ತುಮಕೂರು | ಸರ್ಕಾರಗಳು ರೈತರು ನೆಮ್ಮದಿಯಿಂದ ಬದುಕುವ ವಾತಾವರಣ ಸೃಷ್ಟಿಸಬೇಕು : ಎ.ಗೋವಿಂದರಾಜು

Date:

ತುಮಕೂರು ತಾಲೂಕು ಹೆಬ್ಬೂರಿನ ದಿ.ಕೆ.ಎಸ್.ಪುಟ್ಟಣ್ಣಯ್ಯ ರೈತ ಭವನದಲ್ಲಿ ರೈತ ದಿನಾಚರಣೆ,ಕೆ.ಎಸ್.ಪುಣ್ಣಯ್ಯ ಜಯಂತಿ,ಮಾಜಿ ಪ್ರಧಾನಿ ಚೌದರಿ ಚರಣ್ ಸಿಂಗ್ ದಿನಾಚರಣೆ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಕಾರ್ಯಾಧ್ಯಕ್ಷ ಹಾಗೂ ತುಮಕೂರು ಜಿಲ್ಲಾಧ್ಯಕ್ಷ ಎ.ಗೋವಿಂದರಾಜು ಅವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿತ್ತು.

- Advertisement -

ಹೆಬ್ಬೂರಿನ ಕೆ.ಎಸ್.ಪುಟ್ಟಣ್ಣಯ್ಯ ರೈತಭವನದ ಮುಂಭಾಗದಲ್ಲಿರುವ ದಿ.ಕೆ.ಎಸ್.ಪುಟ್ಟಣ್ಣಯ್ಯ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಪುಷ್ಪನಮನ ಸಲ್ಲಿಸುವುದರ ಜೊತೆಗೆ,ಮಾಜಿ ಪ್ರಧಾನ ಚೌಧರಿ ಚರಣಸಿಂಗ್ ಅವರ ಭಾವಚಿತ್ರಕ್ಕೂ ರೈತ ಸಂಘದ ಮುಖಂಡರು ಹಾಗೂ ಕಾರ್ಯಕರ್ತರು ಪುಷ್ಪ ನಮನ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಈ ವೇಳೆ ಮಾತನಾಡಿದ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಕಾರ್ಯಾಧ್ಯಕ್ಷ ಹಾಗೂ ತುಮಕೂರು ಜಿಲ್ಲಾಧ್ಯಕ್ಷ ಎನ್.ಗೋವಿಂದರಾಜು, ಇಂದು ರೈತ ದಿನಾಚರಣೆ. ಸರಕಾರ ಇಂದು ರೈತ ದಿನಾಚರಣೆಯನ್ನು ಆಚರಿಸುವ ಮೂಲಕ ಮಾಜಿ ಪ್ರಧಾನಿ ಚೌಧರಿ ಚರಣ್‌ಸಿಂಗ್ ಅವರ ಸ್ಮರಿಸುವ ಕೆಲಸವನ್ನು ಮಾಡುತ್ತಿದೆ.ಇದಕ್ಕಾಗಿ ಸರಕಾರಕ್ಕೆ ನಾವು ಅಭಿನಂದನೆ ಸಲ್ಲಿಸುತ್ತೇವೆ.ಸರಕಾರ ಕೇವಲ ಕೃಷಿ, ಮತ್ತು ತೋಟಗಾರಿಕೆ ಇಲಾಖೆಯ ಅಧಿಕಾರಿಗಳಲ್ಲಿ ದಾಖಲೆಗಾಗಿ ಒಂದಿಷ್ಟು ರೈತರನ್ನು ಸೇರಿಸಿ, ಭಾಷಣ ಮಾಡಿ ಹೊಗುವುದರಿಂದ ರೈತರ ಸಮಸ್ಯೆಗಳಿಗೆ ಪರಿಹಾರ ದೊರೆಯುವುದಿಲ್ಲ.ಕೃಷಿಕರು ಇಂದು ಬಹಳ ಕಷ್ಟದಲ್ಲಿದ್ದಾರೆ.ಕೃಷಿಗೆ ಹಾಕಿದ ಬಂಡವಾಳ ವಾಪಸ್ಸು ಬಾರದೆ, ಸಾಲಕ್ಕೆ ಹೆದರಿ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಸರಕಾರದ ಅಂಕಿ ಅಂಶಗಳ ಪ್ರಕಾರವೇ, ಪ್ರತಿ ಅರ್ಧ ನಿಮಿಷಕ್ಕೆ ಓರ್ವ ರೈತ ಆತ್ಮಹತ್ಯೆಗೆ ಶರಣಾಗುತ್ತಿದ್ದಾನೆ.ದೇಶದ ಜನರ ಹೊಟ್ಟೆಗೆ ಅನ್ನ ಬೆಳೆದುಕೊಟ್ಟು, ಶೇ.65 ರಷ್ಟು  ಜನರಿಗೆ ಉದ್ಯೋಗ ನೀಡಿರುವ ಕೃಷಿಕ ನೆಮ್ಮದಿಯಿಂದ ಬದುಕಲು ಬೇಕಾಗುವ ವಾತಾವರಣ ಸೃಷ್ಠಿಯಾಗುತ್ತಿಲ್ಲ. ರೈತರ ಉತ್ಪನಗಳಿಗೆ ವೈಜ್ಞಾನಿಕ ಬೆಲೆ ನೀಡುತ್ತಿಲ್ಲ. ಕನಿಷ್ಠ ಎಲ್ಲಾ ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ ನೀಡುತ್ತಿಲ್ಲ. ರೈತರ ಶ್ರಮಕ್ಕೆ ತಕ್ಕ ಬೆಲೆ ಸಿಗುವಂತೆ ಮಾಡಿದಾಗ ಮಾತ್ರ ಇಂತಹ ರೈತ ದಿನಾಚರಣೆಗೆ ನಿಜವಾದ ಅರ್ಥ ಬರುತ್ತದೆ ಎಂದರು.

1002553424

ಸರಕಾರ ವ್ಯವಸಾಯಕ್ಕೆ ಬೇಕಾದ ಸಾಲ ನೀತಿ ರೂಪಿಸುವುದರ ಜೊತೆಗೆ,ನೀರಾವರಿ ಸೌಲಭ್ಯ ಕಲ್ಪಿಸುವತ್ತ ಗಮನಹರಿಸಬೇಕು. ಮಾರುಕಟ್ಟೆ ವ್ಯವಸ್ಥೆ,ಪಲವತ್ತಾದ ಭೂಮಿಯನ್ನು ಕಿತ್ತು ಕಾರ್ಪೋರೇಟ್ ಕಂಪನಿಗಳಿಗೆ ನೀಡುವ ನೀತಿಗಳನ್ನು ಕೈಬಿಡಬೇಕು. ಡಾ.ಸ್ವಾಮೀನಾಥನ್ ವರದಿಯನ್ನು ಅನುಷ್ಠಾನಕ್ಕೆ ತರಬೇಕು. ರೈತ ವಿರೋಧಿ, ಜನವಿರೋಧಿ ಕಾಯ್ದೆಗಳನ್ನು ಕೈಬಿಡಬೇಕು. ರೈತರ ಹೋರಾಟಕ್ಕೆ ಮಣಿದು ಕೇಂದ್ರ ಸರಕಾರ ಕಾಯ್ದೆಗಳನ್ನು ವಾಪಸ್ ಪಡೆದರು, ರಾಜ್ಯ ಸರಕಾರ ಇಂದಿಗೂ ಮುಂದುವರೆಸಿದೆ.ಆದರೆ ರೈತ ಹೋರಾಟಗಾರರಿಗೆ ನೀಡಿದ್ದ ಭರವಸೆ ಇಂದಿಗೂ ಈಡೇರಿಲ್ಲ.ವಿದ್ಯುತ್ ಖಾಸಗೀಕರಣ, ಪಂಪ್‌ಸೆಟ್‌ಗಳಿಗೆ ಸ್ಮಾರ್ಟ ಮೀಟರ್ ಅಳವಡಿಕೆಯಂತಹ ಕಾಯ್ದೆಗಳನ್ನು ವಾಪಸ್ ಪಡೆಯಬೇಕು ಎಂಬುದು ರೈತರ ಸಂಘದ ಪ್ರಮುಖ ಬೇಡಿಕೆಯಾಗಿವೆ.ಅಲ್ಲದೆ ನೆನೆಗುದಿಗೆ ಬಿದ್ದಿರುವ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಬೇಕೆಂಬುದು ನಮ್ಮ ಆಗ್ರಹವಾಗಿದೆ ಎಂದು ಎ.ಗೋವಿಂದರಾಜು ತಿಳಿಸಿದರು.

ಈ ವೇಳೆ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿ.ಜಿ,ಶಂಕರಪ್ಪ,ತುಮಕೂರು ತಾಲೂಕು ಅಧ್ಯಕ್ಷ ಚಿಕ್ಕಬೋರೇಗೌಡ, ಮಹಿಳಾ ಮುಖಂಡರಾದ ನಾಗರತ್ನಮ್ಮ, ಭಾಗ್ಯಮ್ಮ, ಲಲಿತಮ್ಮ, ಗುಬ್ಬಿ ತಾಲೂಕು ಅಧ್ಯಕ್ಷ ಲೋಕೇಶ್, ತುಮಕೂರು ತಾಲೂಕು ಉಪಾಧ್ಯಕ್ಷ ತಿಮ್ಮೇಗೌಡ, ಕೊರಟಗೆರೆ ತಾಲೂಕು ಮುಖಂಡ ಶಬ್ಬೀರ್ ಮತ್ತಿತರರು ಉಪಸ್ಥಿತರಿದ್ದರು. 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಎಸ್‌ಐಆರ್‌ ಹೆಸರಿನಲ್ಲಿ ಮತದಾರರ ಹಕ್ಕು ಕಸಿಯುವ ಆರೋಪ: ಸೆ.28ಕ್ಕೆ ಕಾಂಗ್ರೆಸ್ ಬೃಹತ್ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯಲ್ಲಿ ಬಡವರು, ದಲಿತರು,...

ತುಮಕೂರು | ಎಸ್‌ಐಆರ್ ರದ್ದುಪಡಿಸಿ, ಜ್ಞಾನೇಶ್ ಕುಮಾರ್‌ರನ್ನು ಪದಚ್ಯುತಿಗೊಳಿಸಿ : ಪ್ರಕಾಶ್ ರಾಜ್

ಜನರನ್ನು ಗೊಂದಲಕ್ಕೆ ಸಿಲುಕಿಸಿ ಅರ್ಹರ ಮತಹಕ್ಕು ಕಸಿಯುವ ಸಾಧ್ಯತೆ ಇರುವ ಎಸ್‌ಐಆರ್‌...

ಮಧುಗಿರಿಯಲ್ಲಿ ಲೋಕಾಯುಕ್ತ ಬೇಟೆ : ₹30 ಸಾವಿರ ಲಂಚ ಪಡೆಯುವಾಗ ಆರ್‌ಐ ಬಂಧನ

 ಪೌತಿ ಖಾತೆ ಮಾಡಿಕೊಡಲು ರೈತನಿಂದ ₹1 ಲಕ್ಷ ಲಂಚದ ಬೇಡಿಕೆ ಇಟ್ಟಿದ್ದ...

ತುಮಕೂರು | ಪಿಟಿಸಿಎಲ್ ಕಾಯ್ದೆ ಹೋರಾಟ ಸಮಿತಿ ಜಿಲ್ಲಾ ಅಧ್ಯಕ್ಷರಾಗಿ ಶೆಟ್ಟಿಹಳ್ಳಿ ಮಹೇಶ್ ಅವಿರೋಧ ಆಯ್ಕೆ

ಪಿಟಿಸಿಎಲ್ ಕಾಯ್ದೆಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯಗಳ ವಿರುದ್ಧ ಹೋರಾಟ...