ತುಮಕೂರು | ಮೇ 19ರಂದು ಸರ್ಕಾರದ ಮೂರು ವರ್ಷದ ಸಾರ್ಥಕ ಸಮರ್ಪಣಾ ಸಮಾವೇಶ

Date:

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಆಡಳಿತ ಚುಕ್ಕಾಣಿ ಹಿಡಿದು ಮೇ 20ಕ್ಕೆ 3 ವರ್ಷಗಳು ತುಂಬಲಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಜನತೆಗೆ ಈವರೆಗೆ ಆಗಿರುವ ಪ್ರಯೋಜನಗಳು, ಸೌಲಭ್ಯ ವಿತರಣೆ ಕಾರ್ಯಕ್ರಮವಾಗಿ ಅದೇ ದಿನ ತುಮಕೂರಿನಲ್ಲಿ ಸಾರ್ಥಕ ಸೇವೆಗಳ ಸಮರ್ಪಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಆದರೆ ಕಾರಣಾಂತರಗಳಿಂದ ಅದಕ್ಕೆ ಮುನ್ನಾ ದಿನ ಅಂದರೆ ಮೇ 19ಕ್ಕೆ ಅಧಿಕೃತವಾಗಿ ಕಾರ್ಯಕ್ರಮ ನಿಗದಿಯಾಗಿದೆ ಎಂದು ತುಮಕೂರು ಜಿಲ್ಲಾ ಉಸ್ತುವಾರಿ ಹಾಗೂ ಗೃಹಮಂತ್ರಿ ಡಾ. ಜಿ ಪರಮೇಶ್ವರ ಅವರು ತಿಳಿಸಿದ್ದಾರೆ.

- Advertisement -

ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, “ಹತ್ತಾರು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಹಲವಾರು ಯೋಜನೆಗಳಿಗೆ ರಾಜ್ಯ ಸರ್ಕಾರ ಚಾಲನೆ ನೀಡಿ ಅವುಗಳನ್ನು ಆದ್ಯತಾ ಕಾರ್ಯಕ್ರಮಗಳಾಗಿ ತೆಗೆದುಕೊಂಡು ಸಮರ್ಪಕವಾಗಿ ಅನುಷ್ಠಾನಗೊಳಿಸಿದೆ. ಈ ವಿಷಯವನ್ನು ಜನಸಮುದಾಯದೊಂದಿಗೆ ಹಂಚಿಕೊಳ್ಳಬೇಕಿತ್ತು. ಮೇ 20ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ 2ನೇ ಅವಧಿಯ ಸರ್ಕಾರ ಅಧಿಕಾರಕ್ಕೆ ಬಂದು 3 ವರ್ಷ ಸಂಧ ಹಿನ್ನೆಲೆಯಲ್ಲಿ ಆ ದಿನದಂದು ಕಾರ್ಯಕ್ರಮ ಆಯೋಜಿಸಲು ಆರಂಭದಲ್ಲಿ ನಿರ್ಧರಿಸಲಾಗಿತ್ತು. ಆದರೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನೌಕರರು ಬೇಡಿಕೆ ಈಡೇರಿಸುವಂತೆ ಅಂದೇ ಅನಿರ್ಧಿಷ್ಟಾವಧಿ ಮುಷ್ಕರ ಆರಂಭಿಸುವುದಾಗಿ ತಿಳಿಸಿರುವ ಹಿನ್ನೆಲೆಯಲ್ಲಿ ಕಾರ್ಯಕ್ರಮಕ್ಕೆ ತೊಂದರೆಯಾಗದಂತೆ ಅದಕ್ಕೆ ಮುನ್ನಾ ದಿನ ಮೇ 19ರಂದೇ ಕಾರ್ಯಕ್ರಮ ಆಯೋಜಿಸಲು ಮುಖ್ಯಮಂತ್ರಿಯವರು ಸೂಚಿಸಿದ್ದಾರೆ. ಹಾಗಾಗಿ ದಿನಾಂಕ ಮಾತ್ರ ಬದಲಾಗಿದೆ. ಉಳಿದಂತೆ ಎಲ್ಲ ಕಾರ್ಯಕ್ರಮಗಳು ಪೂರ್ವ ಯೋಜಿತದಂತೆ ನಡೆಯಲಿವೆ” ಎಂದು ವಿವರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮಹಿಳೆ ಮಾಡುತ್ತಿರುವ ಬಿಟ್ಟಿ ಚಾಕರಿಗಳೇನೇನು? ಇದನ್ನೇಕೆ ಅರಿಯಲು ಮುಂದಾಗಿದೆ...

2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಸರ್ಕಾರದ ಗುರಿಗೆ ಒಂದು ದೊಡ್ಡ ಅಡ್ಡಿ ಎದುರಾಗಿದೆ. ಅದೇನೆಂದರೆ; ಸಾಕಷ್ಟು ಸಂಖ್ಯೆಯ ಮಹಿಳೆಯರನ್ನು ಉದ್ಯೋಗ ಕ್ಷೇತ್ರಕ್ಕೆ ತರುವುದು. ವಿಶ್ವಬ್ಯಾಂಕ್ ಪ್ರಕಾರ, 2047ರ ವೇಳೆಗೆ...

ಭದ್ರತೆಯ ಹೆಸರಿನಲ್ಲಿ ಮಾಂಸದಂಗಡಿಗಳಿಗೆ ಬೀಗ: ಸರ್ಕಾರದ ಈ ನಿರ್ಧಾರದ...

ಈ ಬೆಳವಣಿಗೆ ಕಾಂಗ್ರೆಸ್ ಸರ್ಕಾರದ ಆಡಳಿತಾತ್ಮಕ ಹೊಣೆಗಾರಿಕೆಯನ್ನೂ ಮುನ್ನೆಲೆಗೆ ತಂದಿದೆ. ಪ್ರಧಾನಿಯ ಭೇಟಿಯ ಹಿನ್ನೆಲೆಯಲ್ಲಿ ಹೆಲಿಕಾಪ್ಟರ್‌ಗಳ ಆಗಮನ ಮತ್ತು ನಿರ್ಗಮನದ ಭದ್ರತೆಯನ್ನು ನಿರ್ಬಂಧಕ್ಕೆ ಕಾರಣವೆಂದು ಸಮರ್ಥಿಸಲಾಗುತ್ತಿದ್ದರೆ, ಅದಕ್ಕೂ ಸಮಗ್ರ ವಿವರಣೆ ಬೇಕಾಗುತ್ತದೆ. ಪ್ರಧಾನಿ...

ನಿಜಕ್ಕೂ ಭಾರತದ ಬಡತನ 16%ಗೆ ಇಳಿದಿದೆಯೇ? ವಾಸ್ತವ ಹೇಳುವುದೇನು?

ವಿಶ್ವಬ್ಯಾಂಕ್ ವರದಿ ಪ್ರಕಾರ, ಭಾರತದಲ್ಲಿ ಬಡತನ 16.1%ಗೆ ಮತ್ತು ತೀವ್ರ ಬಡತನ 2.6%ಗೆ ಇಳಿದಿದೆ. ಇದೇ ಅಂಕಿಅಂಶವನ್ನು ಬಳಸಿಕೊಂಡು ತಮ್ಮ ಸಾಧನೆ ಎಂಬಂತೆ ಕೇಂದ್ರ ಸರ್ಕಾರ ಸಂಭ್ರಮಿಸುತ್ತಿದೆ. ಆದರೆ, ದೇಶದ ಸುಮಾರು 80...

“ಪ್ರಮುಖವಾಗಿ ಕಂದಾಯ ಇಲಾಖೆಯಲ್ಲಿ ಬಹುಕಾಲದಿಂದ ಜಮೀನು ವಾರಸುದಾರರು ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದರು. ಕಳೆದ ಒಂದೂವರೆ ವರ್ಷದಲ್ಲಿ ತುಮಕೂರು ಜಿಲ್ಲೆಯ ಕಂದಾಯ ಇಲಾಖೆಯಲ್ಲಿ ಅಭೂತಪೂರ್ವ ಅಭಿವೃದ್ಧಿ ಕೆಲಸಗಳು ನಡೆದಿದ್ದು, ಮೇ 19ರ ಕಾರ್ಯಕ್ರಮದಲ್ಲಿ ಇ-ಪೌತಿ ಖಾತೆ, ದರಖಾಸ್ತು ಪೋಡಿ, ಕಂದಾಯ ಗ್ರಾಮ ಹಕ್ಕುಪತ್ರಗಳು, ಪಿಂಚಣಿ ಸೇರಿದಂತೆ ಸುಮಾರು 1,52,492 ಫಲಾನುಭವಿಗಳಿಗೆ ಹಕ್ಕುಪತ್ರ ಮತ್ತು ಸೌಲಭ್ಯಗಳನ್ನು ವಿತರಿಸಲಾಗುತ್ತಿದೆ. ಕಳೆದ 3 ವರ್ಷಗಳಲ್ಲಿ ರಾಜ್ಯದ ಕಂದಾಯ ಇಲಾಖೆ ವ್ಯಾಪ್ತಿಯಲ್ಲಿ ಸುಮಾರು 14ಲಕ್ಷ ಜನರಿಗೆ ಈ ಸೌಲಭ್ಯಗಳು ದೊರೆತಿವೆ” ಎಂದು ಅವರು ತಿಳಿಸಿದರು.

“ಅಲ್ಲದೆ, ತುಮಕೂರು ಜಿಲ್ಲೆಯಲ್ಲಿ ಆಗಿರುವ ಇತರೆ ಇಲಾಖೆಗಳ ಅಭಿವೃದ್ಧಿ ಸಂಬಂಧಿಸಿದಂತೆ ಸುಮಾರು 682 ಕೋಟಿ ರೂ.ಗಳ ಕಾಮಗಾರಿಗಳಿಗೆ ಅಡಿಗಲ್ಲು ಹಾಗೂ ಉದ್ಘಾಟನೆ ಕಾರ್ಯಕ್ರಮಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೆರವೇರಿಸಿಕೊಡಲಿದ್ದಾರೆ” ಎಂದು ತಿಳಿಸಿದರು.

ಈ ಕಾರ್ಯಕ್ರಮ ಸಂಪೂರ್ಣ ಸರ್ಕಾರಿ ಕಾರ್ಯಕ್ರಮವಾಗಿದ್ದು, ಪಕ್ಷಾತೀತ ಕಾರ್ಯಕ್ರಮ ಎಂದು ಈ ಹಿಂದೆಯೇ ತಿಳಿಸಲಾಗಿತ್ತು. ಅಂತೆಯೇ ಈ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಸಚಿವ ಸಂಪುಟದ ಎಲ್ಲಾ ಮಂತ್ರಿಗಳು, ವಿರೋಧ ಪಕ್ಷದ ನಾಯಕರು, ಮುಖಂಡರು ಆಗಮಿಸಲಿದ್ದಾರೆ.

ಇದನ್ನೂ ಓದಿದ್ದೀರಾ? ಅಲ್ಪಸಂಖ್ಯಾತರಿಗೆ ʼಪರ್ಯಾಯ ಪಕ್ಷವಿಲ್ಲʼವೆಂಬ ಭಾವನೆಯನ್ನು ಕಾಂಗ್ರೆಸ್ ಬದಲಾಯಿಸಿಕೊಳ್ಳಬೇಕು

“ಕಾರ್ಯಕ್ರಮಕ್ಕೆ ತುಮಕೂರು ಜಿಲ್ಲೆಯ ವಿವಿಧ ತಾಲೂಕುಗಳಿಂದ ಸುಮಾರು 2 ಲಕ್ಷಕ್ಕೂ ಹೆಚ್ಚು ಜನ ಆಗಮಿಸಲಿದ್ದು, ಅವರಿಗೆ ಬಸ್ಸುಗಳ ವ್ಯವಸ್ಥೆ ಹಾಗೂ ಊಟದ ವ್ಯವಸ್ಥೆಯನ್ನು ಮಾಡಲಾಗಿದೆ” ಎಂದರು.

ಈ ಸಂದರ್ಭ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ ವಿ ಅಶೋಕ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ ವಿ ಅಶ್ವಿಜ ಇದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರಿನ ಜಿಕೆವಿಕೆಯಲ್ಲಿ ಕೃಷಿ ಮೇಳದ ಸಡಗರ

ಬೆಂಗಳೂರಿನ ಜಿಕೆವಿಕೆ ಕೃಷಿ ವಿಜ್ಞಾನ ಕೇಂದ್ರದಲ್ಲಿ 2026ರ ಕೃಷಿ ಮೇಳಕ್ಕೆ ಚಾಲನೆ...

ತುಮಕೂರು | 2047ರ ಭಾರತ ನಿರ್ಮಾಣಕ್ಕೆ ಯುವಶಕ್ತಿಯೇ ಬುನಾದಿ : ಪ್ರೊ. ಪರಶುರಾಮ ಕೆ.ಜಿ

2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ರೂಪಿಸುವ ಮಹತ್ವದ ಗುರಿ...

ಮಣಿಪುರ ಹಿಂಸಾಚಾರ | ಹತ್ಯೆಯಾಗಿ ಆರು ತಿಂಗಳ ಬಳಿಕ ಆರು ನಾಗಾ ಯುವಕರ ಅಂತ್ಯಕ್ರಿಯೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯ ಲೈಲಾನ್ ವೈಫೇಯ್ ಗ್ರಾಮದಿಂದ ಕಳೆದ ಮೇ 13...

ತುಮಕೂರು | ಮಾಧ್ಯಮ ಶಿಕ್ಷಣಕ್ಕೆ ಪ್ರಾಯೋಗಿಕ ಸ್ಪರ್ಶ; ವಿದ್ಯಾರ್ಥಿಗಳ ಕೈಯಲ್ಲಿ ಅರಳಿದ ‘ಸಿದ್ಧಾರ್ಥ ಸಂಪದ’

ಪತ್ರಿಕೋದ್ಯಮ ಮತ್ತು ಮಾಧ್ಯಮ ಕ್ಷೇತ್ರದ ಕೌಶಲ್ಯಗಳನ್ನು ತರಗತಿಯ ಪಾಠಕ್ಕೆ ಸೀಮಿತಗೊಳಿಸದೆ, ವಿದ್ಯಾರ್ಥಿಗಳಿಂದಲೇ...