ತುಮಕೂರು | ಕುಡಿಯುವ ನೀರಿನ ಅಸಮರ್ಪಕ ಸರಬರಾಜು : ಪರಿಶೀಲನೆಗೆ ಕಾರಜೋಳ ಸೂಚನೆ

Date:

 ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಅಸಮರ್ಪಕ ನೀರು ಸರಬರಾಜು ಕುರಿತಂತೆ ಸ್ಥಳ ಪರಿಶೀಲನೆ ನಡೆಸಿ ವರದಿ ಸಲ್ಲಿಸುವಂತೆ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸಂಸದ ಗೋವಿಂದ ಎಂ. ಕಾರಜೋಳ ಅವರು ಮಧುಗಿರಿ ಉಪವಿಭಾಗಾಧಿಕಾರಿಗಳಿಗೆ ಸೂಚಿಸಿದರು

- Advertisement -

 ಜಿಲ್ಲಾ ಪಂಚಾಯತಿಯಲ್ಲಿ ಶುಕ್ರವಾರ ನಡೆದ ಶಿರಾ ಮತ್ತು ಪಾವಗಡ ತಾಲ್ಲೂಕುಗಳಿಗೆ ಸಂಬಂಧಿಸಿದ ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ(ದಿಶಾ)ಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸುಮಾರು 2200 ಕೋಟಿ ರೂ. ವೆಚ್ಚದಲ್ಲಿ ಪಾವಗಡ ತಾಲ್ಲೂಕಿಗೆ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯನ್ನು ಮಂಜೂರು ಮಾಡಿ ಅನುಷ್ಠಾನಗೊಳಿಸಿದ್ದರೂ ತಾಲ್ಲೂಕಿನ ಜನರಿಗೆ ಸಮರ್ಪಕವಾಗಿ ಕುಡಿಯುವ ನೀರಿನ ಸರಬರಾಜು ಆಗುತ್ತಿಲ್ಲ ಎಂಬ ದೂರು ಕೇಳಿ ಬರುತ್ತಿದೆ. ಕುಡಿಯುವ ನೀರಿನ ಯೋಜನೆ ಸರಬರಾಜು ಮಾಡಲು ಜವಾಬ್ದಾರಿ ವಹಿಸಿಕೊಂಡಿರುವ ಏಜೆನ್ಸಿ ಹಾಗೂ ಸಂಬಂಧಿಸಿದ ಇಲಾಖೆಗಳ ಅಸಮರ್ಪಕ ನಡೆಯಿಂದ ಕುಡಿಯುವ ನೀರು ಸರಬರಾಜಿನಲ್ಲಿ ಸಾಕಷ್ಟು ಸಮಸ್ಯೆಯಾಗುತ್ತಿರುವ ಬಗ್ಗೆ ದೂರುಗಳು ಕೇಳಿ ಬರುತ್ತಿದ್ದು, ಈ ಸಂಬಂಧ ಮಧುಗಿರಿ ಉಪವಿಭಾಗಾಧಿಕಾರಿ ಅವರು ಪರಿಶೀಲಿಸಿ ವರದಿ ಸಲ್ಲಿಸುವಂತೆ ಸೂಚಿಸಿದರು. 

ತಮ್ಮ ಕ್ಷೇತ್ರ ವ್ಯಾಪ್ತಿಯ ಶಿರಾ ಮತ್ತು ಪಾವಗಡ ತಾಲ್ಲೂಕುಗಳು ಬರಪೀಡಿತ ಪ್ರದೇಶಗಳಿಂದ ಕೂಡಿದ್ದು, ಕುಡಿಯುವ ನೀರಿನ ಅಭಾವ ಎದುರಿಸುತ್ತಿವೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಈ ಭಾಗದ ಜನರ ಕಲ್ಯಾಣಕ್ಕೆ ಯೋಜನೆಗಳನ್ನು ರೂಪಿಸಿದ್ದರೂ ಸಮರ್ಪಕವಾಗಿ ಅನುಷ್ಠಾನಗೊಳಿಸದಿರುವುದು ಸರಿಯಲ್ಲ ಎಂದ ಅವರು, ಪ್ರಸ್ತುತ ಬೇಸಿಗೆಯಲ್ಲಿ ಕುಡಿಯುವ ನೀರಿನ ತೀವ್ರ ಅಭಾವ ಆಗುವ ಸಂಭವವಿರುವುದರಿಂದ ಕೂಡಲೇ ಶುದ್ಧ ಕುಡಿಯುವ ನೀರಿನ ಘಟಕಗಳು ಕೆಲಸ ನಿರ್ವಹಿಸಬೇಕು ಹಾಗೂ ಸಮಸ್ಯೆಯಿರುವ ಘಟಕಗಳನ್ನು ತಕ್ಷಣ ಸರಿಪಡಿಸಿ ಪರಿಶಿಷ್ಟ ಜಾತಿ/ಪಂಗಡದ ವಿದ್ಯಾರ್ಥಿ ನಿಲಯಗಳು ಹಾಗೂ ವಸತಿ ಶಾಲೆಗಳಿಗೆ ನಿರಂತರ ಕುಡಿಯುವ ನೀರು ಸರಬರಾಜು ಮಾಡಲು ಸ್ಥಳೀಯ ಆಡಳಿತ ಕ್ರಮವಹಿಸಬೇಕು ಎಂದು ಸೂಚಿಸಿದರು. 

ಕೇಂದ್ರದ ರಾಷ್ಟ್ರೀಯ  ಶಿಕ್ಷಣ ನೀತಿ ಅನ್ವಯ ತ್ರಿಭಾಷಾ ಶಿಕ್ಷಣ ಪದ್ಧತಿ ಅತ್ಯಂತ ಅವಶ್ಯವಾಗಿದೆ ಎಂದ ಅವರು, ತ್ರಿಭಾಷಾ ನೀತಿ ಪದ್ಧತಿಯ ಶಿಕ್ಷಣ ವ್ಯವಸ್ಥೆ ಬಡವರಿಗೆ ಅನುಕೂಲಕರವಾಗಿದೆ. ಆದರೆ ರಾಜ್ಯ ಸರ್ಕಾರ ದ್ವಿಭಾಷಾ ನೀತಿ ತರುವುದರಿಂದ ಬಡವರಿಗೆ ಅನ್ಯಾಯವಾಗಲಿದ್ದು, ಖಾಸಗಿ ಶಿಕ್ಷಣ ಸಂಸ್ಥೆಗಳಿಗಷ್ಟೇ ಅನುಕೂಲವಾಗಲಿದೆ. ಈ ತಾರತಮ್ಯ ಕುರಿತು ಈಗಾಗಲೇ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವುದಾಗಿ ಸಂಸದರು ತಿಳಿಸಿದರು. 

ಸರ್ಕಾರಿ ಶಾಲಾ ಶಿಕ್ಷಕರು ಕೇವಲ ತಮ್ಮ ವೇತನ ಮತ್ತು ತಮ್ಮ ಕುಟುಂಬದ ಶ್ರೇಯಸ್ಸಿಗಷ್ಟೇ ದುಡಿಯದೆ ತಮ್ಮ ಕರ್ತವ್ಯವನ್ನು ಸರಿಯಾಗಿ ನಿರ್ವಹಿಸಬೇಕು. ಈ ಸಂಬಂಧ ಶಿಕ್ಷಣ ಇಲಾಖೆಯ ಅಧಿಕಾರಿಗಳು ಶಿಕ್ಷಕರಿಗೆ ಸರಿಯಾದ ಮಾರ್ಗದರ್ಶನ ನೀಡಿ ಜಿಲ್ಲೆಯಲ್ಲಿ ಎಸ್‌ಎಸ್‌ಎಲ್‌ಸಿ ಫಲಿತಾಂಶ ಉತ್ತಮಗೊಳಿಸಲು ಕ್ರಮವಹಿಸುವಂತೆ ಅವರು ತಿಳಿಸಿದರು. 

ಮೀನುಗಾರಿಕೆ ಇಲಾಖೆಯಿಂದ ಸಾಂಪ್ರದಾಯಿಕ ಮೀನುಗಾರರಿಗಾಗಿ ಸೌಲಭ್ಯಗಳನ್ನು ವಿತರಿಸಲು ಕೇಂದ್ರ ಸರ್ಕಾರದಿಂದ ಯೋಜನೆಗಳನ್ನು ರೂಪಿಸಿದ್ದು, ಇವುಗಳನ್ನು ಜಿಲ್ಲೆಯಲ್ಲಿ ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು ಎಂದ ಅವರು, ಕೆರೆಯ ನಿರ್ವಹಣಾ ಸಂಘಗಳು ಹಾಗೂ ಮೀನುಗಾರರ ಸಂಘಗಳನ್ನು ಇಲಾಖೆಯು ವಿಶ್ವಾಸಕ್ಕೆ ತೆಗೆದುಕೊಂಡು ಯೋಜನೆಗಳನ್ನು ಅನುಷ್ಠಾನಗೊಳಿಸುವುದರಿಂದ ಪಾರದರ್ಶಕವಾಗಿ ಯೋಜನೆಗಳು ಫಲಾನುಭವಿಗಳನ್ನು ತಲುಪಲಿವೆ ಎಂದರು. 

ತೋಟಗಾರಿಕೆ ಮತ್ತು ಕೃಷಿ ಇಲಾಖೆಗಳಲ್ಲಿ ಫಲಾನುಭವಿಗಳ ಆಯ್ಕೆ ಪಾರದರ್ಶಕವಾಗಿರಬೇಕು ಎಂದ ಅವರು, ಬಡವರು ಹಾಗೂ ಪರಿಶಿಷ್ಟ ಸಮುದಾಯಗಳಿಗೆ ಯೋಜನೆಗಳು ತಲುಪುತ್ತಿಲ್ಲ ಎಂಬ ದೂರುಗಳು ಕೇಳಿ ಬರುತ್ತಿವೆ. ಈ ನಿಟ್ಟಿನಲ್ಲಿ ಸಂಬಂಧಿಸಿದ ಇಲಾಖೆ ಮುಖ್ಯಸ್ಥರು ಗಮನಹರಿಸುವಂತೆ ಸೂಚಿಸಿದರು. 

ಪ್ರಸ್ತುತ ಆರ್ಥಿಕ ವರ್ಷ ಅಂತ್ಯದಲ್ಲಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರ ಕೈಗೊಂಡಿರುವ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಹಾಗೂ ಬಡವರು, ಶೋಷಿತ ಸಮುದಾಯಗಳ ಯೋಜನೆಗಳ ಅನುಷ್ಠಾನದಲ್ಲಿ ಯಾವುದೇ ವಿಳಂಬವಾಗದಂತೆ ಕೆಲಸ ನಿರ್ವಹಿಸಲು ಇದೇ ಸಂದರ್ಭದಲ್ಲಿ ಅವರು ಸೂಚಿಸಿದರು. 

ಸಭೆಯಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ವಿ. ಅಶ್ವಿಜ ಹಾಗೂ ದಿಶಾ ಸಮಿತಿಯ ಸದಸ್ಯರು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು. 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಅ.5ರಿಂದ ಮೂರು ದಿನಗಳ ಮಾಧ್ಯಮ ಕಾರ್ಯಾಗಾರ : ‘ರೇಡಿಯೋ ಬರವಣಿಗೆಯಿಂದ ಛಾಯಾಗ್ರಹಣದವರೆಗೆ’ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಪಾಠ

 ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಮಾಧ್ಯಮ ಲೋಕದ ಪ್ರಾಯೋಗಿಕ ಅನುಭವ ಕಟ್ಟಿಕೊಡಲು ಶ್ರೀ ಸಿದ್ಧಾರ್ಥ...

ತುಮಕೂರು | ಜಂತರ್ ಮಂತರ್‌ನಲ್ಲಿ ಯುವಜನರ ಬಂಧನ: ಸಿಪಿಐ(ಎಂ) ತೀವ್ರ ಖಂಡನೆ

 ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ತಕ್ಷಣ ತೆಗೆದುಹಾಕಬೇಕೆಂದು...

ತುಮಕೂರಿನಲ್ಲಿ ಬರದ ಕರಿನೆರಳು: ಕೇಂದ್ರ ತಂಡದ ಮುಂದೆ ₹159 ಕೋಟಿ ನಷ್ಟದ ಲೆಕ್ಕ

ಮುಂಗಾರು ಮಳೆ ಕೈಕೊಟ್ಟ ಪರಿಣಾಮ ಜಿಲ್ಲೆಯಲ್ಲಿ ಈವರೆಗೆ ಸುಮಾರು ₹159 ಕೋಟಿ...

ತುಮಕೂರು | ಎಸ್‌ಸಿ–ಎಸ್‌ಟಿ ಸಂಪಾದಕರ ಸಂಘದ ರಾಜ್ಯದ ಮೊದಲ ಜಿಲ್ಲಾ ಘಟಕ ರಚನೆ: ಪರಮೇಶ್ ಅಧ್ಯಕ್ಷ, ರಘು ಪ್ರಧಾನ ಕಾರ್ಯದರ್ಶಿ

ಇಲ್ಲಿಯವರೆಗೆ ರಾಜ್ಯ ಮಟ್ಟದಲ್ಲಿ ಮಾತ್ರ ಇದ್ದ ಕರ್ನಾಟಕ ರಾಜ್ಯ ಎಸ್ಸಿ/ಎಸ್ಟಿ ಪತ್ರಿಕಾ...