ತುಮಕೂರು | ಹಣ ಮಂಜೂರಾತಿಗೆ ಅಧಿಕಾರಿಗಳಿಂದ ಲಂಚ; ಗ್ರಾ.ಪಂ ಕಚೇರಿಯಲ್ಲಿ ದನ ಕಟ್ಟಿ ಪ್ರತಿಭಟನೆ

Date:

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ (ಮನರೇಗಾ) ನಿರ್ಮಿಸಿದ ದನದ ಕೊಟ್ಟಿಗೆ ಕಾಮಗಾರಿಗೆ ಹಣ ಮಂಜೂರು ಮಾಡಲು ಗ್ರಾಮ ಪಂಚಾಯಿತಿ ಅಧಿಕಾರಿಗಳು ವಿಳಂಬ ಮಾಡುತ್ತಿದ್ದರು. ಇದರಿಂದಾಗಿ, ಕಳೆದ 4 ವರ್ಷಗಳಿಂದ ಅಲೆದಾಡಿ ಹೈರಾಣಾಗಿದ್ದ ರೈತನೋರ್ವ ಹಸುಗಳನ್ನೇ ಪಂಚಾಯತಿಗೆ ಕರೆತಂದು ಪ್ರತಿಭಟಿಸಿದ್ದಾರೆ.

ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಸಾಸಲುಕುಂಟೆ ಗ್ರಾಮ ಪಂಚಾಯಿತಿಯಲ್ಲಿ ಘಟನೆ ನಡೆದಿದ್ದು, ಕೆಂಚಮ್ಮನಹಳ್ಳಿ ಗ್ರಾಮದ ಗೋಪಾಲ್ ಎನ್ನುವ ರೈತ ಎತ್ತುಗಳೊಂದಿಗೆ ಆಗಮಿಸಿ ಪಂಚಾಯಿತಿ ಕಚೇರಿಯಲ್ಲಿ ಬೀಡು ಬಿಟ್ಟಿರುವುದು ಕಂಡುಬಂದಿದೆ. ಅಧಿಕಾರಿಗಳು ಆಗಮಿಸುವವರೆಗೂ ತನ್ನ ಹೋರಾಟ ನಿಲ್ಲುವುದಿಲ್ಲವೆಂದು ಪಟ್ಟುಹಿಡಿದಿದ್ದಾರೆ.

ಬಿಲ್ ನೀಡಲು ಲಂಚ ಪಡೆದುಕೊಂಡು ವಿನಾಕಾರಣ ತಡ ಮಾಡುತ್ತಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿ ತನ್ನ ಎತ್ತುಗಳೊಂದಿಗೆ ಪಂಚಾಯಿತಿ ಕಚೇರಿಗೆ ಮುತ್ತಿಗೆ ಹಾಕಿ ತನ್ನ ಆಕ್ರೋಶ ಹೊರಹಾಕಿರುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ರಾಯಚೂರು | ದರ್ಗಾ ಕಮಾನ್ ನಿರ್ಮಾಣ ವಿವಾದ; ಎರಡು ಗುಂಪುಗಳ ನಡುವೆ ಘರ್ಷಣೆ

“ಉದ್ಯೋಗ ಖಾತ್ರಿ ಯೋಜನೆಯಲ್ಲಿ ನನ್ನ ಹೊಲದಲ್ಲಿ ದನದಕೊಟ್ಟಿಗೆ ನಿರ್ಮಾಣ ಮಾಡಿದ್ದು, ₹57,000 ಬಿಲ್‌ಗಾಗಿ ಗ್ರಾ.ಪಂ ಕಂಪ್ಯೂಟರ್ ಆಪರೇಟರ್ ನಿಂಗರಾಜು ₹3,000 ಲಂಚ ಪಡೆದುಕೊಂಡು ಹಣ ಮಂಜೂರು ಮಾಡದೆ ಅಲೆದಾಡಿಸುತ್ತಿದ್ದಾರೆ” ಎಂದು ರೈತ ಗೋಪಾಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವರದಿ – ಸಿಟಿಜನ್ ಜರ್ನಲಿಸ್ಟ್ ಅನಿಲ್ ಕುಮಾರ್ ಪಾವಗಡ

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಶಿವಶರಣ ಹಡಪದ ಅಪ್ಪಣ್ಣನವರ ತತ್ವ ಆದರ್ಶಗಳು ಅನನ್ಯ: ದುರುಗಣ್ಣ

ಜಗಜ್ಯೋತಿ ಬಸವಣ್ಣನವರ ಸಮಕಾಲೀನರಾದ ಶಿವಶರಣ ಹಡಪದ ಅಪ್ಪಣ್ಣನವರ ತತ್ವ ಆದರ್ಶಗಳು ಇಂದಿಗೂ...

ಶಿರೂರು ಗುಡ್ಡ ದುರಂತ | 8 ಮೀಟರ್ ಅಡಿಯಲ್ಲಿ ಲೋಹದ ಸಾಧನ ಪತ್ತೆ; ಲಾರಿಯಾಗಿರುವ ಶಂಕೆ?

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರಿನಲ್ಲಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ...

ಚಿತ್ರದುರ್ಗ | ಅಸಮಾನತೆ ಹೋಗಲಾಡಿಸುವುದೇ ಶೋಷಿತ ಸಮುದಾಯಗಳ ಏಳಿಗೆಗೆ ಪರಿಹಾರ: ಸಿಎಂ ಸಿದ್ದರಾಮಯ್ಯ

ಜಾತಿ ವ್ಯವಸ್ಥೆ ದೇವರಿಂದ ಸೃಷ್ಟಿಯಾಗಿದ್ದಲ್ಲ. ಸ್ವಾರ್ಥ ಮನುಷ್ಯನ ಸೃಷ್ಟಿ, ಅಸಮಾನತೆ ಹೋಗಲಾಡಿಸದೆ...

ಉಡುಪಿ | ಸಾರಿಗೆ ನೌಕರರ ಒತ್ತಡದ ದುಡಿಮೆಯಿಂದ ಅನಾರೋಗ್ಯ ಹೆಚ್ಚಳ: ಸುರೇಶ್ ಕಲ್ಲಾಗರ

ಸಾರಿಗೆ ನೌಕರರ ಒತ್ತಡದ ದುಡಿಮೆಯಿಂದ ಅನಾರೋಗ್ಯ ಹೆಚ್ಚಳವಾಗುತ್ತಿದೆ. ಆಟೋರಿಕ್ಷಾ ಚಾಲಕರು ತಮ್ಮ...