ತುಮಕೂರು | ಸಿದ್ದರಾಮಯ್ಯ ಐದು ವರ್ಷ ಅಧಿಕಾರ ಪೂರೈಸುತ್ತಾರೆ: ಸಚಿವ ರಾಜಣ್ಣ

Date:

ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಎಲ್ಲಿಯವರೆಗೆ ಶಾಸಕರ ಬೆಂಬಲ, ಹೈಕಮಾಂಡ್ ಆಶೀರ್ವಾದ ಇರುತ್ತದೆಯೋ ಅಲ್ಲಿಯವರೆಗೆ ಮುಖ್ಯಮಂತ್ರಿಯಾಗಿರುತ್ತಾರೆ ಎಂದು ಸಹಕಾರ ಸಚಿವ ಕೆ.ಎನ್ ರಾಜಣ್ಣ ಹೇಳಿದ್ದಾರೆ.

ತುಮಕೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ 5 ವರ್ಷ ಅಧಿಕಾರ ಪೂರೈಸುತ್ತಾರಾ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಚಿವ ರಾಜಣ್ಣ, “ಮುಖ್ಯಮಂತ್ರಿ ಸಿದ್ದರಾಮಯ್ಯನವರು ಏಕೆ 5 ವರ್ಷ ಪೂರೈಸಬಾರದು” ಎಂದು ಮರು ಪ್ರಶ್ನೆ ಕೇಳಿದರು. ಸಿದ್ದರಾಮಯ್ಯ ಐದು ವರ್ಷ ಅಧಿಕಾರ ಪೂರೈಸುತ್ತಾರೆ ಎಂದು ಹೇಳಿದರು.

ಕೊಬ್ಬರಿ ಬೆಲೆ: ಕೇಂದ್ರ ಹೆಚ್ಚಳ ಮಾಡಲಿ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಕೇಂದ್ರ ಸರ್ಕಾರ ಮೊದಲು ಕ್ವಿಂಟಲ್ ಕೊಬ್ಬರಿಗೆ ₹12,000 ಬೆಲೆ ನೀಡಲಿ. ನಂತರ ರಾಜ್ಯ ಸರ್ಕಾರ ₹3,000 ಸೇರಿಸಿ ಕ್ವಿಂಟಾಲ್‌ಗೆ ₹15,000 ನೀಡುತ್ತದೆ. ನಫೆಡ್ ಮೂಲಕ ₹15,000ಕ್ಕೆ ರೈತರಿಂದ ಕೊಬ್ಬರಿ ಖರೀದಿಸಲು ಕೇಂದ್ರ ಸರ್ಕಾರ ಪ್ರಕ್ಯೂರ್‌ಮೆಂಟ್ ಮಾಡಲು ಅನುಮತಿ ನೀಡಬೇಕು. ಪ್ರಕ್ಯೂರ್‌ಮೆಂಟ್ ಮಾಡಿದರೆ ಕಳೆದ ಬಾರಿಯಂತೆ ₹15,000ಕ್ಕೆ ರೈತರಿಂದ ನಫೆಡ್ ಮೂಲಕ ಕೊಬ್ಬರಿ ಖರೀದಿ ನಡೆಯಲಿದೆ. ನಮ್ಮ ಸರ್ಕಾರ ಸದಾ ರೈತರು, ಬಡವರ ಪರವಾಗಿದೆ” ಎಂದರು.

“ಗಣರಾಜ್ಯೋತ್ಸವ ಪೆರೇಡ್‌ನಲ್ಲಿ ಕಳೆದ ವರ್ಷವೂ ಟ್ಯಾಬ್ಲೋನಲ್ಲಿ ನಾರಾಯಣ ಗುರುಗಳ ಭಾವಚಿತ್ರ ನಿರಾಕರಣೆ ಮಾಡಲಾಗಿತ್ತು. ಜನರು ಇದಕ್ಕೆ ಪ್ರತಿಕ್ರಿಯೆಯನ್ನೂ ನೀಡಿದ್ದರು. ರಾಷ್ಟ್ರೀಯ ಹಬ್ಬಗಳಲ್ಲಿ ಸಮಾಜ ಸುಧಾರಕರಿಗೆ ಅನ್ಯಾಯ ಮಾಡುತ್ತಿರುವುದನ್ನು ನೋಡುತ್ತಿದ್ದೇವೆ” ಎಂದರು.

ಮುಂದಿನ ವರ್ಷಗಳಲ್ಲಿ ಗೋಡ್ಸೆ, ಟ್ಯಾಬ್ಲೋ ಬಂದರೂ ಆಶ್ಚರ್ಯ ಪಡಬೇಕಾಗಿಲ್ಲ. ತಳಸಮುದಾಯದಿಂದ ಬಂದಿರುವ ಸಮಾಜ ಸುಧಾರಕ ನಾರಾಯಣಗುರುಗಳ ನಿರಾಕರಣೆ ಮಾಡಿರುವುದು ಕನ್ನಡಿಗರಿಗೆ ಮಾಡಿರುವ ಘೋರ ಅಪಮಾನ” ಎಂದರು.

“ನಮ್ಮ ಕಾಂಗ್ರೆಸ್ ದಲಿತರ ಹೆಸರೇಳಿಕೊಂಡು ರಾಜಕಾರಣ ಮಾಡುತ್ತಿಲ್ಲ. ಎಲ್ಲ ಬಡವರ ಪರವಾಗಿ ನಮ್ಮ ಸರ್ಕಾರ ಕೆಲಸ ಮಾಡುತ್ತಿದೆ. ಬಡವರು, ದಲಿತರು ಸೇರಿದಂತೆ ಎಲ್ಲ ವರ್ಗದ ಶೋಷಿತರ ಪರವಾಗಿದೆ” ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಹೇಳಿಕೆಗೆ ತಿರುಗೇಟು ನೀಡಿದ ಸಚಿವ ಕೆ ಎನ್ ರಾಜಣ್ಣ ಅವರು, “ಕುಮಾರಸ್ವಾಮಿ ಯಾರ ಹೆಸರು ಹೇಳಿಕೊಂಡು ರಾಜಕಾರಣ ಮಾಡುತ್ತಿದ್ದಾರೆ” ಎಂದು ಪ್ರಶ್ನಿಸಿದರು.

“ನಾವು ಇನ್ನೊಬ್ಬರ ಕಡೆ ಒಂದು ಬೊಟ್ಟು ಮಾಡಿ ತೋರಿಸಿ ಟೀಕೆ ಮಾಡಿದರೆ, ಇನ್ನು ಮೂರು ಬೊಟ್ಟುಗಳು ನಮ್ಮ ಕಡೆ ತೋರಿಸುತ್ತವೆ. ಇದನ್ನು ನಾವುಗಳು ಬೇರೆಯವರ ಬಗ್ಗೆ ಮಾತನಾಡುವ ಮುನ್ನ ಅರ್ಥ ಮಾಡಿಕೊಳ್ಳಬೇಕು” ಎಂದರು.

“ಕಾಂಗ್ರೆಸ್ ಸಮುದ್ರ ಇದ್ದಂತೆ. ಸಮುದ್ರಕ್ಕೆ ಶುದ್ಧ ಗಂಗಾ ನದಿಯ ನೀರು ಹರಿದು ಬರುತ್ತದೆ. ಹಾಗೆಯೇ ಚರಂಡಿ ನೀರೂ ಸಹ ಹರಿದು ಬರುತ್ತದೆ. ಹಾಗಾಗಿ ನಮ್ಮ ಪಕ್ಷಕ್ಕೆ ಯಾರೇ ಬಂದರೂ ಸ್ವಾಗತಿಸುತ್ತೇವೆ” ಎಂದು ಸಚಿವ ಕೆ ಎನ್ ರಾಜಣ್ಣ ಸುದ್ದಿಗಾರರಿಗೆ ಹೇಳಿದರು.

“ಕಾಂಗ್ರೆಸ್ ಪಕ್ಷಕ್ಕೆ ಮುದ್ದಹನುಮೇಗೌಡ, ಮಾಜಿ ಸಚಿವ ವಿ ಸೋಮಣ್ಣ ಸೇರಿದಂತೆ ಯಾರೇ ಬಂದರೂ ಸ್ವಾಗತಿಸುತ್ತೇವೆ. ಆದರೆ ತುಮಕೂರು ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿ ಆಯ್ಕೆ ಮಾಡುವ ವಿಚಾರ ಅಂತಿಮವಾಗಿ ಹೈಕಮಾಂಡ್ ನಿರ್ಧಾರಕ್ಕೆ ಬಿಟ್ಟಿದ್ದೇವೆ” ಎಂದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ನಾಲೆಗೆ ನೀರು ಹರಿಸುವಂತೆ ಆಗ್ರಹ

“ಮುದ್ದಹನುಮೇಗೌಡರು ಯಾವುದೇ ರಾಜಕೀಯ ವಿಚಾರದ ಬಗ್ಗೆ ಚರ್ಚೆ ಮಾಡಲು ನನ್ನನ್ನು ಭೇಟಿ ಮಾಡಿಲ್ಲ. ಬ್ಯಾಂಕ್‌ನಿಂದ ಸಾಲ ಪಡೆಯುವ ವಿಚಾರವಾಗಿ ಚರ್ಚಿಸಲು ಭೇಟಿ ಮಾಡಿದ್ದಾರೆ. ಇದಕ್ಕೆ ಯಾವುದೇ ರೀತಿಯ ರಾಜಕೀಯ ಲೇಪ ಬಳಿಯುವ ಅವಶ್ಯಕತೆ ಇಲ್ಲ” ಎಂದರು.

“ನಾನು ಇಂದು ಸಹಕಾರ ಸಚಿವ ಕೆ ಎನ್ ರಾಜಣ್ಣನವರನ್ನು ಭೇಟಿ ಮಾಡಿರುವುದು ಸಾಲ ಪಡೆಯುವ ವಿಚಾರವಾಗಿ ಚರ್ಚಿಸಲು ಅಷ್ಟೇ. ಯಾವುದೇ ರಾಜಕೀಯ ವಿಷಯಗಳ ಕುರಿತು ಮಾತನಾಡಿಲ್ಲ” ಎಂದು ಮಾಜಿ ಸಂಸದ ಎಸ್ ಪಿ ಮುದ್ದಹನುಮೇಗೌಡ ಸ್ಪಷ್ಟಪಡಿಸಿದ್ದಾರೆ.

ಈ ಸಂದರ್ಭದಲ್ಲಿ ಮಾಜಿ ಶಾಸಕ ಹೆಚ್. ನಿಂಗಪ್ಪ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ಲೋಕಸಭಾ ಚುನಾವಣೆ; ಮಾಂಗಲ್ಯ ಧಾರಣೆ ಬಳಿಕ ಮತಗಟ್ಟೆಗೆ ಬಂದು ಮತ ಚಲಾಯಿಸಿದ ದಂಪತಿ

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ, ಚುನಾವಣೆ ಹಾಗೂ ಮತದಾನ ಬಹಳ ಮುಖ್ಯ ಪಾತ್ರ ವಹಿಸುತ್ತದೆ....

ಹಾಸನ ಪೆನ್‌ಡ್ರೈವ್ ಪ್ರಕರಣ | ಸಂಬಂಧಪಟ್ಟವರ ಬಂಧನಕ್ಕೆ ಆಗ್ರಹಿಸಿ ಏ.29ರಂದು ಪ್ರತಿಭಟನೆ

ನೂರಾರು ಅಶ್ಲೀಲ ವಿಡಿಯೋಗಳು, ಚಿತ್ರಗಳು ಇರುವ ಹಾಸನದ ಪೆನ್ ಡ್ರೈವ್ ಲೈಂಗಿಕ...