ತುಮಕೂರು | ʼಇಂಟಿಗ್ರೆಟೆಡ್ ಟೌನ್ ಶಿಪ್ʼ ವಿರೋಧಿಸಿ ಕುಣಿಗಲ್‌ನಲ್ಲಿ ಬೃಹತ್ ಪ್ರತಿಭಟನೆ

Date:

ಕುಣಿಗಲ್‌ ಕುದುರೆ ಫಾರಂನಲ್ಲಿ ʼಇಂಟಿಗ್ರೆಟೆಡ್ ಟೌನ್ ಶಿಪ್ʼ ನಿರ್ಮಾಣ ಮಾಡಲು ಉದ್ದೇಶಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು ವಿರೋಧಿಸಿ, ಪಾರಂಪರಿಕ ಕುಣಿಗಲ್ ಕುದುರೆ ಫಾರಂ ಉಳಿವಿಗಾಗಿ ಹೋರಾಟ ಸಮಿತಿ ಬೃಹತ್ ಪ್ರತಿಭಟನೆ ನಡೆಸಿದೆ. ಸಮಿತಿಯ ಕಾರ್ಯಕರ್ತರು ಕುಣಿಗಲ್ ಉಪವಿಭಾಗಾಧಿಕಾರಿಗೆ ಮನವಿ ಸಲ್ಲಿಸಿದರು.

ಕುಣಿಗಲ್ ಸ್ಟಡ್ ಫಾರಂನಲ್ಲಿ ʼಇಂಟಿಗ್ರೆಟೆಡ್ ಟೌನ್ ಶಿಪ್ʼ ನಿರ್ಮಾಣ ಮಾಡುವ ನಿರ್ಧಾರವನ್ನು ರಾಜ್ಯ ಸರ್ಕಾರ ಕೈ ಬಿಡಬೇಕೆಂದು ಆಗ್ರಹಿಸಿ, ಪಾರಂಪರಿಕ ಕುಣಿಗಲ್ ಕುದುರೆ ಫಾರಂ ಉಳಿವಿಗಾಗಿ ಹೋರಾಟ ಸಮಿತಿಯ ಆಶ್ರಯದಲ್ಲಿ ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಪ್ರಗತಿಪರ ಚಿಂತಕರು, ರಾಜಕಾರಣಿಗಳು, ನಾಗರೀಕರು ಪಟ್ಟಣದ ಪ್ರವಾಸಿ ಮಂದಿರದಿಂದ ತಾಲೂಕು ಕಚೇರಿಯವರೆಗೆ ಕುದುರೆಯೊಂದಿಗೆ ಬೃಹತ್ ಪ್ರತಿಭಟನೆ ನಡೆಸಿ, ರಾಜ್ಯ ಸರ್ಕಾರ ಮತ್ತು ಸಂಸದರ, ಶಾಸಕರ ವಿರುದ್ಧ ದಿಕ್ಕಾರ ಕೂಗಿದರು. ವಕೀಲರು ಕಾರ್ಯ, ಕಲಾಪವನ್ನು ಸ್ಥಗಿತಗೊಳಿಸಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

ಆಮ್ ಆದ್ಮಿ ಪಕ್ಷದ ಮುಖಂಡ ಮುಖ್ಯಮಂತ್ರಿ ಚಂದ್ರು ಮಾತನಾಡಿ, ʼಇಂಟಿಗ್ರೆಟೆಡ್ ಟೌನ್ ಶಿಪ್ʼ ಕುಣಿಗಲ್ ಭಾವನೆಗೆ ದಕ್ಕೆ ಆಗಿದೆ. 421ಎಕರೆ ಭೂಮಿಯಲ್ಲಿ ಕುದುರೆ ಸ್ಟಡ್ ಫಾರಂ ಕುದುರೆಗಳನ್ನು ಬೆಳೆಸುವುದು ನೂರಾರು ವರ್ಷಗಳಿಂದ ಇದೆ. ಈ ಜಾಗವನ್ನು 1992 ರಲ್ಲಿ ಮಲ್ಯ ಅವರಿಗೆ ಗುತ್ತಿಗೆ ಆಧಾರದ ಮೇಲೆ ಕೊಡಲಾಗಿತ್ತು. ಗುತ್ತಿಗೆ ಮುಗಿದ ಮೇಲೆ ಬಸವರಾಜ್ ಬೊಮ್ಮಾಯಿ ಸರ್ಕಾರ ಪೂನಾವಾಲ ಅವರಿಗೆ ಗುತ್ತಿಗೆಗೆ ಕೊಟ್ಟಿದ್ದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸರ್ಕಾರ ಬಂದ ಮೇಲೆ ಈ ಗುತ್ತಿಗೆಯನ್ನು ಅವಾನತ್ತಿನಲ್ಲಿಟ್ಟು ʼಇಂಟಿಗ್ರೆಟೆಡ್ ಟೌನ್ ಶಿಪ್ʼ ನಿರ್ಮಾಣ ಮಾಡಲು ಮುಂದಾಗಿದೆ. ಗಂಗರ ಕಾಲದಿಂದಲ್ಲಿ ಯುದ್ದದ ಕುದುರೆಯನ್ನು ವಿಶ್ರಾಂತಿಗೆ ಬಳಸುತಿದ್ದರು. ನಂತರ ಟಿಪ್ಪು ಯುದ್ದದ ಕುದುರೆಗಳನ್ನು ಸಾಕಲು ಬಳಸುತಿದ್ದರು. ನಂತರ ಏಷ್ಯಾದಲ್ಲೆ ಎರಡನೇ ಸ್ಥಾನದಲ್ಲಿ ಕುಣಿಗಲ್ ಸ್ಟಡ್ ಫಾರಂ ಉಳಿದಿದೆ. ಅದನ್ನು ಉಳಿಸಿಕೊಳ್ಳಬೇಕಾದದ್ದು ನಮ್ಮ ಜವಬ್ದಾರಿ ಎಂದರು.

ಸ್ಟಡ್ ಫಾರಂನಲ್ಲಿ 421ಎಕರೆ ಭೂಮಿಯಿದ್ದು, ಈ ಭೂಮಿಯನ್ನು ಕಬಳಿಸಲು ಹುನ್ನಾರ ನಡೆದಿದೆ. ಅದು ಯಾರು ಎಂದು ನಿಮಗೆ ಗೊತ್ತಿದೆ. ಸಿಎಂ ಸಿದ್ದರಾಮಯ್ಯ ಅವರು ಪ್ರಜಾ ಪ್ರಭುತ್ವದ ಹಿನ್ನಲೆಯಲ್ಲಿ ಬಂದವರು. ಹಾಗಾಗಿ ʼಇಂಟಿಗ್ರೆಟೆಡ್ ಟೌನ್ ಶಿಪ್ʼ ನಿರ್ಮಾಣವನ್ನು ತಡೆಯಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಕುಣಿಗಲ್ ಕುದುರೆ ಫಾರಂ ಉಳಿವಿಗಾಗಿ ಹೋರಾಟ ಸಮಿತಿಯ ಜಿ.ಕೆ. ನಾಗಣ್ಣ, ಬೇಗೂರು ಹುಚ್ಚೇಗೌಡ, ಕೆಂಪೀರೇಗೌಡ, ವಿ.ಶಿವಶಂಕರ್, ಅಬ್ದುಲ್‌ಮುನಾಫ್, ಆನಂದ್‌ಪಟೇಲ್, ರಘುಜಾಣಗೆರೆ ಇತಿಹಾಸ ತಜ್ಞ ಪ್ರೊ. ಪಿ.ವಿ.ನಂಜರಾಜ ಅರಸು, ಮಾಜಿ ಸಚಿವೆ ಬಿ.ಟಿ. ಲಲಿತಾನಾಯ್ಕ್, ಮಾಜಿ ಶಾಸಕ ಬಿ.ಬಿ. ರಾಮಸ್ವಾಮಿಗೌಡ, ಸಾಹಿತಿ ತಲಕಾಡು ಚಿಕ್ಕರಂಗೇಗೌಡ, ಜಿ.ಪಂ ಮಾಜಿ ಅಧ್ಯಕ್ಷ ವೈ.ಎಚ್. ಹುಚ್ಚಯ್ಯ, ಎನ್.ಆರ್.ಲಕ್ಷ್ಮಣನಾರಾಯಣ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಎಚ್.ಡಿ. ರಾಜೇಶ್‌ಗೌಡ, ಮಂಡಲ ಅಧ್ಯಕ್ಷ ಕೆ.ಎಸ್. ಬಲರಾಮ್, ತಾಲೂಕು ಜೆಡಿಎಸ್ ಅಧ್ಯಕ್ಷ ಜಗದೀಶ್, ವಕೀಲ ಸಂಘದ ಅಧ್ಯಕ್ಷ ಬಾಬು, ಪುರಸಭೆ ಮಾಜಿ ಅಧ್ಯಕ್ಷ ಕೆ.ಎಲ್. ಹರೀಶ್ ಸೇರಿದಂತೆ ಹಲವರು ಭಾಗವಹಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಪಂಚಮಿತ್ರ ಪೋರ್ಟಲ್ ಲೋಕಾರ್ಪಣೆ

ರಾಜ್ಯದ ಎಲ್ಲ ಗ್ರಾಮ ಪಂಚಾಯತಿಗಳಲ್ಲಿ ಹಲವಾರು ಸೇವೆಗಳನ್ನು ಒದಗಿಸಲು ಗ್ರಾಮೀಣಾಭಿವೃದ್ಧಿ ಮತ್ತು...

ಚಿಕ್ಕಬಳ್ಳಾಪುರ | ಶಾಲೆಗಳಲ್ಲಿ ಮಕ್ಕಳ ರಕ್ಷಣಾ ಸಮಿತಿ ರಚನೆ ಕಡ್ಡಾಯ: ನ್ಯಾ. ನೇರಳೆ ವೀರಭದ್ರಯ್ಯ ಭವಾನಿ

ಮಕ್ಕಳ ಸುರಕ್ಷತೆ ಹಾಗೂ ಸಮಸ್ಯೆಗಳ ಪರಿಹಾರಕ್ಕಾಗಿ ಸರ್ಕಾರದ ಆದೇಶದಂತೆ ಪ್ರತಿ ಶಾಲೆಯಲ್ಲಿಯೂ...

ಚಿಕ್ಕಬಳ್ಳಾಪುರ | ವೀರಪ್ಪ ಮೊಯ್ಲಿ ವಿರಚಿತ ‘ವಿಶ್ವಸಂಸ್ಕೃತಿಯ ಮಹಾಯಾನ’ ಪುಸ್ತಕ ಬಿಡುಗಡೆ

ವೀರಪ್ಪ ಮೊಯ್ಲಿ ಮರೆಯಲಾರದ ರಾಜಕಾರಣಿಯೂ ಹೌದು ಮತ್ತು ಲೇಖಕರೂ ಹೌದು ಎಂದು...

ಬೆಂಗಳೂರು | ಕುಡಿಯುವ ನೀರಿಗಾಗಿ ಬಂಗಾರಪ್ಪನಗರ ನಿವಾಸಿಗಳ ಪರದಾಟ

ರಾಜ್ಯ ರಾಜಧಾನಿ ಬೆಂಗಳೂರಿನ ಹಲವೆಡೆ ನೀರಿಗೆ ಹಾಹಾಕಾರ ಶುರುವಾಗಿದೆ. ಇದೀಗ, ರಾಜರಾಜೇಶ್ವರಿ...