ತುಮಕೂರು | ಗೃಹ ಸಚಿವರ ತವರು ಜಿಲ್ಲೆಯ ಆಸ್ಪತ್ರೆಗಳಲ್ಲಿ ಲಂಚಾವತಾರ; ದಂಗಾದ ಮುಖ್ಯ ಜಾಗೃತ ಅಧಿಕಾರಿ

Date:

ಗೃಹ ಸಚಿವ ಡಾ. ಜಿ ಪರಮೇಶ್ವರ್‌ ಅವರ ತವರು ಜಿಲ್ಲೆಯಾದ ತುಮಕೂರು ಜಿಲ್ಲೆಯ ತಾಲೂಕು ಆಸ್ಪತ್ರೆಗಳಲ್ಲಿ ನಡೆಯುತ್ತಿರುವ ಲಂಚಾವತಾರ ನೋಡಿ ಮುಖ್ಯ ಜಾಗೃತ ಅಧಿಕಾರಿ ಕುಪ್ಪೆ ಶ್ರೀನಿವಾಸ್ ದಂಗಾಗಿದ್ದಾರೆ.

ಗೃಹ ಸಚಿವರ ತವರು ಜಿಲ್ಲೆ ಹಾಗೂ ಸಹಕಾರ ಸಚಿವ ರಾಜಣ್ಣನವರ ಕ್ಷೇತ್ರಗಳಲ್ಲಿ ಇರುವ ಆಸ್ಪತ್ರೆಗಳಲ್ಲಿ ಹೆರಿಗೆ ಮಾಡಿಸಲು ಮತ್ತು ಇತರೆ ವೈದ್ಯಕೀಯ ಸೇವೆಗೆ ದೀನ ದುರ್ಬಲರು ಬಡವರು ಲಂಚ ನೀಡದೆ ಇದ್ದರೆ ಸೇವೆಯೇ ಇಲ್ಲ ಎಂಬಂತಾಗಿದೆ.

ಬ್ಯಾಲ್ಯ ಪ್ರಾಥಮಿಕ ಆಸ್ಪತ್ರೆಯ ವ್ಯಾಪ್ತಿಯ ವಡ್ಡರಹಟ್ಟಿ ಕಾವೇರಿ ಎಂಬ ಮಹಿಳೆಯಿಂದ ನರ್ಸ್ ಅನುಸೂಯಮ್ಮ ₹5,000ಗಳನ್ನು ಹೆರಿಗೆ ಮಾಡಿಸಲು ಪಡೆದಿದ್ದರು. ಹಾಗೆಯೇ ನಿಹಾರಿಕಾ ಎಂಬ ಮಹಿಳೆಯಿಂದ ಪಡೆದಿದ್ದ ₹1,300 ಮತ್ತು ದೊಡ್ಡೇರಿ ಹೋಬಳಿಯ ವೃದ್ಧೆ ಕಡೆಯ ರಂಗನಾಥ್ ಕಡೆಯಿಂದ ಪಡೆದ ₹3,800 ಲಂಚದ ಹಣವನ್ನು ತುಮಕೂರು ಘಟಕದ ನೈಜ ಹೋರಾಟಗಾರರ ವೇದಿಕೆಯ ಸದಸ್ಯರು ಆಡಳಿತ ವೈದ್ಯಾಧಿಕಾರಿ ಗಂಗಾಧರ್ ಅವರಿಂದ ವಾಪಸ್ ಕೊಡಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಬೆಂಗಳೂರಿನ ಆರೋಗ್ಯ ಸೌಧದಿಂದ ಮಧುಗಿರಿ ತಾಲೂಕು ಮತ್ತು ಕೊರಟಗೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಒಳಪಡುವ ಪುರವರ ಹೋಬಳಿ ಬ್ಯಾಲ್ಯ ಆಸ್ಪತ್ರೆಗಳಿಗೆ ಮುಖ್ಯ ಜಾಗೃತಾ ಅಧಿಕಾರಿ ಕುಪ್ಪೆ ಶ್ರೀನಿವಾಸ್ ಅವರು ಭೇಟಿ ನೀಡುವ ಮುನ್ಸೂಚನೆ ತಿಳಿದು, ತುಮಕೂರು ಘಟಕದ ನೈಜ ಹೋರಾಟಗಾರರ ವೇದಿಕೆಯ ಸದಸ್ಯ ಹಂದ್ರಾಳ್ ನಾಗಭೂಷಣ್, ಮಧುಗಿರಿ ಮಹೇಶ್, ಸತೀಶ್ ಟಿ ಪಿ ಅರಳಾಪುರ ರಮೇಶ್ ಅವರು ಮಧುಗಿರಿ ಮತ್ತು ಕೊರಟಗೆರೆ ವಿಧಾನಸಭಾ ವ್ಯಾಪ್ತಿಯ ವ್ಯಾಪ್ತಿಯ ಬ್ಯಾಲ್ಯ ಆಸ್ಪತ್ರೆಗಳಿಗೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಮುಖ್ಯ ಜಾಗೃತ ದಳದ ಅಧಿಕಾರಿಗೆ ಲಂಚದ ಹಣದ ಸಹಿತ ವಾಸ್ತವ ಸ್ಥಿತಿಗಳನ್ನು ಕಣ್ಣೆದುರೇ ಬಿಚ್ಚಿಟ್ಟರು.

“ತುಮಕೂರು ಆಸ್ಪತ್ರೆಗಳ ಲಂಚದ ಬಗ್ಗೆ ಹಂದ್ರಾಳ್ ನಾಗಭೂಷಣ್ ಅವರು ವಿಡಿಯೋವನ್ನು ಬಿಡುಗಡೆ ಮಾಡಿದ್ದಾರೆ. ಇದು ತುಮಕೂರಿನ ಜಿಲ್ಲಾಡಳಿತದ ವೈಫಲ್ಯದಿಂದ ತಾಲೂಕಿನ ಆಸ್ಪತ್ರೆಗಳಲ್ಲಿ ಬಡವರು ಮತ್ತು ದೀನ ದುರ್ಬಲರಿಂದ ಲಂಚ ವಸೂಲಿಯಾಗುತ್ತಿದ್ದು, ಗೃಹ ಸಚಿವರ ತವರು ಜಿಲ್ಲೆಯಲ್ಲಿಯೇ ಲಂಚಾವತಾರ ನಡೆಯುತ್ತಿರುವುದು ದುರದೃಷ್ಟಕರ” ಎಂದು ಹಿರಿಯ ಸಾಮಾಜಿಕ ಹೋರಾಟಗಾರ ಎಚ್ ಎಂ ವೆಂಕಟೇಶ್ ಅಭಿಪ್ರಾಯಪಟ್ಟಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ಒಳಮೀಸಲಾತಿಗೆ ಆಗ್ರಹಿಸಿ ಡಿ.17ರಂದು ಮಾದಿಗ ಮುನ್ನಡೆ, ಮಾದಿಗರ ಆತ್ಮಗೌರವ ಸಮಾವೇಶ

“ನೈಜ ಹೋರಾಟಗಾರರ ವೇದಿಕೆಯು ಭ್ರಷ್ಟಾಚಾರದ ವಿರುದ್ಧ ಮತ್ತು ಜನಪರ ಕೆಲಸಗಳಲ್ಲಿ ನಿರಂತರವಾಗಿ ಹೋರಾಟ ಮಾಡುತ್ತಿದ್ದು, ಅವರ ಕಾರ್ಯಗಳು ನಿಜಕ್ಕೂ ಶ್ಲಾಘನೀಯ” ಎಂದು ಅಭಿನಂದಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನಾನು ಮತ ಹಾಕಿರುವ ಅಭ್ಯರ್ಥಿ ನೂರಕ್ಕೆ ನೂರರಷ್ಟು ಗೆಲ್ಲುತ್ತಾರೆ: ನಟ ರಕ್ಷಿತ್ ಶೆಟ್ಟಿ

ಲೋಕಸಭಾ ಚುನಾವಣೆ ಹಿನ್ನೆಲೆ, ರಾಜ್ಯದ 14 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ. ರಾಜಕಾರಣಿಗಳು,...

ಬೆಂಗಳೂರು | ಕೆಎಂಎಫ್ ಹೊಸ ದಾಖಲೆ​; ಒಂದೇ ದಿನ 51 ಲಕ್ಷ ಲೀಟರ್ ನಂದಿನಿ ಹಾಲು ಮಾರಾಟ

ವು(ಕೆಎಂಎಫ್‌) ನಂದಿನಿ ಬ್ರ್ಯಾಂಡ್​ ಉತ್ಪನ್ನಗಳ ಮಾರಾಟದಲ್ಲಿ ತನ್ನದೇ ದಾಖಲೆಯನ್ನು ಮುರಿದಿದೆ. ದಿನವೊಂದರಲ್ಲಿ...

ಬೆಂಗಳೂರು | ಮತಗಟ್ಟೆ ಬಳಿ ಮಹಿಳೆಗೆ ಹೃದಯಾಘಾತ; ಮತದಾನ ಮಾಡಲು ಬಂದ ವೈದ್ಯನಿಂದ ಜೀವ ರಕ್ಷಣೆ

ಬೆಂಗಳೂರಿನ ಜೆ ಪಿ ನಗರದಲ್ಲಿರುವ ಜಂಬೂ ಸವಾರಿ ದಿನ್ನೆ ಮತಗಟ್ಟೆಯಲ್ಲಿ ಮತದಾನ...

ಚಿತ್ರದುರ್ಗ | ಲೋಕಸಭಾ ಚುನಾವಣೆ; ಕರ್ತವ್ಯದಲ್ಲಿದ್ದ ಮಹಿಳಾ ಸಿಬ್ಬಂದಿ ಸಾವು

ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಹೊಟ್ಟೆಪ್ಪನಹಳ್ಳಿ ಮತಗಟ್ಟೆಯಲ್ಲಿ ಚುನಾವಣಾ ಕರ್ತವ್ಯದಲ್ಲಿದ್ದ ಮಹಿಳಾ...