ತುಮಕೂರು | ಸರ್ಕಾರಕ್ಕೆ ಸವಾಲಾಗಿ ಪರಿಣಮಿಸಿದ ಹೇಮಾವತಿ ಲಿಂಕ್‌ ಕೆನಾಲ್‌

Date:

ಹಲವು ವರ್ಷಗಳಿಂದ ರೈತರ ತೀವ್ರ ವಿರೋಧಕ್ಕೆ ಗುರಿಯಾಗಿ ಸ್ಥಗಿತಗೊಂಡಿದ್ದ ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಯೋಜನೆ ಮತ್ತೊಮ್ಮೆ ಚರ್ಚೆಗೆ ಬಂದಿದೆ. ಯೋಜನೆ ಪ್ರಸ್ತಾಪವಾದಂದಿನಿಂದ ರಾಮನಗರ ಮತ್ತು ತುಮಕೂರು ಜಿಲ್ಲೆಗಳ ನಡುವಿನ ಪರ-ವಿರೋಧದ ಚರ್ಚೆ ಬಗೆಹರಿಸುವುದು ಸರ್ಕಾರಕ್ಕೆ ದೊಡ್ಡ ಸವಾಲಾಗಿ ಪರಿಣಮಿಸಿದೆ.

- Advertisement -

ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಕಾಮಗಾರಿ ಮುಂದುವರಿಸುವ ಕುರಿತು ಅಧಿಕಾರಿಗಳಿಗೆ ಸೂಚನೆ ನೀಡಿದ ಬೆನ್ನಲ್ಲೇ ಜಿಲ್ಲೆಯಲ್ಲಿ ರಾಜಕೀಯ ಹಾಗೂ ರೈತ ಸಂಘಟನೆಗಳ ಚಟುವಟಿಕೆಗಳು ತೀವ್ರಗೊಂಡಿವೆ. ಪರಿಣಾಮವಾಗಿ, ಈ ಯೋಜನೆ ಈಗ ತುಮಕೂರು ಮತ್ತು ರಾಮನಗರ ಜಿಲ್ಲೆಗಳ ನಡುವಿನ ರಾಜಕೀಯ ಹಾಗೂ ಪ್ರಾದೇಶಿಕ ಹಿತಾಸಕ್ತಿಯ ನಡುವಿನ ಸಂಘರ್ಷವಾಗಿ ರೂಪುಗೊಳ್ಳುವ ಲಕ್ಷಣಗಳು ಕಾಣಿಸುತ್ತಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಈ ಯೋಜನೆಯಡಿ ಗುಬ್ಬಿ ತಾಲೂಕಿನ ಸುಂಕಾಪುರದಿಂದ ಕುಣಿಗಲ್ ತಾಲೂಕಿನ ಹೇಮಾವತಿ ನಾಲೆಯವರೆಗೆ ಕೊಳವೆ (ಪೈಪ್‌ಲೈನ್) ಮೂಲಕ ನೀರನ್ನು ಹಾಯಿಸುವ ಉದ್ದೇಶ ಹೊಂದಲಾಗಿದೆ.

“ಕುಣಿಗಲ್ ತಾಲೂಕಿಗೆ ಹಂಚಿಕೆಯಾಗಿರುವ 3 ಟಿಎಂಸಿ ನೀರು ಸಮರ್ಪಕವಾಗಿ ತಲುಪುತ್ತಿಲ್ಲ. ಹೀಗಾಗಿ, ನಿಗದಿತ ಪ್ರಮಾಣದ ನೀರನ್ನು ಪರಿಣಾಮಕಾರಿಯಾಗಿ ತಲುಪಿಸಲು ಈ ಯೋಜನೆ ರೂಪಿಸಲಾಗಿದೆ,” ಎಂಬುದು ಸರ್ಕಾರದ ವಾದ.

ರೈತ ಸಂಘಟನೆಗಳು ಹಾಗೂ ಹಲವು ಜನಪ್ರತಿನಿಧಿಗಳು ವಿಭಿನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದು, “ಕುಣಿಗಲ್‌ಗೆ ನೀರು ನೀಡುವುದಕ್ಕೆ ವಿರೋಧವಿಲ್ಲ. ಆದರೆ, ಈಗಾಗಲೇ ಆಧುನೀಕರಣಗೊಂಡಿರುವ ಹೇಮಾವತಿ ನಾಲೆಯ ಮೂಲಕವೇ ನೀರು ಹರಿಸಬೇಕು. ಹೊಸ ಲಿಂಕ್ ಕೆನಾಲ್ ಮೂಲಕ ನೀರು ವರ್ಗಾವಣೆ ಮಾಡಿದರೆ ಗುಬ್ಬಿ, ತುರುವೇಕೆರೆ, ಮಧುಗಿರಿ, ಕೊರಟಗೆರೆ, ತುಮಕೂರು ನಗರ ಹಾಗೂ ಗ್ರಾಮಾಂತರ ಸೇರಿದಂತೆ ಏಳು ತಾಲೂಕುಗಳ ನೀರಿನ ಹಕ್ಕಿನ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ,” ಎಂದು ಆತಂಕ ವ್ಯಕ್ತಪಡಿಸುತ್ತಿದ್ದಾರೆ.

ಡಿಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿ ಜಿಲ್ಲೆಗೆ ಆಗಮಿಸಿದ ವೇಳೆ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸೂಚನೆಯಂತೆ ಕಾಮಗಾರಿ ಮುಂದುವರಿಸಿ, ಭೂಸ್ವಾಧೀನ ಪ್ರಕ್ರಿಯೆಯನ್ನು ಒಂದು ತಿಂಗಳೊಳಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿರುವುದು ವಿವಾದಕ್ಕೆ ಹೊಸ ತಿರುವು ನೀಡಿದೆ. ಇದರ ಬೆನ್ನಲ್ಲೇ ರೈತ ಮುಖಂಡರು, ಜೆಡಿಎಸ್ ಹಾಗೂ ಬಿಜೆಪಿ ಶಾಸಕರು ಸರಣಿ ಸಭೆಗಳನ್ನು ನಡೆಸಿ ಹೋರಾಟದ ರೂಪುರೇಷೆ ಸಿದ್ಧಪಡಿಸುತ್ತಿದ್ದಾರೆ.

ಈ ಕುರಿತು ಈದಿನ.ಕಾಮ್ ಜೊತೆ ಮಾತನಾಡಿದ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಕಾರ್ಯಾಧ್ಯಕ್ಷ ಎ. ಗೋವಿಂದರಾಜು, “ಕುಣಿಗಲ್‌ಗೆ ಪೈಪ್‌ಲೈನ್ ಮೂಲಕ ನೀರು ಕೊಂಡೊಯ್ದರೆ ಮುಂದಿನ ದಿನಗಳಲ್ಲಿ ರಾಮನಗರ ಮತ್ತು ಮಾಗಡಿ ಭಾಗಕ್ಕೂ ಹೇಮಾವತಿ ನೀರನ್ನು ವರ್ಗಾಯಿಸಲು ದಾರಿ ಸುಗಮವಾಗಲಿದೆ. ನಾಲೆಯ ಮೂಲ ನಿಯಮಗಳನ್ನು ಉಲ್ಲಂಘಿಸಿ ತುಮಕೂರು ಜಿಲ್ಲೆಯ ನೀರಿನ ಹಕ್ಕಿಗೆ ಧಕ್ಕೆಯಾಗುವ ಸಾಧ್ಯತೆ ಇರುವುದರಿಂದ ಯೋಜನೆಯನ್ನು ತೀವ್ರವಾಗಿ ವಿರೋಧಿಸಲಾಗುತ್ತಿದೆ,” ಎಂದು ಹೇಳಿದ್ದಾರೆ.

ತುರುವೇಕೆರೆ ಶಾಸಕ ಎಂ.ಟಿ. ಕೃಷ್ಣಪ್ಪ ಸೇರಿದಂತೆ ಹಲವು ರೈತ ಮುಖಂಡರು, ಕಾಮಗಾರಿ ಆರಂಭಿಸಲು ಸರ್ಕಾರ ಮುಂದಾದರೆ ಜಿಲ್ಲೆಯ ಲಕ್ಷಾಂತರ ರೈತರು ಸ್ವಯಂಪ್ರೇರಿತವಾಗಿ ಹೋರಾಟಕ್ಕಿಳಿಯುವುದಾಗಿ ಎಚ್ಚರಿಸಿದ್ದಾರೆ. ಪ್ರತಿಭಟನೆಗಳನ್ನು ಬಲಪ್ರಯೋಗದಿಂದ ಹತ್ತಿಕ್ಕಲು ಯತ್ನಿಸಿದರೆ ಪರಿಸ್ಥಿತಿ ಮತ್ತಷ್ಟು ಗಂಭೀರವಾಗಬಹುದು ಎಂಬ ಎಚ್ಚರಿಕೆಯನ್ನೂ ನೀಡಿದ್ದಾರೆ.

ಒಂದೆಡೆ ಕುಣಿಗಲ್ ಭಾಗದ ಜನರು ತಮ್ಮ ಪಾಲಿನ ನೀರನ್ನು ಸಮರ್ಪಕವಾಗಿ ಪಡೆಯುವ ಹಕ್ಕಿನ ಪ್ರಶ್ನೆ ಮುಂದಿಟ್ಟರೆ, ಇನ್ನೊಂದೆಡೆ ತುಮಕೂರು ಜಿಲ್ಲೆಯ ರೈತರು ತಮ್ಮ ನೀರಿನ ಹಕ್ಕು ಮತ್ತು ಭವಿಷ್ಯದ ನೀರಾವರಿ ಭದ್ರತೆಯ ಬಗ್ಗೆ ಆತಂಕ ವ್ಯಕ್ತಪಡಿಸುತ್ತಿದ್ದಾರೆ.

ಹೀಗಾಗಿ, ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಯೋಜನೆ ಕೇವಲ ನೀರಾವರಿ ಯೋಜನೆಯಾಗಿ ಉಳಿಯದೆ, ನೀರಿನ ಹಂಚಿಕೆ, ಪ್ರಾದೇಶಿಕ ಹಿತಾಸಕ್ತಿ ಮತ್ತು ರಾಜಕೀಯ ಪ್ರತಿಷ್ಠೆಯ ಪ್ರಶ್ನೆಯಾಗಿ ರೂಪುಗೊಳ್ಳುತ್ತಿದೆ. ಸರ್ಕಾರ ಈ ವಿವಾದವನ್ನು ಸಂವಾದದ ಮೂಲಕ ಬಗೆಹರಿಸುತ್ತದೆಯೇ ಅಥವಾ ಯೋಜನೆಯನ್ನು ಮುಂದುವರಿಸುವ ಮೂಲಕ ಮತ್ತೊಂದು ರೈತ ಹೋರಾಟಕ್ಕೆ ಕಾರಣವಾಗುತ್ತದೆಯೇ ಎಂಬುದು ಮುಂದಿನ ದಿನಗಳಲ್ಲಿ ಸ್ಪಷ್ಟವಾಗಲಿದೆ.

WhatsApp Image 2024 08 09 at 10.52.48 1578a566
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು ವಿವಿಯಿಂದ ವರುಣ್‌ರಾಜ್ ಜಿ ಅವರಿಗೆ ಪಿಎಚ್‌.ಡಿ. ಪದವಿ ಪ್ರದಾನ

ತುಮಕೂರು ವಿಶ್ವವಿದ್ಯಾನಿಲಯದ ಡಾ. ಡಿ.ವಿ. ಗುಂಡಪ್ಪ ಕನ್ನಡ ಅಧ್ಯಯನ ಕೇಂದ್ರದ ಪ್ರಾಧ್ಯಾಪಕ...

ಉಡುಪಿ | ಶ್ರೀ ದುರ್ಗಾಂಬ ಬಸ್ ಕಳವು ಪ್ರಕರಣ: ಬಸ್ ಪತ್ತೆ

ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗದಲ್ಲಿ ನಿಲ್ಲಿಸಿದ್ದ ಸುಮಾರು ₹40 ಲಕ್ಷ ಮೌಲ್ಯದ...

ಸಿಂಧನೂರು | ₹10 ಕೋಟಿಗೂ ಅಧಿಕ ಅವ್ಯವಹಾರ ಆರೋಪ; ಕಿರಿಯ ಅಭಿಯಂತರ ಅಮಾನತು

ಸಿಂಧನೂರು ಉಪವಿಭಾಗದ ಕಿರಿಯ ಅಭಿಯಂತರ ನಾಗರಾಜ ಪ್ರಭಾ ಅವರನ್ನು ₹10 ಕೋಟಿಗೂ...

ಕರಾವಳಿಯಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ: ಪರಿಶೀಲನೆಗೆ ಸಮಿತಿ ರಚನೆ

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಅಥವಾ ಶಾಶ್ವತ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಪರಿಶೀಲನೆ...