ತುಮಕೂರು | ಸಾಲಬಾಧೆಯಿಂದ ದಂಪತಿ ಆತ್ಮಹತ್ಯೆ

Date:

ಸಾಲಬಾಧೆಯಿಂದ ಗಂಡ ಹೆಂಡತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ‌ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಪಿ ರೊಪ್ಪ ಗ್ರಾಮದಲ್ಲಿ ನಡೆದಿದೆ.

- Advertisement -

ಗ್ರಾಮದ ಮನು(27), ಪವಿತ್ರ(24)  ಆತ್ಮಹತ್ಯೆ ಮಾಡಿಕೊಂಡಿರುವ ದಂಪತಿ. ಇಬ್ಬರೂ ತಮ್ಮ ಮನೆಯಲ್ಲಿ ಶುಕ್ರವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಪಾವಗಡ ತಾಲೂಕಿನ  ಪಾಲಕುಂಟೆಯ ಪವಿತ್ರ ಮತ್ತು ರೊಪ್ಪ ಗ್ರಾಮದ ಮನು ಅವರು ಮೂರು ವರ್ಷಗಳ ಹಿಂದೆ ವಿವಾಹವಾಗಿದ್ದರು. ಅವರಿಗೆ ಎರಡು ವರ್ಷದ ಮಗಳಿದ್ದಾಳೆ. ಮಗುವನ್ನು ಪವಿತ್ರ ಅವರ ತವರು ಮನೆಯಲ್ಲಿ ಇರಿಸಲಾಗಿತ್ತು ಎಂದು ತಿಳಿದುಬಂದಿದೆ.

ಅನ್ಯೋನ್ಯವಾಗಿದ್ದ ದಂಪತಿಗಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶುಕ್ರವಾರ ಬೆಳಿಗ್ಗೆ ಮನೆಯ ಬಾಗಿಲು ತೆರೆಯದಿದ್ದಾಗ ನೆರೆಹೊರೆಯವರು ಅನುಮಾನಗೊಂಡು ಕಿಟಕಿಯಲ್ಲಿ ನೋಡಿದ್ದಾರೆ. ಇಬ್ಬರ ಮೃತದೇಹಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿವೆ.

ಟೊಮೆಟೊ ಸೇರಿದಂತೆ ವಿವಿಧ ಬೆಳೆಗಳಲ್ಲಿ ನಷ್ಟವಾಗಿತ್ತು. ಸಾಲದ ಹೊರೆ ಹೆಚ್ಚಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬಸ್ಥರು ಹೇಳಿದ್ದಾರೆ. ಪಾವಗಡ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ಬೆಳಗ್ಗೆ 10ರಿಂದ ಸಂಜೆ 8ರವರೆಗೆ, ಆರೋಗ್ಯ ಸಹಾಯವಾಣಿ 104.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...