ತುಮಕೂರು | ಕುವೆಂಪು ಚಿಂತನೆಗಳನ್ನು ಆತ್ಮದಲ್ಲಿ ಸ್ಥಾಪಿಸಿಕೊಳ್ಳಬೇಕು: ಹಿರಿಯ ಸಾಹಿತಿ ಕಾಳೇಗೌಡ ನಾಗವಾರ 

Date:

ಕುವೆಂಪು ಅವರ ಮನುಕುಲದ ಹಿತ, ಸರಳತೆ, ಲೋಕ ಕಲ್ಯಾಣ, ಅಹಿಂಸೆ ಹಾಗೂ ವೈಚಾರಿಕ ಚಿಂತನೆಗಳನ್ನು ಮೈಗೂಡಿಸಿಕೊಳ್ಳಬೇಕು ಮತ್ತು ಸಕಾರಾತ್ಮಕ ಚಿಂತನೆಗಳನ್ನು ಆತ್ಮದಲ್ಲಿ ಸ್ಥಾಪಿಸಿಕೊಳ್ಳಬೇಕು ಎಂದು ಹಿರಿಯ ಸಾಹಿತಿ ಪ್ರೊ.ಕಾಳೇಗೌಡ ನಾಗವಾರ ಹೇಳಿದರು.

ತುಮಕೂರು ವಿಶ್ವವಿದ್ಯಾನಿಲಯದ ಕುವೆಂಪು ಅಧ್ಯಯನ ಪೀಠವು ಕರ್ನಾಟಕ ಲೇಖಕಿಯರ ಸಂಘದ ಜಿಲ್ಲಾ ಘಟಕದ ಸಹಯೋಗದಲ್ಲಿ ವಿಶ್ವಮಾನವ ದಿನಾಚರಣೆಯ ಅಂಗವಾಗಿ ಶುಕ್ರವಾರ ಆಯೋಜಿಸಿದ್ದ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.

“ಮನುಜಮತ ವಿಶ್ವಪಥದಂತಹ ಮಹಾನ್ ಚಿಂತನೆಗಳನ್ನು ಸಾರಿದ ಕುವೆಂಪು ಅವರ ವಿಚಾರ ಪ್ರವಾಹವನ್ನು ಚರ್ಚೆಯ ಮೂಲಕ ಕೇಂದ್ರೀಕರಿಸುವ ಕೆಲಸಗಳಾಗಬೇಕು. ಕುವೆಂಪು ಅವರ ಚಿಂತನೆಗಳಲ್ಲಿ, ಬರೆವಣಿಗೆಯಲ್ಲಿ ಸಾಂಸ್ಕೃತಿಕ ಮಹತ್ವ, ಸಂವೇದನಾಶೀಲತೆ ನೆಲೆಸಿತ್ತು. ಬಸವಣ್ಣ, ಬುದ್ಧ, ಅಕ್ಕಮಹಾದೇವಿ, ಕುಮಾರವ್ಯಾಸ ಹೀಗೆ ಕನ್ನಡ ಭಾಷಾ ಸಾಹಿತ್ಯಕ್ಕೆ ಪೂರಕವಾಗುವ ಎಲ್ಲ ಮಹನೀಯರ ಅಂಶಗಳನ್ನು ಕುವೆಂಪು ಅವರ ಸಾಹಿತ್ಯ ನೆಲೆಯಲ್ಲಿ ನಾವು ಕಾಣಬಹುದು” ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಡಾ. ಡಿ ವಿ ಗುಂಡಪ್ಪ ಕನ್ನಡ ಆಧ್ಯಯನ ಕೇಂದ್ರ ಅಧ್ಯಕ್ಷ ಪ್ರೊ ನಿತ್ಯಾನಂದ ಬಿ ಶೆಟ್ಟಿ ಮಾತನಾಡಿ, “ಕುವೆಂಪು ಅವರು ಲೋಕದ ಚಿಂತನೆಗಳನ್ನು ಭಾಷೆಯ ಮೂಲಕ ಪಲ್ಲಟಗೊಳಿಸುವ ಮಹತ್ಕಾರ್ಯವನ್ನು ಯಶಸ್ವಿಯಾಗಿ ನಿಭಾಯಿಸಿದ್ದರಿಂದ ಅವರ ಕೃತಿಗಳು ಆಧುನಿಕ ಚಿಂತನೆಗಳಲ್ಲಿ ಹಾಗೂ ವೈಚಾರಿಕವಾಗಿ ನೆಲೆಗೊಂಡವು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಧಾರವಾಡ | ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ, ತಿದ್ದುಪಡಿಗೆ ಅವಕಾಶ

ಕುಲಪತಿ ಪ್ರೊ. ಎಂ ವೆಂಕಟೇಶ್ವರಲು ಮಾತನಾಡಿ, “ವಿದ್ಯಾರ್ಥಿಗಳ ಮನೋವಿಕಾಸಕ್ಕಾಗಿ ಕುವೆಂಪು ಅವರ ವಿಚಾರಧಾರೆಗಳು ಅವಶ್ಯಕ. ಅವರ ಚಿಂತನೆಗಳನ್ನು, ಪ್ರತಿ ಪದ ಪ್ರಯೋಗದ ಆಳ-ಅಗಲವನ್ನುಅಧ್ಯಯನ ಮಾಡಿ ಅರಿವಿಗೆ ತಂದುಕೊಳ್ಳಬೇಕು” ಎಂದು ಹೇಳಿದರು.

ತುಮಕೂರು ವಿವಿ ಕುವೆಂಪು ಅಧ್ಯಯನ ಪೀಠದ ಸಂಯೋಜಕಿ ಡಾ.ಗೀತಾ ವಸಂತ, ಕರ್ನಾಟಕ ಲೇಖಕಿಯರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷೆ ಮಲ್ಲಿಕಾ ಬಸವರಾಜು ಇದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಇಂಧನ ಬೆಲೆ ಏರಿಕೆ ಖಂಡಿಸಿ ಎಸ್‌ಯುಸಿಐ ಪ್ರತಿಭಟನೆ

ಪೆಟ್ರೋಲ್, ಡಿಸೇಲ್ ದರ ಏರಿಕೆ ವಿರೋಧಿಸಿ ವಿಜಯಪುರದಲ್ಲಿ ಎಸ್‌ಯುಸಿಐ ಕಾರ್ಯಕರ್ತರು ಪ್ರತಿಭಟನೆ...

ಹಾವೇರಿ | ಬಸ್ ನಿಲುಗಡೆಗೆ ಒತ್ತಾಯಿಸಿ ವಿದ್ಯಾರ್ಥಿನಿಯರಿಂದ ದಿಢೀರ್ ಪ್ರತಿಭಟನೆ

ಶ್ರೀಕಂಠಪ್ಪ ಬಡಾವಣೆಯ ಬಳಿ ಕೆಎಸ್‌ಆರ್‌ಟಿಸಿ ಬಸ್‌ಗಳ ನಿಲುಗಡೆಗಾಗಿ ಆಗ್ರಹಿಸಿ ಹಾವೇರಿ ನಗರದ ಹೊರವಲಯದ...

ಧಾರವಾಡ | ಕಲ್ಲು ಕ್ವಾರಿಯ ನೀರಿನಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳು ಸಾವು

ಮೊಬೈಲ್‌ನಲ್ಲಿ ರೀಲ್ಸ್‌ ಮಾಡುತ್ತಿದ್ದ ಇಬ್ಬರು ವಿದ್ಯಾರ್ಥಿಗಳು ನೀರು ತುಂಬಿದ್ದ ಕಲ್ಲು ಕ್ವಾರಿಗೆ...