನಲ್ಲಿ ಸುಮಾರು 22 ವಿಭಾಗಗಳಲ್ಲಿ ಸುಮಾರು 600ಕ್ಕೂ ಕೋರ್ಸ್ಗಳನ್ನು ಆನ್ ಲೈನ್ ಮೂಲಕ ನೀಡಲಾಗುತ್ತಿದೆ. ಎಂಜಿನಿಯರಿಂಗ್, ಮೂಲ ವಿಜ್ಞಾನಗಳು ಮತ್ತು ಆಯ್ದ ಮಾನವಿಕ ಮತ್ತು ನಿರ್ವಹಣಾ ವಿಷಯಗಳ ಕೋರ್ಸ್ ಗಳ ವಿಶ್ವದ ಅತಿದೊಡ್ಡ ಆನ್‌ಲೈನ್ ಭಂಡಾರವೇ ಇಲ್ಲಿ ದೊರಯಲಿದೆ.

ಐಐಟಿಗಳಿಂದ ಕಲಿಯಲು ಆಸಕ್ತಿ ಹೊಂದಿರುವ ಯಾರಿಗಾದರೂ ಗುಣಮಟ್ಟದ ಶಿಕ್ಷಣವನ್ನು ಒದಗಿಸಿ. ಪದವಿಪೂರ್ವ ಮತ್ತು ಸ್ನಾತಕೋತ್ತರ ಹಂತಗಳಲ್ಲಿ ಮೂಲ ವಿಜ್ಞಾನ ಮತ್ತು ಆಯ್ದ ಮಾನವಿಕ ಮತ್ತು ಸಮಾಜ ವಿಜ್ಞಾನ ವಿಷಯಗಳಲ್ಲಿ ವೆಬ್ ಮತ್ತು ವೀಡಿಯೊ ಕೋರ್ಸ್ಗಳನ್ನು ಸಿದ್ದಪಡಿಸಿ, ಕಲಿಸುವುದು ಈ ಯೋಜನೆಯ ಮುಖ್ಯ ಗುರಿಯಾಗಿದೆ. ಅಂತಹ ಶಿಕ್ಷಣದ ಯೋಜನೆಯನ್ನು ಶ್ರೀ ಸಿದ್ದಾರ್ಥ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಯಶಸ್ವಿಯಾಗಿ ನಡೆಸಲಾಗುತ್ತಿದೆ.

ಎಂಜಿನಿಯರಿಂಗ್, ಮೂಲ ವಿಜ್ಞಾನಗಳು ಮತ್ತು ಆಯ್ದ ಮಾನವಿಕ ಮತ್ತು ನಿರ್ವಹಣಾ ವಿಷಯಗಳ ಕೋರ್ಸ್ಗಳ ವಿಶ್ವದ ಅತಿದೊಡ್ಡ ಆನ್‌ಲೈನ್ ಭಂಡಾರ. ಜಗತ್ತಿನಲ್ಲಿ ತಜ್ಙರಿಂದ ಪರಾಮರ್ಶೆಗೊಳಪಟ್ಟ ಶೈಕ್ಷಣಿಕ ವಿಷಯಗಳನ್ನು ಇಲ್ಲಿ ಕಾಣಬಹುದು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ನಕಲಿ ವೈದ್ಯರ ವಿರುದ್ಧ ಕ್ರಮಕ್ಕೆ ಜನಪ್ರತಿನಿಧಿಗಳ ಸಹಕಾರ ಅಗತ್ಯ : ಆರೋಗ್ಯ ಸಚಿವ ಯು.ಟಿ. ಖದರ್

 ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಶೇ.95ರಷ್ಟು ಅಗತ್ಯ ಸವಲತ್ತುಗಳು ಲಭ್ಯವಿದ್ದು, ಯಾವುದೇ ಕೊರತೆಗಳಿದ್ದರೆ...

ತುಮಕೂರು | ರೇಡಿಯೋದಿಂದ ಕ್ಯಾಮೆರಾವರೆಗೆ : ವಿದ್ಯಾರ್ಥಿಗಳ ಕೈಗೆ ಬಂದ ಮಾಧ್ಯಮದ ನೈಜ ಅನುಭವ

ಮೂರು ದಿನಗಳ ಮಾಧ್ಯಮ ಕಾರ್ಯಾಗಾರದಲ್ಲಿ ಸಂದರ್ಶನ, ರೇಡಿಯೋ ಕಾರ್ಯಕ್ರಮ ನಿರ್ಮಾಣ ಹಾಗೂ...

ತುಮಕೂರು | ಜಿಪಂ – ತಾಪಂ ಮೀಸಲು ಅಂತಿಮ: ಮಹಿಳೆಯರಿಗೆ ಸಿಂಹಪಾಲು

ತುಮಕೂರು ಜಿಲ್ಲೆಯ ಗ್ರಾಮೀಣ ರಾಜಕೀಯದ ಮುಂದಿನ ಚಿತ್ರಣಕ್ಕೆ ಮುನ್ನುಡಿ ಬರೆಯುವಂತೆ ಜಿಲ್ಲಾ...

ತುಮಕೂರು | ಬೆಳೆ ಕಟಾವು ಪ್ರಯೋಗ ಶೇ.100ರಷ್ಟು ಪೂರ್ಣಗೊಳಿಸಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್

ತುಮಕೂರು ಜಿಲ್ಲೆಯಲ್ಲಿ 2026-27ನೇ ಸಾಲಿನ ಮುಂಗಾರು ಹಂಗಾಮಿನಡಿ ಹಂಚಿಕೆಯಾಗಿರುವ ಎಲ್ಲಾ 5,120...