ತುಮಕೂರು | ಗಾಳಿಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು

Date:

Advertisements

ರಾಜ್ಯದ ಹಲವೆಡೆ ಧಾರಾಕಾರ ಮಳೆಯಾಗುತ್ತಿದ್ದು, ತುಮಕೂರಿನಲ್ಲಿ ಶುಕ್ರವಾರ ಸಂಜೆ ಸುರಿದ ಮಳೆಗೆ ಮರ ಸೇರಿದಂತೆ ಲೈಟ್‌ಕಂಬ್‌ಗಳು ನೆಲಕ್ಕುರುಳಿವೆ.

ತುಮಕೂರಿನ ರೈಲ್ವೆ ನಿಲ್ದಾಣದ ಮುಂಭಾಗ ಹಾಗೂ ನಿಲ್ದಾಣದ ರಸ್ತೆಯಲ್ಲಿ ಮರಗಳು ಬುಡಸಮೇತ ಬಿದ್ದುಹೋಗಿವೆ. ಬಿರುಗಾಳಿ ಸಹಿತ ಮಳೆಗೆ ನಾಲ್ಕು ವಿದ್ಯುತ್ ಕಂಬಗಳು ಕೂಡ ರಸ್ತೆಗೆ ಬಿದ್ದಿವೆ. ಈ ವೇಳೆ, ವಿದ್ಯುತ್ ಪ್ರವಹಿಸುತ್ತಿತ್ತು ಎನ್ನಲಾಗಿದೆ.

ಮಳೆಗೆ ಏಕಾಏಕಿ ವಿದ್ಯುತ್ ಕಂಬಗಳು ಧರೆಗುರುಳಿದ ಕಾರಣ ಅಲ್ಲಿಯೇ ಫುಟ್‌ಪಾತ್‌ಗಳಲ್ಲಿ ವ್ಯಾಪಾರ ಮಾಡುತ್ತಿದ್ದ ಬೀದಿಬದಿ ವರ್ತಕರು ಜೀವ ಬಿಗಿ ಹಿಡಿದು ಅಲ್ಲಿಂದ ಓಡಿ ಹೋಗಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ, ಅನಾಹುತ ಸಂಭವಿಸಿಲ್ಲ.

Advertisements

ರೈಲ್ವೆ ನಿಲ್ದಾಣದ ಮುಂಭಾಗದಲ್ಲೇ ವಿದ್ಯುತ್ ಕಂಬಗಳು ಬಿರುಗಾಳಿಗೆ ಅರ್ಧಕ್ಕೆ ಮುರಿದು ಎಲ್‌ಐಸಿ ಕಚೇರಿ ಕಡೆಗೆ ಹೋಗುವ ರಸ್ತೆಗೆ ವಿದ್ಯುತ್ ತಂತಿಗಳ ಸಮೇತ ಅಡ್ಡಲಾಗಿ ಬಿದ್ದಿದ್ದರಿಂದ ಈ ರಸ್ತೆಯನ್ನು ಬಂದ್ ಮಾಡಲಾಗಿತ್ತು. ಪ್ರವಾಸಿ ಮಂದಿರದ ಮುಂಭಾಗದಲ್ಲಿರುವ ವಸತಿಗೃಹಗಳ ಪಕ್ಕದಲ್ಲಿದ್ದ ಮರ ವಿದ್ಯುತ್ ತಂತಿಗಳ ಮೇಲೆ ಬಿದ್ದಿದ್ದರಿಂದ ಸಮೀಪದಲ್ಲೇ ಇದ್ದ 2 ವಿದ್ಯುತ್ ಕಂಬ ಧರೆಗುರುಳಿವೆ. ಈ ಮಾರ್ಗದಲ್ಲಿ ವ್ಯಾಪಾರ ಮಾಡುತ್ತಿದ್ದ ಫುಟ್‌ಪಾತ್ ವ್ಯಾಪಾರಿಗಳು ತಕ್ಷಣ ತಮ್ಮ ಜೀವ ರಕ್ಷಣೆಗಾಗಿ ಅಂಗಡಿಗಳಿಂದ ಹೊರ ಓಡಿ ಬಂದಿದ್ದಾರೆ. ಆದರೆ ಯಾವುದೇ ರೀತಿಯ ಅನಾಹುತ ಸಂಭವಿಸಿಲ್ಲ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | 65 ಕೆಜಿಗೂ ಅಧಿಕ ಗಾಂಜಾ ವಶ ; ಇಬ್ಬರ ಬಂಧನ

ಘಟನೆಯ ಸುದ್ದಿ ತಿಳಿದ ಕೂಡಲೇ ಮಹಾನಗರ ಪಾಲಿಕೆ, ಪೊಲೀಸ್ ಇಲಾಖೆ, ಬೆಸ್ಕಾಂ ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಧರೆಗುರುಳಿರುವ ಮರ ಮತ್ತು ವಿದ್ಯುತ್ ಕಂಬಗಳನ್ನು ತೆರವುಗೊಳಿಸುವ ಕಾರ್ಯದಲ್ಲಿ ತೊಡಗಿದ್ದು ಕಂಡು ಬಂತು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ರೈತನ ಕೃಷಿ ಚಟುವಟಿಕೆಗೆ ಜೇನು ಸಾಕಾಣಿಕೆ ವರದಾನ : ಪುಷ್ಪಲತಾ

ರೈತರು ತಮ್ಮ ಕೃಷಿ ಚಟುವಟಿಕೆಯಲ್ಲಿ ಪ್ರಮುಖ ಘಟವಾದ ಪರಾಗಸ್ಪರ್ಶ ಕ್ರಿಯೆಗೆ...

ಗುಬ್ಬಿ | ಎಂ.ಎನ್.ಕೋಟೆ ಗ್ರಾಪಂ ಉಪಾಧ್ಯಕ್ಷರಾಗಿ ಸಿದ್ದಗಂಗಮ್ಮ ಅವಿರೋಧ ಆಯ್ಕೆ

ಗುಬ್ಬಿ ತಾಲ್ಲೂಕಿನ ನಿಟ್ಟೂರು ಹೋಬಳಿ ಎಂ.ಎನ್.ಕೋಟೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸ್ಥಾನಕ್ಕೆ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಗುಬ್ಬಿ | ಹಿಂದುಳಿದ ಸಮುದಾಯಕ್ಕೆ ಹೊಸ ದಿಕ್ಕು ತೋರಿದ ‘ಅರಸು‘ : ತಹಶೀಲ್ದಾರ್ ಆರತಿ.ಬಿ

ಶೋಷಣೆ ಮುಕ್ತ ಹಾಗೂ ಸಮಾನತೆಯ ಸಮಾಜ ನಿರ್ಮಾಣ ಮಾಡಿದ ಡಿ.ದೇವರಾಜ...

Download Eedina App Android / iOS

X