ತುಮಕೂರು | ಟಿ-20 ಮಹಿಳೆಯರ ಕ್ರಿಕೆಟ್ ವಿಶ್ವಕಪ್ ವಿಜೇತ ತಂಡದ ನಾಯಕಿ ಟಿ.ಸಿ.ದೀಪಿಕಾಗೆ ಅದ್ಧೂರಿ ಸ್ವಾಗತ

Date:

ಟಿ-20 ಮಹಿಳೆಯರ ಕ್ರಿಕೆಟ್ ವಿಶ್ವಕಪ್ ವಿಜೇತ ತಂಡದ ನಾಯಕಿ ಟಿ.ಸಿ.ದೀಪಿಕಾ ಹಾಗೂ ರಾಜ್ಯದ ಇತರೆ ಇಬ್ಬರು ಮಹಿಳಾ ಆಟಗಾರ್ತಿಯರನ್ನು ನಗರದಲ್ಲಿ ಭಾನುವಾರ ಅದ್ಧೂರಿ ಮೆರವಣಿಗೆಯೊಂದಿಗೆ ಸ್ವಾಗತಿಸಿ, ಸನ್ಮಾನಿಸಲಾಯಿತು.

- Advertisement -

ಕರ್ನಾಟಕ ರಾಜ್ಯ ಕಾಡುಗೊಲ್ಲರ ಸಂಘದಿಂದ ಆಯೋಜಿಸಿದ್ದ ಈ ಅಭಿನಂದನಾ ಸಮಾರಂಭದ ಅಂಗವಾಗಿ ಬೆಳಗ್ಗೆ ಪುರಭವನ ವೃತ್ತದಿಂದ ತಂಡದ ನಾಯಕಿ ಟಿ.ಸಿ.ದೀಪಿಕ, ಕೊರಟಗೆರೆ ತಾಲ್ಲೂಕಿನ ಕಾವ್ಯ ಹಾಗೂ ಶಿವಮೊಗ್ಗದ ಕಾವ್ಯ ಈ ಮೂವರನ್ನು ಬೆಳ್ಳಿರಥದಲ್ಲಿ ಕೂರಿಸಿ ಬಾಲಭವನದವರೆಗೆ ಮೆರವಣಿಗೆ ಮೂಲಕ ಕರೆತರಲಾಯಿತು. ಜಾನಪದ ಕಲಾತಂಡಗಳ ವೈಭವದೊಂದಿಗೆ ಸಾವಿರಾರು ಜನ ಈ ಸಂಭ್ರಮದಲ್ಲಿ ಭಾಗಿಯಾದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿದ ಚಿತ್ರದುರ್ಗ ಕ್ಷೇತ್ರ ಸಂಸದರಾದ ಗೋವಿಂದ ಕಾರಜೋಳ ಅವರು ಟಿ.ಸಿ.ದೀಪಿಕ ಅವರ ತಂಡ ಕೊಲಂಬೋದಲ್ಲಿ ನೇಪಾಳದ ಜೊತೆ ಸೆಣಸಾಡಿ ಭಾರತಕ್ಕೆ ಜಯ ತಂದುಕೊಟ್ಟಿದ್ದಾರೆ. ಅಂಧ ಮಕ್ಕಳಾಗಿಯೂ ಇವರ ಸಾಧನೆ ಅಪ್ರತಿಮವಾದುದು. ಈ ಜಿಲ್ಲೆಯ ಮಗಳಾಗಿ ರಾಜ್ಯ ಮತ್ತು ರಾಷ್ಟçವನ್ನು ಪ್ರತಿನಿಧಿಸಿರುವ ದೀಪಿಕ ಈ ದೇಶದ ಹೆಮ್ಮೆಯ ಹೆಣ್ಣು ಮಗಳು ಎಂದು ಶ್ಲಾಘಿಸಿದರು.

1002660665

ಬಾಲ ಭವನದಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಶಾಸಕ ಜಿ.ಬಿ.ಜ್ಯೋತಿಗಣೇಶ್ ಅವರು ಕಣ್ಣಿನ ತೊಂದರೆ ಇದ್ದರೂ ಈ ಹೆಣ್ಣು ಮಕ್ಕಳ ಸಾಧನೆ ಅನನ್ಯವಾದದ್ದು. ಇವರ ಸಾಧನೆ ಇತರರಿಗೆ ಸ್ಪೂರ್ತಿಯಾಗಬೇಕು. ಇಡೀ ರಾಷ್ಟçವನ್ನು ಪ್ರತಿನಿಧಿಸಿರುವ ಹೆಣ್ಣು ಮಕ್ಕಳಲ್ಲಿ ತಂಡದ ನಾಯಕಿ ಈ ಜಿಲ್ಲೆಯವರು ಎಂಬುದು ನಮ್ಮ ಹೆಮ್ಮೆ. ಕಾಡುಗೊಲ್ಲ ಸಮುದಾಯದ ಬಡ ಕುಟುಂಬದ ಹೆಣ್ಣು ಮಗಳ ಈ ಸಾಧನೆಯನ್ನು ನಾವೆಲ್ಲಾ ಸ್ಮರಿಸಬೇಕು. ಇವರ ಜೊತೆ ಆಟವಾಡಿರುವ ರಾಜ್ಯದ ಇತರರನ್ನೂ ಇಲ್ಲಿ ಕರೆಸಿ ಅಭಿನಂದಿಸುತ್ತಿರುವುದು ಶ್ಲಾಘನೀಯ ಎಂದರು.

ಕರ್ನಾಟಕದಲ್ಲಿ ಕಾಡುಗೊಲ್ಲರು ಅಕ್ಷರಶಃ ಬುಡಕಟ್ಟು ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಹಿಂದೆ 80ರ ದಶಕದಿಂದಲೂ ಈ ಸಮುದಾಯಕ್ಕೆ ಅನ್ಯಾಯವಾಗಿದೆ. ಇದನ್ನು ಸರಿಪಡಿಸುವ ಕೆಲಸ ಆಗಬೇಕಿದೆ. ಪರಿಶಿಷ್ಟ ವರ್ಗಕ್ಕೆ ಸೇರ್ಪಡೆ ಮಾಡಬೇಕೆನ್ನುವ ಹಲವು ದಶಕಗಳ ಕೂಗು ಇನ್ನೂ ಹಾಗೆಯೇ ಉಳಿದಿದ್ದು, ಸಂಘಟನಾತ್ಮಕ ಶಕ್ತಿಯಿಂದ ಸೌಲಭ್ಯಗಳನ್ನು ಪಡೆದುಕೊಳ್ಳಲು ಸಾಧ್ಯವಿದೆ. ಸಮುದಾಯದ ಬೇಡಿಕೆಗಳಿಗೆ ನಾವೂ ಸಹ ಸ್ಪಂದಿಸುತ್ತೇವೆ ಎಂದರು.

ತುಮಕೂರು ಗ್ರಾಮಾಂತರ ಶಾಸಕರಾದ ಬಿ.ಸುರೇಶ್ ಗೌಡ ಅವರು ಮಾತನಾಡಿ ಈ ರಾಜ್ಯದ 44 ತಾಲ್ಲೂಕುಗಳಲ್ಲಿ ಕಾಡುಗೊಲ್ಲರು ನಿರ್ಣಾಯಕವಾಗಿದ್ದಾರೆ. ಆರ್ಥಿಕವಾಗಿ ಹಿಂದುಳಿದಿರುವ ಈ ಸಮುದಾಯಕ್ಕೆ ನ್ಯಾಯ ಸಿಗಬೇಕಾಗಿದೆ. ಎಸ್ಟಿ ವರ್ಗಕ್ಕೆ ಸೇರ್ಪಡೆ ಮಾಡಬೇಕೆನ್ನುವ ವಿಚಾರವಾಗಿ ದೇವೇಗೌಡರು, ಹೆಚ್.ಡಿ.ಕುಮಾರಸ್ವಾಮಿ, ವಿ.ಸೋಮಣ್ಣ ಸೇರಿದಂತೆ ಹಲವರು ಈ ಹಿಂದೆ ಚರ್ಚಿಸಿ, ಕೇಂದ್ರದೊAದಿಗೆ ಮಾತನಾಡಿದ್ದಾರೆ. ಎಲ್ಲ ಅರ್ಹತೆಯೂ ಇರುವುದರಿಂದ ಖಂಡಿತವಾಗಿಯೂ ಈ ಸಮುದಾಯ ಪರಿಶಿಷ್ಟ ವರ್ಗಕ್ಕೆ ಸೇರ್ಪಡೆಯಾಗುವ ಆಶಾಭಾವನೆ ಇದೆ. ಇದಕ್ಕಾಗಿ ನಾವೂ ಸಹ ಕೆಲಸ ಮಾಡುತ್ತೇವೆ ಎಂದರು.

1002660666

ವನಕಲ್ ಮಠದ ಶ್ರೀ ಬಸವ ರಮಾನಂದ ಸ್ವಾಮಿಗಳು ಆಶೀರ್ವಚನ ನೀಡಿ ಮಾತನಾಡಿ ಕಾಡುಗೊಲ್ಲ ಸಮುದಾಯ ರಾಜ್ಯದಲ್ಲಿ ಅತ್ಯಂತ ಹಿಂದುಳಿದ ಜನಾಂಗವಾಗಿದೆ. ಈ ಸಮುದಾಯಕ್ಕೆ ಉನ್ನತ ಶಿಕ್ಷಣ ಬೇಕಾಗಿದೆ. ಸಂಘವು ಈ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿದ್ದು, ಕೆಲವು ತಾಲ್ಲೂಕುಗಳಲ್ಲಿ ಕೌಶಲ್ಯ ತರಬೇತಿ ಕೇಂದ್ರ ತೆರೆಯಲು ಮುಂದಾಗಿರುವುದು ಸಂತಸದ ವಿಚಾರ. ಶೈಕ್ಷಣಿಕವಾಗಿ ಮತ್ತು ಆರ್ಥಿಕವಾಗಿ ಅಭಿವೃದ್ಧಿಯಾದರೆ ಮಾತ್ರ ಈ ಸಮುದಾಯ ಮುಂದೆ ಬರಲು ಸಾಧ್ಯವಿದೆ ಎಂದ ಅವರು, ಕಾಡುಗೊಲ್ಲ ಸಮುದಾಯದಲ್ಲಿ ಒಬ್ಬರೂ ವಿಧಾನ ಪರಿಷತ್ ಸದಸ್ಯರಿಲ್ಲ. ಸರ್ಕಾರ ಈ ಕೊರತೆಯನ್ನು ನೀಗಿಸಬೇಕಾಗಿದೆ ಎಂದರು.

ಕರ್ನಾಟಕ ರಾಜ್ಯ ಕಾಡುಗೊಲ್ಲರ ಸಂಘದ ರಾಜ್ಯಾಧ್ಯಕ್ಷ ಬಿಬಿಎಂಪಿ ರಾಜಣ್ಣ ಅಧ್ಯಕ್ಷತೆ ವಹಿಸಿ ಮಾತನಾಡಿ ಚಿತ್ರದುರ್ಗ ಹಾಗೂ ತುಮಕೂರು ಜಿಲ್ಲೆಯಲ್ಲಿ ಕಾಡುಗೊಲ್ಲ ಸಮುದಾಯ ಹೆಚ್ಚಿನ ಸಂಖ್ಯೆಯಲ್ಲಿದ್ದು, ಈ ಸಮುದಾಯಕ್ಕೆ ಹಲವು ಸೌಲಭ್ಯಗಳು ಸಿಗಬೇಕಾಗಿದೆ. ಸರ್ಕಾರಗಳು ಈ ನಿಟ್ಟಿನಲ್ಲಿ ಮನಸ್ಸು ಮಾಡಿ ಈ ಜನಾಂಗವನ್ನು ಮುಖ್ಯವಾಹಿನಿಗೆ ತರಬೇಕಾಗಿದೆ ಎಂದರು.

ವಿಧಾನ ಪರಿಷತ್ ಸದಸ್ಯರಾದ ನಾಗರಾಜ ಯಾದವ್ ಸಂಘದ ಕ್ಯಾಲೆಂಡರ್ ಬಿಡುಗಡೆಗೊಳಿಸಿ ಮಾತನಾಡಿದರು. ಇದಕ್ಕೂ ಮುನ್ನ ಮೆರವಣಿಗೆಗೆ ಚಾಲನೆ ನೀಡಿದ ಸಂದರ್ಭದಲ್ಲಿ ಮಾಜಿ ಸಚಿವರು, ಶಾಸಕರಾದ ಕೆ.ಎನ್.ರಾಜಣ್ಣ ಶುಭ ಕೋರಿ ಮಾತನಾಡಿದರು. 

ಸನ್ಮಾನಿತರಾಗಿ ದೀಪಿಕಾ ಮಾತನಾಡಿದರು. ಕರ್ನಾಟಕ ರಾಜ್ಯ ಕಾಡುಗೊಲ್ಲರ ಸಂಘದ ಜಿಲ್ಲಾಧ್ಯಕ್ಷ ದೊಡ್ಡೇಗೌಡ್ರು, ಗೌರವಾಧ್ಯಕ್ಷ ಎಸ್.ಡಿ.ಬಸವರಾಜ್, ರಾಜ್ಯ ಸಂಘದ ಮುಖಂಡರಾದ ಜಿ.ಡಿ.ಪ್ರಭುದೇವ್, ಬಸವರಾಜು, ಜಿಲ್ಲಾ ಸಂಘದ ಗಂಗಾಧರ್, ತಿಪ್ಪಯ್ಯ ಮುಂತಾದವರು ಉಪಸ್ಥಿತರಿದ್ದರು. 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ದೇಶದ ವಿವಿಧೆಡೆ ಪೊಲೀಸ್ ದಬ್ಬಾಳಿಕೆ, ನಾಯಕರ ಬಂಧನ ಖಂಡಿಸಿ ಎಐಡಿಎಸ್ಒ ಪ್ರತಿಭಟನೆ

 ದೇಶದ ವಿವಿಧ ರಾಜ್ಯಗಳಲ್ಲಿ ಪ್ರತಿಭಟನಾಕಾರರ ವಿರುದ್ಧ ನಡೆಯುತ್ತಿದೆ ಎನ್ನಲಾದ ಪೊಲೀಸ್ ದಬ್ಬಾಳಿಕೆ...

ಮೈಸೂರು ದಸರಾ ವೈಭವಕ್ಕೆ ತುಮಕೂರಿನ ಸಾಂಸ್ಕೃತಿಕ ಸ್ಪರ್ಶ

ನಾಡಿನ ಸುಭಿಕ್ಷ, ಜನರ ಶಾಂತಿ, ನೆಮ್ಮದಿ ಹಾಗೂ ಮಳೆ-ಬೆಳೆ ಸಮೃದ್ಧಿಗಾಗಿ ತಾಯಿ...

ಗುಬ್ಬಿ | ಕೆರೆಗೆ ಬಿದ್ದು 14 ವರ್ಷದ ಬಾಲಕ ಸಾವು: ದನಗಳಿಗೆ ನೀರು ಕುಡಿಸಲು ಹೋದಾಗ ದುರ್ಘಟನೆ

ದನಗಳಿಗೆ ನೀರು ಕುಡಿಸಲು ಕೆರೆಗೆ ತೆರಳಿದ್ದ 14 ವರ್ಷದ ಬಾಲಕನೊಬ್ಬ ಕಾಲು...

ತುಮಕೂರು ದಸರಾ: ಹತ್ತು ದಿನಗಳ ಸಾಂಸ್ಕೃತಿಕ ಸಂಭ್ರಮ ನಾಳೆಯಿಂದ : ಡಾ. ಜಿ. ಪರಮೇಶ್ವರ್

ಮೈಸೂರಿಗೆ ಹೋಗುವ ಬದಲು ತುಮಕೂರಿನಲ್ಲೇ ದಸರಾ ನೋಡೋಣ ಎಂಬ ಮಾತು ಜನರ...