ತುಮಕೂರು | ಎಸ್‌ಸಿ/ಎಸ್‌ಟಿ ಬಾಲಕರ ವಸತಿ ನಿಲಯದ ವಿದ್ಯಾರ್ಥಿಗಳ ಪ್ರತಿಭಟನೆ

Date:

ತುಮಕೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಎಸ್‌ಸಿ, ಎಸ್‌ಟಿ ಬಾಲಕರ ವಸತಿ ನಿಲಯದ ವಿದ್ಯಾರ್ಥಿಗಳು ಹಾಸ್ಟೆಲ್ ಅವ್ಯವಸ್ಥೆಗೆ ಬೆಸತ್ತು  ಹಾಸ್ಟೆಲ್‌ಗೆ ಅಗತ್ಯ ಸೌಲಭ್ಯ ಕಲ್ಪಿಸುವಂತೆ ಒತ್ತಾಯಿಸಿ ಶನಿವಾರ (ನ.6) ರಾತ್ರಿ ದಿಢೀರ್ ಪ್ರತಿಭಟನೆ ನಡೆಸಿದ್ದಾರೆ.

- Advertisement -

ವಿವಿ ಮುಂಭಾಗ ರಾತ್ರೋ ರಾತ್ರಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು ಹಾಸ್ಟೆಲ್ ಅವ್ಯವಸ್ಥೆ ವಿರುದ್ಧ ಧಿಕ್ಕಾರ ಕೂಗಿದರು. ಸ್ಥಳಕ್ಕೆ ವಿವಿ ಕುಲಪತಿಗಳು ಬಾರದ ಹಿನ್ನೆಲೆ ಬೆಸರಗೊಂಡ ವಿದ್ಯಾರ್ಥಿಗಳು ಡಿಸಿ  ಕಚೇರಿಗೆ ರಾತ್ರಿಯೇ ತೆರಳಲು ಮುಂದಾದರು. ಡಿಸಿ ಕಚೇರಿಗೆ ತೆರಳುವ ಮಧ್ಯೆ ಶಿವಕುಮಾರ ಸ್ವಾಮೀಜಿ ವೃತ್ತದಲ್ಲಿ  ಎಸ್‌ಪಿ ಅಶೋಕ್ ಕೆ.ವಿ ವಿದ್ಯಾರ್ಥಿಗಳನ್ನು ತಡೆದು ಪ್ರತಿಭಟನೆಯನ್ನು ಶಾಂತಗೊಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಡಿಸಿ ಹಾಗೂ ಕುಲಪತಿಗಳೊಂದಿಗೆ ನಾಳೆ ಸಭೆ ನಡೆಸಿ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದರು. ಈ  ಹಿನ್ನೆಲೆ ವಿದ್ಯಾರ್ಥಿಗಳು ಪ್ರತಿಭಟನೆ ಕೈಬಿಟ್ಟು ನಿಲಯಕ್ಕೆ ವಾಪಾಸ್ ತೆರಳಿದರು. ಪ್ರತಿಭಟನೆ ನಡೆದರೂ ಕಿವಿಗೊಡದ ವಿವಿ ಆಡಳಿತ ಮಂಡಳಿ ವರ್ತನೆಗೆ ಬೇಸತ್ತ ವಿದ್ಯಾರ್ಥಿಗಳು ಡಿಸಿ ಕಚೇರಿಗೆ ತೆರಳಲು ಮುಂದಾದರೂ ಸ್ಥಳೀಯ ಠಾಣೆ ಪೊಲೀಸರಿಗೆ ಮಾಹಿತಿಯೇ ಇರಲಿಲ್ಲ.

ಹಾಸ್ಟೆಲ್‌ನಲ್ಲಿ 250ವಿದ್ಯಾರ್ಥಿಗಳಿದ್ದು ಕೇವಲ 8 ಶೌಚಾಲಯಗಳಿವೆ. ಶೌಚಾಲಯಗಳ ಬಾಗಿಲುಗಳು ಮುರಿದು ಹೋಗಿವೆ. ಅದರ ದುರಸ್ತಿ ಕಾರ್ಯ ಮಾತ್ರ ಆಗಿಲ್ಲ. ಶೌಚದ ಪಿಟ್ ಗುಂಡಿಗಳು ತುಂಬಿ ಉಕ್ಕಿ ವಾಸನೆ ಬೀರುತ್ತಿದೆ. ಇದರಿಂದ ಮೂಗು ಮುಚ್ಚಿಕೊಂಡೇ ಓಡಾಡುವಂತಾಗಿದೆ. ರೋಗದ ಭೀತಿ ಎದುರಾಗಿದೆ ಎಂದು ವಿದ್ಯಾರ್ಥಿಗಳು ಅಸಮಾಧಾನ ವ್ಯಕ್ತಪಡಿಸಿದರು.

ಪ್ರತಿದಿನ ಮೆನು ಪ್ರಕಾರ ಊಟ ನೀಡುವುದಿಲ್ಲ. ಕಳಪೆ ಗುಣಮಟ್ಟದ ಆಹಾರ ಸಾಮಗ್ರಿಗಳನ್ನು ಬಳಸಿ ಊಟ  ತಯಾರಿಸುತ್ತಾರೆ. ಕೆಮಿಕಲ್ ಮಿಶ್ರಿತ ಅಡುಗೆ ಎಣ್ಣೆ ಉಪಯೋಗ ಮಾಡುತ್ತಿದ್ದಾರೆ. ಇದರಿಂದ ವಿದ್ಯಾರ್ಥಿಗಳ ಆರೋಗ್ಯ ಕೆಡುತ್ತಿದೆ. ವಿದ್ಯಾರ್ಥಿಗಳಿಗೆ ಗಂಟಲು ಮತ್ತು ಚರ್ಮ ಸಮಸ್ಯೆ ಕಾಡುತ್ತಿದೆ. ಪೌಷ್ಠಿಕ ಆಹಾರ ಸಿಗದೆ ವಿದ್ಯಾರ್ಥಿಗಳು ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಲೇಬಲ್ ಇಲ್ಲದ ಅಕ್ಕಿ ಚೀಲ, ಸಣ್ಣ ಗಾತ್ರದ ಕೊಳೆತ ತರಕಾರಿ ಬಳಸಲಾಗುತ್ತಿದೆ. ಇದರಿಂದ ವಿದ್ಯಾರ್ಥಿಗಳಲ್ಲಿ ಅಪೌಷ್ಠಿಕತೆ ಕಾಡುತ್ತಿದೆ. ನಮ್ಮ ಸಮಸ್ಯೆ ಕೇಳೋರಿಲ್ಲ. ಈ ಕುರಿತು ಹಾಸ್ಟೆಲ್ ವಾರ್ಡನ್‌ಗೆ ಹಲವು ಬಾರಿ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ವಿದ್ಯಾರ್ಥಿಗಳು ದೂರಿದರು.

ಹಾಸ್ಟೆಲ್ ನಿರ್ವಹಣೆ ಹೊತ್ತಿರುವ ಡಾ. ಚಿಕ್ಕಣ್ಣ ಅವರು ಜವಬ್ದಾರಿಯನ್ನು ಸರಿಯಾಗಿ ನಿರ್ವಹಣೆ ಮಾಡುತ್ತಿಲ್ಲ. ಬೆಳಗಿನ ನಿತ್ಯಕರ್ಮಕ್ಕೆ 250ಮಂದಿ ವಿದ್ಯಾರ್ಥಿಗಳಿಗೆ ಕೇವಲ 8 ಶೌಚಾಗೃಹಗಳಿದ್ದೂ ಶೌಚಾಗೃಹ ಇಡೀ ಹಾಸ್ಟೆಲ್ ವ್ಯವಸ್ಥೆಗೆ ಕನ್ನಡಿಹಿಡಿದಂತಿದೆ ಎಂದು ವಿದ್ಯಾರ್ಥಿಗಳು ದೂರಿದರು. ಪ್ರತಿಭಟನೆಯಲ್ಲಿ ವಿವಿ ಹಾಸ್ಟೆಲ್ ನೂರಾರು ವಿದ್ಯಾರ್ಥಿಗಳು ಭಾಗಿಯಾಗಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ತುಮಕೂರು | ರೈತರ ಸಂಕಷ್ಟಕ್ಕೆ ಸ್ಪಂದಿಸಿ : ವೈಜ್ಞಾನಿಕ ಬರ ಪರಿಹಾರಕ್ಕೆ ಆಗ್ರಹ

ಭೀಕರ ಬರಗಾಲದಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದರೂ ಕೇಂದ್ರ ಮತ್ತು ರಾಜ್ಯ...

ತುಮಕೂರು | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ಪಡೆಯಬೇಕು ಹಾಗೂ ಇದುವರೆಗೆ...