ತುರುವೇಕೆರೆಯಲ್ಲಿ ಫುಟ್‌ಪಾತ್ ಒತ್ತುವರಿ ತೆರವು: ಸುಗಮ ಸಂಚಾರಕ್ಕೆ ಅನುವು

Date:

ಪಾದಚಾರಿಗಳ ಸುಗಮ ಸಂಚಾರಕ್ಕೆ ಅಡ್ಡಿಯಾಗಿದ್ದ ಫುಟ್‌ಪಾತ್ ಒತ್ತುವರಿಗಳನ್ನು ತೆರವುಗೊಳಿಸುವ ಕಾರ್ಯಾಚರಣೆಯನ್ನು ಪಟ್ಟಣ ಪಂಚಾಯಿತಿ ವತಿಯಿಂದ ನವೆಂಬರ್ 6ರಂದು ಯಶಸ್ವಿಯಾಗಿ ನಡೆಸಲಾಯಿತು.

- Advertisement -

ತುರುವೇಕೆರೆ  ಪಟ್ಟಣದ ಹೃದಯಭಾಗದಲ್ಲಿ ನಿರ್ಮಿಸಲಾಗಿರುವ ವಾಣಿಜ್ಯ ಸಂಕೀರ್ಣದ ಲೋಕಾರ್ಪಣೆಗೆ ಸಿದ್ಧತೆ ನಡೆಸಲಾಗುತ್ತಿದ್ದು, ಸಂಕೀರ್ಣದ ಸುತ್ತಮುತ್ತಲಿದ್ದ ಬೀದಿಬದಿ ವ್ಯಾಪಾರಿಗಳ ಅಂಗಡಿಗಳು ಅಡ್ಡಿಯಾಗಿದ್ದವು. ಅಲ್ಲದೆ, ಮಿನಿ ವಿಧಾನಸೌಧದ (ತಾಲೂಕು ಕಚೇರಿ) ಪ್ರವೇಶದ್ವಾರದ ಎದುರು ವಾಹನಗಳ ಪಾರ್ಕಿಂಗ್ ಹಾಗೂ ಬೀದಿಬದಿ ವ್ಯಾಪಾರದಿಂದಾಗಿ ಅಧಿಕಾರಿಗಳ ವಾಹನಗಳ ಸಂಚಾರಕ್ಕೂ ತೊಂದರೆಯಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನುಡಿ ನಮನ | ಕೆವಿಎನ್- ನಿಜ ಅರ್ಥದ ಕನ್ನಡದ...

ಡಾ. ಕೆ.ವಿ. ನಾರಾಯಣ ಅವರು ವಿಮರ್ಶಕರಾಗಿ, ಭಾಷಾವಿಜ್ಞಾನಿಯಾಗಿ, ವಿಚಾರವಾದಿಯಾಗಿ ಕನ್ನಡ ನಾಡಿಗೆ ಪರಿಚಿತರು. ಅವರ ಇತ್ತೀಚಿನ ಪ್ರತಿಯೊಂದು ಮಾತು ಮತ್ತು ಬರಹಗಳಲ್ಲೂ ವೈಚಾರಿಕತೆ ಇದ್ದೆ ಇರುತ್ತಿತ್ತು. ಅವರು ಇಷ್ಟು ಬೇಗ ಅಗಲಿ ಹೋಗುತ್ತಾರೆ...

ಸುಪ್ರೀಂ ಆದೇಶವಿದ್ದರೂ ರಂಗೋಲಿ ಕೆಳಗೆ ತೂರುವ ಪೊಲೀಸರು: ಬಂಧಿತರ...

ಬಂಧಿಸಿದ 24 ಗಂಟೆಗಳ ಒಳಗಾಗಿ ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸುವುದು ಸಂವಿಧಾನ ಬದ್ಧ ಹಕ್ಕು. ವಿಳಂಬವಾದರೆ ಬಿಡುಗಡೆ ಕಡ್ಡಾಯವೆಂದು ಸುಪ್ರೀಂ ಕೋರ್ಟ್ ಆದೇಶವಿದೆ. ಆದರೆ ಗಡಿಯಾರ ಟಿಕ್ ಟಿಕ್ ಅನ್ನುತ್ತಿದ್ದರೂ, ದಾಖಲೆಗಳಲ್ಲಿ ಸಮಯವನ್ನು...

ಕೊಪ್ಪಳ | 3 ವರ್ಷದಲ್ಲಿ 35,302 ಜಾನುವಾರುಗಳ ಸಾವು;...

ರೋಗಬಾಧೆ, ಅಪಘಾತ ಹಾಗೂ ವಿವಿಧ ಆಕಸ್ಮಿಕ ಕಾರಣಗಳಿಂದ ಕೊಪ್ಪಳ ಜಿಲ್ಲೆಯಲ್ಲಿ ಜಾನುವಾರುಗಳ ಸಾವಿನ ಪ್ರಕರಣಗಳು ಹೆಚ್ಚುತ್ತಿದ್ದು, ಜಾನುವಾರು ಕಳೆದುಕೊಂಡ ರೈತರು ಒಂದೆಡೆ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದರೆ, ಮತ್ತೊಂದೆಡೆ ಸರ್ಕಾರದ ಪರಿಹಾರಕ್ಕಾಗಿ ಕಚೇರಿಗಳಿಗೆ ಅಲೆದಾಡುವಂತಾಗಿದೆ. ಕೊಪ್ಪಳ...

ಪಟ್ಟಣದ ದಬ್ಬೇಘಟ್ಟ-ತಿಪಟೂರು ವೃತ್ತ, ಅಂಬೇಡ್ಕರ್ ರಸ್ತೆ, ಬಾಣಸಂದ್ರ ರಸ್ತೆ, ದಬ್ಬೇಘಟ್ಟ ರಸ್ತೆ, ಮಾಯಸಂದ್ರ ರಸ್ತೆ ಹಾಗೂ ಬಿಇಒ ಕಚೇರಿ ಎದುರು ಫುಟ್‌ಪಾತ್‌ಗಳಲ್ಲಿ ಟೆಂಟ್‌ಗಳನ್ನು ಹಾಕಿಕೊಂಡು ವ್ಯಾಪಾರ ನಡೆಸಲಾಗುತ್ತಿತ್ತು. ಇದರಿಂದ ರಸ್ತೆಗಳು ಕಿರಿದಾಗಿ ವಾಹನ ಸವಾರರ ಸಂಚಾರಕ್ಕೆ ತೊಂದರೆಯಾಗುವುದರ ಜತೆಗೆ ಪಾದಚಾರಿಗಳಿಗೂ ನಡೆದಾಡಲು ಜಾಗವಿಲ್ಲದಂತಾಗಿತ್ತು.

ಈ ಹಿನ್ನೆಲೆಯಲ್ಲಿ ಬೀದಿಬದಿ ವ್ಯಾಪಾರಸ್ಥರಿಗೆ ಪರ್ಯಾಯ ಸ್ಥಳಾವಕಾಶ ಕಲ್ಪಿಸಿ, ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಪಟ್ಟಣ ಪಂಚಾಯಿತಿ ಕ್ರಮಕ್ಕೆ ಮುಂದಾಗಿತ್ತು.

ತೆರವು ಕಾರ್ಯಾಚರಣೆಯನ್ನು ಪ್ರಶ್ನಿಸಿ ಬೀದಿಬದಿ ವ್ಯಾಪಾರಸ್ಥರು ನ್ಯಾಯಾಲಯದ ಮೊರೆ ಹೋಗಿದ್ದರು. ಈ ಪ್ರಕರಣದಲ್ಲಿ ರಾಜ್ಯ ಉಚ್ಚ ನ್ಯಾಯಾಲಯವು ವ್ಯಾಪಾರಸ್ಥರು ಹಾಗೂ ಪಟ್ಟಣ ಪಂಚಾಯಿತಿಯ ವಾದಗಳನ್ನು ಆಲಿಸಿ, ನಿವೃತ್ತ ನ್ಯಾಯಾಧೀಶರ ಅಧ್ಯಕ್ಷತೆಯಲ್ಲಿ ಬೀದಿಬದಿ ವ್ಯಾಪಾರಸ್ಥರ ಕುಂದುಕೊರತೆ ನಿವಾರಣಾ ಸಮಿತಿಯನ್ನು ರಚಿಸಿತ್ತು.

ಸಮಿತಿಯು ಪಟ್ಟಣ ಪಂಚಾಯಿತಿ ಹಾಗೂ ಬೀದಿಬದಿ ವ್ಯಾಪಾರಸ್ಥರೊಂದಿಗೆ ಹಲವು ಸುತ್ತಿನ ಚರ್ಚೆ ನಡೆಸಿ, ಸ್ಥಳ ಪರಿಶೀಲನೆ ಹಾಗೂ ಸಾರ್ವಜನಿಕರ ಸಮಸ್ಯೆಗಳನ್ನು ಪರಿಗಣಿಸಿತು. ಬಳಿಕ ವ್ಯಾಪಾರಸ್ಥರಿಗೆ ಪರ್ಯಾಯ ಸ್ಥಳಾವಕಾಶ ಕಲ್ಪಿಸಿ ಒತ್ತುವರಿ ತೆರವುಗೊಳಿಸಲು ಆದೇಶಿಸಿತು.

1004353917

ಅದರಂತೆ ಪಟ್ಟಣ ಪಂಚಾಯಿತಿಯು ವಾಣಿಜ್ಯ ಸಂಕೀರ್ಣದ ಕೆಳ ಅಂತಸ್ತು, ಸಂತೆ ಮೈದಾನ ಹಾಗೂ ಪೊಲೀಸ್ ಠಾಣೆಯ ಪಕ್ಕದಲ್ಲಿ ಬೀದಿಬದಿ ವ್ಯಾಪಾರಸ್ಥರಿಗೆ ಪರ್ಯಾಯ ಸ್ಥಳಗಳನ್ನು ಗುರುತಿಸಿ ವ್ಯಾಪಾರ ನಡೆಸುವಂತೆ ಸೂಚಿಸಿತ್ತು. ಇದೇ ವೇಳೆ ವಾಣಿಜ್ಯ ಸಂಕೀರ್ಣದ ಅಂಗಡಿಮಳಿಗೆಗಳ ಹರಾಜು ಪ್ರಕ್ರಿಯೆಯನ್ನೂ ಪೂರ್ಣಗೊಳಿಸಿತ್ತು.

ಹರಾಜಿನಲ್ಲಿ ಮಳಿಗೆಗಳನ್ನು ಪಡೆದವರು ಮೂಲಸೌಕರ್ಯ ಕಲ್ಪಿಸಿ ವಾಣಿಜ್ಯ ಸಂಕೀರ್ಣದ ಬಳಕೆಗೆ ಅನುಕೂಲ ಮಾಡಿಕೊಡುವಂತೆ ಹಾಗೂ ಸಂಕೀರ್ಣದ ಸುತ್ತಲಿನ ಒತ್ತುವರಿ ತೆರವುಗೊಳಿಸುವಂತೆ ಒತ್ತಾಯಿಸಿದ್ದರು.

ಸುಪ್ರೀಂ ಕೋರ್ಟ್ ಆದೇಶ ಹಾಗೂ ಬೀದಿಬದಿ ವ್ಯಾಪಾರಸ್ಥರ ಕುಂದುಕೊರತೆ ನಿವಾರಣಾ ಸಮಿತಿಯ ಆದೇಶದ ಹಿನ್ನೆಲೆಯಲ್ಲಿ ಪಟ್ಟಣ ಪಂಚಾಯಿತಿಯು ಅಕ್ಟೋಬರ್ ತಿಂಗಳಲ್ಲಿಯೇ ಅಂಗಡಿಗಳನ್ನು ತೆರವುಗೊಳಿಸುವಂತೆ ವ್ಯಾಪಾರಸ್ಥರಿಗೆ ನೋಟಿಸ್ ನೀಡಿತ್ತು. ನಿಗದಿತ ಅವಧಿಯಲ್ಲಿ ತೆರವುಗೊಳಿಸದ ಹಿನ್ನೆಲೆಯಲ್ಲಿ ನವೆಂಬರ್ 6ರಂದು ಕಾರ್ಯಾಚರಣೆ ಕೈಗೊಳ್ಳಲಾಯಿತು.

ಪಟ್ಟಣ ಪಂಚಾಯಿತಿ ಆಡಳಿತಾಧಿಕಾರಿ ಹಾಗೂ ತಹಸೀಲ್ದಾರ್ ಜಗನ್ನಾಥ್, ಗ್ರೇಡ್-2 ತಹಸೀಲ್ದಾರ್ ಸುನಿಲ್ ಕುಮಾರ್, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಶ್ರೀನಾಥ್ ಬಾಬು, ಕಂದಾಯ ನಿರೀಕ್ಷಕ ಪ್ರಶಾಂತ್ ಭದ್ರಣ್ಣನವರ್ ಹಾಗೂ ಆರೋಗ್ಯ ನಿರೀಕ್ಷಕ ನರಸಿಂಹಮೂರ್ತಿ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಿತು.

ಸಿಪಿಐ ಲೋಹಿತ್, ಪಿಎಸ್‌ಐ ಮೂರ್ತಿ ಹಾಗೂ ಪೊಲೀಸ್ ಸಿಬ್ಬಂದಿಯ ಬಿಗಿ ಬಂದೋಬಸ್ತ್‌ನಲ್ಲಿ ಬೆಳಿಗ್ಗೆ 6 ಗಂಟೆಯಿಂದ ಸಂಜೆವರೆಗೆ ಪಟ್ಟಣ ಪಂಚಾಯಿತಿ ಸಿಬ್ಬಂದಿ, ಪೌರಕಾರ್ಮಿಕರು ಹಾಗೂ ನೀರು ಸರಬರಾಜು ಸಿಬ್ಬಂದಿ ಜೆಸಿಬಿ, ಟ್ರ್ಯಾಕ್ಟರ್ ಸೇರಿದಂತೆ ವಿವಿಧ ವಾಹನಗಳ ನೆರವಿನಿಂದ ಕಾರ್ಯಾಚರಣೆ ನಡೆಸಿದರು.

ಈ ವೇಳೆ ಸಂಚಾರಕ್ಕೆ ಅಡ್ಡಿಯಾಗಿದ್ದ ಗೂಡಂಗಡಿಗಳು, ನಾಮಫಲಕಗಳು, ತಾತ್ಕಾಲಿಕ ಟೆಂಟ್‌ಗಳು ಹಾಗೂ ಇತರೆ ವಸ್ತುಗಳನ್ನು ತೆರವುಗೊಳಿಸಿ ಫುಟ್‌ಪಾತ್‌ಗಳನ್ನು ಪಾದಚಾರಿಗಳ ಸಂಚಾರಕ್ಕೆ ಮುಕ್ತಗೊಳಿಸಲಾಯಿತು. ವಾಣಿಜ್ಯ ಸಂಕೀರ್ಣದ ಸುತ್ತಲೂ ಮತ್ತೆ ಅತಿಕ್ರಮ ಪ್ರವೇಶವಾಗದಂತೆ ತಾತ್ಕಾಲಿಕ ಟಾರ್ಪಾಲಿನ್ ತಡೆಗೋಡೆಯನ್ನೂ ನಿರ್ಮಿಸಲಾಯಿತು.

ಈ ಕಾರ್ಯಾಚರಣೆಯಿಂದ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಪಾದಚಾರಿಗಳು ಹಾಗೂ ವಾಹನ ಸವಾರರ ಸುಗಮ ಸಂಚಾರಕ್ಕೆ ಅನುಕೂಲವಾಗುವ ನಿರೀಕ್ಷೆಯಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು ಬಿಜೆಪಿಯಲ್ಲಿ ಭಿನ್ನಮತದ ಕಿಡಿ: ಮಾಧುಸ್ವಾಮಿ ಅಸಮಾಧಾನದ ಹಿಂದಿನ ರಾಜಕೀಯ ಲೆಕ್ಕಾಚಾರವೇನು?

ರಾಜ್ಯ ಬಿಜೆಪಿಯೊಳಗಿನ ಆಂತರಿಕ ಭಿನ್ನಮತ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ತುಮಕೂರು ಜಿಲ್ಲಾ...

ತುಮಕೂರು | ಕನ್ನಡ ಧ್ವಜಕ್ಕೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರಕ್ಕೆ ಪ್ರಸ್ತಾವನೆ: ಸಚಿವ ಕೃಷ್ಣಬೈರೇಗೌಡ

ಕನ್ನಡ ರಾಜ್ಯೋತ್ಸವದ ಸಂಭ್ರಮ ನವೆಂಬರ್ ತಿಂಗಳಿಗೆ ಮಾತ್ರ ಸೀಮಿತವಾಗದೆ ನಿತ್ಯೋತ್ಸವವಾಗಬೇಕು ಎಂದು...

ತುಮಕೂರಿನಲ್ಲಿ ನಾಳೆ 71ನೇ ಕನ್ನಡ ರಾಜ್ಯೋತ್ಸವ: 71 ಸಾಧಕರಿಗೆ ಸನ್ಮಾನ

ತುಮಕೂರು ಜಿಲ್ಲಾಡಳಿತದ ವತಿಯಿಂದ ನವೆಂಬರ್ 1ರಂದು ಬೆಳಗ್ಗೆ 9 ಗಂಟೆಗೆ ನಗರದ...

ತುಮಕೂರು | ಸಿದ್ಧಾರ್ಥ ದಂತ ಮಹಾವಿದ್ಯಾಲಯದಲ್ಲಿ ರ‍್ಯಾಗಿಂಗ್ ವಿರೋಧಿ ಜಾಗೃತಿ ಕಾರ್ಯಕ್ರಮ

 ವಿದ್ಯಾರ್ಥಿಗಳಲ್ಲಿ ರ‍್ಯಾಗಿಂಗ್‌ನ ಮಾರಕ ಪರಿಣಾಮಗಳ ಬಗ್ಗೆ ಅರಿವು ಮೂಡಿಸಲು ಹಾಗೂ ಕ್ಯಾಂಪಸ್...