ತುಮಕೂರು | ಎಸ್ಐಆರ್ ಕುರಿತು ತರಬೇತಿ ಕಾರ್ಯಾಗಾರ

Date:

ತುಮಕೂರು  ಜಿಲ್ಲೆಯಲ್ಲಿ ವಿಶೇಷ ಸಮಗ್ರ ಮತದಾರರ ಪರಿಷ್ಕರಣೆ (ಎಸ್ ಐ ಆರ್) ಕಾರ್ಯವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಸೋಮವಾರ ನಗರದ ಎಂಪ್ರೆಸ್ ಕಾಲೇಜು ಆವರಣದಲ್ಲಿರುವ ಸಭಾಭವನದಲ್ಲಿ ಆಯೋಜಿಸಲಾಗಿತ್ತು. 

- Advertisement -

ತರಬೇತಿ ಕಾರ್ಯಾಗಾರದಲ್ಲಿ ಪಾಲ್ಗೊಂಡು ಮಾತನಾಡಿದ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ವಿಶೇಷ ಸಮಗ್ರ ಪರಿಷ್ಕರಣೆಯ ಮೂಲ ಉದ್ದೇಶ ಯಾವುದೇ ಅರ್ಹ ಮತದಾರ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ಹನಿ ನೀರಿಗೂ ಪರದಾಡುತ್ತಿರುವ ದಣ್ಣೂರು...

ಎರಡು ನಳಗಳ ಮುಂದೆ ಖಾಲಿ ಕೊಡ ಹಿಡಿದು ಗಂಟೆಗಟ್ಟಲೆ ಕಾಯುವ ಮಹಿಳೆಯರು; ಬೆಳೆ ನಷ್ಟ, ಜಾನುವಾರು ಮಾರಾಟ, ಉದ್ಯೋಗದ ಕೊರತೆಯಿಂದ ಗ್ರಾಮ ತೊರೆಯುತ್ತಿರುವ ಕುಟುಂಬಗಳು ಒಂದು ಕೊಡ ನೀರಿಗಾಗಿ ಮನೆಮನೆಯ ಮುಂದೆ ಕಾಯಬೇಕು....

‘ನನ್ನೊಳಗೆ ನೀವೊ ನಿಮ್ಮೊಳಗೆ ನಾನೊ’

ಲೇಹ್ ಲಡಾಕಿನ ಪರ್ವತ ಶ್ರೇಣಿಗಳ ನಡುವೆ ನಮ್ಮ ಕಾರು ನಿಧಾನವಾಗಿ ಸಾಗುತ್ತಿತ್ತು. ಬೇರೆ ಬೇರೆ ಬಣ್ಣಗಳ ಪರ್ವತ ಶಿಖರಗಳು, ಕೆಳಗಡೆ ಕಿಲೋಮಿಟರ್ ಉದ್ದದ ಕಿರಿದಾದ ರಸ್ತೆ, ಪಕ್ಕದಲ್ಲಿ ಸ್ವಲ್ಪ ಎಚ್ಚರ ತಪ್ಪಿದರೂ ಕಾಣುವ...

ಕಾರ್ಪೊರೇಟ್‌ ಕಾಳಗ | ಮಸ್ಕ್‌ನ ಸ್ಟಾರ್‌ಲಿಂಕ್ ಮಣಿಸಿ ಅಂಬಾನಿಯ...

ಎಲಾನ್ ಮಸ್ಕ್ ಒಡೆತನದ ‘ಸ್ಟಾರ್‌ಲಿಂಕ್’ ಉಪಗ್ರಹ ಇಂಟರ್ನೆಟ್ ಭಾರತಕ್ಕೆ ಕಾಲಿಡುತ್ತಿದ್ದಂತೆ ರಿಲಯನ್ಸ್ ಜಿಯೋದ ಮಾರುಕಟ್ಟೆ ಏಕಸ್ವಾಮ್ಯಕ್ಕೆ ಭಾರಿ ಪೈಪೋಟಿ ಎದುರಾಗುವಂತೆ ಕಾಣುತ್ತಿದೆ. ಈ ಬೆನ್ನಲ್ಲೇ, ರಾಷ್ಟ್ರೀಯ ಭದ್ರತೆ ಮತ್ತು ದತ್ತಾಂಶ ಸುರಕ್ಷತೆಯ ನೆಪವೊಡ್ಡಿ...

ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾದ ಎಲ್ಲಾ ಸರ್ಕಾರಿ ನೌಕರರು ಪ್ರಜಾಪ್ರತಿನಿಧಿತ್ವಕಾಯ್ದೆ 1951ರ ಕಲಂ 28ಎ ರನ್ವಯ ಚುನಾವಣಾ ಅವಧಿಯಲ್ಲಿ ಚುನಾವಣಾ ಆಯೋಗದ ಅಧೀನದಲ್ಲಿರುವ ಪ್ರತಿ ನಿಯುಕ್ತ ನೌಕರರೆಂದು ಪರಿಗಣಿಸಲ್ಪಡುತ್ತಾರೆ. ಅವರು ಚುನಾವಣಾ ಆಯೋಗದ ನಿಯಂತ್ರಣ, ಮೇಲ್ವಿಚಾರಣೆ ಹಾಗೂ ಶಿಸ್ತು ಕ್ರಮಗಳಿಗೆ ಒಳಪಟ್ಟಿರುತ್ತಾರೆ ಎಂದು ವಿವರಿಸಿದ ಜಿಲ್ಲಾಧಿಕಾರಿಗಳು, ತರಬೇತಿಯಲ್ಲಿನ ಎಲ್ಲಾ ಅಂಶಗಳನ್ನು ಸಮಗ್ರವಾಗಿ ಅರ್ಥೈಸಿಕೊಂಡು ಕರ್ತವ್ಯ ನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಗ್ರಾಮ ಪಂಚಾಯಿತಿಗಳು ಆಡಳಿತದ ತಳಮಟ್ಟದ ಕಚೇರಿಗಳಾಗಿರುವುದರಿಂದ ಗ್ರಾಮಪಂಚಾಯಿತಿ ಮಟ್ಟದಲ್ಲಿ ಮತದಾರರ ನೆರವು ಕೇಂದ್ರಗಳನ್ನು  ಆರಂಭಿಸುವುದು ಅಗತ್ಯವಾಗಿದೆ ಎಂದ ಅವರು, ಈ ಕುರಿತು ಅಗತ್ಯ ಕ್ರಮಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಅಲ್ಲದೆ, ಮತದಾರರ ನೆರವು ಕೇಂದ್ರಗಳ ಕಾರ್ಯನಿರ್ವಹಣೆಯನ್ನು ಹಿರಿಯ ಅಧಿಕಾರಿಗಳು ಪ್ರತಿ ದಿನ ಪರಿಶೀಲನೆ ನಡೆಸಲಿದ್ದಾರೆ ಎಂದು ತಿಳಿಸಿದರು.

1003438162

ಕಾರ್ಯಾಗಾರದಲ್ಲಿ ರಾಜ್ಯ ಮಟ್ಟದಿಂದ ಆಗಮಿಸಿದ್ದ ಭಾರತ ಚುನಾವಣಾ ಆಯೋಗದ ರಾಷ್ಟç ಮಟ್ಟದ ಮಾಸ್ಟರ್ ಟ್ರೖನರ್ ಆದ ಪಿ.ಜಯಮಾಧವ ಇವರು ಎಸ್.ಐ.ಆರ್ ಪ್ರಕ್ರಿಯೆಯ ವಿವಿಧ ಹಂತಗಳ ಕುರಿತು ವಿವರವಾದ ಮಾಹಿತಿ ನೀಡಿದರು. 

ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ತರಬೇತಿ ನೀಡುವುದು, ಅಗತ್ಯ ನಮೂನೆಗಳು ಹಾಗೂ ದಾಖಲೆಗಳ ಮುದ್ರಣ, ಮತಗಟ್ಟೆಗಳ ಮರುಹೊಂದಿಕೆ, ಮನೆ ಮನೆಗೆ ಭೇಟಿ ನೀಡಿ ಮತದಾರರ ಮಾಹಿತಿಯ ಸಂಗ್ರಹ ಮತ್ತು ಪರಿಶೀಲನೆ, ಕರಡು ಮತದಾರರ ಪಟ್ಟಿಯ ಪ್ರಕಟಣೆ, ಹಕ್ಕು ಮತ್ತು ಆಕ್ಷೇಪಣೆಗಳ ಸ್ವೀಕಾರ, ಅರ್ಜಿಗಳ ಪರಿಶೀಲನೆ ಹಾಗೂ ಅಂತಿಮ ಮತದಾರರ ಪಟ್ಟಿಯ ಪ್ರಕಟಣೆ ಸೇರಿದಂತೆ ಎಸ್‌ಐಆರ್ ಪ್ರಕ್ರಿಯೆಯ ಸಂಪೂರ್ಣ ಕಾರ್ಯವಿಧಾನದ ಕುರಿತು ಮಾಹಿತಿ ನೀಡಲಾಯಿತು.

ಅಪರ ಜಿಲ್ಲಾಧಿಕಾರಿ ಡಾ. ಎನ್. ತಿಪ್ಪೇಸ್ವಾಮಿ ಅವರು ಮತದಾರರ ಪಟ್ಟಿಯ ಶುದ್ಧತೆ ಹಾಗೂ ಪಾರದರ್ಶಕತೆಯನ್ನು ಖಚಿತಪಡಿಸುವಲ್ಲಿ ವಿಶೇಷ ಸಮಗ್ರ ಮತದಾರರ ಪರಿಷ್ಕರಣೆ ಕಾರ್ಯಕ್ರಮದ ಮಹತ್ವವನ್ನು ವಿವರಿಸಿದರು.

ತರಬೇತಿ ಕಾರ್ಯಾಗಾರದಲ್ಲಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ನೋಡಲ್ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಸ್ಥಳೀಯ, ನಗರ ಸಂಸ್ಥೆಗಳ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯತಿ ಡೇಟಾ ಎಂಟ್ರಿ ಆಪರೇಟರ್‌ಗಳು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು ದಸರಾ: ಹೊರ ರಾಜ್ಯದವರಿಗೆ ವಿಶೇಷ ಆತಿಥ್ಯ- ಸ್ಥಳೀಯರಿಗೆ ಗೇಟಿನಾಚೆ ಆಸನ

ತುಮಕೂರು ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ಕಳೆದ ಒಂದು ವಾರದಿಂದ ನಡೆಯುತ್ತಿರುವ...

ಕೆಪಿಎಸ್‌ಸಿ ಪರೀಕ್ಷಾ ಅಕ್ರಮದ ಆರೋಪಿ ಬಸವರಾಜ್ ಕಿನ್ನಾಳೆ RSS ಪಥಸಂಚಲನದ ಫೋಟೊ ವೈರಲ್

ಕೆಪಿಎಸ್‌ಸಿ ಪರೀಕ್ಷಾ ಅಕ್ರಮ ಪ್ರಕರಣದಲ್ಲಿ ಸಿಐಡಿಯಿಂದ ಬಂಧನಕ್ಕೊಳಗಾಗಿ, ಮಧ್ಯಂತರ ಜಾಮೀನಿನ ಮೇಲೆ...

ತುಮಕೂರು ದಸರಾ: ವಿಐಪಿಗಳಿಗೆ ರಾಜಮರ್ಯಾದೆ, ಸಾಮಾನ್ಯರ ಮೇಲೆ ಪೊಲೀಸ್ ದರ್ಪ!

 ಅಧಿಕಾರಿಗಳ ಕುಟುಂಬಸ್ಥರಿಗೆ ವಿಶೇಷ ಆತಿಥ್ಯ, ಜನ ಸಾಮಾನ್ಯರು ನಿಂತುಕೊಂಡು ಕಾರ್ಯಕ್ರಮ ನೋಡಲು...

ತುಮಕೂರು | ಬಣ್ಣದ ಚಿತ್ತಾರದಲ್ಲಿ ಅರಳಿದ ಮಹಿಳೆಯರ ಸೃಜನಶೀಲತೆ ; ಮಹಿಳಾ ದಸರಾಗೆ ಡಾ.ಜಿ.ಪರಮೇಶ್ವರ್ ಚಾಲನೆ

 ಬಣ್ಣಬಣ್ಣದ ರಂಗೋಲಿ ಚಿತ್ತಾರ, ಕ್ರೀಡಾ ಸ್ಪರ್ಧೆಗಳ ಸಂಭ್ರಮ, ಮಹಿಳೆಯರ ಉತ್ಸಾಹದ ಪಾಲ್ಗೊಳ್ಳುವಿಕೆ....