ತುಮಕೂರು | ಸಂವಿಧಾನದ ಮೌಲ್ಯಗಳನ್ನು ಯುವಜನತೆ ಅಳವಡಿಸಿಕೊಳ್ಳಬೇಕು: ಚಂದನ್ ಡಿ.ಎನ್.

Date:

ಅಂಬೇಡ್ಕರ್ ಅವರು ಪ್ರತಿಪಾದಿಸಿದ ಶಿಕ್ಷಣ, ಸಮಾನತೆ, ಸ್ವಾಭಿಮಾನ ಹಾಗೂ ಸಾಮಾಜಿಕ ನ್ಯಾಯದ ಮೌಲ್ಯಗಳು ಇಂದಿನ ಯುವಜನತೆಗೆ ದಾರಿದೀಪವಾಗಿವೆ ಎಂದು ಪತ್ರಕರ್ತ ಚಂದನ್ ಡಿ.ಎನ್. ಹೇಳಿದರು. 

- Advertisement -

ತುಮಕೂರು ನಗರದ ಹೊರವಲಯದ ಹೆತ್ತೇನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ತುಮಕೂರು ವಿಶ್ವವಿದ್ಯಾನಿಲಯ ಹಾಗೂ ಶೇಷಾದ್ರಿಪುರಂ ಕಾಲೇಜು ವತಿಯಿಂದ ಆಯೋಜಿಸಿದ್ದ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ವಾರ್ಷಿಕ ವಿಶೇಷ ಸೇವಾ ಶಿಬಿರದ ಅಂಗವಾಗಿ ‘ಭಾರತ ಸಂವಿಧಾನ’ ಕುರಿತ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ದೇಶದ ಭವಿಷ್ಯ ಯುವಜನರರ ಕೈಯಲ್ಲಿದೆ. ಸಾಮಾಜಿಕ ಅಸಮಾನತೆ, ಜಾತಿ ಭೇದ ಹಾಗೂ ಅನ್ಯಾಯಗಳ ವಿರುದ್ಧ ಯುವಜನತೆ ಸಂವಿಧಾನದ ಚಿಂತನೆಗಳೊಂದಿಗೆ ಹೋರಾಡಬೇಕು. ಸಂವಿಧಾನವು ಪ್ರತಿಯೊಬ್ಬ ನಾಗರಿಕನಿಗೂ ಸಮಾನ ಹಕ್ಕುಗಳನ್ನು ನೀಡಿದ್ದು, ಯುವಜನರು ಅದರ ಆಶಯಗಳನ್ನು ಅರ್ಥಮಾಡಿಕೊಂಡು ಸಮಾಜದಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು ಎಂದು ಅವರು ಅಭಿಪ್ರಾಯಪಟ್ಟರು.

ಸಾಮಾಜಿಕ ಕಾರ್ಯಕರ್ತ ಜಿ. ಎಸ್. ಶರಣು ಮಾತನಾಡಿ, ರಾಷ್ಟ್ರಪತಿ, ರಾಜ್ಯಪಾಲ, ಕುಲಪತಿಯಂತಹ ಪದಗಳೇ ಸಮಾಜದ ಪುರುಷ ಪ್ರಧಾನ ಮನಸ್ಥಿತಿಯನ್ನು ಎತ್ತಿ ತೋರಿಸುತ್ತವೆ. “ಹೆಣ್ಣೆಂದರೆ ಜೋರಾಗಿ ನಗಬಾರದು, ಗಂಡೆಂದರೆ ಅಳಬಾರದು” ಎಂಬ ಸಾಮಾಜಿಕ ಕಟ್ಟುಪಾಡುಗಳು ಹಾಗೂ ಪೂರ್ವಾಗ್ರಹಗಳು ಇಂದಿನ ತಲೆಮಾರಿನ ಸ್ವತಂತ್ರ ಚಿಂತನೆಗೆ ಅಡ್ಡಿಯಾಗಿವೆ. ಸಮಾಜದಲ್ಲಿ ಬೇರೂರಿರುವ ಪೂರ್ವಾಗ್ರಹಗಳು ಹಾಗೂ ಭೇದಭಾವವನ್ನು ದೂರ ಮಾಡುವಲ್ಲಿ ಶಿಕ್ಷಣವೇ ಮುಖ್ಯ ಅಸ್ತ್ರವಾಗಿದ್ದು, ಯುವಜನರು ಮಾನವೀಯ ಮೌಲ್ಯಗಳೊಂದಿಗೆ ಸಮಾಜಮುಖಿ ಚಿಂತನೆ ಬೆಳೆಸಿಕೊಳ್ಳಬೇಕು ಎಂದರು. 

ಮುಂದುವರೆದು, ಸಂವಿಧಾನ ಜಾರಿಯಾದ ನಂತರವೂ ಮಹಿಳೆಯರಿಗೆ ಆರ್ಥಿಕ ಮತ್ತು ರಾಜಕೀಯ ಪ್ರಾತಿನಿಧ್ಯ ಸಿಕ್ಕಿಲ್ಲ. ಪ್ರಸ್ತುತ ಮಹಿಳೆಯರ ಹೆಸರಿನಲ್ಲಿ ಕೇವಲ 12% ಭೂಮಿ ಇದೆ, ರಾಜಕೀಯದಲ್ಲಿ 14% ಹಾಗೂ ಕಾರ್ಪೊರೇಟ್ ವಲಯದಲ್ಲಿ ಕೇವಲ ಬೆರಳಣಿಕೆಯಷ್ಟು ಮಾತ್ರ ಅಧಿಕಾರವಿದೆ. ಮಾಧ್ಯಮಗಳ ಚರ್ಚಾ ಪ್ಯಾನೆಲ್‌ಗಳಲ್ಲೂ ಮಹಿಳೆಯರಿಗೆ ಅವಕಾಶಗಳು ಸಿಗುತ್ತಿಲ್ಲ. ಮಹಿಳೆಯರಿಗೆ ರಾಜಕೀಯದಲ್ಲಿ 50% ಮೀಸಲಾತಿ, ಸೇರಿದಂತೆ ವಿವಿಧ ವಲಯಗಳಲ್ಲಿ ಪುರುಷನಷ್ಟು ಸಮಾನ ಅವಕಾಶಗಳು ಸಿಗಬೇಕು ಎಂದು ಒತ್ತಿ ಹೇಳಿದರು.  

ಕಾರ್ಯಕ್ರಮದಲ್ಲಿ ಶಿಬಿರಾಧಿಕಾರಿ ಮನೋಹರ ಎ.ಪಿ., ಉಪ ಶಿಬಿರಾಧಿಕಾರಿ ಮದ್ವೇಶ್ ಟಿ.ಆರ್., ಪತ್ರಕರ್ತರಾದ ದರ್ಶನ್ ಹಾಗೂ ಶಿಬಿರಾರ್ಥಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಮಾನವೀಯ ಮೌಲ್ಯವೇ ಶಿಕ್ಷಣದ ಬೇರು: ಶಾಸಕ ಬಿ. ಸುರೇಶ್ ಗೌಡ

 "ಅಂಕ ಗಳಿಸುವುದೇ ಶಿಕ್ಷಣದ ಗುರಿಯಲ್ಲ; ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಂಡು ಸಂಸ್ಕಾರವಂತರಾಗಿ ಬಾಳುವುದೇ...

ತುಮಕೂರು | ಅ.5ರಿಂದ ಮೂರು ದಿನಗಳ ಮಾಧ್ಯಮ ಕಾರ್ಯಾಗಾರ : ‘ರೇಡಿಯೋ ಬರವಣಿಗೆಯಿಂದ ಛಾಯಾಗ್ರಹಣದವರೆಗೆ’ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಪಾಠ

 ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಮಾಧ್ಯಮ ಲೋಕದ ಪ್ರಾಯೋಗಿಕ ಅನುಭವ ಕಟ್ಟಿಕೊಡಲು ಶ್ರೀ ಸಿದ್ಧಾರ್ಥ...

ತುಮಕೂರು | ಜಂತರ್ ಮಂತರ್‌ನಲ್ಲಿ ಯುವಜನರ ಬಂಧನ: ಸಿಪಿಐ(ಎಂ) ತೀವ್ರ ಖಂಡನೆ

 ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ತಕ್ಷಣ ತೆಗೆದುಹಾಕಬೇಕೆಂದು...

ತುಮಕೂರಿನಲ್ಲಿ ಬರದ ಕರಿನೆರಳು: ಕೇಂದ್ರ ತಂಡದ ಮುಂದೆ ₹159 ಕೋಟಿ ನಷ್ಟದ ಲೆಕ್ಕ

ಮುಂಗಾರು ಮಳೆ ಕೈಕೊಟ್ಟ ಪರಿಣಾಮ ಜಿಲ್ಲೆಯಲ್ಲಿ ಈವರೆಗೆ ಸುಮಾರು ₹159 ಕೋಟಿ...