ತುಮಕೂರು | ರೈಲ್ವೆ ಖಾಸಗೀಕರಣಕ್ಕೆ ಸಿಐಟಿಯು ವಿರೋಧ – ಪ್ರತಿಭಟನೆ

Date:

ಜನತೆ ಹಣದಲ್ಲಿ ಕಟ್ಟಿರುವ ಜನರ ರೈಲನ್ನು ಖಾಸಗೀಕರಿಸುವ ನಡೆ ದೇಶ ವಿರೋಧಿಯಾಗಿದೆ. 7-8 ದಶಕಗಳ ಕಾಲ ಜನತೆಯು ಕಟ್ಟಿದ ಸಾರ್ವಜನಿಕ ಉದ್ದಿಮೆಗಳನ್ನು ಮಾರುತ್ತಿರುವ ಬಿಜೆಪಿ ಸರ್ಕಾರವು ದೇಶದ ಲೂಟಿ ಮಾಡುತ್ತಿದೆ ಎಂದು ಸಿಐಟಿಯು ತುಮಕೂರು ಜಿಲ್ಲಾಧ್ಯಕ್ಷ ಸೈಯದ್ ಮುಜೀಬ್ ಹೇಳಿದರು.

ರೈಲ್ವೆ ಖಾಸಗೀಕರಣದ ವಿರುದ್ಧ ತುಮಕೂರಿನಲ್ಲಿ ಸಿಐಟಿಯು ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆಯಲ್ಲಿ ಮಾತನಾಡಿದ ಮುಜೀದ್, “70 ವರ್ಷಗಳಲ್ಲಿ ಕಟ್ಟಲಾಗಿರುವ ದೇಶದ ವಿವಿಧ ಅಸ್ತಿಗಳನ್ನು ಕೇಂದ್ರ ಬಿಜೆಪಿ ಸರ್ಕಾರ ಮಾರಾಟ ಮಾಡುತ್ತಿದೆ. ಇದು ಜನತೆಯನ್ನು ಸಂಕಷ್ಟಕ್ಕೆ ಸಿಲುಕಿಸುವ ನಡೆಯಾಗಿದೆ” ಎಂದರು.

ಸಿಐಟಿಯು ಜಿಲ್ಲಾ ಉಪಾಧ್ಯಕ್ಷೆ ಎಸ್.ಡಿ ಪಾರ್ವತಮ್ಮ ಮಾತನಾಡಿ,  “ರೈಲ್ವೆಯನ್ನು ಖಾಸಗಿ ಕಂಪನಿಗಳಿಗೆ ಹಸ್ತಾಂತರ ಮಾಡಿ, ಟಿಕೆಟ್ ದರವನ್ನು ಶೇ.43ರಷ್ಟು ಹೆಚ್ಚಿಸಲು ಸರ್ಕಾರ ನಿರ್ಧಾರ ಮಾಡಿದೆ. ತನ್ನ ನಿರ್ಧಾರವನ್ನು ಹಿಂಪಡೆಯಬೇಕು” ಎಂದು ಒತ್ತಾಯಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಪ್ರತಿಭಟನೆಯಲ್ಲಿ ರಂಗಧಾಮಯ್ಯ, ಬಿ. ಉಮೇಶ್, ರಪೀಕ್ ಪಾಷ, ಎನ್.ಕೆ.ಸುಬ್ರಮಣ್ಯ, ಕಲೀಲ್, ವೆಂಕಟೇಶ್, ಬೀದಿಬದಿ ವ್ಯಾಪಾರಿಗಳ ಸಂಘದ ರಾಜಶೇಖರ್, ಜಗದೀಶ್. ಮುತ್ತುರಾಜ್, ವಸೀಂ ಅಕ್ರಂ , ಅಟೋ ಚಾಲಕರ ಯೂನಿಯನ್ ನ ಇಂತೀಯಾಜ್ ಪಾಷ, ಹಮಾಲಿ ಕಾರ್ಮಿಕ ಸಂಘ ರಾಮಾಂಜೀನಿ, ಆಂಗನವಾಡಿ ನೌಕರರ ಸಂಘದ ಶಿವಗಂಗಮ್ಮ, ಗೌರಮ್ಮ, ಜಬೀನಾ ಖಾತೋನ್,ಲಕ್ಮಿಕಾಂತ , ಸಮುದಾಯದ ಅಧಕ್ಷ ಅಶ್ವಥ್, ಪಿ.ಎಫ್. ಪಿಂಚಣಿದಾರರು ಬಾಲಕೃಷ್ಣ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಬೀದಿ ಬದಿ ವ್ಯಾಪಾರಿಗಳ ಮೇಲೆ ಅಧಿಕಾರಿಗಳ ದರ್ಪ; ಬದುಕು ಬೀದಿ ಪಾಲು

ಶಿಲ್ಪಕಲೆಗಳ ತವರೂರು, ವಿಶ್ವ ಪಾರಂಪರಿಕ ಪಟ್ಟಿಗೆ ಸೇರಿರುವ, ಚನ್ನಕೇಶವನ ನಾಡು ವಗೈರೆ...

ಹಾಸನ | 3ನೇ ಅವಧಿಗೆ ಮೋದಿ ಪ್ರಧಾನಿ; 12 ಕಿ.ಮೀ ದೀಡು ನಮಸ್ಕಾರ ಹಾಕಿ ಹರಕೆ ತೀರಿಸಿದ ಮೋದಿ ಭಕ್ತ

ಮೋದಿ 3ನೇ ಬಾರಿಗೆ ಪ್ರಧಾನಿಯಗಬೇಕೆಂದು ಹರಕೆ ಹೊತ್ತಿದ್ದ ಮೋದಿ ಅಭಿಯಾನಿಯೊಬ್ಬ, 12...

ಜೂನ್‌ 16ರಂದು ಬೆಳಗ್ಗೆ 6 ಗಂಟೆಯಿಂದಲೇ ನಮ್ಮ ಮೆಟ್ರೋ ಆರಂಭ

ಜೂನ್ 16ರಂದು ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆ (ಯುಪಿಎಸ್‌ಸಿ) ನಡೆಯುವ ಕಾರಣ...

ವಂಚನೆ, ಜೀವ ಬೆದರಿಕೆ ಆರೋಪ: ಕೇಂದ್ರ ಸಚಿವ ಸೋಮಣ್ಣ ಪುತ್ರನ ವಿರುದ್ಧ ಎಫ್‌ಐಆ‌ರ್

ತುಮಕೂರು ಲೋಕಸಭಾ ಕ್ಷೇತ್ರದಿಂದ ಗೆಲುವು ಸಾಧಿಸಿ, ಕೇಂದ್ರ ಸಚಿವರಾಗಿ ಅಧಿಕಾರ ವಹಿಸಿಕೊಂಡ...