ತುಮಕೂರು | ತೇಜಸ್ವಿ ಕನ್ನಡದ ಓದುಗರನ್ನು ಹೊಸ ದಿಗಂತದೆಡೆಗೆ ಕೊಂಡೊಯ್ದವರು: ಡಾ. ನರಸಿಂಹಮೂರ್ತಿ ಹಳೇಹಟ್ಟಿ

Date:

 ಕನ್ನಡದ ಓದುಗರನ್ನು ಹೊಸ ಚಿಂತನೆ ಮತ್ತು ಹೊಸ ದಿಗಂತದೆಡೆಗೆ ಕೊಂಡೊಯ್ದ ಕೀರ್ತಿ ಹಿರಿಯ ಸಾಹಿತಿ ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಅವರಿಗೆ ಸಲ್ಲುತ್ತದೆ ಎಂದು ಯುವ ಲೇಖಕ ಹಾಗೂ ವಿಮರ್ಶಕ ಡಾ. ನರಸಿಂಹಮೂರ್ತಿ ಹಳೇಹಟ್ಟಿ ಅಭಿಪ್ರಾಯಪಟ್ಟರು.

- Advertisement -

ಕರ್ನಾಟಕ ಸಾಹಿತ್ಯ ಅಕಾಡೆಮಿ ಹಾಗೂ ತುಮಕೂರು ವಿಶ್ವವಿದ್ಯಾಲಯದ ವಿದ್ಯಾರ್ಥಿ ನಿಲಯದಲ್ಲಿ ಚಕೋರ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಕನ್ನಡದ ಓದುಗರು ಕೆ.ಪಿ. ಪೂರ್ಣಚಂದ್ರ ತೇಜಸ್ವಿಯವರ ಮಾತು ಮತ್ತು ಬರಹಗಳನ್ನು ಸದಾ ನಿರೀಕ್ಷಿಸುತ್ತಿದ್ದರು. ಯಾವುದೇ ಹುದ್ದೆ-ಗದ್ದುಗೆಗಳ ಆಸೆ ಇಲ್ಲದೆ ಸರಳ ಜೀವನ ನಡೆಸಿದ ತೇಜಸ್ವಿಯವರು ತಮ್ಮ ವೈಜ್ಞಾನಿಕ ಹಾಗೂ ವೈಚಾರಿಕ ಚಿಂತನೆಗಳ ಮೂಲಕ ಕನ್ನಡದ ಜಾಗೃತ ಓದುಗರನ್ನು ರೂಪಿಸಿದರು ಎಂದು ಹೇಳಿದರು.

ನಾಡು-ನುಡಿ, ನೀರಾವರಿ, ನಿರುದ್ಯೋಗ, ಕೃಷಿ ಬಿಕ್ಕಟ್ಟು, ಕೋಮು ದಳ್ಳುರಿ ಹಾಗೂ ಪರಿಸರ ನಾಶದಂತಹ ಸಮಕಾಲೀನ ಸಮಸ್ಯೆಗಳ ಕುರಿತು ತೇಜಸ್ವಿಯವರು ತೀಕ್ಷ್ಣವಾಗಿ ಹಾಗೂ ಪರಿಣಾಮಕಾರಿಯಾಗಿ ಪ್ರತಿಕ್ರಿಯಿಸುತ್ತಿದ್ದರು. ಸಾಹಿತ್ಯ ರಚನೆಯ ಜೊತೆಗೆ ಪ್ರಗತಿಪರ ಹೋರಾಟಗಳಲ್ಲೂ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಅವರು ನವ ನಿರ್ಮಾಣ ಕ್ರಾಂತಿ, ಸಮಾಜವಾದಿ ಯುವಜನ ಸಭಾ, ಕರ್ನಾಟಕ ಬರಹಗಾರರ ಮತ್ತು ಕಲಾವಿದರ ಒಕ್ಕೂಟ ಹಾಗೂ ರೈತ ಚಳವಳಿಗಳ ಮೂಲಕ ಸಾಮಾಜಿಕ ಬಿಕ್ಕಟ್ಟುಗಳ ಬಗ್ಗೆ ನಿರಂತರವಾಗಿ ಧ್ವನಿಯೆತ್ತುತ್ತಿದ್ದರು ಎಂದು ತಿಳಿಸಿದರು.

ಇಂತಹ ಸತ್ವಶಾಲಿ ಲೇಖಕರ ಬದುಕು ಮತ್ತು ಬರಹಗಳು ಇಂದಿನ ಯುವಪೀಳಿಗೆಗೆ ಆದರ್ಶವಾಗಬೇಕು ಎಂದು ಅವರು ಕರೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ಸಾಹಿತ್ಯ ಅಕಾಡೆಮಿಯ ಸದಸ್ಯೆ ಸುಮಾ ಸತೀಶ್ ವಹಿಸಿದ್ದರು. ತುಮಕೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕರಾದ ಡಾ. ನಾಗಭೂಷಣ ಬಗ್ಗನಡು, ಪ್ರೊ. ಶೇಖರ್, ಪ್ರೊ. ಮೋಹನ್ ಚಂದ್ರಗುತ್ತಿ, ವಿದ್ಯಾರ್ಥಿ ನಿಲಯದ ನಿಲಯಪಾಲಕ ಡಾ. ಲಕ್ಷ್ಮಿರಂಗಯ್ಯ ಹಾಗೂ ಕಾರ್ಯಕ್ರಮದ ಸಂಚಾಲಕ ನವೀನ್ ಪೂಜಾರಹಳ್ಳಿ ಉಪಸ್ಥಿತರಿದ್ದರು.

ತುಮಕೂರು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಹಾಗೂ ಸಂಶೋಧಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು ವಿವಿಯಿಂದ ವರುಣ್‌ರಾಜ್ ಜಿ ಅವರಿಗೆ ಪಿಎಚ್‌.ಡಿ. ಪದವಿ ಪ್ರದಾನ

ತುಮಕೂರು ವಿಶ್ವವಿದ್ಯಾನಿಲಯದ ಡಾ. ಡಿ.ವಿ. ಗುಂಡಪ್ಪ ಕನ್ನಡ ಅಧ್ಯಯನ ಕೇಂದ್ರದ ಪ್ರಾಧ್ಯಾಪಕ...

ಗುಬ್ಬಿ | ಸಿಂಹಾದ್ರಿ ಹತ್ಯೆ ಖಂಡಿಸಿ ದಲಿತಪರ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ

 ಮಧುಗಿರಿ ತಾಲ್ಲೂಕು ಕಾಸಾಪುರ ಗ್ರಾಮದಲ್ಲಿ ಗಣೇಶ ವಿಸರ್ಜನಾ ಮಹೋತ್ಸವದಲ್ಲಿ ದಲಿತ ಯುವಕ...

ತುಮಕೂರು | ರೈತರ ಸಂಕಷ್ಟಕ್ಕೆ ಸ್ಪಂದಿಸಿ : ವೈಜ್ಞಾನಿಕ ಬರ ಪರಿಹಾರಕ್ಕೆ ಆಗ್ರಹ

ಭೀಕರ ಬರಗಾಲದಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದರೂ ಕೇಂದ್ರ ಮತ್ತು ರಾಜ್ಯ...

ತುಮಕೂರು | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ಪಡೆಯಬೇಕು ಹಾಗೂ ಇದುವರೆಗೆ...