ತುಮಕೂರು | ಏಪ್ರಿಲ್ 23 ಮತ್ತು 24ರಂದು ರಾಜ್ಯ ಮಟ್ಟದ ಮಾಧ್ಯಮ ಹಬ್ಬ : 35 ಪೌರ ಕಾರ್ಮಿಕರಿಗೆ ಪ್ರಶಸ್ತಿ ಪ್ರದಾನ

Date:

 ಶ್ರೀ ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರವು ‘ರಾಜ್ಯಮಟ್ಟದ ಮಾಧ್ಯಮ ಹಬ್ಬ ಸಂಭ್ರಮ-2026’ ಕಾರ್ಯಕ್ರಮವನ್ನು ಎಸ್‌ಎಸ್‌ಐಟಿ ಕ್ಯಾಂಪಸ್‌ನ ಚಾಣಾಕ್ಯ ಬ್ಲಾಕ್‌ನ ಪಿಜಿ ಸೆಮಿನಾರ್‌ನಲ್ಲಿ ಏಪ್ರಿಲ್ 23 ಮತ್ತು 24ರಂದು ಹಮ್ಮಿಕೊಳ್ಳಲಾಗಿದೆ. 

- Advertisement -

ಏಪ್ರಿಲ್ 23 ರಂದು ಬೆಳಗ್ಗೆ 10.30ಕ್ಕೆ  ಕಾರ್ಯಕ್ರಮಕ್ಕೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಚಾಲನೆ ನೀಡಲಿದ್ದಾರೆ. ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ ಪ್ರಭಾಕರ್ ಮತ್ತು ವಿಧಾನಪರಿಷತ್ ಸದಸ್ಯರು ಹಾಗೂ ಮಾಧ್ಯಮ ವಿಶ್ಲೇಷಕರಾದ ಕೆ. ಶಿವಕುಮಾರ್ ಮುಖ್ಯ ಭಾಷಣ ನಡೆಸಿಕೊಡಲಿದ್ದಾರೆ. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...

ಎಚ್ಚೆತ್ತುಕೊಳ್ಳುತ್ತಿವೆ DMK, YSRCP; ಡಿಲಿಮಿಟೇಷನ್‌ ಮಸೂದೆ ಮತ್ತೆ ಸೋಲುವ...

ಮೋದಿಯವರ ಅಹಂಕಾರದ ಆಡಳಿತಕ್ಕೆ ದಕ್ಷಿಣ ಭಾರತವು ಎಂದಿಗೂ ತಲೆಬಾಗುವುದಿಲ್ಲ, ಮತ್ತು ಈ ಬಾರಿಯ ಅವರ ಹತಾಶೆಯ ರಾಜಕೀಯ ಕುತಂತ್ರಗಳು ಅವರ ಪಾಲಿಗೆ ತಿರುಗುಬಾಣವಾಗಿ ದೇಶದ ಪ್ರಜಾಪ್ರಭುತ್ವವು ಗೆಲ್ಲುವುದು ಖಚಿತ ಮಹಿಳಾ ಮೀಸಲಾತಿ ಎಂಬ ಪವಿತ್ರ...

ಈ ಬಾರಿ ಸಂಭ್ರಮ -2026 “ಪರಿಸರ ಪತ್ರಿಕೋದ್ಯಮ” ಥೀಮ್ ಹೊಂದಿದ್ದು, 35 ಪೌರಕಾರ್ಮಿಕರಿಗೆ ಸನ್ಮಾನಿಸಲಾಗುವುದು. ತಿಪಟೂರಿನ ಜನಸ್ಪಂದನ ಟ್ರಸ್ಟ್ನ ಟೂಡಾ ಶಶಿಧರ್ ಪೌರಕಾರ್ಮಿಕರನ್ನು ಸನ್ಮಾನಿಸಲಿದ್ದಾರೆ. ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಮಹಾಂತೇಶ್ ಎಂ ನಡಕಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಪೂಜಾ ಮತ್ತು ದರ್ಶನ್ ತಂಡದಿಂದ ಗೀತ ಗಾಯನ ನಡೆಸಿಕೊಡಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಸಾಹೇ ವಿವಿಯ ಕುಲಾಧಿಪತಿಗಳ ಸಲಹೆಗಾರರಾದ ಡಾ.ವಿವೇಕ್ ವೀರಯ್ಯ, ತುಮಕೂರು ಜಿಲ್ಲಾ ಪಂಚಾಯತ್ ಸಿಇಓ ಬಿ ವಿ ಅಶ್ವಿಜ, ತುಮಕೂರು ಮಹಾನಗರ ಪಾಲಿಕೆ ಆಯುಕ್ತರಾದ ಶುಭ .ಬಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಎಲ್.ಯೋಗೇಶ್, ಕೃಷಿ ಲೇಖಕರಾದ ಮಲ್ಲಿಕಾರ್ಜುನ ಹೊಸಪಾಳ್ಯ, ಡಾ. ಅಮ್ಮಸಂದ್ರ ಸುರೇಶ್, ಎಸ್‌ಎಸ್‌ಎಸ್‌ಇ ಪ್ರಾಂಶುಪಾಲರಾದ ಡಾ.ಎಲ್ ಸಂಜೀವ್ ಕುಮಾರ್, ಗೃಹಸಚಿವರ ವಿಶೇಷ ಕರ್ತವ್ಯ ಅಧಿಕಾರಿಯಾದ ಡಾ. ಕೆ. ನಾಗಣ್ಣ, ತುಮಕೂರು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ಇಕ್ಬಾಲ್ ಅಹಮ್ಮದ್, ಎಸ್‌ಎಸ್‌ಸಿಎಂಎಸ್‌ನ ಸಹಾಯಕ ಆಡಳಿತಾಧಿಕಾರಿಗಳು ಖಲಂದರ್ ಪಾಷ ಭಾಗವಹಿಸಲಿದ್ದಾರೆ. 

 ಅಂದು ಸಂಜೆ 6.30ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. 

ಮಾಧ್ಯಮೋತ್ಸವದ ಎರಡನೇ ದಿನದ ಕಾರ್ಯಕ್ರವು ಏಪ್ರಿಲ್ 24 ರಂದು ಬೆಳಗ್ಗೆ 10.30ಕ್ಕೆ ಪಿ.ಜಿ ಸೆಮಿನಾರ್ ಹಾಲ್‌ನಲ್ಲಿ ಜರುಗಲಿದ್ದು, ಶ್ರೀ ಸಿದ್ಧಾರ್ಥ ಮಾಧ್ಯಮ ಹಳೆಯ ವಿದ್ಯಾರ್ಥಿಗಳ ಒಕ್ಕೂಟದ ಉದ್ಘಾಟನೆ ಮತ್ತು ಸಂವಾದ ಜರುಗಲಿದೆ. ಸವ್ಯಸಾಚಿ ಡಾ.ಜಿ. ಪರಮೇಶ್ವರ, ಕುಲಾಧಿಪತಿಗಳು, ಶ್ರೀ ಸಿದ್ಧಾರ್ಥ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಸಾಹೇ) ಮತ್ತು ಮಾನ್ಯ ಗೃಹ ಸಚಿವರು, ಕರ್ನಾಟಕ ಸರ್ಕಾರ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಶ್ರೀ ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರದ ಹಿರಿಯ ವಿದ್ಯಾರ್ಥಿಗಳನ್ನು ಒಳಗೊಂಡ ಹಳೆಯ ವಿದ್ಯಾರ್ಥಿಗಳ ಸಮಾಗಮ ಸಭೆ ನಡೆಯಲಿದೆ. ತುಮಕೂರು ಜಿಲ್ಲಾಧಿಕಾರಿಗಳಾದ ಶುಭ ಕಲ್ಯಾಣ್ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಅಶೋಕ್ ಕೆ ವಿ ಉಪಸ್ಥಿತಿ ವಹಿಸಲಿದ್ದಾರೆ. 

ಬಹುಮಾನ ವಿತರಣೆ ಹಾಗೂ ಸಮಾರೋಪ ಸಮಾರಂಭ ಮಧ್ಯಾಹ್ನ 2.30ಕ್ಕೆ ನಡೆಯಲಿದ್ದು, ತುಮುಲ್ ಅಧ್ಯಕ್ಷರು ಹಾಗೂ ಶಾಸಕರಾದ ಎಚ್ ವಿ ವೆಂಕಟೇಶ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ತುಮಕೂರಿನ ಹಾಲಪ್ಪ ಪ್ರತಿಷ್ಠಾನ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾದ ಮುರಳೀಧರ ಹಾಲಪ್ಪ ಅವರು ಸಮಾರೋಪ ನುಡಿಗಳನ್ನು ತಿಳಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಗುವುದು.

 ಸಾಹೇ ವಿವಿಯ ಕುಲಸಚಿವರಾದ ಡಾ.ಅಶೋಕ್ ಮೆಹ್ತಾ ಬಹುಮಾನ ವಿತರಿಸಲಿದ್ದಾರೆ.  

ಪ್ರಜಾಪ್ರಗತಿ ಸಂಪಾದಕರಾದ ಎಸ್ ನಾಗಣ್ಣ, ಜಿಲ್ಲಾ ಪ್ರೆಸ್ ಕ್ಲಬ್ ಅಧ್ಯಕ್ಷರಾದ ಶಶಿಧರ್ ದೋಣಿಹಕ್ಲು, ಸ್ಫೂರ್ತಿ ಡೆವಲರ‍್ಸ್ ಮಾಲೀಕರಾದ ಎಸ್ ಪಿ ಚಿದಾನಂದ್, ತುಮಕೂರಿನ ಪ್ರಗತಿಪರ ರೈತರಾದ ಸಿ ಕೆ ಪ್ರಕಾಶ್, ತುಮಕೂರು ವಿವಿ ಮಾಜಿ ಸಿಂಡಿಕೇಟ್ ಸದಸ್ಯರಾದ ಮಂಜುನಾಥ್ ಹೆತ್ತೇನಹಳ್ಳಿ, ಕುಣಿಗಲ್‌ನ ಪರಿಸರ ಪ್ರೇಮಿ ವೇಣು, ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದ ತುಮಕೂರು ಘಟಕದ ಅಧ್ಯಕ್ಷರಾದ ಜಿ ಕರುಣಾಕರ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. 

ಎರಡು ದಿನಗಳ ಮಾಧ್ಯಮೋತ್ಸವ ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ ಪದವಿ ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸುತ್ತಿದ್ದು, ಅವರಲ್ಲಿನ ಕೌಶಲ್ಯಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಒಂದು ಉತ್ತಮ ಕಾರ್ಯಕ್ರಮವಾಗಿದೆ. ಎರಡು ದಿನದ ಈ ಕಾರ್ಯಕ್ರಮದಲ್ಲಿ ಒಟ್ಟು ಎಂಟು ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ರೇಡಿಯೋ ಜಾಕಿ, ಪಿಟಿಸಿ, ಫೋಟೋಗ್ರಫಿ, ವೈರಲ್ ಅಡ್ಡ (ರೀಲ್ಸ್), ವರದಿಗಾರಿಕೆ, ಟೆಲಿವಿಷನ್ ಸುದ್ದಿ ವಾಚನ (ನ್ಯೂಸ್ ರೀಡಿಂಗ್), ಕೊಲೇಜ್ ಮೇಕಿಂಗ್, ಮ್ಯಾಡ್ ಆಡ್ಸ್ ಸ್ಪರ್ಧೆಗಳು ನಡೆಯಲಿದೆ. 

ಶ್ರೀ ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರದ ನಿರ್ದೇಶಕರಾದ ಡಾ. ಬಿ.ಟಿ ಮುದ್ದೇಶ್, ಸಹಾಯಕ ಪ್ರಾಧ್ಯಾಪಕರಾದ ಡಾ. ಜ್ಯೋತಿ ಸಿ, ಶ್ವೇತಾ ಎಂ.ಪಿ, ನವೀನ್ ಎನ್ ಜಿ, ರೇಡಿಯೋ ಸಿದ್ಧಾರ್ಥ ಸಿಬ್ಬಂದಿ ಗೌತಮ್ ಎ.ವಿ, ರವಿಕುಮಾರ್, ಮಧುಶ್ರೀ, ಹರೀಶ್ ಕುಮಾರ್, ಟೆಲಿವಿಷನ್ ನಿರ್ವಾಹಕರಾದ ಎಸ್ ರಾಘವ್, ಶ್ರೀ ಸಿದ್ಧಾರ್ಥ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕರಾದ ಮಣಿ ಎಚ್.ಜಿ, ಎಸ್‌ಎಸ್‌ಸಿಎಂಎಸ್‌ನ ಬೋಧಕೇತರ ಸಿಬ್ಬಂದಿಗಳಾದ ಮಂಜುಳಾ ಟಿ ವಿ, ಶಿಲ್ಪ ಜಿ ಮತ್ತು ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಪತ್ರಿಕೋದ್ಯಮದಲ್ಲಿ ಸತ್ಯನಿಷ್ಠೆಯೇ ಅಡಿಪಾಯ: ಕಾವ್ಯ ಎನ್

 ಪತ್ರಿಕೋದ್ಯಮದಲ್ಲಿ ಯಶಸ್ಸು ಸಾಧಿಸಲು ಭಾಷೆಯ ಮೇಲಿನ ಹಿಡಿತ, ಪರಿಣಾಮಕಾರಿ ಬರವಣಿಗೆ ಹಾಗೂ...

ತುಮಕೂರು | ಜಾಗತೀಕರಣದ ನಡುವೆ ಪ್ರಾದೇಶಿಕ ಅಸ್ಮಿತೆ ಉಳಿಸುವ ಶಕ್ತಿ ರಂಗಭೂಮಿಗಿದೆ : ರಂಗನಿರ್ದೇಶಕ ಲಕ್ಷ್ಮಣ್ ಕೆ.ಪಿ.

 ಜಾಗತೀಕರಣದ ಪ್ರಭಾವದಿಂದ ಪ್ರಾದೇಶಿಕ ಭಾಷೆ, ಸಂಸ್ಕೃತಿ ಮತ್ತು ಅಸ್ಮಿತೆಗಳು ಅಳಿಸಿಹೋಗುವ ಆತಂಕ...

ತುಮಕೂರು | ಸ್ಟಿಂಗ್ ಪ್ರಕರಣದ ಕುರಿತು ತನಿಖೆಯಾಗಲಿ : ಕೆ.ಎನ್. ರಾಜಣ್ಣ

 ಸ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರು ಕಂಡುಬಂದಲ್ಲಿ ಅವರ...

ತುಮಕೂರು | ಸಚಿವ ಸೋಮಣ್ಣ ಭಾಷಣದ ವೇಳೆ ಚುನಾವಣಾ ಪ್ರಚಾರಕ್ಕೆ ಆಕ್ಷೇಪ; ಸಭೆಯಲ್ಲಿ ವಾಗ್ವಾದ

ತುಮಕೂರು ನಗರದ ಶ್ರೀ ಮುರುಘ ರಾಜೇಂದ್ರ ಸಭಾಂಗಣದಲ್ಲಿ ವೀರಶೈವ ಲಿಂಗಾಯತ  ಸಮಾಜದ...