ತುಮಕೂರು | ಪೋಕ್ಸೊ ಪ್ರಕರಣ ಮರೆಮಾಚಿದ ಪೊಲೀಸರು; ಅಧಿಕಾರಿಗಳ ವಿರುದ್ಧ ಸೇವಾ ಕೇಂದ್ರ ಆಕ್ರೋಶ

Date:

ನಾಲ್ಕು ವರ್ಷದ ಬಾಲಕಿಯ ವಿರುದ್ಧ ಲೈಂಗಿಕ ಕಿರುಕುಳ ನಡೆದಿದೆ ಎಂದು ಪೊಲೀಸ್ ಠಾಣೆಗೆ ದೂರು ಕೊಡಲು ಬಂದ ಸಂತ್ರಸ್ತ ಬಾಲಕಿಯ ಪೋಷಕರ ದೂರು ಸ್ವೀಕರಿಸಲು ಸಿ ಎಸ್ ಪುರ ಪೊಲೀಸರು ನಿರಾಕರಿಸಿದ್ದಾರೆ. ನಾಲ್ಕೈದು ತಾಸು ವಿಳಂಬ ಮಾಡಿ, ಗ್ರಾಮಸ್ಥರೊಂದಿಗೆ ರಾಜಿ ಸಂಧಾನಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ ಎಂದು ಆರೋಪಿಸಲಾಗಿದೆ. ಪೊಲೀಸರ ವಿರುದ್ಧ ವಿಶ್ವ ಮಾನವ ಹಕ್ಕುಗಳ ಸೇವಾ ಕೇಂದ್ರದ ಸಂಸ್ಥಾಪಕ ಅಧ್ಯಕ್ಷ ಎಸ್ ಸಿದ್ದಲಿಂಗೇಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯ ಉಚ್ಛನ್ಯಾಯಾಲಯದ ರಿಜಿಸ್ಟ್ರಾರ್ ಜನರಲ್ ಹಾಗೂ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗಕ್ಕೆ ಪತ್ರ ಬರೆದಿದ್ದು, ನ್ಯಾಯ ಒದಗಿಸುವಂತೆ ಮನವಿ ಮಾಡಿದ್ದಾರೆ.

- Advertisement -

ಜನವರಿ 14ರಂದು ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಕಡಬ ಹೋಬಳಿ ಕೆ ಹರುವೇಸಂದ್ರ ಗ್ರಾಮದಲ್ಲಿ ವ್ಯಕ್ತಿಯೊಬ್ಬ ನಾಲ್ಕು ವರ್ಷದ ಬಾಲಕಿಗೆ ಚಾಕಲೇಟ್ ಆಸೆ ತೋರಿಸಿ ಲೈಂಗಿಕ ಕಿರುಕುಳ ನೀಡಿದ್ದಾನೆ. ಘಟನೆ ಬಗ್ಗೆ ದೂರು ನೀಡಲು ಸಿ.ಎಸ್.ಪುರ ಪೊಲೀಸ್ ಠಾಣೆಗೆ ಸಂತ್ರಸ್ತ ಬಾಲಕಿಯ ಪೋಷಕರು ತೆರಳಿದ್ದರು. ಆದರೆ, ಠಾಣೆಯಲ್ಲಿ ದೂರು ದಾಖಲಿಸಿಕೊಳ್ಳಬೇಕಾದ ಪೊಲೀಸರು, ನಿರ್ಭೀತಿ ವಾತಾವರಣ ಸೃಷ್ಟಿಸಿ ಅವರಿಂದ ಘಟನೆಯ ಪೂರ್ತಿ ವಿವರಣೆ ಪಡೆದಿಲ್ಲ ಎಂದು ಸಿದ್ದಲಿಂಗೇಗೌಡ ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಪೋಕ್ಸೊ ಕಾಯಿದೆಯು ಅಪ್ರಾಪ್ತ ಹೆಣ್ಣು ಮಕ್ಕಳ ರಕ್ಷಣೆಗಾಗಿ ಜಾರಿಯಲ್ಲಿದೆ. ಆದರೆ, ಅದರ ಪಾಲನೆ ಮಾಡದ ಪಿಎಸ್‌ಐ ಶಿವಕುಮಾರ್ ಅವರು ಪಟ್ಟಭದ್ರ ಹಿತಾಸಕ್ತಿಗಳ ಮಾತಿಗೆ ಮಣಿದು ಗ್ರಾಮಸ್ಥರೊಂದಿಗೆ ರಾಜಿಸಂಧಾನಕ್ಕೆ ಸಮಯ ನೀಡಿದ್ದಾರೆ. ಆ ಮೂಲಕ, ಸಂಪೂರ್ಣವಾಗಿ ಪೋಕ್ಸೊ ಕಾಯಿದೆ ಉಲ್ಲಂಘನೆ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.

“ನಿರ್ಭಯ ವಾತಾವರಣ ಸೃಷ್ಟಿ ಜೊತೆಗೆ ಮಗುವಿನ ಮತ್ತು ಆಕೆಯ ತಂದೆ ತಾಯಿ ಅಥವಾ ಪೋಷಕರ ಖಾಸಗಿ ಗೌಪ್ಯತೆ ಕಾಪಾಡುವ ಕೆಲಸವನ್ನು ಪೊಲೀಸರು ಮಾಡಬೇಕಿದೆ. ಅಜ್ಞಾತ ಸ್ಥಳದಲ್ಲಿ ಸಂತ್ರಸ್ತರನ್ನಿರಿಸಿ ಕೂಲಂಕುಷ ತನಿಖೆ ಆರಂಭಿಸಬೇಕಿತ್ತು. ಕೂಡಲೇ ಮಗುವನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಬೇಕಿತ್ತು. ಈ ರೀತಿ ಸೂಕ್ಷ್ಮತೆ ಅರಿತು ಕೆಲಸ ಮಾಡುವಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯೂ ಕೈ ಚೆಲ್ಲಿದೆ. ಜತೆಗೆ ದೂರು ಕೇಳಿದ ತಕ್ಷಣ ಆರೋಪಿಯನ್ನು ಕರೆತಂದು ಎರಡು ದಿನ ವಿಚಾರಣೆಗೆ ಒಳಪಡಿಸಿದ್ದಾರೆ. ಇದೆಲ್ಲಾ ನಡವಳಿಕೆ ಅನುಮಾನಕ್ಕೆ ಕಾರಣವಾಗಿದೆ. ಕೂಡಲೇ ಲೈಂಗಿಕ ಕಿರುಕುಳದ ದೂರು ದಾಖಲು, ವೈದ್ಯಕೀಯ ಪರೀಕ್ಷೆ ಹಾಗೂ ಸಂತ್ರಸ್ತ ಕುಟುಂಬಕ್ಕೆ ರಕ್ಷಣೆ, ಪರಿಹಾರ ನೀಡಬೇಕು” ಎಂದು ಮನವಿ ಮಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಸಂಸ ಪ್ರತಿಭಟನೆ

“ಇಡೀ ಘಟನೆ ಬಗ್ಗೆ ದೂರು ಆಧರಿಸಿ ಸಂಬಂಧಪಟ್ಟ ಪೊಲೀಸ್ ಪಿಎಸ್‌ಐ ಹಾಗೂ ಸಿಡಿಪಿಒ ಜೊತೆ ಮಾತನಾಡಿದಾಗ ಘಟನೆಯ ಸ್ಪಷ್ಟತೆ ಕಾಣುತ್ತಿದೆ. ಆದರೆ ಕೌನ್ಸೆಲಿಂಗ್‌ಗಾಗಿ ಸಿಡಿಪಿಒ ಬಳಿ ಬಂದು ವಾಪಸ್ ತೆರಳಿದ್ದಾರೆ. ಈ ಬಗ್ಗೆ ದಾಖಲು ಮಾಡದಿರುವುದೇ ದೊಡ್ಡ ವಿಪರ್ಯಾಸ. ಗಂಭೀರ ಪ್ರಕರಣದಲ್ಲಿ ಆರೋಪಿ ತಪ್ಪಿಸಿಕೊಂಡರೆ ಮತ್ತಷ್ಟು ಇಂತಹ ದುರ್ಘಟನೆಗೆ ಕಾರಣವಾಗುತ್ತದೆ. ಈಗಾಗಲೇ ಜಿಲ್ಲೆಯಲ್ಲಿ ಸುಮಾರು 1,375ರಷ್ಟು ಅಪ್ರಾಪ್ತ ಗರ್ಭಿಣಿಯರು ಇದ್ದರೆ, ರಾಜ್ಯದಲ್ಲಿ 28,657ರಷ್ಟು ಅಪ್ರಾಪ್ತ ಗರ್ಭಿಣಿಯರಿರುವುದು ಇಂತಹ ಸಮಾಜಘಾತುಕರು ಕೃತ್ಯ ನಡೆಸಿರುವುದು ಅರಿವಿಗೆ ಬರುತ್ತದೆ. ಈ ನಿಟ್ಟಿನಲ್ಲಿ ಪೊಲೀಸ್ ಠಾಣೆಗಳು ಸರ್ಕಾರಿ ಕಚೇರಿ ಮಧ್ಯವರ್ತಿಗಳ ತಾಣವಾಗುತ್ತಿದೆ. ಕೂಡಲೇ ಶಿಸ್ತು ಕ್ರಮ ಕೈಗೊಳ್ಳಬೇಕು” ಎಂದು ಪತ್ರದ ಮೂಲಕ ನ್ಯಾಯ ಕೋರಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಸ್ವಚ್ಚತೆ ನಮ್ಮ ಆಂತರಿಕ ಪ್ರತಿಬಿಂಬ : ಪಿಡಿಒ ಶೇಖರ್

 ಗಾಂಧೀಜಿ ಅವರ ಸ್ವಚ್ಛ ಭಾರತ್ ಕನಸು ನಮ್ಮ ಪರಿಸರ ಮಾಲಿನ್ಯ ನಿಯಂತ್ರಣದ...

ಕಲಬುರಗಿ | ಎಸ್‌ಐಆರ್ ವಿರೋಧಿಸಿ ಧರಣಿ; ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ನಿಲ್ಲಿಸುವುದು, ಪಟ್ಟಿಯಿಂದ...

ಗದಗ | ಸಾರಿಗೆ ಬಸ್ ಟಾಯರ್ ಸ್ಪೋಟ ಪರಿಣಾಮ ಕಂಡಕ್ಟರ್ ಕಾಲಿಗೆ ಗಾಯ

ಲಕ್ಷ್ಮೇಶ್ವರ ಮಾರ್ಗದಲ್ಲಿ ಸಂಚರಿಸುತ್ತಿದ್ದ ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ (ಸಂಖ್ಯೆ:...

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...