ತುಮಕೂರು | ಉಸಿರು ಕೊಟ್ಟವಳ ಉಸಿರು ನಿಲ್ಲಿಸಿದ ಮಗಳು

Date:

ತಾಯಿಯನ್ನು ಕೊಲೆ ಮಾಡಿ, ಸಹಜ ಸಾವು ಎಂದು ಬಿಂಬಿಸಿದ್ದ ಮಗಳನ್ನು ಪೊಲೀಸರು ಬಂಧಿಸಿದ್ದಾರೆ.ಬುಧವಾರ ರಾತ್ರಿ ಪುಷ್ಪಾವತಿ ಮಲಗಿದ್ದಾಗ ಸುಚಿತ್ರಾ ಮುಖದ ಮೇಲೆ ದಿಂಬು ಇಟ್ಟು ಉಸಿರುಗಟ್ಟಿಸಿ ಕೊಲೆ ಮಾಡಿದ್ದರು. ಗುರುವಾರ ಮಧ್ಯಾಹ್ನ ಅನುಪನಹಳ್ಳಿಯಲ್ಲಿ ಅಂತ್ಯಕ್ರಿಯೆಗೆ ತೆರಳಿ ದಾಗ ಕೊಲೆಯ ರಹಸ್ಯ ಬಯಲಾಗಿದೆ.

- Advertisement -

ಮುಖದ ಮೇಲೆ ಗಾಯದ ಗುರುತುಗಳು ಕಾಣಿಸಿದ್ದವು. ಅಂತ್ಯಕ್ರಿಯೆ ಸಮಯದಲ್ಲಿ ಪುಷ್ಪಾವತಿ ಸಹೋದರ ಅನಿಲ್ ಕುಮಾರ್ ಇದನ್ನು ಗಮನಿಸಿ, ಅಂತ್ಯಕ್ರಿಯೆಗೆ ಅಡ್ಡಿಪಡಿಸಿದ್ದರು. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ವಿಚಾರಣೆ ನಡೆಸಿದಾಗ ಹತ್ಯೆಯ ವಿಷಯ ಹೊರ ಬಂದಿದೆ. ಅನಿಲ್ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಕ್ಯಾತ್ಸಂದ್ರ ಠಾಣೆ ಪೊಲೀಸರು ಸುಚಿತ್ರಾರನ್ನು ವಶಕ್ಕೆಪಡೆದು ತನಿಖೆ ನಡೆಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

ತುಮಕೂರು ತಾಲ್ಲೂಕಿನ ಅನುಪನಹಳ್ಳಿ ಪುಷ್ಪಾವತಿ (55) ಕೊಲೆಯಾದವರು. ಸುಚಿತ್ರಾ (33) ಕೊಲೆ ಮಾಡಿದ ಆರೋಪಿ, ಪುಷ್ಪಾವತಿ ಮಗಳ ಜತೆಗೆ ತುಮಕೂರು ನಗರದ ಶ್ರೀನಗರದಲ್ಲಿ ವಾಸವಿದ್ದರು.

‘ತಂದೆಯ ಸಾವಿನ ನಂತರ ಸುಚಿತ್ರಾ ಮಾನಸಿಕವಾಗಿ ಕುಗ್ಗಿ ಹೋಗಿದ್ದರು ಸುಚಿತ್ರಾ ಮತ್ತು ಪುಷ್ಪಾವತಿ ಮಧ್ಯೆ ಆಸ್ತಿಗಾಗಿ ಆಗಾಗ ಗಲಾಟೆ ನಡೆ ಯುತ್ತಿತ್ತು. ಇದೇ ವಿಚಾರವಾಗಿ ನಡೆದ ಗಲಾಟೆ ಕೊಲೆಗೆ ಕಾರಣ ಆಗಿರಬಹುದು’ ಎಂದು ಪೊಲೀಸರು ಶಂಕಿಸಿದ್ದಾರೆ.

 ಒಂದೂವರೆ ವರ್ಷದ ಹಿಂದೆ ಸುಚಿತ್ರಾ ತಂದೆ ಮರಣ ಹೊಂದಿದ್ದರು. ತಂದೆಯ ಸಾವಿಗೆ ತಾಯಿ ಪುಷ್ಪಾವತಿ ಕಾರಣ, ಮಾಟ- ಮಂತ್ರ ಮಾಡಿಸಿದ್ದರಿಂದ ತಂದೆ ಸಾವನ್ನಪ್ಪಿದ್ದರು ಎಂದು ಸುಚಿತಾಗೆ ಕೋಪ ಇತ್ತು ಇದೇ ಕಾರಣಕ್ಕೆ ತಾಯಿಯನ್ನು ಹತ್ಯೆ ಮಾಡಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಸಿಂಹಾದ್ರಿ ಹತ್ಯೆ: ಆರೋಪಿಗಳ ಬಂಧನಕ್ಕೆ ಒಳಮೀಸಲಾತಿ ಹೋರಾಟ ಸಮಿತಿ ಆಗ್ರಹ

ಮಧುಗಿರಿ ತಾಲ್ಲೂಕಿನ ಕಸಾಪುರ ಗ್ರಾಮದ ದಲಿತ ಯುವಕ ಸಿಂಹಾದ್ರಿ ಹತ್ಯೆಯನ್ನು ಖಂಡಿಸಿರುವ...

ತುಮಕೂರು | ಹೊಸ ಪಿಎಫ್ ನೀತಿಯ ವಿರುದ್ಧ ಗಾರ್ಮೆಂಟ್ಸ್ ಕಾರ್ಮಿಕರ ಬೃಹತ್ ಪ್ರತಿಭಟನೆ

ಕೇಂದ್ರ ಸರ್ಕಾರದ ಹೊಸ ಭವಿಷ್ಯ ನಿಧಿ (ಪಿಎಫ್) ನೀತಿಯಲ್ಲಿನ ಕಾರ್ಮಿಕ ವಿರೋಧಿ...

ಗುಬ್ಬಿ | ಬರಗಾಲ ಕಾಮಗಾರಿ ಆರಂಭಕ್ಕೆ ಒತ್ತಾಯ: ಸೆ.28ರಂದು ಜಿಲ್ಲಾಧಿಕಾರಿ ಕಚೇರಿ ಮುಂದೆ ರೈತಸಂಘ ಪ್ರತಿಭಟನೆ

ಬರಪೀಡಿತ ಪ್ರದೇಶಗಳನ್ನು ಘೋಷಿಸಿದ್ದರೂ ಸರ್ಕಾರ ಈವರೆಗೆ ಯಾವುದೇ ಬರಗಾಲ ಪರಿಹಾರ ಕಾಮಗಾರಿಗಳನ್ನು...