ತುರುವೇಕೆರೆ | ಗೋಣಿತುಮಕೂರಿನಲ್ಲಿ ಶಾಂತಿ ಸಭೆ : ಅರಸಮ್ಮನ ಆಶೀರ್ವಾದ ಪಡೆದ ದಲಿತ ನವ ಜೋಡಿ

Date:

ದೇವಾಲಯದೊಳಕ್ಕೆ ದಲಿತ ನವ ಜೋಡಿಗೆ ಆಸ್ಪದ ಕೊಡದೇ ತಡೆಯುಂಟು ಮಾಡಿದ ಪ್ರಕರಣ ರಾಜ್ಯಾದ್ಯಂತ ಸುದ್ದಿಯಾಗಿತ್ತು. ಇದರಿಂದ ಎಚ್ಚೆತ್ತುಕೊಂಡ ತುರುವೇಕೆರೆ ತಾಲೂಕು ಆಡಳಿತ ದೇವಾಲಯದೊಳಕ್ಕೆ ಪ್ರವೇಶ ಸಿಗದೇ ಅವಮಾನಕ್ಕೆ ಈಡಾಗಿದ್ದ ದಲಿತ ಸಮುದಾಯಕ್ಕೆ ಸೇರಿದ ನವ ಜೋಡಿಯು ತಾಲೂಕು ದಂಡಾಧಿಕಾರಿ ಕುಂ ಇ ಅಹಮದ್‌ ನೇತೃತ್ವದಲ್ಲಿ ಅರಸಮ್ಮನ ದೇವಾಲಯ ಪ್ರವೇಶಿಸಿ ದೇವರ ಪೂಜೆ ಮಾಡಿಸಿದರು.

- Advertisement -

 ಕಳೆದ ಐದಾರು ದಿನಗಳ ಹಿಂದೆಯಷ್ಠೇ ಮದುವೆಯಾಗಿದ್ದ ತಾಲೂಕಿನ ದಬ್ಬೇಘಟ್ಟ ಹೋಬಳಿ ಗೋಣಿತುಮಕೂರಿನ ಪಂಕಜ ಎಂಬ ದಲಿತ ಸಮುದಾಯಕ್ಕೆ ಸೇರಿದ ಯುವತಿ ತನ್ನ ಗಂಡ ಪುನಿತ್‌ ಮತ್ತು ತನ್ನ ಕುಟುಂಬದ ಸದಸ್ಯರೊಂದಿಗೆ ಪೂಜೆ ಸಲ್ಲಿಸಲು ಅರಸಮ್ಮ ದೇವಾಲಯಕ್ಕೆ ಬಂದಿದ್ದರು. ಆ ವೇಳೆ ಅಲ್ಲಿಯ ಪೂಜಾರಿ ನಾರಾಯಣಪ್ಪ ಎಂಬುವವರು ಮೈಮೇಲೆ ದೇವರು ಬಂದಂತೆ ನಾಟಕವಾಡಿ ನವ ಜೋಡಿಯನ್ನು ದೇವಾಲಯ ಪ್ರವೇಶಿಸಕೂಡದು. ನೀವು ದಲಿತರು ಎಂದು ಅಬ್ಬರಿಸಿ ದೇವಾಲಯದಿಂದ ಹೊರಗೆ ಕಳಿಸಿದ್ದರು. ಇದು ವ್ಯಾಪಕ ಟೀಕೆಗೆ ಗುರಿಯಾಗಿ ರಾಜ್ಯಮಟ್ಟದ ಸುದ್ದಿಗೆ ಗ್ರಾಸವಾಗಿತ್ತು ಎಂಬುದನ್ನು ಸ್ಮರಿಸಬಹುದಾಗಿದೆ. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

 ತಹಸೀಲ್ದಾರ್‌ ಕುಂ ಇ ಅಹಮದ್‌, ಸಿಪಿಐ ಲೋಹಿತ್‌ ಮತ್ತು ಎಸೈ ಮೂರ್ತಿ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಗೋಣಿತುಮಕೂರಿನಲ್ಲಿ ಶಾಂತಿ ಸಭೆ ನಡೆಸಿದರು. ಈ ವೇಳೆ ಮಾತನಾಡಿದ ತಹಸೀಲ್ದಾರ್‌ ಅಸ್ಪೃಶ್ಯತೆ ಆಚರಣೆ ಕಾನೂನಿಗೆ ವಿರೋಧ. ಇಂತಹ ಅನಿಷ್ಠ ಪದ್ದತಿಗಳಿಗೆ ಇತಿಶ್ರೀ ಹಾಡಬೇಕೆಂದು ತಿಳಿಹೇಳಿದರು. ಗ್ರಾಮದಲ್ಲಿ ಎಲ್ಲರೂ ಸೌಹಾರ್ದಯುತವಾಗಿ ಬಾಳಬೇಕು. ಜಾತಿಯ ವಿಷಯದಲ್ಲಿ ಸಂಘರ್ಷಕ್ಕೆ ಅವಕಾಶ ನೀಡಬಾರದೆಂದು ಮನವಿ ಮಾಡಿದರು.

ದಲಿತ ನವ ಜೋಡಿ ದೇವಾಲಯ ಪ್ರವೇಶಿಸುವ ವೇಳೆ ಗ್ರಾಮದ ಹಲವರು ಇದ್ದರು. 

ವರದಿ : ಎಸ್. ನಾಗಭೂಷಣ್

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುರುವೇಕೆರೆ ಪಟ್ಟಣದಲ್ಲಿ ಕಾಣಿಸಿಕೊಂಡ ಚಿರತೆ : ಮನೆ ಮಾಡಿದ ಆತಂಕ

 ತುರುವೇಕೆರೆ  ತಾಲೂಕಿನಲ್ಲಿ ಚಿರತೆ ಕಾಟ ಅತಿಯಾಗಿದೆ. ಗುರುವಾರ ರಾತ್ರಿ ಪಟ್ಟಣದ ಎಪಿಎಂಸಿ...

ತುರುವೇಕೆರೆ | ಹೆಚ್ಚಿದ ಚಿರತೆ ಕಾಟ : ಭಯಭೀತರಾಗಿರುವ ಜನರು

ತುರುವೇಕೆರೆ ತಾಲೂಕಿನ ವಿವಿಧೆಡೆ ಚಿರತೆಯ ಕಾಟ ಅತಿಯಾಗಿದೆ. ಚಿರತೆ, ಕುರಿಗಳು ಮತ್ತು...

ತುರುವೇಕೆರೆ | ನೀರಗುಂದ ಗ್ರಾಮದ ಸಮಸ್ಯೆಗಳನ್ನು ಪರಿಹರಿಸುವಂತೆ ಅಲ್ಲಪ್ಪ ಒತ್ತಾಯ

ತುರುವೇಕೆರೆ ತಾಲೂಕಿನ ನೀರಗುಂದ ಗ್ರಾಮದಲ್ಲಿ ನಾಲ್ಕೈದು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಹಲವಾರು...

ತುರುವೇಕೆರೆ | ಹೊಣಕೆರೆ ಗೊಲ್ಲರಹಟ್ಟಿಯಲ್ಲಿ ಚಿರತೆ ಪ್ರತ್ಯಕ್ಷ

ತುರುವೇಕೆರೆ ತಾಲೂಕಿನ ಹೊಣಕೆರೆ ಗೊಲ್ಲರಹಟ್ಟಿಯ ತೋಟದ ಸಾಲಿನಲ್ಲಿ ಚಿರತೆ ಪ್ರತ್ಯಕ್ಷವಾಗಿದೆ. ಇದರಿಂದಾಗಿ...