ಅಬ್ಯಾಕಸ್ ಸ್ಪರ್ಧೆಯಲ್ಲಿ ತುಮಕೂರಿನ ಇಬ್ಬರಿಗೆ ರಾಜ್ಯಮಟ್ಟದ ಪ್ರಶಸ್ತಿ

Date:

ತುಮಕೂರು ನಗರದ ಕ್ಯಾಲ್ಸಿ ಅಬಾಕಸ್ ಶಾಲೆಯಲ್ಲಿ ಅಧ್ಯಯನ ಮಾಡಿದ ಮಕ್ಕಳು, ಹುಬ್ಬಳ್ಳಿಯಲ್ಲಿ ನಡೆದ ರಾಜ್ಯ ಮಟ್ಟದ ಅಬ್ಯಾಕಸ್ ಸ್ಪರ್ಧೆ-2026ರಲ್ಲಿ ಒರ್ವ ಪ್ರಥಮ ಸ್ಥಾನ ಗಳಿಸಿದರೆ, ಮತ್ತೊಬ್ಬರು ದ್ವಿತೀಯ ಸ್ಥಾನ ಗಳಿಸಿದರು. ಅಲ್ಲದೆ 26 ವಿದ್ಯಾರ್ಥಿಗಳು ಅಬಾಕಸ್ ನಲ್ಲಿ ಪದವಿ ಪೂರ್ಣಗೊಳಿಸಿದ್ದಾರೆ.

- Advertisement -

ತುಮಕೂರು  ನಗರದ ಮಾರುತಿ ನಗರದ ತುಮಕೂರು ಜಿಲ್ಲಾ ಶ್ರೀ ವೈಷ್ಣವ ಸಮುದಾಯ ಭವನದಲ್ಲಿ ಏರ್ಪಡಿಸಿದ್ದ ಪ್ರಶಸ್ತಿ ವಿತರಣೆ ಮತ್ತು ಪದವಿ ಪ್ರದಾನ ಕಾರ್ಯಕ್ರಮದಲ್ಲಿ ಮಾತನಾಡಿದ ಶೇಷಾದ್ರಿಪುರಂ ಶಾಲೆಯ ಪ್ರಾಂಶುಪಾಲ ನಂದಾ ಹೆಚ್.ಎನ್‌,  ಗಣಿತ ಎನ್ನುವುದು ಸೊನ್ನೆಯಿಂದ ಆರಂಭಗೊಂಡು ಅನಂತ ಸಂಖ್ಯೆಗಳವರೆಗೆ ಮುಂದುವರೆಯುತ್ತದೆ. ಈ ಗಣಿತವನ್ನು ತುಂಬಾ ಏಕಾಗ್ರತೆಯಿಂದ ಮಕ್ಕಳು ಕಲಿಯಬೇಕು. ಇದು ಕಲಿಕೆಯಲ್ಲಿನ ಆಸಕ್ತಿ ಮತ್ತು ಕ್ರಿಯಾಶೀಲತೆಯನ್ನು ಬೆಳಸುತ್ತದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಅಬಾಕಸ್ ಕಲಿಯುವುದರಿಂದ ಮಕ್ಕಳ ವಿದ್ಯಾಬ್ಯಾಸದಲ್ಲಿಯೂ ಉತ್ತಮ ಬೆಳವಣಿಗೆಯಾಗುತ್ತದೆ. ಗುಣಾಕಾರ ಹಾಗೂ ಭಾಗಾಕಾರದಂತಹ ಲೆಕ್ಕಗಳನ್ನು ವೇಗವಾಗಿ ಮಾಡಲು ಸಹಕಾರಿಯಾಗುತ್ತದೆ ಎಂದರು.

ತುಮಕೂರಿನ ಡಯಟ್ ನ ಅಧಿಕಾರಿ ಶ್ರೀರಂಗರಾಜು ಮಾತನಾಡಿ, ಮಕ್ಕಳಿಗೆ ಸರಿಯಾದ ರೀತಿಯಲ್ಲಿ ವಿದ್ಯಾಭ್ಯಾಸ ನೀಡುವುದರ ಜೊತೆಗೆ, ಬೇರೆ ಚಟುವಟಿಕೆಗಳಲ್ಲಿ ಬೇರೆ ಮಾಡಬೇಕು. ಟೇಬಲ್ ಟೆಲ್ಲಿಂಗ್ ಪ್ರಕ್ರಿಯೆಯನ್ನು ಕಲಿಯವುದರಿಂದ ಮಕ್ಕಳ ಮೆದುಳಿನ ಪ್ರಕ್ರಿಯೆ ವೇಗಗೊಳ್ಳುತ್ತದೆ. ಗಣಿತಶಾಸ್ತ್ರದಲ್ಲಿ ಹೆಚ್ಚು ಪರಿಣಿತಿ ಸಾಧಿಸುತ್ತಾರೆಂದು ಎಂದು ಹೇಳಿದರು.

ಅಬಾಕಸ್‌ನಲ್ಲಿ ಪದವಿ ಗಳಿಸಿದವರಿಗೆ ಪದವಿ ಪತ್ರ ವಿತರಿಸಿದ ಶ್ರೀ ಸಿದ್ದಾರ್ಥ ಮಾಧ್ಯಮ ಅಧ್ಯಯನ ಕೇಂದ್ರದ ನಿರ್ದೇಶಕ ಡಾ,ಬಿ.ಟಿ.ಮುದ್ದೇಶ್ ಮಾತನಾಡಿ, ಈಗಿನ ಪ್ರಪಂಚಕ್ಕೆ ಅನುಗುಣವಾಗಿ ನಮ್ಮ ಮಕ್ಕಳನ್ನು ಸಿದ್ದಪಡಿಸಬೇಕು. ಅವರಿಗೆ ಗುಣಮಟ್ಟದ ಶಿಕ್ಷಣ ಮತ್ತು ಜ್ಞಾನದ ಅರಿವನ್ನು ನೀಡಬೇಕು. ಇಲ್ಲದಿದ್ದರೆ ಮುಂದೆ ಅವರ ಜೀವನದಲ್ಲಿ ಈ ಪ್ರಪಂಚವನ್ನು ಎದುರಿಸಲು ಆಗುವುದಿಲ್ಲ ಎಂದು ಹೇಳಿದರು.

ಅಬಾಕಸ್‌ನಲ್ಲಿ ಶಿಕ್ಷಣ ಪಡೆಯುವುದರಿಂದ ಮಕ್ಕಳು ಕ್ಯಾಲ್ಕುಲೇಟರ್‌ಗಿಂತಲೂ ವೇಗವಾಗಿ ಲೆಕ್ಕ ಮಾಡುವುದನ್ನು ಕಲಿಯಬಹುದು. ಮಕ್ಕಳಲ್ಲಿ ಗಣಿತದ ಮೇಲಿನ ಭಯ ಹೋಗಲಾಡಿಸಿ ಆತ್ಮವಿಶ್ವಾಸ ಬೆಳೆಸುವಲ್ಲಿ ಅಬಾಕಸ್ ಒಂದು ಉತ್ತಮವಾದ ಸಾಧನವಾಗಿದೆ ಎಂದು  ತಿಳಿಸಿದರು. 

‘ಕಾರ್ಯಕ್ರಮದಲ್ಲಿ ಅಬಾಕಸ್ ಶಾಲೆಯ ಪ್ರಾಂಶುಪಾಲರಾದ ಸೌಮ್ಯ ಎಸ್ ಶಿರೂರ್, ನಗರ ಶಾಖೆಯ ಮುಖ್ಯಸ್ಥ ಸಂತೋಷ್ ಪಿ ಶಿರೂರ್, ಶಿಕ್ಷಕಿ ಚೇತನ ಬೋಧಕ ಸಿಬ್ಬಂದಿ ಮತ್ತು ಮಕ್ಕಳು ಪಾಲಕರು ಭಾಗವಹಿಸಿದ್ದರು. ಶಿಕ್ಷಕಿ ನಾಗರತ್ನಮ್ಮ ಕಾರ್ಯಕ್ರಮ ನಿರೂಪಿಸಿದರು.

ಪ್ರಶಸ್ತಿ : 

ಹುಬ್ಬಳ್ಳಿಯಲ್ಲಿ ನಡೆದ ರಾಜ್ಯಮಟ್ಟದ 10 ವಿಭಾಗಗಳ ಸ್ಪರ್ಧೆಯಲ್ಲಿ 1750 ಕ್ಕೂ ಹೆಚ್ಚು ಮಕ್ಕಳು ಭಾಗವಹಿಸಿದ್ದ ತುರುಸಿನ ಅಬಾಕಸ್ ಸ್ಪರ್ಧೆಯಲ್ಲಿ ತುಮಕೂರಿನ ಕ್ಯಾಲ್ಸಿ ಅಬ್ಯಾಕಸ್ ಅಕಾಡೆಮಿ ಎಲ್. ಆದ್ಯಗೌಡ-ಪ್ರಥಮ ಬಹುಮಾನ ಹಾಗೂ ಪಿ. ಎಂ. ಸಮರ್ಥ್ ದ್ವಿತೀಯ ಬಹುಮಾನ ಪಡೆದರೆ, 17 ಸಮಾಧಾನಕರ ಪ್ರಶಸ್ತಿಗೆ ಪಾತ್ರರಾದರು.ಇದೆ ಸಂದರ್ಭದಲ್ಲಿ ಅಬಾಕಸ್‌ನಲ್ಲಿ 26 ವಿದ್ಯಾರ್ಥಿಗಳು ತಮ್ಮ ಅಧ್ಯಯನ ಪೂರ್ಣಗೊಳಿಸಿಪ ದವಿ ಪ್ರಮಾಣ ಪತ್ರ ಪಡೆದರು. 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಬೆಳೆ ಕಟಾವು ಪ್ರಯೋಗ ಶೇ.100ರಷ್ಟು ಪೂರ್ಣಗೊಳಿಸಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್

ತುಮಕೂರು ಜಿಲ್ಲೆಯಲ್ಲಿ 2026-27ನೇ ಸಾಲಿನ ಮುಂಗಾರು ಹಂಗಾಮಿನಡಿ ಹಂಚಿಕೆಯಾಗಿರುವ ಎಲ್ಲಾ 5,120...

ತುಮಕೂರು | ಎಸ್‌ಐಆರ್ ವಿರುದ್ಧ ಅ. 8ರಂದು ಇಂಡಿಯಾ ಮೈತ್ರಿಕೂಟದ ಪ್ರತಿಭಟನೆ

 ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಹಾಗೂ...

ತುಮಕೂರು | ಮಿನಿ ಒಲಂಪಿಕ್ಸ್‌ಗೆ ಮಕ್ಕಳು ಸಜ್ಜು : ಕಯಾಕಿಂಗ್, ಕನೋಯಿಂಗ್, ಶೂಟಿಂಗ್ ತರಬೇತಿ

 ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಮಿನಿ ಒಲಂಪಿಕ್ಸ್‌ನಲ್ಲಿ ಭಾಗವಹಿಸಲು ಅನುವಾಗುವಂತೆ ಜಿಲ್ಲೆಯ...

ತುಮಕೂರು | ಅಂಗನವಾಡಿ ನೌಕರರಿಗೆ ಕನಿಷ್ಠ ವೇತನ, ಪಿಂಚಣಿ ನೀಡಿ: ಸರ್ಕಾರಗಳಿಗೆ ಸಿಐಟಿಯು ಆಗ್ರಹ

ಎಲ್ಲಾ ಯೋಜನೆಗಳ ಜಾರಿಗೆ ಅಂಗನವಾಡಿ ನೌಕರರನ್ನೇ ಬಳಸಿಕೊಳ್ಳುತ್ತಿರುವ ಕೇಂದ್ರ ಮತ್ತು ರಾಜ್ಯ...