ತುಮಕೂರು | ರೈತ ಭವನ ನಿರ್ಮಾಣಕ್ಕೆ ಆಗ್ರಹ

Date:

ಪಾವಗಡ ನಗರದ ಹಳೇ ಸಂತೆ ಮೈದಾನದಲ್ಲಿ ರೈತ ಭವನ ಕಟ್ಟಿಸಿಕೊಡಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ಪೂಜಾರಪ್ಪ ಆಗ್ರಹಿಸಿದ್ದಾರೆ.

- Advertisement -

ತುಮಕೂರು ಜಿಲ್ಲೆ ಪಾವಗಡ ಪುರಸಭೆ ಮುಖ್ಯಾಧಿಕಾರಿಗೆ ಮನವಿ ಸಲ್ಲಿಸಿ ಅವರು ಮಾತನಾಡಿದರು. “ನಗರದ ಹಳೇ ಸಂತೆ ಮೈದಾನದಲ್ಲಿ ಸುಮಾರು 2 ಎಕರೆಗಳಿಗಿಂತಲೂ ಹೆಚ್ಚು ಜಮೀನಿದೆ. ಈ ಜಮೀನಿನಲ್ಲಿ ಹಲವಾರು ಸಾರ್ವಜನಿಕರು ಶೆಡ್‌ಗಳನ್ನು ಹಾಕಿಕೊಂಡು ಸದರಿ ಜಮೀನನ್ನು ಒತ್ತುವರಿ ಮಾಡಿಕೊಂಡಿದ್ದಾರೆ. ಇದರಿಂದ ಪುರಸಭೆಗೆ ಯಾವುದೇ ಆದಾಯ ಇರುವುದಿಲ್ಲ. ಅಲ್ಲದೆ ಈ ಸ್ಥಳವನ್ನು ಪ್ರಭಾವಶಾಲಿಗಳು ಒತ್ತುವರಿ ಮಾಡಿದ್ದಾರೆ. ಇದನ್ನು ಕೂಡಲೇ ತೆರವುಗೊಳಿಸಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

“ರೈತ ಸಂಘ ಈ ಬಗ್ಗೆ 20 ವರ್ಷಗಳಿಂದಲೂ ಹೋರಾಟ ಮಾಡಿಕೊಂಡು ಬಂದರೂ ಕೂಡ ನಮಗೆ ರೈತ ಭವನವಿರುವುದಿಲ್ಲ. ಈಗ ಮೇಲ್ಕಂಡ ಸಂತೆ ಜಮೀನಿನಲ್ಲಿ ನಮಗೆ ಪೂರ್ವ-ಪಶ್ಚಿಮವಾಗಿ 60 ಅಡಿಗಳು, ಉತ್ತರ-ದಕ್ಷಿಣವಾಗಿ 60 ಅಡಿಗಳು ಖಾತೆ ವಗೈರೆ ಲೈಸೆನ್ಸ್ ಮಂಜೂರು ಮಾಡಿಕೊಡಬೇಕು” ಎಂದರು.

“ಪುರಸಭೆ ಮುಖ್ಯಾಧಿಕಾರಿಗಳು, ಪುರಸಭೆ ಅಧ್ಯಕ್ಷರು, ಎಲ್ಲ ಸದಸ್ಯರುಗಳು ಒಮ್ಮತದಿಂದ ರೈತಭವನ ಕಟ್ಟಿಕೊಳ್ಳಲು ಅನುಮತಿ ನೀಡಿ, ಸಹಕರಿಸಿ ಒಂದು ವಾರದೊಳಗೆ ರೈತ ಭವನ ನಿರ್ಮಾಣಕ್ಕೆ  ಅನುಕೂಲ ಮಾಡಿಕೊಡಬೇಕು” ಎಂದು ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ಬೀದರ್ | ಬಳಕೆಯಾಗದೇ ಪಾಳುಬಿದ್ದಿದೆ ʼಕಮಲನಗರ ಬಸ್ ನಿಲ್ದಾಣʼ

ರೈತ ಭವನ ನಿರ್ಮಾಣಕ್ಕೆ ವಿಳಂಬ ಮಾಡಿದರೆ ಮುಂದಿನ ದಿನಗಳಲ್ಲಿ ಪುರಸಭೆ ಕಾರ್ಯಲಯದ ಎದುರು ಕರ್ನಾಟಕ ರೈತ ಸಂಘದ ಅಧ್ಯಕ್ಷರು ಮತ್ತು ರೈತ ಸಂಘದ ಪದಾಧಿಕಾರಿಗಳು  ಹೋರಾಟವನ್ನು ಹಮ್ಮಿಕೊಳ್ಳುತ್ತೇವೆ” ಎಂದು ಎಚ್ಚರಿಕೆ ನೀಡಿದರು.

ಈ ವೇಳೆ ರೈತ ಸಂಘದ ಪದಾದಿಕಾರಿಗಳು, ಸದಸ್ಯರು ಹಾಗೂ ಕಾರ್ಯಕರ್ತರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ತುಮಕೂರು ದಸರಾಕ್ಕೆ ತಾರಾ ಮೆರುಗು : 11 ದಿನ, ನೂರಾರು ಆಕರ್ಷಣೆ

ದೇವಿಯ ಆರಾಧನೆ, ತಾರೆಯರ ಕಲರವ, ಸಂಗೀತದ ರಸದೌತಣ, ನೃತ್ಯ ವೈಭವ, ಕ್ರೀಡಾ...