ತುಮಕೂರು-ರಾಯದುರ್ಗ ರೈಲ್ವೆ ಯೋಜನೆ; ವರ್ಷದೊಳಗೆ ಕಾಮಗಾರಿ ಪೂರ್ಣಗೊಳಿಸಲು ಡಿಸಿಎಂ ಸೂಚನೆ

Date:

ತುಮಕೂರು-ರಾಯದುರ್ಗ ರೈಲ್ವೆ ಯೋಜನೆಯ ಸಂಬಂಧಿಸಿದಂತೆ ಪಾವಗಡದಿಂದ ತುಮಕೂರುವರೆಗಿನ ಕಾಮಗಾರಿಯನ್ನು ವರ್ಷದೊಳಗೆ ಪೂರ್ಣಗೊಳಿಸಲು ಗುತ್ತಿಗೆದಾರರಿಗೆ ಸೂಚಿಸಿರುವುದಾಗಿ ಉಪ ಮುಖ್ಯಮಂತ್ರಿ ಡಾ: ಜಿ. ಪರಮೇಶ್ವರ ತಿಳಿಸಿದ್ದಾರೆ.

- Advertisement -

ತುಮಕೂರು-ರಾಯದುರ್ಗ ರೈಲ್ವೆ ಮಾರ್ಗದ ಪಾವಗಡ ರೈಲು ನಿಲ್ದಾಣ ಕಾಮಗಾರಿಯನ್ನು ಸೋಮವಾರ ಪರಿಶೀಲಿಸಿದ ಅವರು, ಸಂಬಂಧಿಸಿದ ಅಧಿಕಾರಿಗಳು ಹಾಗೂ ಗುತ್ತಿಗೆದಾರರೊಂದಿಗೆ ಚರ್ಚಿಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಾರ್ಪೊರೇಟ್‌ ಕಾಳಗ | ಮಸ್ಕ್‌ನ ಸ್ಟಾರ್‌ಲಿಂಕ್ ಮಣಿಸಿ ಅಂಬಾನಿಯ...

ಎಲಾನ್ ಮಸ್ಕ್ ಒಡೆತನದ ‘ಸ್ಟಾರ್‌ಲಿಂಕ್’ ಉಪಗ್ರಹ ಇಂಟರ್ನೆಟ್ ಭಾರತಕ್ಕೆ ಕಾಲಿಡುತ್ತಿದ್ದಂತೆ ರಿಲಯನ್ಸ್ ಜಿಯೋದ ಮಾರುಕಟ್ಟೆ ಏಕಸ್ವಾಮ್ಯಕ್ಕೆ ಭಾರಿ ಪೈಪೋಟಿ ಎದುರಾಗುವಂತೆ ಕಾಣುತ್ತಿದೆ. ಈ ಬೆನ್ನಲ್ಲೇ, ರಾಷ್ಟ್ರೀಯ ಭದ್ರತೆ ಮತ್ತು ದತ್ತಾಂಶ ಸುರಕ್ಷತೆಯ ನೆಪವೊಡ್ಡಿ...

ಮೈಸೂರಿನ ಬೀದಿಗಳಲ್ಲಿ ಕ್ರಿಕೆಟ್ ಆಡಿ ಬೆಳೆದ ಮನ್ವಂತ್‌ಕುಮಾರ್, ಈಗ...

ಮೈಸೂರಿನ ಗಲ್ಲಿಗಳಿಂದ ಕಾಲೇಜ್ ಕ್ರಿಕೆಟ್ ಮೈದಾನಕ್ಕೆ ಜಿಗಿದ ಯುವಕನೊಬ್ಬ ಕರ್ನಾಟಕದ ರಣಜಿ ತಂಡದಲ್ಲಿ ಸ್ಥಾನ ಪಡೆದು, ಐಪಿಎಲ್ ತಂಡದ ಗಮನ ಸೆಳೆದು, ದೇಶೀಯ ಕ್ರಿಕೆಟ್‌ನಲ್ಲಿ ಶತಕ ಸಿಡಿಸಿ, ಕರ್ನಾಟಕ ಕ್ರಿಕೆಟ್‌ನ ಭರವಸೆಯ ಆಟಗಾರನಾಗಿ...

ಬೆಳಗಾವಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬು ಬೆಂಕಿಗಾಹುತಿ:...

ಬರಗಾಲದಿಂದ ಬೆಳೆ ನಷ್ಟ ಅನುಭವಿಸಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಇದೀಗ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಮತ್ತೊಂದು ಹೊಡೆತ ನೀಡಿದೆ. ವರ್ಷವಿಡೀ ಕಷ್ಟಪಟ್ಟು ಬೆಳೆಸಿದ ಕಬ್ಬು ಕಟಾವಿಗೆ ಬರುವ ಹೊತ್ತಿನಲ್ಲಿ ಬೆಂಕಿಗೆ ಆಹುತಿಯಾಗಿದ್ದು,...

ತುಮಕೂರು-ರಾಯದುರ್ಗ ರೈಲ್ವೆ ಯೋಜನೆ ಕಾಮಗಾರಿ ಈಗಾಗಲೇ ಬಹುತೇಕ ಪೂರ್ಣಗೊಂಡಿದ್ದು, ಬಳ್ಳಾರಿಯಿಂದ ಪಾವಗಡದವರೆಗೆ ಪ್ರಾಯೋಗಿಕವಾಗಿ ರೈಲನ್ನು ಓಡಿಸಲಾಗಿದೆ. ಪಾವಗಡದಿಂದ ತುಮಕೂರಿನವರೆಗಿನ ಕಾಮಗಾರಿ ಬೇರೆ ಬೇರೆ ಕಾರಣಗಳಿಂದ ವಿಳಂಬವಾಗಿತ್ತು. ಇದೀಗ ಅದನ್ನೂ ಬಗೆಹರಿಸಲಾಗಿದ್ದು, ಕಾಮಗಾರಿಯನ್ನು ತ್ವರಿತವಾಗಿ ವರ್ಷದೊಳಗಾಗಿ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚಿಸಿರುವುದಾಗಿ ಅವರು ಹೇಳಿದರು. ಮ

2007ರಲ್ಲಿ ಲಾಲೂ ಪ್ರಸಾದ್ ಯಾದವ್ ಅವರು ಕೇಂದ್ರ ರೈಲ್ವೆ ಸಚಿವರಾಗಿದ್ದ ಸಂದರ್ಭದಲ್ಲಿ ಆಗಿನ ಮಡಕಶಿರಾ ಶಾಸಕ ರಘುವೀರರೆಡ್ಡಿ, ಪಾವಗಡ ಶಾಸಕ ವೆಂಕಟರಮಣಪ್ಪ ಅವರೊಂದಿಗೆ ರೈಲ್ವೆ ಸಚಿವರನ್ನು ಭೇಟಿಯಾಗಿ ತುಮಕೂರು-ರಾಯದುರ್ಗ ರೈಲು ಮಾರ್ಗ ನೀಡುವಂತೆ ಕೋರಲಾಗಿತ್ತು. ಈ ಹಿನ್ನೆಲೆಯಲ್ಲಿ ಅಂದಿನ ಸರ್ಕಾರದ ರೈಲ್ವೆ ಆಯವ್ಯಯ ಪಿಂಕ್ ಬುಕ್‌ನಲ್ಲಿ ಈ ಯೋಜನೆಗೆ 98 ಕೋಟಿ ರೂ. ಅಂದಾಜು ವೆಚ್ಚವನ್ನು ನಿಗದಿಗೊಳಿಸಲಾಗಿತ್ತು. ಆನಂತರ ಬಂದ ಸರ್ಕಾರ ಈ ಯೋಜನೆಯನ್ನು ಕೈಗೆತ್ತಿಕೊಂಡು ಕಾರ್ಯರೂಪಕ್ಕೆ ತಂದಿದೆ ಎಂದರು. 

1003435635

ಭೂಸ್ವಾಧೀನ ಇನ್ನಿತರೆ ಕಾರಣಗಳಿಂದಾಗಿ ಈ ಯೋಜನೆ ವಿಳಂಬವಾಗಿದೆ. ಆದರೆ ಸದ್ಯ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಲಾಗಿದ್ದು, ಬಾಕಿ ಕಾಮಗಾರಿಯನ್ನು ತ್ವರಿತವಾಗಿ ಮುಗಿಸುವಂತೆ ಸೂಚಿಸಲಾಗಿದೆ. ಯೋಜನೆಯ ಪ್ರಕಾರ 2028ಕ್ಕೆ ತುಮಕೂರು-ರಾಯದುರ್ಗ ಸಂಪೂರ್ಣ ಮಾರ್ಗ ಪೂರ್ಣಗೊಳ್ಳುವ ಬಗ್ಗೆ ಅಧಿಕಾರಿಗಳು ತಿಳಿಸಿದ್ದು, ಅದಕ್ಕೆ ಮುಂಚಿತವಾಗಿಯೇ 2027ರ ಹೊತ್ತಿಗೆ ಕಾಮಗಾರಿ ಪೂರ್ಣಗೊಳಿಸುವಂತೆ ಸೂಚಿಸಿರುವುದಾಗಿ ಅವರು ತಿಳಿಸಿದರು

ತುಮಕೂರು-ರಾಯದುರ್ಗ ರೈಲ್ವೆ ಯೋಜನೆ ಈ ಭಾಗದ ಜನರಿಗೆ ಅತ್ಯಂತ ಉಪಯುಕ್ತವಾಗಿದೆ ಎಂದು ತಿಳಿಸಿದ ಅವರು, ಬಳ್ಳಾರಿಯಿಂದ ಬೆಂಗಳೂರಿಗೆ ರಸ್ತೆ ಮಾರ್ಗವಾಗಿ ಆಗಮಿಸುವ ಪ್ರಯಾಣಿಕರು ರೈಲು ಮಾರ್ಗದಲ್ಲಿ ಅತೀ ಕಡಿಮೆ ಸಮಯದಲ್ಲಿ ಕ್ರಮಿಸಲು ಅನುಕೂಲವಾಗಿದೆ. ಅಲ್ಲದೆ, ಈ ಭಾಗದ ಹಲವಾರು ಸಮಸ್ಯೆಗಳು ಈ ಯೋಜನೆಯಿಂದ ಬಗೆಹರಿಯಲಿವೆ ಎಂದು ಉಪ ಮುಖ್ಯಮಂತ್ರಿ ಪರಮೇಶ್ವರ ತಿಳಿಸಿದರು.

ತುಂಗಭದ್ರಾ ಬಹುಗ್ರಾಮ ಕುಡಿಯುವ ನೀರಿನ ಯೋಜನೆ : 

ತುಂಗಭದ್ರಾ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ಸಂಬಂಧಿಸಿದಂತೆ ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯ ಅಧೀಕ್ಷಕ ಇಂಜಿನಿಯರ್ ಇಂದ್ರಕುಮಾರ್ ಹಾಗೂ ಕಾರ್ಯಪಾಲಕ ಇಂಜಿನಿಯರ್ ವಾಸುದೇವ್ ಅವರೊಂದಿಗೆ ಚರ್ಚಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಉಪಮುಖ್ಯಮಂತ್ರಿ ಡಾ: ಜಿ. ಪರಮೇಶ್ವರ ಅವರು, ಪಾವಗಡ ತಾಲ್ಲೂಕಿಗೆ ಕುಡಿಯುವ ನೀರಿಗಾಗಿ 2600 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನಗೊಳಿಸಲಾಗಿರುವ ತುಂಗಭದ್ರಾ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿಯಲ್ಲಿ ಕೆಲವು ಸಮಸ್ಯೆಗಳಿದ್ದವು. ಇವುಗಳನ್ನು ಬಗೆಹರಿಸುವ ಸಲುವಾಗಿ ಸಂಬAಧಿಸಿದ ಅಧಿಕಾರಿಗಳಿಂದ ಮಾಹಿತಿ ಪಡೆದಿರುವುದಾಗಿ ತಿಳಿಸಿದರು.

ಸದರಿ ಕುಡಿಯುವ ನೀರಿನ ಯೋಜನೆ ಕಾಮಗಾರಿ ಸಂಬಂಧಿಸಿದಂತೆ ಸರ್ಕಾರದ ಉದ್ದೇಶ ಸಮರ್ಪಕವಾಗಿ ಅನುಷ್ಠಾನಗೊಳ್ಳಬೇಕು. ಈ ನಿಟ್ಟಿನಲ್ಲಿ ಇರುವ ಸಮಸ್ಯೆಗಳನ್ನು ಬಗೆಹರಿಸುವ ಸಂಬಂಧ ಸರ್ಕಾರದ ನೂತನ ನೀರಾವರಿ ಸಚಿವರೊಂದಿಗೆ ಚರ್ಚಿಸಿ ಯೋಜನೆಯ ಸಮರ್ಪಕ ಅನುಷ್ಠಾನಕ್ಕೆ ಕ್ರಮವಹಿಸಲಾಗುವುದು ಎಂದರು. 

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪೊಲೀಸ್ ಅಧೀಕ್ಷಕ ಕೆ.ವಿ. ಅಶೋಕ್, ರೈಲ್ವೆ ಇಲಾಖೆ ಅಧಿಕಾರಿಗಳು ಸೇರಿದಂತೆ ಹಲವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು ದಸರಾ:ಸನ್ಮಾನದ ಹೆಸರಿನಲ್ಲಿ ಪೌರಕಾರ್ಮಿಕರನ್ನು ಕರೆದು ಅವಮಾನಿಸಿದ ಜಿಲ್ಲಾಡಳಿತ!

ತುಮಕೂರು ನಗರದ ಸ್ವಚ್ಛತೆಗಾಗಿ ಹಗಲಿರುಳು ಶ್ರಮಿಸುವ ಪೌರಕಾರ್ಮಿಕರನ್ನು ಸನ್ಮಾನಿಸುವುದಾಗಿ ಕರೆದು, ಬಳಿಕ...

ತುಮಕೂರು ದಸರಾ : ಅಧಿಕಾರಿಗಳ ಕುಟುಂಬಸ್ಥರ ಕಾಲಿನ ಬಳಿ ಮಾಧ್ಯಮದವರಿಗೆ ಆಸನ

 'ತುಮಕೂರು ದಸರಾ' ಸಾಂಸ್ಕೃತಿಕ ವೈಭವ ಕಾರ್ಯಕ್ರಮದಲ್ಲಿ ಅಧಿಕಾರಿಗಳ ಕುಟುಂಬಸ್ಥರು, ರಾಜಕಾರಣಿಗಳ ಹಿಂಬಾಲಕರು...

ತುಮಕೂರು ದಸರಾ: ಹೊರ ರಾಜ್ಯದವರಿಗೆ ವಿಶೇಷ ಆತಿಥ್ಯ- ಸ್ಥಳೀಯರಿಗೆ ಗೇಟಿನಾಚೆ ಆಸನ

ತುಮಕೂರು ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ಕಳೆದ ಒಂದು ವಾರದಿಂದ ನಡೆಯುತ್ತಿರುವ...

ಕೆಪಿಎಸ್‌ಸಿ ಪರೀಕ್ಷಾ ಅಕ್ರಮದ ಆರೋಪಿ ಬಸವರಾಜ್ ಕಿನ್ನಾಳೆ RSS ಪಥಸಂಚಲನದ ಫೋಟೊ ವೈರಲ್

ಕೆಪಿಎಸ್‌ಸಿ ಪರೀಕ್ಷಾ ಅಕ್ರಮ ಪ್ರಕರಣದಲ್ಲಿ ಸಿಐಡಿಯಿಂದ ಬಂಧನಕ್ಕೊಳಗಾಗಿ, ಮಧ್ಯಂತರ ಜಾಮೀನಿನ ಮೇಲೆ...