ತುಮಕೂರು ವಿವಿ 19ನೇ ಘಟಿಕೋತ್ಸವ : 90 ವಿದ್ಯಾರ್ಥಿಗಳಿಗೆ 117 ಚಿನ್ನದ ಪದಕ

Date:

ತುಮಕೂರು ವಿಶ್ವವಿದ್ಯಾನಿಲಯದ 19ನೇ ವಾರ್ಷಿಕ ಘಟಿಕೋತ್ಸವವು ಜೂನ್ 3 ರಂದು ಬುಧವಾರ ಬೆಳಗ್ಗೆ 11-30 ಗಂಟೆಗೆ ಕುಲಪತಿಗಳ ಕಛೇರಿ ಮುಂಭಾಗದ ಕ್ರೀಡಾಂಗಣದಲ್ಲಿ ನಡೆಯಲಿದೆ.

- Advertisement -

ಈ ಬಾರಿಯ ಘಟಿಕೋತ್ಸವದಲ್ಲಿ ಒಬ್ಬ ಅಭ್ಯರ್ಥಿ ಡಿ.ಲಿಟ್ ಪದವಿ, 59 ಅಭ್ಯರ್ಥಿಗಳು ಪಿಎಚ್.ಡಿ. ಪದವಿ, 2,058 ಅಭ್ಯರ್ಥಿಗಳು ಸ್ನಾತಕೋತ್ತರ ಹಾಗೂ 8,781 ಅಭ್ಯರ್ಥಿಗಳು ಸ್ನಾತಕ ಪದವಿ ಪಡೆಯಲು ಅರ್ಹರಾಗಿರುತ್ತಾರೆ (ಒಟ್ಟು 10,839 ಅಭ್ಯರ್ಥಿಗಳು). ವಿಶ್ವವಿದ್ಯಾನಿಲಯವು ಎಲ್ಲ ಸ್ನಾತಕೋತ್ತರ ಪದವಿಗಳಿಗೆ ತಲಾ ಐದು ರ‍್ಯಾಂಕುಗಳನ್ನು (ಎಂಎಸ್ಸಿ ವಿದ್ಯುನ್ಮಾನ ಮಾಧ್ಯಮ- 2 ರ‍್ಯಾಂಕ್), ಬಿಎ, ಬಿಎಸ್‌ಡಬ್ಲೂ, ಬಿಎಸ್‌ಸಿ, ಬಿಕಾಂ, ಬಿಬಿಎಂ, ಬಿಇಡಿ (ಸೆಮಿಸ್ಟರ್ ಪದ್ಧತಿ)ಗಳಿಗೆ ತಲಾ ಹತ್ತು ರ‍್ಯಾಂಕುಗಳನ್ನು (ಬಿಎಸ್ಸಿ ಫ್ಯಾಶನ್ ಅಂಡ್ ಅಪಾರೆಲ್ ಡಿಸೈನಿಂಗ್- 1 ರ‍್ಯಾಂಕ್, ಬಿ.ವೋಕ್ – 3 ರ‍್ಯಾಂಕ್) ಘೋಷಿಸಿದೆ. ಒಟ್ಟು 90 ವಿದ್ಯಾರ್ಥಿಗಳಿಗೆ 117 ಚಿನ್ನದ ಪದಕಗಳನ್ನು, ಹಾಗೂ ನಾಲ್ಕು ವಿದ್ಯಾರ್ಥಿಗಳಿಗೆ ನಗದು ಬಹುಮಾನಗಳನ್ನು ವಿಶ್ವವಿದ್ಯಾನಿಲಯವು ಈ ಬಾರಿಯ ಘಟಿಕೋತ್ಸವದಲ್ಲಿ ಪ್ರದಾನಮಾಡಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ರಾಜ್ಯಪಾಲರು ಹಾಗೂ ತುಮಕೂರು ವಿಶ್ವವಿದ್ಯಾನಿಲಯದ ಕುಲಾಧಿಪತಿ ಥಾವರ್ ಚಂದ್ ಗೆಹ್ಲೋಟ್ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಅಂತಾರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆಯ ನಿರ್ದೇಶಕ ಪ್ರೊ. ದೇಬಬ್ರತ ದಾಸ್  ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದು,  ಘಟಿಕೋತ್ಸವ ಭಾಷಣ ಮಾಡಲಿದ್ದಾರೆ . ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು, ಕುಲಸಚಿವರಾದ  ನಾಹಿದಾ ಜಮ್ ಜಮ್, ಪರೀಕ್ಷಾಂಗ ಕುಲಸಚಿವ ಪ್ರೊ. ಮೋಹನ ಹೆಚ್. ಎಸ್., ಸಿಂಡಿಕೇಟ್ ಹಾಗೂ ವಿದ್ಯಾವಿಷಯಕ ಪರಿಷತ್ ಸದಸ್ಯರು ಭಾಗವಹಿಸುವರು.

ಘಟಿಕೋತ್ಸವಕ್ಕೂ ಮುನ್ನ  ರಾಜ್ಯಪಾಲರು ತುಮಕೂರು ವಿಶ್ವವಿದ್ಯಾನಿಲಯದಲ್ಲಿ ಸ್ಥಾಪನೆಗೊಂಡಿರುವ ತುಮಕೂರು ಇನ್ನೋವೇಶನ್ ಇನ್‌ಕ್ಯುಬೇಶನ್ ಅಂಡ್ ಆಂತ್ರಪ್ರಿನ್ಯುರ್‌ಶಿಪ್ ಕೌನ್ಸಿಲ್ ಹಾಗೂ ಗೋ ಗ್ರೀನ್ – ಬೈಸಿಕಲ್ ಇನೀಶಿಯೇಟಿವ್‌ಗಳನ್ನು ಉದ್ಘಾಟಿಸಲಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು ದಸರಾ ವೈಭವಕ್ಕೆ ತುಮಕೂರಿನ ಸಾಂಸ್ಕೃತಿಕ ಸ್ಪರ್ಶ

ನಾಡಿನ ಸುಭಿಕ್ಷ, ಜನರ ಶಾಂತಿ, ನೆಮ್ಮದಿ ಹಾಗೂ ಮಳೆ-ಬೆಳೆ ಸಮೃದ್ಧಿಗಾಗಿ ತಾಯಿ...

ತುಮಕೂರು ದಸರಾ: ಹತ್ತು ದಿನಗಳ ಸಾಂಸ್ಕೃತಿಕ ಸಂಭ್ರಮ ನಾಳೆಯಿಂದ : ಡಾ. ಜಿ. ಪರಮೇಶ್ವರ್

ಮೈಸೂರಿಗೆ ಹೋಗುವ ಬದಲು ತುಮಕೂರಿನಲ್ಲೇ ದಸರಾ ನೋಡೋಣ ಎಂಬ ಮಾತು ಜನರ...

ತುಮಕೂರು | 10 ತಾಲ್ಲೂಕು ಪಂಚಾಯಿತಿಗಳ ಕ್ಷೇತ್ರವಾರು ಮೀಸಲಾತಿ ಪ್ರಕಟ : 196 ಕ್ಷೇತ್ರಗಳಿಗೆ ಮೀಸಲಾತಿ

ತುಮಕೂರು ಗ್ರಾಮೀಣ ರಾಜಕಾರಣದ ಮುಂದಿನ ಹಂತಕ್ಕೆ ವೇದಿಕೆ ಸಿದ್ಧವಾಗಿದೆ. ಮುಂಬರುವ ತಾಲ್ಲೂಕು...

ತುಮಕೂರು | ಜಿಪಂ ಚುನಾವಣೆಯ 57 ಕ್ಷೇತ್ರಗಳಿಗೆ ಮೀಸಲಾತಿ ಪ್ರಕಟ: ಸೆ.19ರೊಳಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ

ತುಮಕೂರು ಜಿಲ್ಲಾ ಪಂಚಾಯಿತಿ ಚುನಾವಣೆಯ ರಾಜಕೀಯ ಲೆಕ್ಕಾಚಾರಕ್ಕೆ ವೇದಿಕೆ ಸಿದ್ಧವಾಗುತ್ತಿದೆ. ಜಿಲ್ಲೆಯ...