ತುಮಕೂರು | ‘ದ್ವೇಷ ಅಳಿಸೋಣ-ದೇಶ ಉಳಿಸೋಣ’ ನ.10ರವೆರೆಗೆ ಜಾಗೃತಿ ಅಭಿಯಾನ: ತಾಜುದ್ದೀನ್ ಷರೀಫ್

Date:

ಧರ್ಮದ ಹೆಸರಿನಲ್ಲಿ ಎಲ್ಲಡೆ ದ್ವೇಷ ಬಿತ್ತಲಾಗುತ್ತಿದೆ. ಧಾರ್ಮಿಕ ದ್ವೇಷ ವಿರುದ್ಧ ‘ದ್ವೇಷ ಅಳಿಸೋಣ ದೇಶ ಉಳಿಸೋಣ’ ಎಂಬ ಅಭಿಯಾನವನ್ನು ನ.1 ರಿಂದ ಆರಂಭಿಸಿದ್ದೇವೆ. ಅಭಿಯಾನವು ನ.10ರವರೆಗೆ ರಾಜ್ಯಾದ್ಯಂತ ನಡೆಯಲಿದೆ ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ತುಮಕೂರು ಜಿಲ್ಲಾ ಅಧ್ಯಕ್ಷ ತಾಜುದ್ದೀನ್ ಷರೀಫ್ ತಿಳಿಸಿದ್ದಾರೆ.

ಅಭಿಯಾನದ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, “ಧರ್ಮದ ಹೆಸರಲ್ಲಿ ದ್ವೇಷ ಹುಟ್ಟಿಸುವ ಮತ್ತು ಸುಳ್ಳು ಸುದ್ದಿಗಳನ್ನು ಹರಡಿ ಜನರ ನೆಮ್ಮದಿ ಕೆಡಿಸುವ ಕೆಲಸ ನಿರಂತರವಾಗಿ ನಡೆಯುತ್ತಿದೆ. ಕೆಲವರು ಇದನ್ನು ರಾಜಕಾರಣಕ್ಕೆ ಬಳಸಿಕೊಳ್ಳುತ್ತಿದ್ದಾರೆ” ಆತಂಕ ವ್ಯಕ್ತಪಡಿಸಿದರು.

“ಸ್ವಾರ್ಥ ರಾಜಕಾರಣಿಗಳು ಅಧಿಕಾರ ಭದ್ರಪಡಿಸಿಕೊಳ್ಳಲು ಜನರ ನಡುವೆ ದ್ವೇಷದ ಕಿಚ್ಚು ಹಚ್ಚುವ ಪ್ರಯತ್ನದಲ್ಲಿ ತೊಡಗಿಕೊಂಡಿದ್ದಾರೆ. ಸರ್ವಜನಾಂಗದ ಶಾಂತಿಯ ತೋಟವಾಗಿದ್ದ ನಮ್ಮ ಕನ್ನಡನಾಡಿನಲ್ಲಿ ಪ್ರಚೋದನಕಾರಿ ಭಾಷಣಗಳು ವ್ಯಾಪಕವಾಗಿ ನಡೆಯುತ್ತಿವೆ. ಇದರ ಪರಿಣಾಮವಾಗಿ ಜಾತಿ ಮತ್ತು ಕೋಮು ಸಂಘರ್ಷ ನಡೆದು ಅಮಾಯಕರ ಕೊಲೆಯಲ್ಲಿ ಮುಕ್ತಾಯವಾಗುತ್ತಿದೆ. ಇದು ರಾಜ್ಯದ ಸೌಹಾರ್ದ ವಾತಾವರಣ ಮತ್ತು ಅಭಿವೃದ್ಧಿಗೆ ಮಾರಕ” ಎಂದು ವಿವರಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಸಮಾಜದಲ್ಲಿ ಅಶಾಂತಿಯ ವಾತಾವರಣ ಇದ್ದರೆ ಕನ್ನಡಿಗರು ನೆಮ್ಮದಿಯಿಂದ ಬದುಕಲು ಸಾಧ್ಯವೇ? ಖಂಡಿತವಾಗಿಯೂ ಸಾಧ್ಯವಿಲ್ಲ. ಈ ನಿಟ್ಟಿನಲ್ಲಿ ಪರಿಸ್ಥಿತಿಯ ಗಂಭೀರತೆ ಅರಿತು ರಾಜ್ಯದ ನಾಗರಿಕರಲ್ಲಿ ದ್ವೇಷ ರಾಜಕೀಯ ಮತ್ತು ಅದರ ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸುವುದು, ಅಲ್ಪ ಸಂಖ್ಯಾತ ಮತ್ತು ಹಿಂದುಳಿದ ವರ್ಗಗಳ ರಾಜಕೀಯ ಸ್ಥಾನಮಾನ ಕುಗ್ಗುತ್ತಿರುವ ಬಗ್ಗೆ ಜಾಗೃತಿ ಮೂಡಿಸುವುದು ಇದರ ಮುಖ್ಯ ಉದ್ದೇಶವಾಗಿದೆ. ಅಭಿಯಾನದಲ್ಲಿ ಮೌಲ್ಯಾಧಾರಿತ ರಾಜಕೀಯ, ಪ್ರೀತಿ, ಶಾಂತಿ ಸಹೋದರತೆ ಭಾವ ಹರಡಿ ದ್ವೇಷ ಮತ್ತು ಸುಳ್ಳಿನ ರಾಜಕೀಯದ ವಿರುದ್ಧ ದ್ವನಿ ಎತ್ತಲು ಪ್ರೇರೇಪಿಸಲಾಗುತ್ತದೆ” ಎಂದು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಡ್ಯ | ‘ಸೊಳ್ಳೆ ಉತ್ಪಾದನಾ ಕೇಂದ್ರ’ವಾದ ವೈದ್ಯಕೀಯ ಕಾಲೇಜು; ಕಣ್ಮುಚ್ಚಿ ಕುಳಿತ ಅಧಿಕಾರಿಗಳು!

ಇಡೀ ರಾಜ್ಯದಲ್ಲಿ ಡೆಂಘೀ ಜ್ವರ ಹರಡುತ್ತಾ ಇರುವಾಗ ನೈರ್ಮಲ್ಯ ಕಾಪಾಡಿ, ನೀರು...

ವಿಜಯಪುರ | ಎನ್‌ಎಸ್‌ಎಸ್ ಸ್ವಯಂ ಸೇವಕರಲ್ಲಿ ತಾಳ್ಮೆ, ಶಿಸ್ತಿನ ಜೊತೆಗೆ ಧೈರ್ಯ ತುಂಬುತ್ತದೆ: ಡಾ.ಪ್ರತಾಪ್ ಲಿಂಗಯ್ಯ

"ಎನ್‌ಎಸ್‌ಎಸ್ ಎಂಬುದು ಮನುಷ್ಯನಲ್ಲಿ ಸಹನೆ, ತಾಳ್ಮೆ ಹಾಗೂ ಶಿಸ್ತಿನ ಜೊತೆಗೆ ಧೈರ್ಯವನ್ನು...

ವಿಜಯಪುರ | ನೂತನ ವಸತಿ ನಿಲಯ ಮಂಜೂರು ಮಾಡುವಂತೆ ದಲಿತ ವಿದ್ಯಾರ್ಥಿ ಪರಿಷತ್ ಆಗ್ರಹ

ವಿಜಯಪುರ ನಗರದಲ್ಲಿರುವ ಅಕ್ಕಮಹಾದೇವಿ ಮಹಿಳಾ ವಿಶ್ವ ವಿದ್ಯಾಲಯದಲ್ಲಿ ಹಿಂದುಳಿದ ವರ್ಗಗಳ ಮತ್ತು...

ಚಿಕ್ಕಬಳ್ಳಾಪುರ | ಶಾಶ್ವತ ನೀರಾವರಿ ಯೋಜನೆಗಾಗಿ ಪ್ರಧಾನಿ ಭೇಟಿ : ಶಾಸಕ ಸಮೃದ್ಧಿ ಮಂಜುನಾಥ್‌ ವಾಗ್ದಾನ

"ಬರಪೀಡಿತ ಜಿಲ್ಲೆಗಳಿಗೆ ಶಾಶ್ವತ ನೀರಾವರಿ ತರುವ ಕುರಿತು ಪ್ರಧಾನಿ ಮೋದಿ ಭೇಟಿಗೆ...