ತುಮಕೂರು | ಸಮಾಜಕಾರ್ಯ ಕೇವಲ ವೃತ್ತಿಯಲ್ಲ, ಸೇವಾ ಮನೋಭಾವದ ಪಯಣ : ಪ್ರೊ. ಅಂಬಾದಾಸ್ ವೈ. ಮೋಹಿತೆ

Date:

 ಸಮಾಜಕಾರ್ಯ  ಎಂಬುದು ಕೇವಲ ಒಂದು ವೃತ್ತಿಯಲ್ಲ, ಅದು ಸಮಾಜದ ಕಟ್ಟಕಡೆಯ ವ್ಯಕ್ತಿಯ ಬದುಕಿನಲ್ಲಿ ಬದಲಾವಣೆ ತರುವ ಒಂದು ಸೇವಾ ಮನೋಭಾವದ ಪಯಣ ಎಂದು ಮಹಾರಾಷ್ಟ್ರದ ಹಿಂದುಳಿದ ವರ್ಗಗಳ ಆಯೋಗದ ಕಾರ್ಯದರ್ಶಿಗಳು ಹಾಗೂ ಸಮಾಜ ವಿಜ್ಞಾನಿ ಪ್ರೊ. ಅಂಬಾದಾಸ್ ವೈ. ಮೋಹಿತೆ ಅವರು ಹೇಳಿದರು. 

- Advertisement -

ತುಮಕೂರು ವಿಶ್ವವಿದ್ಯಾನಿಲಯದ ಸಮಾಜ ಕಾರ್ಯ ಅಧ್ಯಯನ ಮತ್ತು ಸಂಶೋಧನಾ ವಿಭಾಗವು, ಭಾರತೀಯ ವೃತ್ತಿಪರ ಸಮಾಜ ಕಾರ್ಯಕರ್ತರ ಸಂಘದ  ಸಹಯೋಗದೊಂದಿಗೆ ಎರಡು ದಿನಗಳ ರಾಷ್ಟ್ರ ಮಟ್ಟದ ಸಮಾಜ ಕಾರ್ಯ ವಿದ್ಯಾರ್ಥಿಗಳ ಹಬ್ಬ ಸ್ವರಂಗ್-2026 ಕಾರ್ಯಕ್ರಮವನ್ನು ಮೇ 8 ಶುಕ್ರವಾರ ಉದ್ಘಾಟಿಸಿ ಮಾತನಾಡಿದರು. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಸಮಾಜಕಾರ್ಯ ವಿದ್ಯಾರ್ಥಿಗೆ ಇರಬೇಕಾದ ಮೊದಲ ಮತ್ತು ಪ್ರಮುಖ ಗುಣವೆಂದರೆ ಸಹಾನುಭೂತಿ. ಎದುರಿಗಿರುವ ವ್ಯಕ್ತಿಯ ನೋವನ್ನು ಅವರ ಸ್ಥಾನದಲ್ಲಿ ನಿಂತು ಅರ್ಥಮಾಡಿಕೊಳ್ಳುವ ಶಕ್ತಿ ಇರಬೇಕು. ಕೇವಲ ಕನಿಕರ ತೋರಿಸುವುದಕ್ಕಿಂತ ಹೆಚ್ಚಾಗಿ, ಅವರ ಸಮಸ್ಯೆಗಳಿಗೆ ಸ್ಪಂದಿಸುವ ಸಂವೇದನಾಶೀಲತೆ ಮುಖ್ಯ. ಎದುರಿಗಿರುವವರು ಹೇಳುವುದನ್ನು ತಾಳ್ಮೆಯಿಂದ ಕೇಳಿಸಿಕೊಳ್ಳುವುದು. ವಿಷಯಗಳನ್ನು ಸರಳವಾಗಿ ಮತ್ತು ಸ್ಪಷ್ಟವಾಗಿ ಮನವರಿಕೆ ಮಾಡಿಕೊಡುವುದು. ಸಮಾಜಕಾರ್ಯದ ವೃತ್ತಿಪರ ನೈತಿಕತೆಯನ್ನು ಪಾಲಿಸುವುದು ಅತಿ ಮುಖ್ಯ. ಫಲಾನುಭವಿಗಳ ವೈಯಕ್ತಿಕ ಮಾಹಿತಿ ಮತ್ತು ರಹಸ್ಯಗಳನ್ನು ಕಾಪಾಡುವುದು ವಿದ್ಯಾರ್ಥಿಗಳ ಜವಾಬ್ದಾರಿಯಾಗಿರುತ್ತದೆ. ಯಾವುದೇ ತಾರತಮ್ಯವಿಲ್ಲದೆ (ಜಾತಿ, ಧರ್ಮ, ಲಿಂಗ) ಎಲ್ಲರನ್ನೂ ಸಮಾನವಾಗಿ ಕಾಣುವ ಗುಣವಿರಬೇಕು ಎಂದರು. 

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾದ ತುಮಕೂರು ವಿವಿಯ ಮಾಜಿ ಕುಲಪತಿ ಪ್ರೊ. ವೈ. ಎಸ್. ಸಿದ್ದೇಗೌಡ ಮಾತನಾಡಿ ಸಮಾಜಕಾರ್ಯದ ವೃತ್ತಿಪರ ನೈತಿಕತೆಯನ್ನು ಪಾಲಿಸುವುದು ಅತಿ ಮುಖ್ಯ. ಫಲಾನುಭವಿಗಳ ವೈಯಕ್ತಿಕ ಮಾಹಿತಿ ಮತ್ತು ರಹಸ್ಯಗಳನ್ನು ಕಾಪಾಡುವುದು ವಿದ್ಯಾರ್ಥಿಗಳ ಜವಾಬ್ದಾರಿಯಾಗಿರುತ್ತದೆ. ಯಾವುದೇ ತಾರತಮ್ಯವಿಲ್ಲದೆ (ಜಾತಿ, ಧರ್ಮ, ಲಿಂಗ) ಎಲ್ಲರನ್ನೂ ಸಮಾನವಾಗಿ ಕಾಣುವ ಗುಣವಿರಬೇಕು. ಸಾಮಾಜಿಕ ಬದಲಾವಣೆ ಎಂಬುದು ರಾತ್ರೋರಾತ್ರಿ ಸಂಭವಿಸುವುದಿಲ್ಲ. ಸವಾಲುಗಳು ಎದುರಾದಾಗ ದೃತಿಗೆಡದೆ, ಸತತ ಪ್ರಯತ್ನ ಮತ್ತು ತಾಳ್ಮೆಯಿಂದ ಕೆಲಸ ಮಾಡುವ ಮನೋಭಾವ ಇರಬೇಕು ಎಂದರು. 

1003263020

ನಿಮ್ಹಾನ್ಸ್ನ ಮನೋವೈದ್ಯಕೀಯ ಸಮಾಜ ಕಾರ್ಯ ವಿಭಾಗದ ಮಾಜಿ ಮುಖ್ಯಸ್ಥರು, ಐ ಎಸ್ ಪಿ ಎಸ್ ಡಬ್ಲೂ÷್ಯ ನ ಶಾಶ್ವತ ಸಲಹೆಗರರಾದ ಪ್ರೊ. ಐ. ಎ. ಶರೀಫ್ ಮಾತನಾಡಿ ಸಮಾಜದ ದುರ್ಬಲ ವರ್ಗದವರಿಗೆ ನ್ಯಾಯ ಕೊಡಿಸಲು ಭಾರತೀಯ ಸಂವಿಧಾನದ ಮೂಲಭೂತ ಹಕ್ಕುಗಳು, ಮಹಿಳಾ ಮತ್ತು ಮಕ್ಕಳ ರಕ್ಷಣಾ ಕಾಯ್ದೆಗಳು ಹಾಗೂ ಮಾನವ ಹಕ್ಕುಗಳ ಬಗ್ಗೆ ಕನಿಷ್ಠ ಜ್ಞಾನವಿರಬೇಕು. ಇಂದಿನ ಕಾಲದಲ್ಲಿ ಸಾಮಾಜಿಕ ಬದಲಾವಣೆ ತರಲು ತಂತ್ರಜ್ಞಾನದ ಅರಿವು ಮುಖ್ಯ ಎಂದರು. 

ಬೆಂಗಳೂರು ನಗರ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ರಮೇಶ್ ಬಿ.ಮಾತನಾಡಿ ಸೇವೆ ಮಾಡುತ್ತ ಮಾಡುತ್ತ ನಮ್ಮ ನಾವು ತೊಡಗಿಸಬೇಕು. ಕಾರ್ಪೋರೆಟ್ ನಲ್ಲಿ ಗುರುತಿಸುವಿಕೆ ಜೊತೆಗೆ ಸೇವೆ ಯಲ್ಲೂ ತೊಗಡಿಸಿಕೊಳ್ಳುವುದು ಅಗತ್ಯ.ಸಮಾಜ ಕಾರ್ಯ ವಿದ್ಯಾರ್ಥಿಗಳನ್ನು ಶಿಸ್ತು, ವರ್ತನೆ, ನಡೆಯಿಂದ ಗುರುತಿಸಬಹುದು ಎಂದರು. 

ಸಿಂಡಿಕೇಟ್ ಸದಸ್ಯ ಡಾ. ಮನೋಜ್ ಹೆಚ್. ಆರ್. ಮಾತನಾಡಿ ಪ್ರತಿದಿನ ಹೊಸ ಹೊಸ ವ್ಯಕ್ತಿಗಳನ್ನು ಭೇಟಿಯಾಗುವುದರಿಂದ, ಮನುಷ್ಯರ ಭಾವನೆಗಳು, ವರ್ತನೆಗಳು ಮತ್ತು ಅವರ ಪ್ರತಿಕ್ರಿಯೆಗಳನ್ನು ಅರ್ಥಮಾಡಿಕೊಳ್ಳುವ ಕಲಿಕೆ ಸಿಗುತ್ತದೆ. ಒಂದು ಸಣ್ಣ ಸನ್ನಿವೇಶದಲ್ಲಿ ಜನರು ಹೇಗೆ ವರ್ತಿಸುತ್ತಾರೆ ಎಂಬುದನ್ನು ಗಮನಿಸುವುದು ಇವರಿಗೆ ದೊಡ್ಡ ಪಾಠ.ಒಂದು ಸಮಸ್ಯೆ ಮೇಲ್ನೋಟಕ್ಕೆ ಕಾಣುವುದಕ್ಕಿಂತ ಭಿನ್ನವಾಗಿರಬಹುದು. ಅದರ ಮೂಲ ಕಾರಣವನ್ನು ಹುಡುಕುವುದು ಇವರ ದೈನಂದಿನ ಕಲಿಕೆ ಎಂದರು. 

ತುಮಕೂರು ವಿವಿ ಕುಲಸಚಿವರಾದ ನಾಹಿದಾ ಜಮ್ ಜಮ್ ಮಾತನಾಡಿ ಸಮಾಜಕಾರ್ಯ ವಿದ್ಯಾರ್ಥಿಗಳಿಗೆ ಇಡೀ ಸಮಾಜವೇ ಒಂದು ತೆರೆದ ವಿಶ್ವವಿದ್ಯಾಲಯ. ಅವರು ಅನುಭವದ ಮೂಲಕ ಪಡೆಯುವ ಶಿಕ್ಷಣಕ್ಕೆ ಬೆಲೆ ಕಟ್ಟಲಾಗದು. ಸೀಮಿತ ಸಂಪನ್ಮೂಲಗಳಲ್ಲಿ ಜನರಿಗೆ ಹೇಗೆ ಉತ್ತಮ ಸಹಾಯ ಮಾಡಬಹುದು ಎಂಬ ಸಂಕುಚಿತ ಸಂಪನ್ಮೂಲ ನಿರ್ವಹಣೆಯನ್ನು ಇವರು ಕಲಿಯುತ್ತಾರೆ ಎಂದರು. 

ತುಮಕೂರು ವಿವಿ ಕಲಾ ನಿಕಾಯದ ಡೀನ್ ಹಾಗೂ ಸಮಾಜ ಕಾರ್ಯ ವಿಭಾಗದ ಅಧ್ಯಕ್ಷರಾದ ಪ್ರೊ. ಪರಶುರಾಮ ಕೆ. ಜಿ. ಅವರು ಸ್ವಾಗತಿಸಿದರೆ, ಐಎಸ್ ಪಿ ಎಸ್ ಡಬ್ಲೂ ನ ಪ್ರಧಾನ ಕಾರ್ಯದರ್ಶಿಗಳಾದ ಡಾ. ಆರ್. ಧನಶೇಖರ ಪಾಂಡಿಯನ್ ವಂದಿಸಿದರು. 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಬರಗಾಲ ಕಾಮಗಾರಿ ಆರಂಭಕ್ಕೆ ಒತ್ತಾಯ: ಸೆ.28ರಂದು ಜಿಲ್ಲಾಧಿಕಾರಿ ಕಚೇರಿ ಮುಂದೆ ರೈತಸಂಘ ಪ್ರತಿಭಟನೆ

ಬರಪೀಡಿತ ಪ್ರದೇಶಗಳನ್ನು ಘೋಷಿಸಿದ್ದರೂ ಸರ್ಕಾರ ಈವರೆಗೆ ಯಾವುದೇ ಬರಗಾಲ ಪರಿಹಾರ ಕಾಮಗಾರಿಗಳನ್ನು...

ತುಮಕೂರು | ಪಾರಂಪರಿಕ ಮೌಲ್ಯಗಳು ಜೀವನದ ಆದರ್ಶಗಳು : ಡಿ. ಕೃಷ್ಣ

 ಐತಿಹಾಸಿಕ ಸ್ಮಾರಕಗಳು ಹಾಗೂ ಪಾರಂಪರಿಕ ಮೌಲ್ಯಗಳನ್ನು ಮುಂದಿನ ಪೀಳಿಗೆಗೆ ಉಳಿಸಿ-ಬೆಳೆಸುವ ಜವಾಬ್ದಾರಿ...

ತುಮಕೂರು | ಎಂಜಿನಿಯರಿಂಗ್ ವಿದ್ಯಾರ್ಥಿಗಳು ಹೊಸ ಆಲೋಚನೆ, ಆವಿಷ್ಕಾರದ ಮನೋಭಾವ ಬೆಳೆಸಿಕೊಳ್ಳಲಿ : ಡಾ.ಜಿ. ಪರಮೇಶ್ವರ

 ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ವೇಗವಾಗಿ ಅಭಿವೃದ್ಧಿ ಹೊಂದುತ್ತಿದ್ದು, ಎಂಜಿನಿಯರಿಂಗ್ ವಿದ್ಯಾರ್ಥಿಗಳು ನಿರಂತರ...