ತುಮಕೂರು | ಸಂಭ್ರಮ -2026 : ಏ. 24 ಕ್ಕೆ ಹಳೆ ವಿದ್ಯಾರ್ಥಿಗಳ ಜೊತೆ ಗೃಹ ಸಚಿವರ ಸಂವಾದ

Date:

ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರದ ವತಿಯಿಂದ ಆಯೋಜಿಸಿರುವ ಮಾಧ್ಯಮ ಹಬ್ಬ ‘ಸಂಭ್ರಮ’ ಪ್ರಯುಕ್ತ ಹಳೆಯ ವಿದ್ಯಾರ್ಥಿಗಳ ಜತೆಗೆ ನಡೆಯುವ ಆಪ್ತ ಸಂವಾದ‌ದಲ್ಲಿ ನಾನು ಭಾಗವಹಿಸುತ್ತೇನೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.

- Advertisement -

ತುಮಕೂರು ನಗರದ ಪ್ರವಾಸಿ ಮಂದಿರದಲ್ಲಿ ಈಚೆಗೆ ಸಿದ್ಧಾರ್ಥ ಮಾಧ್ಯಮ ಅಧ್ಯಯನ‌ ಕೇಂದ್ರದ ಹಳೆ ವಿದ್ಯಾರ್ಥಿಗಳು ಭೇಟಿಯಾಗಿ ಕಾರ್ಯಕ್ರಮಕ್ಕೆ ಆಹ್ವಾನಿಸಿದರು. ಸಂಘದ ನಾಮಫಲಕ ಉದ್ಘಾಟಿಸಿ, ವಿದ್ಯಾರ್ಥಿಗಳ ಜತೆಗೆ ಸಂವಾದ ನಡೆಸುವಂತೆ ಮನವಿ ಮಾಡಿದರು. ಆಹ್ವಾನ ಸ್ಪೀಕರಿಸಿ ಹಾಗೂ ಸಂಭ್ರಮ -2026 ಪೋಸ್ಟರ್ ಬಿಡುಗಡೆ ಮಾಡಿ ಪರಮೇಶ್ವರ್ ಮಾತನಾಡಿದರು. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಂವಿಧಾನವೆಂಬ ನಮ್ಮೆಲ್ಲರ ಆಸ್ತಿಗಾಗಿ ಸತ್ಯಾಗ್ರಹ

ಇವತ್ತು ಬೀದಿಗೆ ಇಳಿದಿರೋ ಜನ ಸಾಮಾನ್ಯರಲ್ಲ. ಬದುಕಿನ ಹಕ್ಕನ್ನು ಈ ದೇಶದ ಜನರಿಗೆ ಮರಳಿ ಕೊಡಿಸುವುದಕ್ಕಾಗಿ, ಗಾಂಧೀಜಿಯವರ ಮಾತುಗಳು ಮತ್ತು ಅಂಬೇಡ್ಕರ್ ಅವರ ಸಂವಿಧಾನದ ಪೀಠಿಕೆಯನ್ನು ಕೈಯಲ್ಲಿ ಹಿಡಿದುಕೊಂಡು ನಿಂತಿರುವ ನಿಜವಾದ ಹೋರಾಟಗಾರರು. ಸರ್ಕಾರದ...

ಸಿಲಿಕಾನ್ ಸಿಟಿಗಳಲ್ಲಿ ಹಸಿದ ಹಲವು ಬದುಕುಗಳ ಕಥೆ–ವ್ಯಥೆ

ಸಮಾಜದ ಕಟ್ಟಕಡೆಯ ವ್ಯಕ್ತಿಯ ನೋವು ನಮ್ಮನ್ನು ತಟ್ಟದಿದ್ದರೆ, ನಮ್ಮ ಪ್ರಗತಿಯ ಬಗ್ಗೆ ಮತ್ತೊಮ್ಮೆ ಯೋಚಿಸಬೇಕಾಗುತ್ತದೆ. ಮತ್ತೊಬ್ಬರ ಹಸಿವು ನಮ್ಮ ಮನಸ್ಸಿನಲ್ಲಿ ಸಂವೇದನೆ ಮೂಡಿಸದಿದ್ದರೆ, ನಮ್ಮ ಮಾನವೀಯತೆಯ ಸ್ವರೂಪವನ್ನೇ ಪರಿಶೀಲಿಸಬೇಕಾಗುತ್ತದೆ. ಆಧುನಿಕ ನಗರಗಳೆಂದರೆ ನೆನಪಾಗುವುದು ಸಿಲಿಕಾನ್...

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಸಿದ್ಧಾರ್ಥ ಸಂಸ್ಥೆಯಲ್ಲಿ ಓದಿ, ಮಾಧ್ಯಮ ಕ್ಷೇತ್ರದಲ್ಲಿ ಮಹತ್ವದ ಸಾಧನೆ ಮಾಡಿರುವ ಹಳೆ ವಿದ್ಯಾರ್ಥಿಗಳ ಸಮಾಗಮಕ್ಕೆ ಸಂಭ್ರಮ ಒಂದು ಉತ್ತಮ ವೇದಿಕೆಯಾಗಿದೆ. ಅವರೊಟ್ಟಿಗೆ ಸಂವಾದ ನಡೆಸವುದು, ಮಾಧ್ಯಮ ಕ್ಷೇತ್ರದ ಪ್ರಸ್ತುತ ಸಾವಲು, ಸಾಧ್ಯತೆ ಕುರಿತು ಚರ್ಚೆ ಮಾಡಿ, ಹೊಸ ಕಾಲದ ಸಮಸ್ಯೆಗೆ, ಹೊಸ ಪರಿಹಾರ ಕಂಡುಕೊಳ್ಳಲು ಇದು ಉತ್ತಮ ಅವಕಾಶವಾಗಿದೆ ಎಂದರು.

ಶ್ರೀ ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರದಲ್ಲಿ ಓದಿ ರಾಜ್ಯದ ಎಲ್ಲಾ ಮಧ್ಯಮಗಳಲ್ಲಿ ಕೆಲಸ ಮಾಡುತ್ತಿರುವ ಹಳೆ ವಿದ್ಯಾರ್ಥಿಗಳು ಒಂದೆಡೆ ಸೇರಿ ಮಾಧ್ಯಮ ಕ್ಷೇತ್ರದ ಹೊಸ ಸಾಧ್ಯತೆ ಮತ್ತು ವೃತ್ತಿ ಬದುಕಿನ ಸಾವಲುಗಳ ಕುರಿತು ಚರ್ಚಿಸಲು ಹಳೆ ವಿದ್ಯಾರ್ಥಿ ಸಂಘ ಶ್ರಮಿಸಲಿದೆ. ತುಮಕೂರಿನ ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರದಲ್ಲಿ ಶಿಕ್ಷಣ ಪಡೆದವರು ಪ್ರಸ್ತುತ ಎಲ್ಲ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕೆಲಸ ಮಾಡುತ್ತಿದ್ದಾರೆ.  ಈವರ್ಷ ನಡೆಯುವ ಸಂಭ್ರಮದಲ್ಲಿ ಅವರೆಲ್ಲರೂ ಸಂಭ್ರಮದಲ್ಲಿ ಭಾಗವಹಿಸಲಿದ್ದಾರೆ.

 ಹಾಗೂ ಪ್ರಸ್ತುತ ಮಾಧ್ಯಮ ಅಧ್ಯಯನ ಕೇಂದ್ರದಲ್ಲಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳ ರಚನಾತ್ಮಕ ಚುಟುವಟಿಕೆ ಮಾಡುವುದು. ವಿಶೇಷ ಕಾರ್ಯಾಗಾರ, ನುರಿತ ತಜ್ಞರೊಂದಿಗೆ ಸಂವಾದ, ಚರ್ಚೆ ಸೇರಿದಂತೆ ಹಲವು ವಿನೂತನ ಕಾರ್ಯಕ್ರಮ ಆಯೋಜನೆ ಮಾಡುವ ಉದ್ದೇಶ ಹೊಂದಿದೆ ಎಂದು ಸಂಘದ ಅಧ್ಯಕ್ಷ ಎ. ಎನ್. ರಘು ತಿಳಿಸಿದರು.

ಈ ಬಾರಿಯ ಸಂಭ್ರಮ ಹಲವು ವಿಶೇಷಗಳಿಂದ ಕೂಡಿದೆ. ಕಾರ್ಯಕ್ರಮದ ಥೀಮ್ ‘ಪರಿಸರ ಪತ್ರಿಕೋದ್ಯಮ’ ಎಲ್ಲರ ಗಮನ ಸೆಳೆದಿದೆ. ಸಂಭ್ರಮ ಕಾರ್ಯಕ್ರವನ್ನು ಪೌರ ಕಾರ್ಮಿಕರಿಗೆ ಸಮರ್ಪಣೆ ಮಾಡುತ್ತಿರುವುದಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ. ಅವರಿಗೆ ಕಾರ್ಯಕ್ರಮದಲ್ಲಿ ಸನ್ಮಾನ ಕಾರ್ಯಕ್ರಮವು ಇರಲಿದೆ. ರಾಜ್ಯದ ಎಲ್ಲ ಪದವಿ ವಿದ್ಯಾರ್ಥಿಗಳಿಗೆ 8 ಸ್ಪರ್ಧೆ ಆಯೋಜನೆ ಮಾಡಲಾಗಿದೆ ಎಂದು ಶ್ರೀ ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರದ ನಿರ್ದೇಶಕ ಬಿ. ಟಿ. ಮುದ್ದೇಶ್ ಮಾಹಿತಿ ನೀಡಿದರು

ಇದೇ ಸಂದರ್ಭದಲ್ಲಿ  ಮೈಲಾರಿ ಲಿಂಗಪ್ಪ, ಈಶ್ವರ್, ಹರೀಶ್ ಆಚಾರ್ಯ,ಮಹೇಶ್, ಮಹಂತೇಶ್, ಭಾನುಪ್ರಕಾಶ್,ಶಂಕರ್ ಶಿರಾ,ರವಿಕುಮಾರ್ ಚಿಂಪುಗಾನಹಳ್ಳಿ,ವಿನಯ್, ನವೀನ್, ಗೌತಮ್ ಸೇರಿದಂತೆ ಹಲವರು ಇದ್ದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಜಿಪಂ ಚುನಾವಣೆಯ 57 ಕ್ಷೇತ್ರಗಳಿಗೆ ಮೀಸಲಾತಿ ಪ್ರಕಟ: ಸೆ.19ರೊಳಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ

ತುಮಕೂರು ಜಿಲ್ಲಾ ಪಂಚಾಯಿತಿ ಚುನಾವಣೆಯ ರಾಜಕೀಯ ಲೆಕ್ಕಾಚಾರಕ್ಕೆ ವೇದಿಕೆ ಸಿದ್ಧವಾಗುತ್ತಿದೆ. ಜಿಲ್ಲೆಯ...

ತುಮಕೂರು ದಸರಾಕ್ಕೆ ತಾರಾ ಮೆರುಗು : 11 ದಿನ, ನೂರಾರು ಆಕರ್ಷಣೆ

ದೇವಿಯ ಆರಾಧನೆ, ತಾರೆಯರ ಕಲರವ, ಸಂಗೀತದ ರಸದೌತಣ, ನೃತ್ಯ ವೈಭವ, ಕ್ರೀಡಾ...

ಜಾಗತಿಕ ವಿಜ್ಞಾನಿಗಳ ಪಟ್ಟಿಯಲ್ಲಿ ತುಮಕೂರು ವಿವಿಯ ನಾಲ್ವರಿಗೆ ಸ್ಥಾನ

 ಜಾಗತಿಕ ಶೈಕ್ಷಣಿಕ ಮತ್ತು ಸಂಶೋಧನಾ ಕ್ಷೇತ್ರದಲ್ಲಿ ತುಮಕೂರು ವಿಶ್ವವಿದ್ಯಾನಿಲಯ ಮತ್ತೊಂದು ಮಹತ್ವದ...

ತುಮಕೂರು ದಸರಾ | ಬೆಳಕಿನ ಹಬ್ಬದ ಹಿಂದೆ ಕತ್ತಲ ಲೆಕ್ಕ!

 ನಾಡಹಬ್ಬ ದಸರಾಕ್ಕೆ ತುಮಕೂರು ನಗರ ಸಜ್ಜಾಗುತ್ತಿದೆ. ನಗರದ ಪ್ರಮುಖ ರಸ್ತೆಗಳು, ವೃತ್ತಗಳು...