ತುಮಕೂರು | ಪೂರ್ವಗ್ರಹವಿಲ್ಲದ ಇತಿಹಾಸ ನಿರ್ಮಾಣ ಇಂದಿನ ಅಗತ್ಯ : ಪ್ರೊ. ಬರಗೂರು ರಾಮಚಂದ್ರಪ್ಪ

Date:

ಇಂದಿನ ಯುವ ಇತಿಹಾಸಕಾರರು ಯಾವುದೇ ಪೂರ್ವಗ್ರಹಗಳಿಲ್ಲದ ಚರಿತ್ರೆಯನ್ನು ಕಟ್ಟಿಕೊಡಬೇಕಿದೆ ಹಾಗೂ ಸುಳ್ಳು ಸಂಗತಿಗಳನ್ನು ಉತ್ಪಾದಿಸುತ್ತಿರುವ ಕಾರ್ಖಾನೆಗಳನ್ನು ತಡೆಯುವ ಬಗ್ಗೆ ನಾವೆಲ್ಲರೂ ಗಂಭೀರವಾಗಿ ಚಿಂತಿಸಬೇಕಿದೆ ಎಂದು ಹಿರಿಯ ಸಾಹಿತಿ  ಪ್ರೊ. ನಾಡೋಜ ಬರಗೂರು ರಾಮಚಂದ್ರಪ್ಪ ಕರೆ ನೀಡಿದರು.

- Advertisement -

ತುಮಕೂರು ವಿಶ್ವವಿದ್ಯಾಲಯದ ಇತಿಹಾಸ ಮತ್ತು ಪುರಾತತ್ವ ಅಧ್ಯಯನ ವಿಭಾಗ, ಚೆನ್ನೆöÊನ ಸೇವ್ ಅವರ್ ಕಂಟ್ರಿ ಫೌಂಡೇಶನ್ ಸಹಯೋಗದಲ್ಲಿ ಮೇ 15 ಶುಕ್ರವಾರದಂದು ಆಯೋಜಿಸಲಾಗಿದ್ದ ಇತಿಹಾಸೋತ್ಸವ: 30 ವರ್ಷಗಳ ಸಾರ್ಥಕ ಪಯಣ ಮತ್ತು ಡಿಜಿಟಲ್ ಯುಗದಲ್ಲಿ ಐತಿಹಾಸಿಕ ಸಂಶೋಧನೆಯ ವೈಜ್ಞಾನಿಕ ಪ್ರಗತಿ ಕುರಿತ ಒಂದು ದಿನದ ರಾಷ್ಟ್ರೀಯ  ಸಮ್ಮೇಳನವನ್ನು  ಉದ್ಘಾಟಿಸಿ ಮಾತನಾಡಿದ ಅವರು,

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಸಂವಿಧಾನವೆಂಬ ನಮ್ಮೆಲ್ಲರ ಆಸ್ತಿಗಾಗಿ ಸತ್ಯಾಗ್ರಹ

ಇವತ್ತು ಬೀದಿಗೆ ಇಳಿದಿರೋ ಜನ ಸಾಮಾನ್ಯರಲ್ಲ. ಬದುಕಿನ ಹಕ್ಕನ್ನು ಈ ದೇಶದ ಜನರಿಗೆ ಮರಳಿ ಕೊಡಿಸುವುದಕ್ಕಾಗಿ, ಗಾಂಧೀಜಿಯವರ ಮಾತುಗಳು ಮತ್ತು ಅಂಬೇಡ್ಕರ್ ಅವರ ಸಂವಿಧಾನದ ಪೀಠಿಕೆಯನ್ನು ಕೈಯಲ್ಲಿ ಹಿಡಿದುಕೊಂಡು ನಿಂತಿರುವ ನಿಜವಾದ ಹೋರಾಟಗಾರರು. ಸರ್ಕಾರದ...

ಇತಿಹಾಸ ಕ್ಷೇತ್ರವು ಇಂದು ಅನೇಕ ಬಿಕ್ಕಟ್ಟುಗಳನ್ನು ಎದುರಿಸುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದ ಬರಗೂರು ಅವರು, ರಾಜಕೀಯ ಲಾಭಕ್ಕಾಗಿ ಚರಿತ್ರೆಯನ್ನು ತಿರುಚುವ ಕೆಲಸ ನಡೆಯುತ್ತಿರುವುದು ಹೀನಾಯವಾದುದು ಎಂದು ತಿಳಿಸಿದರು. ಜಾತಿ-ಮತಗಳ ಆಧಾರದ ಮೇಲೆ ಸುಳ್ಳುಗಳನ್ನು ಸೃಷ್ಟಿಸಲಾಗುತ್ತಿದೆ ಹಾಗೂ ಇಂದಿರಾ ಗಾಂಧಿಯವರು ಚಿನ್ನ ಬೆಳ್ಳಿ ಕೊಳ್ಳಬೇಡಿ ಎಂದು ಹೇಳಿದ್ದರು ಎಂಬಂತಹ ತಪ್ಪು ಮಾಹಿತಿಗಳು ಹರಡುತ್ತಿವೆ. ಇಂತಹ ಕಾಲಘಟ್ಟದಲ್ಲಿ ಸತ್ಯವನ್ನು ಜನರಿಗೆ ತಲುಪಿಸುವ ಮಧ್ಯವರ್ತಿಗಳಾಗಿ ಇತಿಹಾಸಕಾರರು ಕೆಲಸ ಮಾಡಬೇಕು ಎಂದರು.

ವಿಶ್ವವಿದ್ಯಾಲಯಗಳಿಗೆ ಕೇವಲ ಕಟ್ಟಡಗಳಷ್ಟೇ ಮುಖ್ಯವಲ್ಲ, ಅದರೊಳಗಿನ ವಿಷಯಗಳು ಬಹಳ ಮುಖ್ಯವಾಗಿವೆ. ಇತ್ತೀಚಿನ ಸಂಶೋಧನೆಗಳು ಗುಣಮಟ್ಟ ಕಳೆದುಕೊಳ್ಳುತ್ತಿವೆಯೇ ಎಂಬ ಭಯವಿದೆ ಎಂದು ಹೇಳಿದ ಅವರು, ಸಾಹಿತ್ಯ, ರಾಜಕೀಯ ಮತ್ತು ಶಿಕ್ಷಣ ತಜ್ಞರೆಲ್ಲರಿಗೂ ಇತಿಹಾಸ ಪ್ರಜ್ಞೆ ಅಗತ್ಯವಾಗಿದೆ ಎಂದರು. ಚರಿತ್ರೆಯಲ್ಲಿ ನಾವು ನಾಯಕರಾಗಿ ಕಾಣಿಸಿಕೊಳ್ಳಬೇಕೇ ಹೊರತು ಖಳನಾಯಕರಾಗಿ ಅಲ್ಲ ಎಂದರು.

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಮಾಜಿ ಕುಲಪತಿ ಡಾ. ಎಸ್. ಚಂದ್ರಶೇಖರ್ ಮಾತನಾಡಿ, ಮೂಲಧಾರಗಳಿಲ್ಲದೆ ಇತಿಹಾಸವನ್ನು ವ್ಯಾಖ್ಯಾನಿಸುವುದು ಅಪರಾಧವಾಗಿದೆ ಹಾಗೂ ಭವಿಷ್ಯವನ್ನು ಉತ್ತಮಗೊಳಿಸಲು ಚರಿತ್ರೆಯನ್ನು ಓದಬೇಕು ಎಂದರು. 

ಅಧ್ಯಕ್ಷತೆ ವಹಿಸಿದ್ದ ತುಮಕೂರು ವಿವಿ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಮಾತನಾಡಿ, ಸಾಮಾಜಿಕ ಮಾಧ್ಯಮಗಳು ಸಂಬಂಧಗಳನ್ನು ಬೆಸೆಯಲು ಸಹಕಾರಿಯಾಗಿವೆ. ಆದರೆ ತಂತ್ರಜ್ಞಾನವನ್ನು ಕುತಂತ್ರಕ್ಕೆ ಬಳಸುತ್ತಿರುವುದು ಆತಂಕಕಾರಿ ವಿಷಯವಾಗಿದೆ ಎಂದು ತಿಳಿಸಿದರು.

ವಿಶ್ವವಿದ್ಯಾಲಯದ ಅಭಿವೃದ್ಧಿಗಾಗಿ ಮತ್ತು ಮೂಲಸೌಕರ್ಯಗಳನ್ನು ಒದಗಿಸುವ ಉದ್ದೇಶದಿಂದ ಹೊಸ ಕ್ಯಾಂಪಸ್ ನಿರ್ಮಾಣ ಮಾಡಲಾಗಿದೆ. ದಾನಿಗಳಿಂದ 15 ಕೋಟಿ ಸಂಗ್ರಹವಾಗಿದ್ದು ಇನ್ನು ಕೆಲವು ದಿನಗಳಲ್ಲಿ 5 ಕೋಟಿ ತರುವೆ ಎಂದು ಭರವಸೆ ನೀಡಿದರು.

 ಕಾರ್ಯಕ್ರಮದ ಅಂಗವಾಗಿ ವಿವಿ ಆವರಣದಲ್ಲಿ ವಿದ್ಯಾರ್ಥಿಗಳಿಂದ ಆಕರ್ಷಕ ಮೆರವಣಿಗೆ ನಡೆಯಿತು. ಸಮಾರಂಭದಲ್ಲಿ ಇತಿಹಾಸೋತ್ಸವ ಸ್ಮರಣ ಸಂಚಿಕೆಯನ್ನು ಬಿಡುಗಡೆ ಮಾಡಲಾಯಿತು ಹಾಗೂ ಹಳೆಯ ನಾಣ್ಯಗಳ ಪ್ರದರ್ಶನವನ್ನು ಆಯೋಜಿಸಿದ್ದರು.

ಇತಿಹಾಸ ವಿಭಾಗದ ಮುಖ್ಯಸ್ಥ ಡಾ. ಎಲ್.ಪಿ. ರಾಜು ಪ್ರಾಸ್ತಾವಿಕ ನುಡಿಗಳನ್ನಾಡಿದರು ಮತ್ತು ಪ್ರೊ. ಎಂ. ಕೊಟ್ರೇಶ್ ಸ್ವಾಗತಿಸಿದರು. ಡಾ. ಚಿಕ್ಕಣ್ಣ, ಡಾ. ಪ್ರಿಯಾ ಠಾಕೂರ್, ಡಾ. ಶ್ರೀನಿವಾಸ್ ಅನೇಕ ಹಳೆಯ ವಿದ್ಯಾರ್ಥಿಗಳು ಹಾಗೂ ಸಂಶೋಧನಾರ್ಥಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಜಿಪಂ ಚುನಾವಣೆಯ 57 ಕ್ಷೇತ್ರಗಳಿಗೆ ಮೀಸಲಾತಿ ಪ್ರಕಟ: ಸೆ.19ರೊಳಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ

ತುಮಕೂರು ಜಿಲ್ಲಾ ಪಂಚಾಯಿತಿ ಚುನಾವಣೆಯ ರಾಜಕೀಯ ಲೆಕ್ಕಾಚಾರಕ್ಕೆ ವೇದಿಕೆ ಸಿದ್ಧವಾಗುತ್ತಿದೆ. ಜಿಲ್ಲೆಯ...

ತುಮಕೂರು ದಸರಾಕ್ಕೆ ತಾರಾ ಮೆರುಗು : 11 ದಿನ, ನೂರಾರು ಆಕರ್ಷಣೆ

ದೇವಿಯ ಆರಾಧನೆ, ತಾರೆಯರ ಕಲರವ, ಸಂಗೀತದ ರಸದೌತಣ, ನೃತ್ಯ ವೈಭವ, ಕ್ರೀಡಾ...

ಜಾಗತಿಕ ವಿಜ್ಞಾನಿಗಳ ಪಟ್ಟಿಯಲ್ಲಿ ತುಮಕೂರು ವಿವಿಯ ನಾಲ್ವರಿಗೆ ಸ್ಥಾನ

 ಜಾಗತಿಕ ಶೈಕ್ಷಣಿಕ ಮತ್ತು ಸಂಶೋಧನಾ ಕ್ಷೇತ್ರದಲ್ಲಿ ತುಮಕೂರು ವಿಶ್ವವಿದ್ಯಾನಿಲಯ ಮತ್ತೊಂದು ಮಹತ್ವದ...

ತುಮಕೂರು ದಸರಾ | ಬೆಳಕಿನ ಹಬ್ಬದ ಹಿಂದೆ ಕತ್ತಲ ಲೆಕ್ಕ!

 ನಾಡಹಬ್ಬ ದಸರಾಕ್ಕೆ ತುಮಕೂರು ನಗರ ಸಜ್ಜಾಗುತ್ತಿದೆ. ನಗರದ ಪ್ರಮುಖ ರಸ್ತೆಗಳು, ವೃತ್ತಗಳು...