ತುಮಕೂರು | ಹಾಸ್ಟೆಲ್‌ನಲ್ಲಿ ಅವ್ಯವಸ್ಥೆ ರಾತ್ರೋರಾತ್ರಿ ಪ್ರತಿಭಟನೆಗಿಳಿದ ವಿದ್ಯಾರ್ಥಿನಿಯರು

Date:

ತುಮಕೂರು ನಗರದ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿನಿಯರು ನಗರದ ಬಿಸಿಎಂ ಇಲಾಖೆಯ ಕಚೇರಿ ಎದುರು ಮಂಗಳವಾರ (ಜ.2) ರಾತ್ರಿ ದಿಢೀರ್ ಪ್ರತಿಭಟನೆ ನಡೆಸಿದ್ದಾರೆ.

- Advertisement -

ನಗರದ ರೈಲ್ವೆ ನಿಲ್ದಾಣದ ರಸ್ತೆಯಲ್ಲಿರುವ ಬಿಸಿಡಬ್ಲೂ ಹಾಸ್ಟೆಲ್ ವಿದ್ಯಾರ್ಥಿನಿಯರು ಸಂಜೆ 8ಗಂಟೆ ಸಮಯದಲ್ಲಿ ಹಾಸ್ಟೆಲ್‌ನಿಂದ ನೇರವಾಗಿ ಬಿಸಿಎಂ ಕಚೇರಿ ಎದುರು ಬಂದು ದಿಢೀರನೆ ಪ್ರತಿಭಟನೆ ಕುಳಿತರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಹಾಸ್ಟೆಲ್‌ನಿಂದ ಸುಮಾರು 1 ಕಿ.ಮೀವರೆಗೆ ನಡೆದುಕೊಂಡು ಬಂದ 100ಕ್ಕೂ ಅಧಿಕ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದರು. ಇಲ್ಲಿ ಇರುವ 300 ವಿದ್ಯಾರ್ಥಿನಿಯರಿಗೆ ಸಮರ್ಪಕವಾದ ಶೌಚಾಲಯ ಇಲ್ಲ. ಒಂದುವರೆ ತಿಂಗಳಿನಿಂದ ಈ ಸಮಸ್ಯೆ ಇದೆ. ಇರುವ ಎರಡು ಶೌಚಾಲಯವನ್ನು 300 ವಿದ್ಯಾರ್ಥಿನಿಯರು ಬಳಸಿಕೊಳ್ಳಬೇಕು. ಇದರಿಂದಾಗಿ ಸಮಸ್ಯೆ ತೀವ್ರವಾಗಿದೆ ಎಂದು‌ ವಿದ್ಯಾರ್ಥಿನಿಯರು ತಮ್ಮ ಸಮಸ್ಯೆ ಹೇಳಿಕೊಂಡರು.

ಅಧಿಕಾರಿಗಳು ಸಮಸ್ಯೆಗೆ ಸ್ಪಂದಿಸುತ್ತಿಲ್ಲ. ಶೌಚಾಲಯ ಸಮಸ್ಯೆಯಿಂದಾಗಿ ತರಗತಿಗೆ ಸರಿಯಾದ ‌ಸಮಯಕ್ಕೆ ಹೋಗಲಾಗುತ್ತಿಲ್ಲ. ರಾತ್ರಿ ಎರಡು ಗಂಟೆಗೆ ಎದ್ದು ಸ್ನಾನಕ್ಕೆ ಹೋಗುವಂತಹ ಪರಿಸ್ಥಿತಿ ಇದೆ. ಅಧಿಕಾರಿಗಳು ಕೂಡಲೇ ಸಮಸ್ಯೆ ಬಗೆಹರಿಸಬೇಕು ಎಂದು ಆಗ್ರಹಿಸುತ್ತಿದ್ದಾರೆ.

ಇನ್ನು ರಾತ್ರಿ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದರೂ, ಯಾವೊಬ್ಬ ಅಧಿಕಾರಿಗಳು ಕೂಡ ಸ್ಥಳಕ್ಕೆ ಬಂದಿಲ್ಲ, ಸಮಸ್ಯೆ ಆಲಿಸಿಲ್ಲ ಎಂದು ವಿದ್ಯಾರ್ಥಿನಿಯರು ದೂರಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಂಗಭೂಮಿ ಅಭಿನಯ ಕಲಿಸುವುದಷ್ಟೇ ಅಲ್ಲ, ಬದುಕನ್ನೂ ಕಲಿಸುವ ಶಾಲೆ: ಶ್ರೀನಿವಾಸ ಪಾಲಹಳ್ಳಿ

ರಂಗಭೂಮಿ ಕೇವಲ ಅಭಿನಯ ಕಲಿಸುವ ವೇದಿಕೆಯಲ್ಲ. ಅದು ಬದುಕನ್ನು ಅರ್ಥಮಾಡಿಕೊಳ್ಳುವ, ಮಾನವೀಯ...

SIR ಅಕ್ರಮ ಆರೋಪ: ಎಸ್‌ಐಟಿ ತನಿಖೆಗೆ ಎಸ್‌ಡಿಪಿಐ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ...

ಕಲಬುರಗಿ | ಬೈಕ್‌ಗೆ ಸಿಮೆಂಟ್ ಮಿಕ್ಸರ್ ಟ್ಯಾಂಕರ್ ಡಿಕ್ಕಿ: ತಂದೆ, ಮಗಳು ಸ್ಥಳದಲ್ಲೇ ಸಾವು!

ಬೈಕ್‌ಗೆ ಸಿಮೆಂಟ್ ಮಿಕ್ಸರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ತಂದೆ, ಮಗಳು...

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...