ತುಮಕೂರು | ಚಿರತೆ ಸೆರೆಗೆ ವಿಶೇಷ ಕಾರ್ಯಪಡೆ : ಡಿಸಿ

Date:

ತುಮಕೂರು ಜಿಲ್ಲೆಯ ತುರುವೇಕೆರೆಯಲ್ಲಿ ಇತ್ತೀಚೆಗೆ ನೆಡೆದ ಚಿರತೆ ದಾಳಿ ಪ್ರಕರಣದ ಬೆನ್ನಲ್ಲೇ ಚಿಕ್ಕನಾಯಕನಹಳ್ಳಿ ಹಾಗೂ ತಿಪಟೂರು ತಾಲ್ಲೂಕುಗಳಲ್ಲೂ ಚಿರತೆಗಳ ಹಾವಳಿ ಬಗ್ಗೆ ಸಾರ್ವಜನಿಕರು ಆತಂಕ ವ್ಯಕ್ತಪಡಿಸಿ ದೂರು ಬಂದ ಹಿನ್ನೆಲೆಯಲ್ಲಿ ಸಾರ್ವಜನಿಕರ ರಕ್ಷಣೆಗಾಗಿ ಚಿರತೆಗಳ ಸೆರೆಗಾಗಿ ಜಿಲ್ಲಾಡಳಿತ ವಿಶೇಷ ಕಾರ್ಯಪಡೆ ರಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ

- Advertisement -

ಶನಿವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅವರು, ಕಳೆದವಾರ ತುರುವೇಕೆರೆಯಲ್ಲಿ ನಡೆದ ಚಿರತೆದಾಳಿಯ ಭೀಕರ ಘಟನೆಯ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಜಿಲ್ಲಾಡಳಿತ, ಚಿರತೆಗಳನ್ನು ಸೆರೆಹಿಡಿಯಲು ಮತ್ತು ಜನರಲ್ಲಿ ಜಾಗೃತಿ ಮೂಡಿಸಲು ಸಮರೋಪಾದಿಯಲ್ಲಿ ಕೆಲಸ ಮಾಡುತ್ತಿದೆ. ವಿಶೇಷ ಕಾರ್ಯಪಡೆಯು ಅರಣ್ಯ ಇಲಾಖೆ, ಕಂದಾಯ ಇಲಾಖೆ ಹಾಗೂ ಗ್ರಾಮ ಪಂಚಾಯತಿ ಸಿಬ್ಬಂದಿಗಳನ್ನು ಒಳಗೊಂಡಿದ್ದು, ಪ್ರತಿ ಗ್ರಾಮಗಳಲ್ಲಿ ಸಾರ್ವಜನಿಕರಿಗೆ ಎಚ್ಚರಿಕೆ ನೀಡಲು ಪ್ರತಿ ಹಳ್ಳಿಯಲ್ಲೂ ಸುರಕ್ಷೆತೆಯ ಭಾಗವಾಗಿ ಸಾರ್ವಜನಿಕರು ಒಂಟಿಯಾಗಿ ಸಂಚರಿಸದಂತೆ ಮತ್ತು ಸಂಜೆ ವೇಳೆ ಎಚ್ಚರಿಕೆಯಿಂದ ಇರುವಂತೆ ಜನರಲ್ಲಿ ಜಾಗೃತಿ ಮೂಡಿಲಾಗುತ್ತಿದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಡಿಸೆಂಬರ್ 21ರಂದು ತುರುವೇಕೆರೆ ತಾಲ್ಲೂಕಿನ ದಬ್ಬೇಘಟ್ಟ ಹೋಬಳಿಯ ಅರೆಮಲ್ಲೇನಹಳ್ಳಿಯಲ್ಲಿ ಸುಜಾತಾ (35) ಎಂಬ ಮಹಿಳೆ ಕುರಿ ಮೇಯಿಸಲು ಹೋದಾಗ ಚಿರತೆ ದಾಳಿ ನಡೆಸಿ ಮೃತಪಟ್ಟಿದ್ದರು. ಈ ಘಟನೆಯಿಂದ ಸಾರ್ವಜನಿಕರು ಆ ಭಾಗದಲ್ಲಿ 20ಕ್ಕೂ ಹೆಚ್ಚು ಚಿರತೆಗಳಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಬೇರೆ ಜಿಲ್ಲೆಗಳಿಂದ ವಿಶೇಷ ರಾತ್ರಿ ವೀಕ್ಷಣೆಯ ಕ್ಯಾಮೆರಾಗಳನ್ನು ತರಿಸಲಾಗಿದ್ದು, ಚಿರತೆ ಸಂಚಾರವಿರುವ 30ಕ್ಕೂ ಹೆಚ್ಚು ಕಡೆ ಅಳವಡಿಸಿ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಚಿರತೆಗಳ ಓಡಾಟ ಹೆಚ್ಚಿರುವ ಜಾಗಗಳಲ್ಲಿ ಹೆಚ್ಚಿನ ಸಂಖ್ಯೆಯ ಬೋನುಗಳನ್ನು ಇರಿಸಲಾಗಿದೆ ಎಂದು ಹೇಳಿದ ಅವರು ಈಗಾಗಲೇ 8 ವರ್ಷದ ಗಂಡು ಚಿರತೆ ಹಾಗೂ ಹೆಣ್ಣು ಚಿರತೆಯನ್ನು ಸೆರೆಹಿಡಿಯಲಾಗಿದೆ. ಗಂಡು ಚಿರತೆಯನ್ನು ಸುರಕ್ಷಿತವಾಗಿ ಬನ್ನೇರುಘಟ್ಟ ಅರಣ್ಯಕ್ಕೆ ಬಿಡಲಾಗಿದೆ ಎಂದು ಹೇಳಿದರು.

ಮೃತ ಸುಜಾತಾ ಅವರ ಕುಟುಂಬಕ್ಕೆ ಸರ್ಕಾರದಿಂದ 5ಲಕ್ಷ ರೂ.ಗಳು ಹಾಗೂ ಭದ್ರ ಟೈಗರ್ ರೀಸರ್ವ್ ವತಿಯಿಂದ 15 ಲಕ್ಷ ರೂ. ಪರಿಹಾರ ನೀಡಲಾಗಿದೆ. ಮೃತ ಮಹಿಳೆಯ ಮಗನ ವಿದ್ಯಾಭ್ಯಾಸಕ್ಕಾಗಿ ಮುಂದಿನ 5 ವರ್ಷಗಳವರೆಗೆ ಪ್ರತಿ ತಿಂಗಳು 4,000 ರೂ. ಆರ್ಥಿಕ ನೆರವು ನೀಡುವುದಾಗಿ ಹೇಳಿದರು.

ಬೋನಿಗೆ ಬೀಳದ ಚಿರತೆಗಳನ್ನು ಸೆರೆಹಿಡಿಯಲು ಸರ್ಕಾರ ವಿಶೇಷ ಅನುಮತಿ ನೀಡಿದೆ. ಇದಕ್ಕಾಗಿ ಇಬ್ಬರು ಪಶು ವೈದ್ಯರು ತುರುವೇಕೆರೆಯಲ್ಲಿ ಬೀಡುಬಿಟ್ಟಿದ್ದು, ಚಿರತೆ ಕಂಡ ತಕ್ಷಣ ಚುಚ್ಚುಮದ್ದು ನೀಡಿ ಸೆರೆಹಿಡಿಯಲು ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದರು. 

ಸಾರ್ವಜನಿಕರ ಸುರಕ್ಷತೆಯೇ ನಮ್ಮ ಮೊದಲ ಆದ್ಯತೆ. ಚಿರತೆ ಹಾವಳಿ ತಡೆಗಟ್ಟಲು ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗಿದೆ. ಸಾರ್ವಜನಿಕರು ಭಯಪಡದೆ ಇಲಾಖೆಯೊಂದಿಗೆ ಸಹಕರಿಸಬೇಕು ಎಂದು ಸಲಹೆ ನೀಡಿದರು.

ಜಿಲ್ಲೆಯ ಅರಣ್ಯ ವ್ಯಾಪ್ತಿಯಲ್ಲಿ ವನ್ಯಮೃಗಗಳ ಸಂಖ್ಯೆ ಹಾಗೂ ಅವುಗಳ ಸಂಚಾರದ ಪಥವನ್ನು ನಿಖರವಾಗಿ ಪತ್ತೆಹಚ್ಚಲು ಬರುವ ಜನವರಿ ತಿಂಗಳಿನಿAದ ಅಧಿಕೃತ ಸಮೀಕ್ಷೆ ಆರಂಭವಾಗಲಿದೆ. ಕಾಡುಪ್ರಾಣಿಗಳು ಆಹಾರ ಮತ್ತು ನೀರಿಗಾಗಿ ಹೆಚ್ಚಾಗಿ ಯಾವ ಭಾಗಗಳಲ್ಲಿ ಸಂಚರಿಸುತ್ತಿವೆ, ಜಿಲ್ಲೆಯಲ್ಲಿ ಯಾವ ಯಾವ ತಳಿಯ ಪ್ರಾಣಿಗಳು ಎಷ್ಟು ಸಂಖ್ಯೆಯಲ್ಲಿವೆ, ಎಂಬುದನ್ನು ವೈಜ್ಞಾನಿಕವಾಗಿ ದಾಖಲಿಸುವುದು ಈ ಸಮೀಕ್ಷೆಯ ಮುಖ್ಯ ಉದ್ದೇಶವಾಗಿದೆ ಎಂದ ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು ವಿವಿಯಿಂದ ವರುಣ್‌ರಾಜ್ ಜಿ ಅವರಿಗೆ ಪಿಎಚ್‌.ಡಿ. ಪದವಿ ಪ್ರದಾನ

ತುಮಕೂರು ವಿಶ್ವವಿದ್ಯಾನಿಲಯದ ಡಾ. ಡಿ.ವಿ. ಗುಂಡಪ್ಪ ಕನ್ನಡ ಅಧ್ಯಯನ ಕೇಂದ್ರದ ಪ್ರಾಧ್ಯಾಪಕ...

ಗುಬ್ಬಿ | ಸಿಂಹಾದ್ರಿ ಹತ್ಯೆ ಖಂಡಿಸಿ ದಲಿತಪರ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ

 ಮಧುಗಿರಿ ತಾಲ್ಲೂಕು ಕಾಸಾಪುರ ಗ್ರಾಮದಲ್ಲಿ ಗಣೇಶ ವಿಸರ್ಜನಾ ಮಹೋತ್ಸವದಲ್ಲಿ ದಲಿತ ಯುವಕ...

ತುಮಕೂರು | ರೈತರ ಸಂಕಷ್ಟಕ್ಕೆ ಸ್ಪಂದಿಸಿ : ವೈಜ್ಞಾನಿಕ ಬರ ಪರಿಹಾರಕ್ಕೆ ಆಗ್ರಹ

ಭೀಕರ ಬರಗಾಲದಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದರೂ ಕೇಂದ್ರ ಮತ್ತು ರಾಜ್ಯ...

ತುಮಕೂರು | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ಪಡೆಯಬೇಕು ಹಾಗೂ ಇದುವರೆಗೆ...