ತುಮಕೂರು | ವಿಜೃಂಭಣೆಯ ಹೆತ್ತೇನಹಳ್ಳಿ ರಥೋತ್ಸವ

Date:

ಇತಿಹಾಸ ಪ್ರಸಿದ್ದ ಹೆತ್ತೇನಹಳ್ಳಿಯ ಶ್ರೀ ಮಾರಮ್ಮ  ದೇವಿಯ ಜಾತ್ರಾ ಮಹೋತ್ಸವ ರಾತ್ರಿಯಿಂದ ಆರಂಭವಾಗಿದ್ದು, ಶ್ರೀ ಅಮ್ಮನವರ ರಥೋತ್ಸವ ಸಹಸ್ರಾರು ಭಕ್ತಾದಿಗಳ ಸಮ್ಮುಖದಲ್ಲಿ  ಮುಂಜಾನೆ ಅತ್ಯಂತ ವಿಜೃಂಭಣೆಯಿಂದ ನಡೆಯಿತು.

- Advertisement -

ಪ್ರತಿ ವರ್ಷದಂತೆ ಈ ಬಾರಿಯೂ ಮುಂಜಾನೆ ನಡೆದ ಹೆತ್ತೇನಹಳ್ಳಿಯಮ್ಮನ ರಥೋತ್ಸವಕ್ಕೆ ನಾಡಿನ ವಿವಿಧೆಡೆಗಳಿಂದ ಆಗಮಿಸಿದ್ದ ಭಕ್ತ ಸಮೂಹ ಸಾಕ್ಷಿಯಾಯಿತು. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ಆಗ್ನೇಯ ಪದವೀಧರ ಕ್ಷೇತ್ರ: ಕಾಂಗ್ರೆಸ್-ಬಿಜೆಪಿ ನಡುವೆ ಬಿರುಸಿನ ಸ್ಪರ್ಧೆ!

ವಿಧಾನ ಪರಿಷತ್ತಿನ ಕರ್ನಾಟಕ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆ ಕಾವು ಪಡೆದುಕೊಂಡಿದ್ದು, ಬಿಜೆಪಿ–ಜೆಡಿಎಸ್ ಮೈತ್ರಿ ಮತ್ತು ಕಾಂಗ್ರೆಸ್ ನಡುವೆ ನೇರ ಹಣಾಹಣಿಯ ವಾತಾವರಣ ನಿರ್ಮಾಣವಾಗಿದೆ. ಕಾಂಗ್ರೆಸ್‌ನಿಂದ ಶಶಿ ಹುಲಿಕುಂಟೆಮಠ ಹಾಗೂ ಬಿಜೆಪಿ ಅಭ್ಯರ್ಥಿಯಾಗಿ...

ವಿಜಯಪುರ | ಪ್ಲಾಟ್‌ಫಾರ್ಮ್‌ ಮೇಲೆ ಹರಿವ ಚರಂಡಿ ನೀರು;...

"ಚರಂಡಿ ನೀರಿನ್ಯಾಗ ದಿನ ಹೋಗಾಕ ಹತ್ತಿವಿ…" ಇದು ವಿಜಯಪುರ ಕೇಂದ್ರ ಬಸ್ ನಿಲ್ದಾಣಕ್ಕೆ ಪ್ರತಿನಿತ್ಯ ಆಗಮಿಸುವ ಸಾವಿರಾರು ಪ್ರಯಾಣಿಕರ ಅಳಲು. ಪ್ಲಾಟ್‌ಫಾರ್ಮ್‌-1ರಲ್ಲಿ ಕೊಳಚೆ ನೀರು ಹರಿಯುತ್ತಿದ್ದರೂ, ಸಂಬಂಧಪಟ್ಟ ಅಧಿಕಾರಿಗಳು ಮಾತ್ರ ಜವಾಬ್ದಾರಿಯಿಂದ...

ತುಮಕೂರು ತಾಲ್ಲೂಕಿನ ಗೂಳೂರು ಹೋಬಳಿಯ ಹೆತ್ತೇನಹಳ್ಳಿ, ಕೈದಾಳ, ಗೂಳೂರು, ಕಂಭತ್ತನಹಳ್ಳಿ, ರಂಗಯ್ಯನಪಾಳ್ಯ, ಕುಮಂಜಿಪಾಳ್ಯ, ಚಿಕ್ಕಸಾರಂಗಿ, ಗಳಿಗೇನಹಳ್ಳಿ, ನಂದಿಹಳ್ಳಿ, ಹೊಸಹಳ್ಳಿ, ನರುಗನಹಳ್ಳಿ, ಮಾಯಣ್ಣಗೌಡನ ಪಾಳ್ಯ ಸೇರಿದಂತೆ ಈ ಭಾಗದ ಹಳ್ಳಿಗಳಲ್ಲಿ ಹೆತ್ತೇನಹಳ್ಳಿಯಮ್ಮನ ಜಾತ್ರೆಗೆ ವಿಶೇಷವಾಗಿಯೇ ಭಕ್ತ ಸಮೂಹ ಸಜ್ಜಾಗುತ್ತಾರೆ. ಅದರಂತೆ ಸೋಮವಾರ ಇಡೀ ದಿನ ಭಕ್ತರು ಉಪವಾಸ ವ್ರತ ಮಾಡಿ ಮುಂಜಾನೆ ಅಗ್ನಿಕೊಂಡ ಹಾಯ್ದು ಅಮ್ಮನವರಿಗೆ ಹರಕೆ ಸಲ್ಲಿಸಿ ಭಕ್ತಿ ಸಮರ್ಪಿಸಿದರು. 

ಇನ್ನು ಈ ಭಾಗದ ಹೆಣ್ಣು ಮಕ್ಕಳು ಅಮ್ಮನವರಿಗೆ ಬಾಯಿ ಬೀಗದ ಹರಕೆ ತೀರಿಸುವ ಸಂಪ್ರದಾಯ ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ಹದಿ ಹರೆಯದ ಹೆಣ್ಣು ಮಕ್ಕಳು, ಮಹಿಳೆಯರು ಸಹ ಉಪವಾಸ ವ್ರತ ಮಾಡಿ ರಾತ್ರಿ ಅಮ್ಮನವರ ಸನ್ನಿಧಿಯಲ್ಲಿ ಬಾಯಿಬೀಗ ಹಾಕಿಸಿಕೊಂಡು ಪೂಜೆ ಸಲ್ಲಿಸುವ ಮೂಲಕ ತಮ್ಮ ಹರಕೆ ತೀರಿಸಿದರು. 

ಹೆತ್ತೇನಹಳ್ಳಿ ಜಾತ್ರೆಗೆಂದೇ ಕಂಭತ್ತನಹಳ್ಳಿಯ ವೀರ ಮಕ್ಕಳು ಒಂದು ವಾರದಿಂದ ಉಪವಾಸವಿದ್ದು, ನಸುಕಿನಲ್ಲಿ ಅಗ್ನಿಕೊಂಡ ಹಾಯುವ ಮೂಲಕ ಹರಕೆ ತೀರಿಸಿದ್ದು ವಿಶೇಷವಾಗಿತ್ತು. 

ನಾಡಿನ ನಾನಾ ಕಡೆಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಆಗಮಿಸಿದ್ದ ಭಕ್ತ ಸಮೂಹ ಅಗ್ನಿಕೊಂಡ ಹಾಯ್ದ ಬಳಿಕ ವಿವಿಧ ಬಗೆಯ ಪುಷ್ಪಗಳಿಂದ ವರ್ಣರಂಜಿತವಾಗಿ ಅಲಂಕರಿಸಲಾಗಿದ್ದ ರಥಕ್ಕೆ ಹೆತ್ತೇನಹಳ್ಳಿಯಮ್ಮ ದೇವಿಯನ್ನು ಕೂರಿಸುತ್ತಿದ್ದಂತೆ ನೆರೆದಿದ್ದ ಭಕ್ತರ ಹರ್ಷೋದ್ಘಾರ ಮುಗಿಲು ಮುಟ್ಟಿತು. 

ಅಮ್ಮನವರನ್ನು ರಥಕ್ಕೆ ಕೂರಿಸಿದ ಬಳಿಕ ಭಕ್ತರು ರಥವನ್ನು ಎಳೆಯಲು ನಾ.. ಮುಂದು, ತಾ.. ಮುಂದು ಎಂದು ಮುಗಿ ಬೀಳುತ್ತಿದ್ದ ದೃಶ್ಯ ಕಂಡು ಬಂತು. 

ಅಮ್ಮನವರ ಅರ್ಚಕರು, ತಹಶೀಲ್ದಾರ್ ರಥದ ಗಾಲಿಗೆ ತೆಂಗಿನ ಕಾಯಿ ಒಡೆದು ಅಮ್ಮನವರಿಗೆ ಪೂಜೆ ಸಲ್ಲಿಸಿದ ನಂತರ ರಥದ ಗಾಲಿ ಒಂದು ಸುತ್ತು ಉರುಳುತ್ತಿದ್ದಂತೆ ಭಕ್ತರು ಶ್ರದ್ಧಾ ಭಕ್ತಿಯಿಂದ ರಥಕ್ಕೆ ಹೂವು, ದವನ, ಬಾಳೆಹಣ್ಣು ಎಸೆದು ತಮ್ಮ ಇಷ್ಟಾರ್ಥ ಸಿದ್ದಿಗಾಗಿ ಮಾಡಿಕೊಂಡಿದ್ದ ಹರಕೆಯನ್ನು ತೀರಿಸಿದರು.

ಇಡೀ ರಾತ್ರಿ ಹೆತ್ತೇನಹಳ್ಳಿಯಲ್ಲಿ ಜಮಾಯಿಸಿದ್ದ ಭಕ್ತ ಸಮೂಹ ಅಗ್ನಿಕೊಂಡ ಹಾಯ್ದು, ರಥೋತ್ಸವದಲ್ಲಿ ಪಾಲ್ಗೊಂಡು ಪುನೀತರಾದರು. 

ಹೆತ್ತೇನಹಳ್ಳಿಯಮ್ಮನ ಜಾತ್ರೆ ಒಂದು ವಾರ ಕಾಲ ನಡೆಯಲಿದ್ದು, ಶನಿವಾರದ ವರೆಗೆ ಭಕ್ತಾದಿಗಳ ದಂಡು ಹೆತ್ತೇನಹಳ್ಳಿಗೆ ಹರಿದು ಬರಲಿದೆ. 

ರಥೋತ್ಸವದಲ್ಲಿ ಶಾಸಕ ಸುರೇಶ್‌ಗೌಡ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಉಪವಿಭಾಗಾಧಿಕಾರಿ ನಾಹಿದಾ ಜಮ್‌ಜಮ್, ತಹಶೀಲ್ದಾರ್ ರಾಜೇಶ್ವರಿ, ಉಪತಹಶೀಲ್ದಾರ್ ಭಾನುಪ್ರಕಾಶ್, ರವಿನ್ಯೂ ಇನ್ಸ್ಪೆಕ್ಟರ್ ರಮೇಶ್‌ಕುಮಾರ್ ಹಾಗೂ ಗೂಳೂರು ಹೋಬಳಿಯ ಗ್ರಾಮ ಆಡಳಿತಾಧಿಕಾರಿಗಳು ಸೇರಿದಂತೆ ಅಪಾರ ಸಂಖ್ಯೆಯಲ್ಲಿ ಭಕ್ತಾದಿಗಳು ಭಾಗವಹಿಸಿದ್ದರು. 

ಒಂದು ವಾರಗಳ ಕಾಲ ನಡೆಯಲಿರುವ ಹೆತ್ತೇನಹಳ್ಳಿ ಜಾತ್ರೆಯಲ್ಲಿ ಯಾವುದೇ ರೀತಿಯ ಅಹಿತರ ಘಟನೆಗಳು, ಕಳ್ಳತನಗಳು ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ತಂದೆ-ತಾಯಂದಿರ ಹಾರೈಕೆಯೇ ನಿಜವಾದ ಆರಾಧನೆ : ಶಾರದಾಂಬ ಟ್ರಸ್ಟ್ ನಲ್ಲಿ ಗಾಂಧಿ ಜಯಂತಿ

ತುಮಕೂರು ನಗರದ ದೇವರಾಯಪಟ್ಟಣದಲ್ಲಿರುವ ಶ್ರೀ ಶಾರದಾಂಬ ಟ್ರಸ್ಟ್ ವೃದ್ಧಾಶ್ರಮದಲ್ಲಿ ಮಹಾತ್ಮಾ ಗಾಂಧೀಜಿ...

ತುಮಕೂರು | ಗಾಂಧೀಜಿಯವರ ಸತ್ಯ, ಅಹಿಂಸೆ ಮಾರ್ಗ ವಿಶ್ವಕ್ಕೇ ಮಾದರಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್

ಭಾರತಕ್ಕೆ ಸ್ವಾತಂತ್ರ್ಯ ತಂದುಕೊಡುವಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರು ಅನುಸರಿಸಿದ ಸತ್ಯ ಮತ್ತು...

ತುಮಕೂರು | ವಿಶ್ವ ಹೃದಯ ದಿನ : ವಿದ್ಯಾರ್ಥಿಗಳಿಗೆ ಸಿಪಿಆರ್ ಜೀವ ರಕ್ಷಕ ತರಬೇತಿ

ವಿಶ್ವ ಹೃದಯ ದಿನದ ಅಂಗವಾಗಿ ಶ್ರೀ ಸಿದ್ಧಾರ್ಥ ವೈದ್ಯಕೀಯ ಕಾಲೇಜಿನ ಕಾರ್ಡಿಯೋಥೊರಾಸಿಕ್...

ತುಮಕೂರು ವಿವಿಯಿಂದ ವರುಣ್‌ರಾಜ್ ಜಿ ಅವರಿಗೆ ಪಿಎಚ್‌.ಡಿ. ಪದವಿ ಪ್ರದಾನ

ತುಮಕೂರು ವಿಶ್ವವಿದ್ಯಾನಿಲಯದ ಡಾ. ಡಿ.ವಿ. ಗುಂಡಪ್ಪ ಕನ್ನಡ ಅಧ್ಯಯನ ಕೇಂದ್ರದ ಪ್ರಾಧ್ಯಾಪಕ...