ತುಮಕೂರು | ಮೇ 3 ರಿಂದ ತುಮಕೂರು ಮಹಿಳಾ ಓಪನ್ ಟೆನಿಸ್ ಚಾಂಪಿಯನ್ ಷಿಪ್ : ಸಚಿವ ಡಾ. ಜಿ.ಪರಮೇಶ್ವರ

Date:

 ಮೇ 3ರಿಂದ 10ರವರೆಗೆ ಇದೇ ಮೊದಲ ಬಾರಿಗೆ ಅಂತಾರಾಷ್ಟ್ರೀಯ ತುಮಕೂರು ಮಹಿಳಾ ಓಪನ್ ಟೆನಿಸ್ ಚಾಂಪಿಯನ್ ಷಿಪ್ ತುಮಕೂರಿನಲ್ಲಿ ನಡೆಯಲಿದೆ ಎಂದು ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಗೃಹ ಸಚಿವ ಡಾ‌. ಜಿ.ಪರಮೇಶ್ವರ ತಿಳಿಸಿದರು

- Advertisement -

ತುಮಕೂರು ಟೆನಿಸ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ ಅವರು, ಅಂತಾರಾಷ್ಟ್ರೀಯ ಗುಣಮಟ್ಟದ ಟೆನಿಸ್ ಕ್ರೀಡಾಂಗಣಗಳನ್ನು ತುಮಕೂರಿನಲ್ಲಿ ನಿರ್ಮಿಸಿದ ಬಳಿಕ ಇದೇ ಮೊದಲ ಬಾರಿಗೆ ವಿಶ್ವ ಮಟ್ಟದ ಕ್ರೀಡಾಕೂಟ ನಡೆಯುತ್ತಿದ್ದು, ತುಮಕೂರಿನ ಜನತೆ ಹಾಗೂ ಕ್ರೀಡಾಸಕ್ತರಿಗೆ ಇದೊಂದು ಸದಾವಕಾಶ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಡತನದ ಮಾಪನ ಮತ್ತು ವಾಸ್ತವ ಚಿತ್ರಣ: ಆಳ ಅಗಲ

ವಿಶ್ವಬ್ಯಾಂಕ್‌ನ ಬಡತನ ಮತ್ತು ಸಮಾನತೆಯ ಇತ್ತೀಚಿನ ವರದಿಯ ಪ್ರಕಾರ 2011ರಿಂದ 2023ರ ಅವಧಿಯಲ್ಲಿ ಭಾರತದಲ್ಲಿ ಅಂದಾಜು 49.6 ಕೋಟಿ ಜನರು ಬಡತನದಿಂದ ಹೊರಬಂದಿದ್ದಾರೆ. ಈ ವರದಿಯನ್ನು ಆಧರಿಸಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ...

ಗಾಂಧೀಯ ‘ರಾಮ’-ಮನುವಾದಿಗಳ ‘ಶ್ರೀರಾಮ’ನಲ್ಲ

ಸಮಾನತೆಯ ರಾಮರಾಜ್ಯಕ್ಕೂ, ವರ್ಣಾಶ್ರಮದ ರಾಜಕಾರಣಕ್ಕೂ ಇರುವ ವ್ಯತ್ಯಾಸವೇನು? ಗಾಂಧೀಜಿಯವರ ಪಾಲಿಗೆ ರಾಮ ಎಂದರೆ ಸತ್ಯ, ಅಹಿಂಸೆ, ಪ್ರೀತಿ ಮತ್ತು ಸರ್ವಧರ್ಮ ಸಮಭಾವದ ಸಂಕೇತ; ಅಂಬೇಡ್ಕರ್ ಅವರ ವಿಮರ್ಶೆಯಲ್ಲಿ ಪುರಾಣದ ರಾಮನ ಆಡಳಿತದಲ್ಲಿ ಜಾತಿ...

ಮಂಡೇಲ ನೇತೃತ್ವದಲ್ಲಿ ಗುಲಾಮಗಿರಿ – ವರ್ಣಭೇದ ನೀತಿ ವಿರುದ್ಧ...

ನೆಲ್ಸನ್ ಮಂಡೇಲಾ ಅವರಂತಹ ಮಹಾನ್ ನಾಯಕರು ಕಟ್ಟಿದ್ದ ಈ ಪಕ್ಷ ದಾರಿ ತಪ್ಪಿದ್ದಾದರೂ ಹೇಗೆ ಎಂಬ ಪ್ರಶ್ನೆಗೆ ರಾಜಕೀಯ ತಜ್ಞರು ಸ್ಪಷ್ಟ ಕಾರಣಗಳನ್ನು ನೀಡಿದ್ದಾರೆ. ಆಡಳಿತಶಾಹಿಯ ಭ್ರಷ್ಟಾಚಾರ, ಮಿತಿಮೀರಿದ ಬಡತನ, ನಿರುದ್ಯೋಗ, ಮತ್ತು...

ತುಮಕೂರು ಜಿಲ್ಲಾಡಳಿತ, ತುಮಕೂರು ಟೆನಿಸ್ ಅಸೋಸಿಯೇಷನ್ ಹಾಗೂ ಕರ್ನಾಟಕ ಲಾನ್ ಟೆನಿಸ್ ಅಸೋಸಿಯೇಷನ್ ಸಹಕಾರದಲ್ಲಿ ಅಂತಾರಾಷ್ಟ್ರೀಯ ಮಹಿಳಾ ಟೆನಿಸ್ ಕ್ರೀಡಾಕೂಟ ನಡೆಯುತ್ತಿದ್ದು ವಿಶ್ವಾದ್ಯಂತ 100ಕ್ಕೂ ಹೆಚ್ಚು ಕ್ರೀಡಾಪಟುಗಳು ಸುಮಾರು 12 ದೇಶಗಳಿಂದ ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದಾರೆ ಎಂದರು

ಅಂತಾರಾಷ್ಟ್ರೀಯ ಟೆನಿಸ್ ಕ್ರೀಡಾಕೂಟ ನಡೆಯಬೇಕಾದರೆ ಕನಿಷ್ಠ ನಾಲ್ಕು ಅಂಕಣಗಳು ಇರಬೇಕು. ತುಮಕೂರು ವಿವಿ ಅವರ ಸಹಕಾರದಲ್ಲಿ ವಿಶ್ವದರ್ಜೆಯ ಟೆನಿಸ್ ಅಂಕಣಗಳನ್ನು ನಿರ್ಮಿಸಿದ ಬಳಿಕ ಅಂತಾರಾಷ್ಟ್ರೀಯ ಕ್ರೀಡಾಕೂಟವೊಂದನ್ನು ಇಲ್ಲಿ ನಡೆಸುವಂತೆ ಕರ್ನಾಟಕ ಲಾನ್ ಟೆನಿಸ್ ಅಸೋಸಿಯೇಷನ್ ಅವರನ್ನು ಕೋರಲಾಗಿತ್ತು. ಅಂತಾರಾಷ್ಟ್ರೀಯ ಟೆನಿಸ್ ಫೆಡರೇಷನ್ ಅವರು ತಮ್ಮ ಸಭೆಯಲ್ಲಿ ತೀರ್ಮಾನಿಸಿ ತುಮಕೂರಿನಲ್ಲಿ ಅಂತಾರಾಷ್ಟ್ರೀಯ ರ್ಯಾಂಕಿಂಗ್ ನ ವಿಶ್ವ ಮಹಿಳಾ ಟೆನಿಸ್ ಕ್ರೀಡಾಕೂಟ ನಡೆಸಲು ಅವಕಾಶ ನೀಡಿದ್ದಾರೆ ಎಂದು ಸಚಿವರು ವಿವರಿಸಿದರು.

ತುಮಕೂರಿನ ಈ ಕ್ರೀಡಾಕೂಟವು ತುಮಕೂರು ಓಪನ್ ಚಾಂಪಿಯನ್ ಷಿಪ್ ಎಂದೇ ವಿಶ್ವ ಟೆನಿಸ್ ಭೂಪಟದಲ್ಲಿ ಕರೆಯಲ್ಪಡಲಿದೆ. ಇಲ್ಲಿ ಆಡುವ ಕ್ರೀಡಾಪಟುಗಳು ವಿಜೇತರಾದಲ್ಲಿ 35 ಪಾಯಿಂಟ್ ಗಳನ್ನು ಹಾಗೂ 30ಸಾವಿರ ಅಮೆರಿಕಾ ಡಾಲರ್ ಗಳನ್ನು ಗೆಲ್ಲಲಿದ್ದಾರೆ. ಅಲ್ಲದೆ ನಂತರದ ಸ್ಥಾನವನ್ನು ಹೊಂದುವ ಆಟಗಾರರು ಅಂತಾರಾಷ್ಟ್ರೀಯ ರ್ಯಾಂಕ್ ಗಳನ್ನು ಪಡೆಯಲಿದ್ದಾರೆ ಎಂದರು.

ಕರ್ನಾಟಕ ಹಾಗೂ ತುಮಕೂರಿನ ಟೆನಿಸ್ ಆಟಗಾರರಿಗೆ ವಿಶ್ವದರ್ಜೆಯ ಕ್ರೀಡಾಕೂಟದಲ್ಲಿ ಭಾಗವಹಿಸಲು ಇದು ಸ್ಫೂರ್ತಿಯಾಗಲಿದೆ. ಇಂತಹ ಕ್ರೀಡಾಕೂಟಗಳಲ್ಲಿ ಭಾಗವಹಿಸಲು ಲಕ್ಷಾಂತರ ರೂ.ಗಳನ್ನು ವೆಚ್ಚ ಮಾಡಬೇಕಾಗುತ್ತದೆ. ಆದರೆ ಇನ್ನು ನಮ್ಮ ಕ್ರೀಡಾಪಟುಗಳ ಕಲಿಕೆಗೆ ಉತ್ತಮ ಅವಕಾಶಗಳು ಸಿಗಲಿವೆ ಎಂದರು.

ಮುಂದಿನ ದಿನಗಳಲ್ಲಿ ಪ್ರತಿ ವರ್ಷವೂ ಮೇ ತಿಂಗಳಲ್ಲಿ ತುಮಕೂರು ಓಪನ್ ಟೆನಿಸ ಚಾಂಪಿಯನ್ ಷಿಪ್ ನಡೆಯಿತು. ಟೆನಿಸ್ ಫೆಡರೇಷನ್ ಈ ಭರವಸೆ ನೀಡಿದೆ ಎಂದರು.

ತುಮಕೂರು ಜಿಲ್ಲೆಯಲ್ಲಿ ಅಂತಾರಾಷ್ಟ್ರೀಯ ಕ್ರೀಡಾಕೂಟಗಳು ಇನ್ನು ಮುಂದೆ ನಿರಂತರವಾಗಿ ನಡೆಯಲಿವೆ. ಅಂತಹ ವಾತಾವರಣವನ್ನು ನಿರ್ಮಾಣ ಮಾಡಿದ್ದೇವೆ ಎಂದು ಹೇಳಿದ ಸಚಿವರು, ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ಕೆಲಸ ಪ್ರಾರಂಭವಾಗಿದೆ. ಅಂತಾರಾಷ್ಟ್ರೀಯ ಹಾಕಿ ಕ್ರೀಡಾಂಗಣ ಹಾಗೂ ಅಂತಾರಾಷ್ಟ್ರೀಯ ಈಜುಕೊಳ ನಿರ್ಮಾಣಕ್ಕೆ ಈಗಾಗಲೇ ಜಾಗ ಗುರುತಿಸಲಾಗಿದೆ. ಅಲ್ಲದೆ ಇತ್ತೀಚೆಗೆ ತುಮಕೂರಿಗೆ ಆಗಮಿಸಿದ್ದ ಮುಖ್ಯಮಂತ್ರಿಯವರು ಕ್ರೀಡಾ ಅಭಿವೃದ್ಧಿಗೆ ರೂ.6 ಕೋಟಿ ಅನುದಾನ ನೀಡುವುದಾಗಿ ಹೇಳಿದ್ದರು ಅದರಂತೆ ಬಜೆಟ್ ನಲ್ಲಿ ರೂ. 3 ಕೋಟಿ ನೀಡಿದ್ದು, ಸುಮಾರು ರೂ.8 ಕೋಟಿ ಅನುದಾನವನ್ನು ನೀಡಲಿದ್ದಾರೆ ಎಂದರು

ಅಂತಾರಾಷ್ಟ್ರೀಯ ಮಹಿಳಾ ಟೆನಿಸ್ ಕ್ರೀಡಾಕೂಟದ ಲಾಂಛನವನ್ನು ಇದೇ ಸಂದರ್ಭದಲ್ಲಿ ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ಶಾಸಕ ಜಿ.ಬಿ. ಜ್ಯೋತಿಗಣೇಶ್, ಜಿಲ್ಲಾಧಿಕಾರಿ ಶುಭಕಲ್ಯಾಣ್, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ವಿ.ಆಶ್ವಿಜ, ಜಿಲ್ಲಾ ಪೊಲೀಸ್ ಅಧೀಕ್ಷಕ ಅಶೋಕ್ ಕೆ.ವಿ. ಕರ್ನಾಟಕ ಲಾನ್ ಟೆನಿಸ್ ಅಸೋಸಿಯೇಷನ್ ನ ಅಮರ್ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಮಾದಕ ವ್ಯಸನದಿಂದ ದೂರವಿದ್ದು ಉತ್ತಮ ನಾಗರಿಕರಾಗಿ: ಪಿಎಸ್‌ಐ ತಾರ ಕೆ.ಸಿ.

ಯುವಜನರು ಜಾಗೃತರಾಗಿರಬೇಕು. ಉನ್ನತ ಶಿಕ್ಷಣ ಪಡೆದು ಉತ್ತಮ ನಾಗರಿಕರಾಗಿ ಸಮಾಜದ ಆಸ್ತಿಯಾಗಬೇಕು....

ತುಮಕೂರು | ಸುಫಿಯಾ ಕಾನೂನು ಕಾಲೇಜು ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಮಂಜುನಾಥ್ ಆಯ್ಕೆ

ತುಮಕೂರು ನಗರದ ಸುಫಿಯಾ ಕಾನೂನು ಕಾಲೇಜಿನಲ್ಲಿ ನಡೆದ ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ...

ಕನ್ನಡದ ವಿದ್ವತ್ ಲೋಕದ ದಿಗ್ಗಜ ಕೆ.ವಿ. ನಾರಾಯಣರಿಗೆ ತುಮಕೂರು ವಿವಿಯ ನುಡಿನಮನ

ಹಿರಿಯ ವಿದ್ವಾಂಸ, ಚಿಂತಕ ಹಾಗೂ ಕನ್ನಡ ಭಾಷಾ ತಜ್ಞ ಪ್ರೊ. ಕೆ.ವಿ....

ತುಮಕೂರು | ವೈದ್ಯಕೀಯ ಶಿಕ್ಷಣಕ್ಕೆ ಜಾಗತಿಕ ಸಹಯೋಗದ ಅಗತ್ಯವಿದೆ: ಡಾ. ಜಿ. ಪರಮೇಶ್ವರ್

 ವಿಶ್ವಮಟ್ಟದಲ್ಲಿ ಭಾರತೀಯ ವೈದ್ಯರಿಗೆ ಹೆಚ್ಚಿನ ಬೇಡಿಕೆಯಿದ್ದು, ಈ ಹಿನ್ನೆಲೆಯಲ್ಲಿ ವಿದೇಶಿ ವಿಶ್ವವಿದ್ಯಾಲಯಗಳೊಂದಿಗೆ...