ತುಮಕೂರು | ಬೈಕ್‌ ಮೇಲೆ ಉರುಳಿದ ಮರ; ಇಬ್ಬರಿಗೆ ಗಂಭೀರ ಗಾಯ

Date:

ರಸ್ತೆಯಲ್ಲಿ ತೆರಳುತ್ತಿದ್ದ ಬೈಕ್‌ಗಳ ಮೇಲೆ ಮರವೊಂದು ಉರುಳಿ ಬಿದ್ದಿದ್ದು, ಇಬ್ಬರು ಬೈಕ್‌ ಸವಾರರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತುಮಕೂರಿನ ನಾಮದ ಚಿಲುಮೆ ಬಳಿ ನಡೆದಿದೆ.

ಘಟನೆಯಲ್ಲಿ ತಾಲೂಕಿನ ತಿಮ್ಮನಾಯಕನಹಳ್ಳಿ ಗ್ರಾಮದ ರಾಮಯ್ಯ (45), ರಾಜಣ್ಣ (32) ಗಾಯಗೊಂಡಿದ್ದಾರೆ. ಅವರನ್ನು ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಅವರಿಬ್ಬರೂ ಗಾರೆ ಕೆಲಸಕ್ಕೆ ತೆರಳುತ್ತಿದ್ದಾಗ ಬುಡ ಸಮೇತ ಮರ ಉರುಳಿ ಬಿದ್ದಿದೆ. ರಸ್ತೆ ಮೇಲೆ ಮರ ಬಿದ್ದಿದ್ದರಿಂದ ಕೆಲವು ಸಮಯ ವಾಹನ ಸಂಚಾರ ವ್ಯತ್ಯವಾಗಿತ್ತು. ಬಳಿಕ ಅರಣ್ಯ ಸಿಬ್ಬಂದಿಗಳು ಮರ ತೆರವು ಮಾಡಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಇದು ಮೊದಲ ಘಟನೆಯಲ್ಲ. ಪದೇ ಪದೇ ರಸ್ತೆ ಬದಿಯ ಮರಗಳು ಉರುಳಿ ಬೀಳುತ್ತಿವೆ. ಬೀಳುವ ಹಂತದಲ್ಲಿರುವ ಮರಗಳನ್ನು ತೆರವುಗೊಳಿಸುವಂತೆ ಹಲವು ಬಾರಿ ಮನವಿ ಮಾಡಿದರೂ, ಅರಣ್ಯ ಇಲಾಖೆ ಅಧಿಕಾರಿಗಳು ಕ್ರಮ ತೆಗೆದುಕೊಳ್ಳುತ್ತಿಲ್ಲ” ಎಂದು ತಿಮ್ಮನಾಯಕನಹಳ್ಳಿ ಆರೋಪಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಲೋಕಾಯುಕ್ತ ದಾಳಿ; ಸಿ ಎಸ್ ಪುರದ ಕಂದಾಯ ನಿರೀಕ್ಷಕರ ಬಂಧನ

ಜಮೀನು ಖಾತೆ ಮಾಡಿಕೊಡುವ ವಿಚಾರಕ್ಕೆ ಸಂಬಂಧಿಸಿದಂತೆ ಲಂಚಕ್ಕೆ ಬೇಡಿಕೆ ಇಟ್ಟಿದ್ದ ತುಮಕೂರು...

ತುಮಕೂರು | ಜಮೀನು ಮಾರಾಟ ನಿಲ್ಲಿಸಿ ಒಕ್ಕಲುತನ ಉಳಿಸಿ: ಆದಿ ಚುಂಚನಗಿರಿ ಶ್ರೀ ಕರೆ

ಗ್ರಾಮ ಹಾಗೂ ಕೃಷಿ ತೊರೆದು ನಗರದತ್ತ ಹೋಗುವ ಬದಲು ನಮ್ಮ ಒಕ್ಕಲುತನ...