ತುಮಕೂರು | ಮಲಹೊರುವ ಪದ್ದತಿ ಜೀವಂತ; ಕಾಯ್ದೆಗಿಲ್ಲ ಕವಡೆ ಕಾಸಿನ ಕಿಮ್ಮತ್ತು

Date:

ತುಮಕೂರು ನಗರದ ಹೃದಯ ಭಾಗದಲ್ಲಿ ದಲಿತ ಕಾರ್ಮಿಕರಿಂದ ಶೌಚಗುಂಡಿ ಸ್ವಚ್ಛಗೊಳಿಸಿರುವ ಅಮಾನುಷ ಘಟನೆ ವರದಿಯಾಗಿದೆ. ಹೊಟ್ಟೆಪಾಡಿಗಾಗಿ ಮಣ್ಣು ತುಂಬುವ ಕೆಲಸವೆಂದು ನಂಬಿ ಬಂದ ಕಾರ್ಮಿಕರನ್ನು ಮಲ ಹೊರುವ ಕೆಲಸಕ್ಕೆ ಬಳಸಿಕೊಳ್ಳಲಾಗಿದ್ದು, ಸರ್ಕಾರಿ ಅಧಿಕಾರಿಗಳ ಈ ನಡೆ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ನಗರದ ಕೆಇಬಿ ಎಂಜಿನಿಯರ್ಸ್ ಸಂಘದ ಆವರಣದಲ್ಲಿ ನಾಲ್ವರು ದಲಿತ ಕಾರ್ಮಿಕರನ್ನು ಯಾವುದೇ ಸುರಕ್ಷತಾ ಸಲಕರಣೆಗಳನ್ನು ಒದಗಿಸದೆ, ಬರಿಗೈ ಬರಿಮೈಯಲ್ಲೇ ಶೌಚಗುಂಡಿಗೆ ಇಳಿಸಿ ಮಲ ಬಾಚಿಸಿ ಟ್ರ್ಯಾಕ್ಟರ್‌ಗೆ ತುಂಬಿಸಿರುವ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ.

- Advertisement -

ತುಮಕೂರಿನ ನಂದೀಶ್, ಅರುಣ್, ಮಧುಗಿರಿ ಮೂಲದ ಮೂರ್ತಿ ನಾಯ್ಕ ಹಾಗೂ ನವೀನ್ ಎಂಬ ಕಾರ್ಮಿಕರನ್ನು ಈ ಕೆಲಸಕ್ಕೆ ನಿಯೋಜಿಸಲಾಗಿತ್ತು. ಕಳೆದ ಮೂರು ದಿನಗಳಿಂದ ಶೌಚಗುಂಡಿಯಲ್ಲಿದ್ದ ಮಲವನ್ನು ಕೈಯಿಂದಲೇ ಹೊರತೆಗೆದು ಸಾಗಿಸುವ ಕೆಲಸ ಮಾಡುತ್ತಿರುವುದಾಗಿ ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಕಾರ್ಮಿಕರನ್ನು ಈ ಕುರಿತು ಪ್ರಶ್ನಿಸಿದಾಗ, “ಮಣ್ಣು ತುಂಬುವ ಕೆಲಸವಿದೆ ಎಂದು ಕರೆತಂದಿದ್ದು, ಸ್ಥಳಕ್ಕೆ ಬಂದ ನಂತರ ಅದು ಶೌಚಗುಂಡಿ ಎಂಬುದು ತಿಳಿಯಿತು. ಹೊಟ್ಟೆಪಾಡಿನ ಕಾರಣದಿಂದ ಕೆಲಸ ಒಪ್ಪಿದೆವು. ಇಂತಹ ಕೆಲಸ ಮಾಡಿಸುವುದು ಕಾನೂನುಬಾಹಿರ ಎಂಬ ಮಾಹಿತಿ ಇರಲಿಲ್ಲ. ಇನ್ನು ಮುಂದೆ ಇಂತಹ ಕೆಲಸಕ್ಕೆ ಹೋಗುವುದಿಲ್ಲ” ಎಂದು ಹೇಳಿದ್ದಾರೆ.

ದೇಶದಲ್ಲಿ ಮಲಹೊರುವ ಪದ್ಧತಿಯನ್ನು ನಿಷೇಧಿಸಿ ಕಠಿಣ ಕಾನೂನು ಜಾರಿಯಲ್ಲಿದ್ದರೂ ಜಿಲ್ಲೆಯಲ್ಲಿ ಈ ಅಮಾನವೀಯ ಪದ್ಧತಿ ಈಗಲೂ ಜಾರಿಯಲ್ಲಿರುವುದು, ಸ್ವತಃ ಕೆಇಬಿ ಎಂಜಿನಿಯರ್ಸ್ ಸಂಘದ ಅಧಿಕಾರಿಗಳು ಇಂತಹ ಕೃತ್ಯದಲ್ಲಿ ಶಾಮೀಲಾಗಿರುವುದು ಪ್ರಕರಣದ ತೀವ್ರ ಚರ್ಚೆಗೆ ಕಾರಣವಾಗಿದೆ.

ಇದಕ್ಕೂ ಮುನ್ನ ಕೊರಟಗೆರೆ ಬಸ್ ನಿಲ್ದಾಣದಲ್ಲಿ ದಲಿತ ಬಾಲ ಕಾರ್ಮಿಕನಿಂದ ಶೌಚಗುಂಡಿ ಸ್ವಚ್ಛಗೊಳಿಸಿದ ಘಟನೆ ವರದಿಯಾಗಿತ್ತು. ಇದೀಗ ನಗರದಲ್ಲೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿರುವುದು ಜಿಲ್ಲಾಡಳಿತದ ನಿರ್ಲಕ್ಷ್ಯಕ್ಕೆ ಹಿಡಿದ ಕೈಗನ್ನಡಿಯಂತಿದೆ.

ಘಟನೆಯ ಕುರಿತು ಮಾಹಿತಿ ದೊರೆತರೂ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸದ ತುಮಕೂರು ಮಹಾನಗರ ಪಾಲಿಕೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯವನ್ನು ಸಾರ್ವಜನಿಕರು ಕಟುವಾಗಿ ಟೀಕಿಸಿದ್ದಾರೆ.

ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿರುವ ದಲಿತ ಮುಖಂಡ ಜಟ್ಟಿ ಅಗ್ರಹಾರ ನಾಗರಾಜು, “ಮಲಹೊರುವ ಪದ್ಧತಿ ನಿಷೇಧ ಕಾಯ್ದೆಯನ್ನು ಉಲ್ಲಂಘಿಸಿರುವ ತಪ್ಪಿತಸ್ಥರ ವಿರುದ್ಧ ತಕ್ಷಣವೇ ಕ್ರಿಮಿನಲ್ ಪ್ರಕರಣ ದಾಖಲಿಸಿ ಕಠಿಣ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದ್ದರು.

ಆರೋಪ ಕೇಳಿಬಂದ ಬೆನ್ನಲ್ಲೇ ಗುತ್ತಿಗೆದಾರ ಗುರುಪ್ರಸಾದ್ ಆಚಾರಿ ವಿರುದ್ಧ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ್ದಾರೆ. ಗುರುಪ್ರಸಾದ್ ಆಚಾರಿ ಅವರು ಕೆಇಬಿ ಎಂಜಿನಿಯರ್ಸ್ ಸಂಘದ ಕಟ್ಟಡ ನವೀಕರಣ ಕಾಮಗಾರಿಯ ಗುತ್ತಿಗೆದಾರರಾಗಿದ್ದು, ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್ ನಿಷೇಧ ಕಾಯ್ದೆಯಡಿ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಮಲಹೊರುವ ಅನಿಷ್ಟ ಪದ್ದತಿ ಸಂಪೂರ್ಣ ನಿರ್ಮೂಲನೆಯಾಗಿದೆ ಎಂಬ ಸರ್ಕಾರದ ಹೇಳಿಕೆಗಳ ನಡುವೆಯೇ ಇಂತಹ ಘಟನೆಗಳು ಮರುಕಳಿಸುತ್ತಿರುವುದು ಕಾನೂನಿನ ಪರಿಣಾಮಕಾರಿ ಜಾರಿಯ ಕುರಿತು ಪ್ರಶ್ನೆ ಹುಟ್ಟುಹಾಕಿದೆ. ಅಧಿಕಾರಿಗಳು ಈ ಪ್ರಕರಣವನ್ನು ಎಷ್ಟು ಗಂಭೀರವಾಗಿ ಪರಿಗಣಿಸುತ್ತಾರೆ ಮತ್ತು ತಪ್ಪಿತಸ್ಥರ ವಿರುದ್ಧ ಯಾವ ಕ್ರಮ ಕೈಗೊಳ್ಳುತ್ತಾರೆ ಎಂಬುದನ್ನು ಕಾದು ನೋಡಬೇಕಾಗಿದೆ.

WhatsApp Image 2024 08 09 at 10.52.48 1578a566
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಜನವರಿಯಲ್ಲಿ ಅಗ್ನಿವೀರ ಸೇನಾ ಭರ್ತಿ ರ‍್ಯಾಲಿ

ಬೀದರ್‌ ನಗರದಲ್ಲಿ 2027ರ ಜನವರಿ ತಿಂಗಳಲ್ಲಿ 15 ದಿನಗಳ ಕಾಲ ಅಗ್ನಿವೀರ...

ಬಾಗೇಪಲ್ಲಿ | ಯುವಕರ ಪರ ಹೋರಾಟದ ರೂಪುರೇಷೆಗಳನ್ನು ರೂಪಿಸಬೇಕಿದೆ: ಅನಿಲ್ ಕುಮಾರ್

ಸಮ್ಮೇಳನದ ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿದ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷ...

ದೇವಿಯಿಂದ ಕತ್ತಿ ಪಡೆದ ರಾಜರ ಕಥೆಗಳು ಶಾಲಾ ಪಠ್ಯದಲ್ಲಿ; NCERTಯಿಂದ ಮತ್ತೊಂದು ವಿವಾದ?

"ಭಾರತದಲ್ಲಿ ದೇವಿಯರ ಆರಾಧನೆಗೂ, ಯುದ್ಧಕ್ಕೂ ಅನಾದಿ ಕಾಲದಿಂದಲೂ ಅವಿನಾಭಾವ ಸಂಬಂಧವಿದೆ. ಪ್ರಾಚೀನ...

‘INDIA’ ಮೈತ್ರಿಕೂಟದ ಸಭೆಗಾಗಿ ದೆಹಲಿಗೆ ಮಮತಾ ಪ್ರಯಾಣ: ‘ದಿಮಾಗಿ ನಕ್ಸಲರ’ ಜತೆ ಸಮಾಲೋಚನೆ ಎಂದ ಸುವೇಂದು ಅಧಿಕಾರಿ

ಬುಧವಾರ ನಡೆಯಲಿರುವ 'INDIA' ಮೈತ್ರಿಕೂಟದ ಪ್ರಮುಖ ಸಭೆಯಲ್ಲಿ ಪಾಲ್ಗೊಳ್ಳಲು ಪಶ್ಚಿಮ ಬಂಗಾಳದ...