ತುಮಕೂರು | ಶೌಚ ಗುಂಡಿ ಶುಚಿಗೊಳಿಸಿದ ಪ್ರಕರಣ : ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷರಿಂದ ಸ್ಥಳ ಪರಿಶೀಲನೆ

Date:

 ತುಮಕೂರು ನಗರದ ಕೆಇಬಿ ಸಮುದಾಯ ಭವನ ಆವರಣದಲ್ಲಿ ಕಾನೂನು ಬಾಹಿರವಾಗಿ ಶೌಚಗುಂಡಿ ಸ್ವಚ್ಛಗೊಳಿಸಲು ಕಾರ್ಮಿಕರನ್ನು ಬಳಸಿಕೊಂಡ ಅಮಾನವೀಯ ಘಟನೆಗೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಪಿ. ರಘು ಅವರು ಸೋಮವಾರ ಘಟನಾ ಸ್ಥಳಕ್ಕೆ ಖುದ್ದು ಭೇಟಿ ನೀಡಿ ಪರಿಶೀಲಿಸಿದರು. 

- Advertisement -

 ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಲ ಹೊರುವ ಪದ್ಧತಿ ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಜಿಲ್ಲಾಧಿಕಾರಿಗಳು ತುಮಕೂರು ಜಿಲ್ಲೆಯಲ್ಲಿ ಯಾವುದೇ ಇಂತಹ ಪ್ರಕರಣಗಳು ನಡೆದಿಲ್ಲ ಹಾಗೂ ಸಫಾಯಿ ಕರ್ಮಚಾರಿಗಳು ಇರುವುದಿಲ್ಲವೆಂದು ವರದಿ ನೀಡಿದ್ದಾರೆ. ಆದರೂ ಇಂತಹ ಘಟನೆ ನಡೆದಿರುವುದು ದುರಾದೃಷ್ಟಕರ, ಘಟನೆಗೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಎಲ್ಲಾ ರೀತಿಯ ಕಾನೂನು ಕ್ರಮ ಜರುಗಿಸುವಂತೆ ಹಾಗೂ ಘಟನೆಯಲ್ಲಿ ನೊಂದಿರುವ ಕಾರ್ಮಿಕರಿಗೆ ನ್ಯಾಯ ದೊರಕಿಸಿಕೊಡಲು ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಅವರು ತಿಳಿಸಿದರು. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸೋನಿಯಾ ಗಾಂಧಿ ಎಂಬ ಸೋಜಿಗ! ರಾಜಕೀಯ ನಾಯಕತ್ವದ ಹಿಂದಿನ...

ದಿನೇಶ್ ಅಮೀನ್ ಮಟ್ಟು ಅವರು ಪ್ರಸ್ತಾಪಿಸಿದ ನಾಲ್ಕು ಆಯಾಮಗಳು ನನ್ನನ್ನು ವೈಯಕ್ತಿಕವಾಗಿ ಬಹಳವಾಗಿ ಪ್ರಭಾವಿಸಿದವು. ಸೋನಿಯಾ ಗಾಂಧಿ ಒಬ್ಬ ಮಹಿಳೆಯಾಗಿ, ಒಬ್ಬ ವಿಧವೆಯಾಗಿ, ಅಲ್ಪಸಂಖ್ಯಾತ ಕ್ರಿಶ್ಚಿಯನ್ ಧಾರ್ಮಿಕ ಹಿನ್ನೆಲೆಯ ಮಹಿಳೆಯಾಗಿ ಮತ್ತು ವಿದೇಶಿ...

ಬಿತ್ತನೆ ಗುರಿ ಅರ್ಧದಷ್ಟೂ ಮುಟ್ಟದ ಕೃಷಿ ಚಟುವಟಿಕೆ; ಜೋಳದ...

ಮುಂಗಾರು ಮಳೆ ಕೈಕೊಟ್ಟು ಬೆಳೆ ನಷ್ಟದಿಂದ ಕಂಗೆಟ್ಟ ಅನ್ನದಾತರಿಗೆ ಹಿಂಗಾರು ಹಂಗಾಮಿನಲ್ಲಾದರೂ ಮಳೆ ಆಸರೆಯಾಗಬಹುದು ಎಂಬ ನಿರೀಕ್ಷೆಯಿತ್ತು. ಆದರೆ ರೈತರ ಆ ನಿರೀಕ್ಷೆಯೂ ಹುಸಿಯಾಗಿದೆ. ಮುಂಗಾರಿನ ಬೆನ್ನಲ್ಲೇ ಹಿಂಗಾರು ಹಂಗಾಮಿನಲ್ಲೂ ಮಳೆ ಕೈಕೊಟ್ಟಿರುವುದರಿಂದ...

ಧಾರವಾಡದ ‘ಲಲಿತಕಲಾ ಅಕಾಡೆಮಿ’ಗೆ ದುಸ್ಥಿತಿ: ಕಲಾವಿದರಿಂದಲೇ ದೂರವಾದ ಪ್ರಾದೇಶಿಕ...

ಕಲಾವಿದರ ಬಹುದಿನಗಳ ಬೇಡಿಕೆಯಂತೆ ಸ್ಥಾಪನೆಯಾದ ಕೇಂದ್ರಕ್ಕೆ ಮೂರೇ ವರ್ಷಗಳಲ್ಲಿ ದುಸ್ಥಿತಿ; ಸಂಚಾಲಕರ ಏಕಪಕ್ಷೀಯ ಧೋರಣೆ, ಕಲಾವಿದರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿರುವುದು ಹಾಗೂ ಕಲಾ ಚಟುವಟಿಕೆಗಳ ಕೊರತೆಯ ವಿರುದ್ಧ ಹಿರಿಯ ಕಲಾವಿದರ ಆಕ್ರೋಶ. ಸಲಹಾ ಸಮಿತಿ...

 ಘಟನೆ ನಡೆದು 3 ದಿನಗಳು ಆಗಿದ್ದರೂ, ತಪ್ಪಿತಸ್ಥರನ್ನು ಈವರೆಗೆ ಬಂಧಿಸಲಾಗಿಲ್ಲ ಹಾಗೂ ಅಧಿಕಾರಿಗಳು ಘಟನೆಗೆ ಸಂಬಂಧಿಸಿದಂತೆ ಸರಿಯಾದ ಕ್ರಮ ಜರುಗಿಸದ ಕಾರಣ ಆಯೋಗ ಮಧ್ಯ ಪ್ರವೇಶ ಮಾಡಿದೆ. ಈಗಾಗಲೇ ಪೊಲೀಸ್ ಇಲಾಖೆಯಿಂದ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಳ್ಳಲಾಗಿದೆ. ಅಲ್ಲದೆ, ಅಧಿಕಾರಿಗಳ ಹಂತದಲ್ಲಿ ಮಹಜರು ಇತ್ಯಾದಿ ಪ್ರಕ್ರಿಯೆಗಳು ನಡೆದಿವೆ. ಮುಂದಿನ ಕ್ರಮದ ಬಗ್ಗೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ತೀರ್ಮಾನಿಸಲಾಗುವುದು ಎಂದು ಅವರು ತಿಳಿಸಿದರು. 

 ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಪಿ. ರಘು ಅವರು ಮಲ ಹೊರುವ ಪದ್ಧತಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ನ ಆದೇಶ ಪ್ರಕಾರ ಸಂಬಂಧಿಸಿದ ಉಪವಿಭಾಗಾಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಮಹಜರು ಮಾಡಿ ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಬೇಕು. ಪೊಲೀಸ್ ಇಲಾಖೆಯಿಂದ ಸ್ವಯಂ ಪ್ರೇರಿತ ದೂರು ದಾಖಲಾಗಿದ್ದರೂ ಉಪವಿಭಾಗಾಧಿಕಾರಿ ಅವರು ನೀಡುವ ದೂರಿನ ಆಧಾರದ ಮೇಲೆ ಪ್ರಕರಣ ನಿಲ್ಲಲಿದ್ದು, ತಕ್ಷಣ ಕಾರ್ಯೋನ್ಮುಖರಾಗಿ ದೂರು ದಾಖಲಿಸುವಂತೆ ಉಪವಿಭಾಗಾಧಿಕಾರಿಗೆ ಅವರು ಸೂಚನೆ ನೀಡಿದರು.

1003542774

 ಅಲ್ಲದೆ, ಪ್ರಕರಣ ಗಂಭೀರ ಸ್ವರೂಪದ್ದಾಗಿರುವುದರಿಂದ ಘಟನೆಯ ಸಂಬಂಧಿಸಿದಂತೆ ಕೈಗೊಂಡ ಕ್ರಮದ ಬಗ್ಗೆ ತಕ್ಷಣ ಆಯೋಗಕ್ಕೆ ವರದಿ ಸಲ್ಲಿಸುವಂತೆ ಜಿಲ್ಲಾಡಳಿತಕ್ಕೆ ಅವರು ಸೂಚಿಸಿದರು.

 ಮಲ ಹೊರುವ ಪದ್ಧತಿ ಹಾಗೂ ಇತರೆ ವಿಷಯಗಳ ಕುರಿತು ಮಹಾನಗರಪಾಲಿಕೆ ಅತೀ ಹೆಚ್ಚು ಜಾಗರೂಕತೆ ವಹಿಸಬೇಕಿದೆ ಎಂದ ಅವರು, ನಗರ ಭಾಗದಲ್ಲಿ ಪಿಟ್ ಗುಂಡಿಗಳ ಶೌಚಾಲಯ ಇರುವುದು ಕಾನೂನು ಬಾಹಿರ ಹಾಗೂ ಕೆಲವೆಡೆ ಶೌಚಾಲಯದ ತ್ಯಾಜ್ಯವನ್ನು ನೇರವಾಗಿ ಚರಂಡಿಗೆ ಹರಿಸುತ್ತಿರುವ ಪ್ರಕರಣವೂ ತುಮಕೂರಿನಲ್ಲಿ ನಡೆಯುತ್ತಿರುವ ಬಗ್ಗೆ ತಿಳಿದು ಬಂದಿದೆ. ಈ ಬಗ್ಗೆ ತಕ್ಷಣ ಮಹಾನಗರಪಾಲಿಕೆ ಎಚ್ಚೆತ್ತುಕೊಳ್ಳಬೇಕು. ತಪ್ಪಿತಸ್ಥರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಅವರು ಸೂಚಿಸಿದರು.

 ಕೆಇಬಿ ಸಮುದಾಯ ಭವನ ನಗರದ ಹೃದಯ ಭಾಗದಲ್ಲಿದ್ದು, ಯುಜಿಡಿ ವ್ಯವಸ್ಥೆಯ ಪಕ್ಕದಲ್ಲೇ ಪಿಟ್ ಗುಂಡಿಗಳನ್ನು ಯಾವ ಕಾರಣಕ್ಕೆ ಮಾಡಲಾಗಿದೆ? ಹಾಗೂ ಇಂತಹ ಸಮುದಾಯ ಭವನಗಳು, ಮಧುವೆ ಮಂಟಪಗಳು, ಹೋಟೆಲ್‌ಗಳು ಇತ್ಯಾದಿ ಕಟ್ಟಡಗಳ ವ್ಯಾಪ್ತಿಯಲ್ಲಿ ವಿವಿಧ ಪ್ರಕರಣಗಳಲ್ಲಿ ಅನುಮತಿ ಕೊಡುವ ಮಹಾನಗರಪಾಲಿಕೆ ಇಂತಹ ವಿಷಯಗಳಲ್ಲಿ ಗಮನ ಹರಿಸುವುದಿಲ್ಲವೇ ಎಂಬ ಇತ್ಯಾದಿ ವಿಷಯಗಳ ಬಗ್ಗೆ ಅವರು ಗಂಭೀರವಾಗಿ ಪ್ರಶ್ನಿಸಿದರು. 

 ಪ್ರಕರಣದಲ್ಲಿ ಪರಿಶಿಷ್ಟ ಜಾತಿಯ ಕಾರ್ಮಿಕರನ್ನು ಬಳಸಿಕೊಂಡಿರುವುದು ಕಂಡು ಬಂದಿದ್ದು, ಉಪವಿಭಾಗಾಧಿಕಾರಿಗಳು ಈ ಕೂಡಲೇ ಯಾವ ಯಾವ ನಿಯಮಗಳಲ್ಲಿ ಪ್ರಾಥಮಿಕ ವರದಿಯಲ್ಲಿ ಕೇಸು ದಾಖಲಿಸಬಹುದೆಂಬ ಬಗ್ಗೆ ಗಮನಹರಿಸಿ ತಕ್ಷಣವೇ ಕಾನೂನು ಕ್ರಮ ಜರುಗಿಸಬೇಕು. ಅಲ್ಲದೆ, ಈ ಕೂಡಲೇ ಕೈಗೊಂಡ ಕ್ರಮದ ಬಗ್ಗೆ ಆಯೋಗ ಹಾಗೂ ಮಾಧ್ಯಮದವರಿಗೆ ಮಾಹಿತಿ ನೀಡುವಂತೆ ಅಧ್ಯಕ್ಷರು ಜಿಲ್ಲಾಡಳಿತಕ್ಕೆ ಸೂಚಿಸಿದರು. 

ಸಭೆಯಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ. ಗೋಪಾಲ್, ಮಹಾನಗರಪಾಲಿಕೆ ಆಯುಕ್ತ ಬಿ.ಶುಭ, ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ, ಉಪವಿಭಾಗಾಧಿಕಾರಿ ನಾಹಿದಾ ಜಮ್ ಜಮ್, ಸಫಾಯಿ ಕರ್ಮಚಾರಿಗಳ ಆಯೋಗದ ಸದಸ್ಯ ಓಬಳೇಶ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. 

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಭಾಷೆ ನಶಿಸಿದರೆ ಸಂಸ್ಕೃತಿ, ಪರಂಪರೆಯೂ ನಾಶವಾದಂತೆ: ಸಚಿವ ಯು.ಟಿ. ಖಾದರ್

ಭಾಷೆ ಎಂದರೆ ಕೇವಲ ಜನರ ನಡುವಿನ ಸಂವಹನದ ಮಾಧ್ಯಮವಲ್ಲ. ಅದರ ಹಿಂದೆ...

ತುಮಕೂರು | ಶ್ರೀ ಶಿವಕುಮಾರ ಸ್ವಾಮಿ ವೃತ್ತದ ಎಲ್‌ಇಡಿ ಲೈಟಿಂಗ್ ಕಾಮಗಾರಿ ಪರಿಶೀಲಿಸಿದ ಡಿಸಿಎಂ ಪರಮೇಶ್ವರ್

ತುಮಕೂರು ನಗರದ ಶ್ರೀ ಶಿವಕುಮಾರ ಸ್ವಾಮಿ ವೃತ್ತದಲ್ಲಿ ನಡೆಯುತ್ತಿರುವ ಎಲ್‌ಇಡಿ ಲೈಟಿಂಗ್...

ತುಮಕೂರು | ದಾಖಲೆ ರಹಿತ ಸ್ಲಂ ಕುಟುಂಬಗಳಿಗೆ ಹಕ್ಕುಪತ್ರ: ದಾಖಲಾತಿ ಸಂಗ್ರಹಣೆಗೆ ಜಿಲ್ಲಾಧಿಕಾರಿ ಸೂಚನೆ

ತುಮಕೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಹಾಗೂ ಖಾಸಗಿ ಜಮೀನುಗಳಲ್ಲಿ ವಾಸಿಸುತ್ತಿರುವ...

ತುಮಕೂರು | ಮಾದಕ ವ್ಯಸನದಿಂದ ದೂರವಿದ್ದು ಉತ್ತಮ ನಾಗರಿಕರಾಗಿ: ಪಿಎಸ್‌ಐ ತಾರ ಕೆ.ಸಿ.

ಯುವಜನರು ಜಾಗೃತರಾಗಿರಬೇಕು. ಉನ್ನತ ಶಿಕ್ಷಣ ಪಡೆದು ಉತ್ತಮ ನಾಗರಿಕರಾಗಿ ಸಮಾಜದ ಆಸ್ತಿಯಾಗಬೇಕು....