ತುಮಕೂರು | ನಿಂತಿದ್ದ ಲಾರಿಗೆ ಕ್ರೂಸರ್ ಡಿಕ್ಕಿ; ಮಗು ಸೇರಿ ನಾಲ್ವರು ಅಯ್ಯಪ್ಪ ಮಾಲಾಧಾರಿಗಳು ಸಾವು

Date:

ನಿಂತಿದ್ದ ಲಾರಿಗೆ ಕ್ರೂಸರ್‌ ವಾಹನ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದು ಮಗು ಸೇರಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, 7 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆಯ ಬೆಳ್ಳಾವಿ ಕ್ರಾಸ್ ಸಮೀಪದ ರಾಷ್ಟ್ರೀಯ ಹೆದ್ದಾರಿ–48ರಲ್ಲಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

- Advertisement -

ಮೃತರು ಕೊಪ್ಪಳದ ಕುಕನೂರು ನಗರದ ಅಯ್ಯಪ್ಪ ಮಾಲಾಧಾರಿಗಳಾಗಿದ್ದು, ಶಬರಿಮಲೆಯಿಂದ ದರ್ಶನ ಮುಗಿಸಿ ಹಿಂತಿರುಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಅಪಘಾತದಲ್ಲಿ ಅಯ್ಯಪ್ಪ ಮಾಲೆ ಧರಿಸಿದ್ದ ನಾಲ್ವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

‌ಸಾಕ್ಷಿ (7), ಮಾರುತಪ್ಪ (45), ವೆಂಕಟೇಶ (30) ಗವಿಸಿದ್ದಪ್ಪ (28) ಮೃತರು. ಉಳಿದಂತೆ ಶ್ರೀನಿವಾಸ್, ಪ್ರವೀಣ್ ಕುಮಾರ್, ರಾಜಪ್ಪ, ಹುಲಿಗಪ್ಪ, ರಾಕೇಶ್, ತಿರುಪತಿ ಹಾಗೂ ಮತ್ತೊಬ್ಬ ಶ್ರೀನಿವಾಸ್ ಸೇರಿ 7 ಮಂದಿ ಗಾಯಗೊಂಡಿದ್ದು, ಅವರನ್ನು ತುಮಕೂರು ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ.

ಒಟ್ಟು 10 ಮಂದಿ ಶಬರಿಮಲೆ ಯಾತ್ರೆಗೆ ಕ್ರೂಸರ್ ವಾಹನದಲ್ಲಿ ತೆರಳಿದ್ದು, ತುಮಕೂರು ಮಾರ್ಗವಾಗಿ ಕೊಪ್ಪಳಕ್ಕೆ ವಾಪಸ್ ಬರುತ್ತಿದ್ದ ಸಂದರ್ಭದಲ್ಲಿ ಲಾರಿಗೆ ಕ್ರೂಸರ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಕ್ರೂಸರ್ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಸ್ಥಳದಲ್ಲೇ ನಾಲ್ವರು ಪ್ರಾಣ ಕಳೆದುಕೊಂಡಿದ್ದಾರೆ.

ಇದನ್ನೂ ಓದಿ: ತುಮಕೂರು | ವಿಮರ್ಶೆ ಎಂದರೆ ಅಂತಿಮ ತೀರ್ಪಲ್ಲ: ನಾಗಭೂಷಣ ಸ್ವಾಮಿ

ಘಟನೆಯ ಮಾಹಿತಿ ಪಡೆದಕೋರಾ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ತುಮಕೂರು ಜಿಲ್ಲಾಸ್ಪತ್ರೆಯ ಶವಗಾರಕ್ಕೆ ರವಾನೆ ಮಾಡಲಾಗಿದೆ. ಅಪಘಾತದ ನಿಖರ ಕಾರಣ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಈ ಘಟನೆ ಕೋರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕನಾಯಕನಹಳ್ಳಿ | ಮನೆ ಕುಸಿಯುವ ಮುನ್ನ ತಹಸೀಲ್ದಾರ್ ನೆರವಿನ ಹಸ್ತ ಚಾಚಲಿ

ಒಂದು ಕಡೆ ತಂದೆಯನ್ನು ಕಳೆದುಕೊಂಡ ಅಪ್ರಾಪ್ತ ಮಗಳ ಭವಿಷ್ಯದ ಚಿಂತೆ… ಮತ್ತೊಂದೆಡೆ...

ಶಿರಾ | ಭದ್ರಾ ನೀರಿಗಾಗಿ ಬೃಹತ್ ಹೋರಾಟಕ್ಕೆ ಸಿದ್ಧತೆ: ರೈತರು ಒಗ್ಗಟ್ಟಾಗಲು ಕರೆ

ಜೀವನಕ್ಕಾಗಿ ನೀರು, ನೀರಿಗಾಗಿ ನಮ್ಮ ಹೋರಾಟ ಎಂಬ ಘೋಷವಾಕ್ಯದೊಂದಿಗೆ ಶಿರಾ ತಾಲೂಕಿನಲ್ಲಿ...

ತುಮಕೂರು | ನಕಲಿ ವೈದ್ಯರ ವಿರುದ್ಧ ಕ್ರಮಕ್ಕೆ ಜನಪ್ರತಿನಿಧಿಗಳ ಸಹಕಾರ ಅಗತ್ಯ : ಆರೋಗ್ಯ ಸಚಿವ ಯು.ಟಿ. ಖದರ್

 ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಶೇ.95ರಷ್ಟು ಅಗತ್ಯ ಸವಲತ್ತುಗಳು ಲಭ್ಯವಿದ್ದು, ಯಾವುದೇ ಕೊರತೆಗಳಿದ್ದರೆ...

ತುಮಕೂರು | ರೇಡಿಯೋದಿಂದ ಕ್ಯಾಮೆರಾವರೆಗೆ : ವಿದ್ಯಾರ್ಥಿಗಳ ಕೈಗೆ ಬಂದ ಮಾಧ್ಯಮದ ನೈಜ ಅನುಭವ

ಮೂರು ದಿನಗಳ ಮಾಧ್ಯಮ ಕಾರ್ಯಾಗಾರದಲ್ಲಿ ಸಂದರ್ಶನ, ರೇಡಿಯೋ ಕಾರ್ಯಕ್ರಮ ನಿರ್ಮಾಣ ಹಾಗೂ...