ತುಮಕೂರು | ಹೊಂದಾಣಿಕೆ ರಾಜಕಾರಣ ಬಿಡದ ಹೊರತು ಕಾಂಗ್ರೆಸ್‌ಗೆ ಉಳಿಗಾಲವಿಲ್ಲ: ಕೆಂಚಮಾರಯ್ಯ

Date:

Advertisements

ಬ್ರಿಟಿಷರಿಂದ ಸ್ವಾತಂತ್ರವನ್ನು ಪಡೆಯುವುದಕ್ಕಾಗಿ 1885ರ ಡಿಸೆಂಬರ್ 28ರಂದು ಚಳವಳಿ ರೂಪದಲ್ಲಿ ಹುಟ್ಟಿಕೊಂಡ ಕಾಂಗ್ರೆಸ್ ಸಂಘಟನೆ, ಸ್ವಾತಂತ್ರ ನಂತರದಲ್ಲಿ ಒಂದು ಪಕ್ಷವಾಗಿ ಮುಂದುವರೆದಿದೆ ಎಂದು ತುಮಕೂರು ಕಾಂಗ್ರೆಸ್ ಮಾಜಿ ಜಿಲ್ಲಾಧ್ಯಕ್ಷ ಕೆಂಚಮಾರಯ್ಯ ತಿಳಿಸಿದರು.

ತುಮಕೂರು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್ ಪಕ್ಷದ 139ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

“ಶಿಕ್ಷಣ, ಸಹಬಾಳ್ವೆಯನ್ನೇ ಗುರಿಯಾಗಿಟ್ಟುಕೊಂಡು ಇಂದಿಗೂ ತಾನು ನಂಬಿದ ಸಿದ್ದಾಂತ ಮತ್ತು ತಾನು ಹಾಕಿಕೊಂಡಿರುವ ಗುರಿಯತ್ತ ಸಾಗಲು ಕಾರ್ಯನಿರ್ವಹಿಸುತ್ತಿರುವ ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತಗಳನ್ನು ಮೊದಲು ಕಾಂಗ್ರೆಸ್ ಪಕ್ಷದವರು ಅರ್ಥ ಮಾಡಿಕೊಂಡು ಅದರಂತೆ ನಡೆಯಬೇಕಿದೆ. ಹೊಂದಾಣಿಕೆ ರಾಜಕಾರಣ ಬಿಡದ ಹೊರತು ಕಾಂಗ್ರೆಸ್ ಪಕ್ಷಕ್ಕೆ ಉಳಿಗಾಲವಿಲ್ಲ. ಹಾಗಾಗಿ ನಾನೂ ಸೇರಿದಂತೆ ಕಾಂಗ್ರೆಸ್‌ನ ಎಲ್ಲ ನಾಯಕರು ಕಾಂಗ್ರೆಸ್ ತತ್ವ ಸಿದ್ದಾಂತಗಳಿಗೆ ಬದ್ದವಾಗಿದ್ದೇವೆಯೇ ಎಂದು ಆತ್ಮಾವಲೋಕನ ಮಾಡಿಕೊಳ್ಳಬೇಕಾದ ಕಾಲ ಇದಾಗಿದೆ” ಎಂದು ಹೇಳಿದರು.

Advertisements

“ಮುಂಬರುವ 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೊಲೀಸಬೇಕೆಂದರೆ ಕಾಂಗ್ರೆಸ್ ಪಕ್ಷದ ತತ್ವ ಸಿದ್ದಾಂತಗಳನ್ನು ನಾವೆಲ್ಲರೂ ಅಳವಡಿಸಿಕೊಳ್ಳಬೇಕಿದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಕಾಂಗ್ರೆಸ್‌ 139ನೇ ಸಂಸ್ಥಾಪನಾ ದಿನಾಚರಣೆ

ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಚಂದ್ರಶೇಖರಗೌಡ, ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್, ಕೆಪಿಪಿಸಿಸಿ ವಕ್ತಾರ ನಿಕೇತ್ ರಾಜ್ ಮಾರ್ಯ, ಕೌಶಲ್ಯಾಭಿವೃದ್ದಿ ನಿಗಮದ ಮಾಜಿ ಅಧ್ಯಕ್ಷ ಮುರುಳೀಧರ ಹಾಲಪ್ಪ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇಕ್ಬಾಲ್ಅಹಮದ್, ಎಸ್ ಷಫಿ ಅಹಮದ್, ಅಸ್ಲಾಂಪಾಷ, ಆರ್ ರಾಮಕೃಷ್ಣ, ಪಂಚಾರಕ್ಷಯ್ಯ, ನಾಗಮಣಿ, ಮುಖಂಡರುಗಳಾದ ಸಿದ್ದಲಿಂಗೇಗೌಡ, ವಾಲೆಚಂದ್ರಯ್ಯ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ‌ ಸೈಯದ್ ಫಯಾಜ್, ನರಸಿಂಹಮೂರ್ತಿ, ಗಿರೀಶ್, ರಂಗಶಾಮಯ್ಯ, ನಾಗರಾಜು, ಶ್ರೀನಿವಾಸ್, ಕೆಂಪಣ್ಣ, ಶಿವಾಜಿ, ಗುರುಪ್ರಸಾದ್, ಸಂಜೀವ ಸುಂದರ್‌ಕುಮಾರ್, ಮೆಹಬೂಬ್ ಪಾಷ, ಸುಜಾತ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಕಲಬುರಗಿ | ಯುವಕರು ಮಾರಕಾಸ್ತ್ರ ಹಿಡಿದ ವಿಡಿಯೊ ವೈರಲ್: ನಾಲ್ವರು ಯುವಕರ ವಿರುದ್ಧ ಎಫ್‌ಐಆರ್

ಕಲಬುರಗಿಯ ದೇವಿ ನಗರದಲ್ಲಿ ನಾಲ್ವರು ಯುವಕರು ಕೈಯಲ್ಲಿ ಮಾರಕಾಸ್ತ್ರಗಳು ಹಿಡಿದು ವಿಡಿಯೋ...

Download Eedina App Android / iOS

X