ತುಮಕೂರು | ಕಂದಾಯ ಇಲಾಖೆ ನಿರ್ಲಕ್ಷ್ಯ; ಶವ ಸಂಸ್ಕಾರಕ್ಕೆ ಪರಿಶಿಷ್ಟರ ಪರದಾಟ

Date:

ಕುಣಿಗಲ್ ತಾಲೂಕಿನ ಹುಲಿಯೂರುದುರ್ಗ ಹೋಬಳಿ ನೀಲಸಂದ್ರ ಗ್ರಾಮದಲ್ಲಿ ಅಧಿಕಾರಿಗಳು ಸ್ಮಶಾನಕ್ಕೆ ಜಾಗ ಗುರುತಿಸಿಲ್ಲ. ಹೀಗಾಗಿ, ಪರಿಶಿಷ್ಟರು ತಮ್ಮ ಸಮುದಾಯದಲ್ಲಿ ಮೃತಪಟ್ಟವರ ಸಂಸ್ಕಾರಕ್ಕೆ ಪರದಾಡುವಂತಾಗಿದೆ.

ನ.12ರಂದು ನರಸಿಂಹಯ್ಯ (65) ಎಂಬುವವರು ಮೃತಪಟ್ಟಿದ್ದರು. ಸೋಮವಾರ ಬೆಳಗ್ಗೆ ಸಂಬಂಧಿಕರು ಸಾರ್ವಜನಿಕ ಸ್ಮ ಶಾನ ಎಂದು ಗುರುತಿಸಲಾದ ಜಾಗದಲ್ಲಿ ಅಂತ್ಯಕ್ರಿಯೆಗಾಗಿ ಮುಂದಾದಾಗ, ಜಮೀನು ತಮಗೆ ಸೇರಿದ್ದು ಎಂದು ವ್ಯಕ್ತಿಯೊಬ್ಬರು ಅಂತ್ಯಕ್ರಿಯೆಗೆ ಅವಕಾಶ ನೀಡಲಿಲ್ಲ. ಹೀಗಾಗಿ ಮೃತರ ಸಂಬಂಧಿಕರು ಅಧಿಕಾರಿಗಳ ಗಮನಕ್ಕೆ ತಂದರು.

ಕಂದಾಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಬಂದು ದಾಖಲಾತಿ  ಪರಿಶೀಲಿಸಿದರೂ ವಿವಾದ ಬಗೆಹರಿಸಲಾಗಲಿಲ್ಲ. ಸಂಬಂಧಿಕರು ಗ್ರಾಮದ ಕಾಡಿನ ಅಂಚಿನಲ್ಲಿ ಅಂತ್ಯಕ್ರಿಯೆ ನಡೆಸಿದರು. ಕಂದಾಯ ಇಲಾಖೆಯಿಂದ ಸರ್ವೆ ನಂ. 30-2ರಲ್ಲಿ ಸಾರ್ವಜನಿಕ ಸ್ಮಶಾನಕ್ಕೆ 16ಗುಂಟೆ ಜಮೀನು ಮಂಜೂರಾಗಿದೆ. ಹದ್ದುಬಸ್ತು ನಿಗದಿ ಮಾಡಿಕೊಡುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಕಂದಾಯ ಇಲಾಖೆಯಿಂದ ಸಾರ್ವಜನಿಕ ಸ್ಮಶಾನಕ್ಕೆ ಮಂಜೂರಾದ ಜಾಗವನ್ನು ಗುರುತಿಸಿ, ಗ್ರಾಮ ಪಂಚಾಯಿತಿ ವಶಕ್ಕೆ ನೀಡುವಲ್ಲಿ, ಕಂದಾಯ ಇಲಾಖೆ ವಿಫಲವಾಗಿದೆ. ಸ್ಥಳವನ್ನು ವಶಕ್ಕೆ ಪಡೆದು ಸ್ಮಶಾನದ ಜಾಗವನ್ನು ಸಂರಕ್ಷಣೆ ಮಾಡಿ, ಅಭಿವೃದ್ಧಿ ಪಡಿಸುವಲ್ಲಿ ಗ್ರಾಮ ಪಂಚಾಯಿತಿ ಅಧಿಕಾರಿಗಳು ವಿಫಲರಾದ ಕಾರಣ ಪರಿಶಿಷ್ಟರು ಮೃತಪಟ್ಟಾಗ ಅಂತ್ಯಕ್ರಿಯೆಗೆ ಸಮಸ್ಯೆಯಾಗುತ್ತಿದೆ ಎಂದು ದಲಿತ ಮುಖಂಡರು ದೂರಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ತಹಸೀಲ್ದಾರ, ವಿಶ್ವನಾಥ್‌, ಈ ಹಿಂದೆ ಇದ್ದ ಸರ್ವೇಯರ್ ಸ್ಮಶಾನದ ಜಾಗವನ್ನು ಖಾಸಗಿ ಹಿಡುವಳಿದಾರರ ಜಮೀನಿಗೆ ಸ್ಕೇಚ್ ಮಾಡಿಕೊಟ್ಟ ಕಾರಣ ಸಮಸ್ಯೆಯಾಗಿದೆ. ಬೇರೆ ಜಾಗ ಗುರುತಿಸಿ ಮಂಜೂರಾತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹೇಮಾವತಿ ಲಿಂಕ್ ಕೆನಾಲ್‌ ಯೋಜನೆಗೆ ವಿರೋಧ; ಜೂನ್ 25 ರಂದು ತುಮಕೂರು ಜಿಲ್ಲೆ ಬಂದ್

ತುಮಕೂರು ಜಿಲ್ಲೆಗೆ ನೀರು ಒಗಿಸುತ್ತಿರುವ ಹೇಮಾವತಿ ಎಡದಂಡೆ ನಾಲೆಗೆ ಲಿಂಕ್‌ ಕೆನಾಲ್...

ಚಿತ್ರದುರ್ಗ | ಕೊಲೆ ಪ್ರಕರಣ: ನಟ ದರ್ಶನ್ ವಿರುದ್ಧ ಪ್ರತಿಭಟನೆ

ನಟ ದರ್ಶನ್‌ ಮತ್ತು ಆತನ ಗ್ಯಾಂಗ್‌ನಿಂದ ಹತ್ಯೆಯಾದ ರೇಣುಕಾಸ್ವಾಮಿ ಸಾವಿಗೆ ನ್ಯಾಯ...

ಉಡುಪಿ‌-ಕಾಸರಗೋಡು 400 KV ವಿದ್ಯುತ್ ಲೈನ್ ಅಳವಡಿಕೆಗೆ ಗ್ರಾಮಸ್ಥರ ವಿರೋಧ

ಉಡುಪಿ ಮತ್ತು ಕಾಸರಗೋಡು ನಡುವೆ 400 KV ವಿದ್ಯುತ್‌ ಲೈನ್ ಅಳವಡಿಕೆ...

ದಾವಣಗೆರೆ | ಪಾರ್ಕ್‌ನಲ್ಲಿ ಕಸ ವಿಲೇವಾರಿ ಘಟಕ ನಿರ್ಮಾಣಕ್ಕೆ ಪಾಲಿಕೆ ಚಿಂತನೆ; ನಿವಾಸಿಗಳ ಪ್ರತಿಭಟನೆ

ದಾವಣಗೆರೆ ಮಹಾನಗರ ಪಾಲಿಕೆಯು 41ನೇ ವಾರ್ಡ್‌ನಲ್ಲಿರುವ ಉದ್ಯಾನವನದಲ್ಲಿ ಕಸ ವಿಲೇವಾರಿ ಘಟಕ...