ತುಮಕೂರು | ಬರವಣಿಗೆಯೆಂಬ ದೀಪ ಹಚ್ಚಿದಾಗ ಸಾಹಿತ್ಯದ ಸಂಪತ್ತು ಹೊರಬರುತ್ತದೆ: ತಾರಿಣಿ ಚಿದಾನಂದ

Date:

ಸಾಹಿತ್ಯ ಎಂಬುದು ಕತ್ತಲಲ್ಲಿ ಅಡಗಿರುವ ಸಂಪತ್ತು. ಅದನ್ನು ಬರವಣಿಗೆ ಎಂಬ ದೀಪದ ಬೆಳಕನ್ನು ಹಚ್ಚಿ ಹೊರಗೆ ತರಬೇಕು. ಬರವಣಿಗೆಯನ್ನು ಆರಂಭಿಸಲು ಯಾರೂ ಹಿಂಜರಿಯಬಾರದು ಎಂದು ರಾಷ್ಟ್ರಕವಿ ಕುವೆಂಪು ಅವರ ಪುತ್ರಿ ತಾರಿಣಿ ಚಿದಾನಂದಗೌಡ ಹೇಳಿದರು.

- Advertisement -

ತುಮಕೂರು ವಿಶ್ವವಿದ್ಯಾನಿಲಯದ ಕುವೆಂಪು ಅಧ್ಯಯನ ಪೀಠದ ವತಿಯಿಂದ ಜೂ. 25ರ ಗುರುವಾರದಂದು ಆಯೋಜಿಸಿದ್ದ ಮಗಳು ಕಂಡಂತೆ ಕುವೆಂಪು ಎಂಬ ಶೀರ್ಷಿಕೆಯ ಆಪ್ತ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚುನಾವಣಾ ಆಯುಕ್ತರ ನೇಮಕ, ವಜಾ ಹೇಗೆ? ಈ ಹಿಂದೆ...

ಚುನಾವಣೆಯನ್ನು ನ್ಯಾಯಸಮ್ಮತವಾಗಿ ನಡೆಸಬೇಕಾದ ಚುನಾವಣಾ ಆಯೋಗ, ಚುನಾವಣಾ ಆಯುಕ್ತರು ಸರ್ಕಾರದ ಪ್ರಭಾವದಿಂದ ಮುಕ್ತವಾಗಿರಬೇಕು. ಆದರೆ ಚುನಾವಣೆ ಸ್ಪರ್ಧಿಸುವ ಆಡಳಿತ ಪಕ್ಷವೇ ತನಗೆ ಇಷ್ಟವಾದ ವ್ಯಕ್ತಿಯನ್ನು ಚುನಾವಣಾ ಅಧಿಕಾರಿಯಾಗಿ ನೇಮಕ ಮಾಡಿಕೊಂಡರೆ, ವಿರೋಧ ಪಕ್ಷಗಳಿಗೆ...

ರಾಹುಲ್‌ ಗಾಂಧಿ ಲಿಸ್ಟ್‌ನಲ್ಲಿರುವ ʼಸಂವಿಧಾನದ ವಿಧ್ವಂಸಕರುʼ ಇವರೇನಾ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವಿಚಾರದಲ್ಲಿ ಚುನಾವಣಾ ಆಯೋಗದ ವಿರುದ್ಧ ಎದ್ದಿರುವ ಅನುಮಾನಗಳಿಂದ ರಾಜಕೀಯ ಸಂಘರ್ಷ ಮತ್ತಷ್ಟು ತೀವ್ರಗೊಂಡಿದೆ. ಈ ಬೆನ್ನಲ್ಲೇ, ಕಾಂಗ್ರೆಸ್‌ ನಾಯಕ ಹಾಗೂ ಲೋಕಸಭೆ ವಿರೋಧ ಪಕ್ಷದ...

ತೆಲಂಗಾಣ ಬೆಳೆ ರಕ್ಷಣೆಗೆ 3 ಟಿಎಂಸಿ ನೀರು: ಅಚ್ಚುಕಟ್ಟು...

ಕೃಷ್ಣಾ ನದಿಯ ನೀರು ಮತ್ತೊಮ್ಮೆ ಕರ್ನಾಟಕ–ತೆಲಂಗಾಣದ ನಡುವಿನ ಪ್ರಮುಖ ವಿಚಾರವಾಗಿ ಮುನ್ನೆಲೆಗೆ ಬಂದಿದೆ. ತೆಲಂಗಾಣದ ಕೃಷಿ ಪ್ರದೇಶದಲ್ಲಿನ ನಿಂತಿರುವ ಬೆಳೆಗಳನ್ನು ರಕ್ಷಿಸಲು ಕರ್ನಾಟಕದಿಂದ ಕೃಷ್ಣಾ ನೀರು ಬಿಡುಗಡೆ ಮಾಡುವಂತೆ ಆ ರಾಜ್ಯದ ಸಚಿವರು...

ಮಗಳು ಕಂಡಂತೆ ಕುವೆಂಪು ಪುಸ್ತಕ ಬರೆಯುವಾಗ ಮೊದಲು ಭಯವಿತ್ತು. ಆದರೆ ಬರೆಯಲು ಆರಂಭಿಸಿದ ಮೇಲೆ ಅದು ಮುಗಿಯುವವರೆಗೂ ತಿಳಿಯಲೇ ಇಲ್ಲ. ಕುವೆಂಪು ಅವರು ಮನೆಯಲ್ಲಿ ಎಲ್ಲರಂತೆ ಅತ್ಯಂತ ಸರಳ ವ್ಯಕ್ತಿಯಾಗಿದ್ದರು. ಮಕ್ಕಳ ವಿದ್ಯಾಭ್ಯಾಸ ಹಾಗೂ ಅವರ ಇಷ್ಟಗಳಿಗೆ ಕುವೆಂಪು ಸದಾ ಪ್ರೋತ್ಸಾಹ ನೀಡುತ್ತಿದ್ದರು. ಮಕ್ಕಳು ಏನನ್ನು ಸಾಧಿಸಬೇಕೆಂದುಕೊಳ್ಳುತ್ತಾರೋ ಅದಕ್ಕೆ ತಮ್ಮ ಕೈಲಾದ ಸಹಾಯ ಮಾಡುತ್ತಿದ್ದರು ಎಂದರು.

ಕುವೆಂಪು ಅವರಿಗೆ ಜ್ಞಾನಪೀಠ ಪ್ರಶಸ್ತಿ ಬಂದ ಸಂದರ್ಭದಲ್ಲಿ ಮನೆಯ ಪರಿಸ್ಥಿತಿ ಸರಿಯಿರಲಿಲ್ಲ, ತಾಯಿಯವರ ಆರೋಗ್ಯವೂ ಕ್ಷೀಣಿಸಿತ್ತು. ನಂತರದ ದಿನಗಳಲ್ಲಿ ಎಲ್ಲಾ ಸಮಸ್ಯೆಗಳು ಬಗೆಹರಿದ ಮೇಲೆ ನಮಗೆ ಹೆಚ್ಚು ಸಂತೋಷವಾಗಿತ್ತು ಎಂದರು

 ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ವೆಂಕಟೇಶ್ವರಲು ಎಂ. ಮಾತನಾಡಿ ಉತ್ತಮವಾದ ದೂರದೃಷ್ಟಿ ಹಾಗೂ ಗುರಿಯನ್ನಿಟ್ಟುಕೊಂಡು ಪ್ರಾಮಾಣಿಕವಾಗಿ ಕೆಲಸ ಮಾಡಿದರೆ ಯಾವುದೇ ಕೆಲಸವೂ ಅಸಾಧ್ಯವಲ್ಲ. ಅಂದಿನ ಕುಲಪತಿಗಳಾಗಿದ್ದ ಚಿದಾನಂದ ಗೌಡರು ಹಾಗೂ ಅವರಿಗೆ ಬೆಂಬಲ ನೀಡಿದ ಕುಲಸಚಿವ ಪ್ರವೀಣ್ ಚಂದ್ರಪಾಂಡೆ ಅವರು ಕೇವಲ ನಾಲ್ಕು ವರ್ಷಗಳಲ್ಲಿ ಕುವೆಂಪು ವಿವಿಯನ್ನು ತಳಮಟ್ಟದಿಂದ ಕಟ್ಟಿ ಬೆಳೆಸಿದರು. ಸಾರಿಗೆ, ವಿದ್ಯುತ್, ನೀರು ಸೇರಿದಂತೆ ಎಲ್ಲಾ ಮೂಲಸೌಕರ್ಯಗಳನ್ನು ಒದಗಿಸಿ, ಇಂದು ಆ ವಿಶ್ವವಿದ್ಯಾನಿಲಯವು ಉಳಿದೆಲ್ಲವುಗಳಿಗಿಂತ ವಿಭಿನ್ನವಾಗಿ ನಿಲ್ಲುವಂತೆ ಮಾಡಿದ್ದಾರೆ. ಕುವೆಂಪು ವಿವಿಯ ಮಾದರಿಯಲ್ಲೇ ತುಮಕೂರು ವಿಶ್ವವಿದ್ಯಾನಿಲಯವೂ ಅಭಿವೃದ್ಧಿಯಾಗಬೇಕು ಎಂಬುದು ನಮ್ಮೆಲ್ಲರ ಗುರಿಯಾಗಿದೆ. ಹಿರಿಯರ ಮಾರ್ಗದರ್ಶನದಲ್ಲಿ ನಾವು ಮುಂದೆ ಸಾಗಲಿದ್ದೇವೆ ಎಂದು ತಿಳಿಸಿದರು.

 ಕುವೆಂಪು ಅಧ್ಯಯನ ಪೀಠದ ಸಂಯೋಜಕರಾದ ಪ್ರೊ. ಗೀತಾ ವಸಂತ ಅವರು ಆಶಯ ನುಡಿಗಳನ್ನಾಡಿದರು. ಕುವೆಂಪು ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿಗಳಾದ ಪ್ರೊ. ಕೆ. ಚಿದಾನಂದಗೌಡ ಉಪಸ್ಥಿತರಿದ್ದರು. 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಪಾರಂಪರಿಕ ಮೌಲ್ಯಗಳು ಜೀವನದ ಆದರ್ಶಗಳು : ಡಿ. ಕೃಷ್ಣ

 ಐತಿಹಾಸಿಕ ಸ್ಮಾರಕಗಳು ಹಾಗೂ ಪಾರಂಪರಿಕ ಮೌಲ್ಯಗಳನ್ನು ಮುಂದಿನ ಪೀಳಿಗೆಗೆ ಉಳಿಸಿ-ಬೆಳೆಸುವ ಜವಾಬ್ದಾರಿ...

ತುಮಕೂರು | ಎಂಜಿನಿಯರಿಂಗ್ ವಿದ್ಯಾರ್ಥಿಗಳು ಹೊಸ ಆಲೋಚನೆ, ಆವಿಷ್ಕಾರದ ಮನೋಭಾವ ಬೆಳೆಸಿಕೊಳ್ಳಲಿ : ಡಾ.ಜಿ. ಪರಮೇಶ್ವರ

 ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ವೇಗವಾಗಿ ಅಭಿವೃದ್ಧಿ ಹೊಂದುತ್ತಿದ್ದು, ಎಂಜಿನಿಯರಿಂಗ್ ವಿದ್ಯಾರ್ಥಿಗಳು ನಿರಂತರ...

ಗುಬ್ಬಿ | ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿ ರದ್ದತಿಗೆ ರೈತಸಂಘ ಒತ್ತಾಯ

 ಹೇಮಾವತಿ ನದಿ ತುಮಕೂರು ಜಿಲ್ಲೆಯ ರೈತರ ಬದುಕಿನ ಆಧಾರವಾಗಿದ್ದು, ಅದರ ನೀರನ್ನು...

ನವೆಂಬರ್ ಅಂತ್ಯದೊಳಗೆ ತುಮಕೂರಿಗೆ ಎತ್ತಿನಹೊಳೆ ನೀರು : ಸಚಿವ ಎನ್. ಚಲುವರಾಯಸ್ವಾಮಿ

ಬರುವ ನವೆಂಬರ್ ಅಂತ್ಯದೊಳಗೆ ತುಮಕೂರಿಗೆ ಎತ್ತಿನಹೊಳೆ ಯೋಜನೆಯ ನೀರು ಹರಿಸಲಾಗುವುದು ಎಂದು...