ತುರುವೇಕೆರೆ | ₹4 ಕೋಟಿ ಜಮೀನು ₹34.80 ಲಕ್ಷಕ್ಕೆ ಹರಾಜು: ಕರ್ನಾಟಕ ಬ್ಯಾಂಕ್ ವಿರುದ್ಧ ರೈತರ ಆಕ್ರೋಶ

Date:

 ಕೃಷಿ ಸಾಲ ಮರುಪಾವತಿಸದ ಕಾರಣಕ್ಕೆ ಸುಮಾರು ₹4 ಕೋಟಿ ಮೌಲ್ಯದ ರೈತನ ಜಮೀನನ್ನು ಕೇವಲ ₹34.80 ಲಕ್ಷಕ್ಕೆ ಆನ್‌ಲೈನ್‌ನಲ್ಲಿ ಹರಾಜು ಮಾಡಿರುವುದನ್ನು ಖಂಡಿಸಿ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಸೋಮವಾರ ಕರ್ನಾಟಕ ಬ್ಯಾಂಕ್ ಎದುರು ಪ್ರತಿಭಟನೆ ನಡೆಸಲಾಯಿತು.

- Advertisement -

ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ  ತಾಳಕೆರೆ ಗ್ರಾಮದ ರೈತನ ಜಮೀನನ್ನು ಹರಾಜು ಮಾಡಿರುವ ಬ್ಯಾಂಕಿನ ಕ್ರಮ ರೈತ ವಿರೋಧಿ ಎಂದು ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಹರಾಜು ಪ್ರಕ್ರಿಯೆಯನ್ನು ರದ್ದುಗೊಳಿಸಿ ಜಮೀನನ್ನು ರೈತ ಕುಟುಂಬಕ್ಕೆ ಮರಳಿಸಬೇಕು ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರಾಮನಿಗೆ ₹150 ಕೋಟಿ, ಸೀತೆಗೆ ₹12 ಕೋಟಿ! ಬಿಗ್...

₹4,000 ಕೋಟಿಯ ಬೃಹತ್ ಬಜೆಟ್‌ನ 'ರಾಮಾಯಣ' ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಈ ಹೊತ್ತಿನಲ್ಲಿ ಚಿತ್ರರಂಗದ ಅದೇ ಹಳೆ ಹಣೆಬರಹವೊಂದು ಚರ್ಚೆಗೆ ಸಿಕ್ಕಿದೆ. ರಾಮನ ಪಾತ್ರಕ್ಕೆ ₹150 ಕೋಟಿ, ರಾವಣನಿಗೆ ₹100 ಕೋಟಿ ಸಂಭಾವನೆ!...

ರಾಮಲೀಲಾ ಮೈದಾನದಲ್ಲಿ ವಿಪಕ್ಷಗಳ ಬಲಪ್ರದರ್ಶನ; ಬೀದಿ ಹೋರಾಟ ಬೇರುಮಟ್ಟದ...

ನವಂಬರ್ 1ರಂದು ದೆಹಲಿಯ ಐತಿಹಾಸಿಕ ರಾಮಲೀಲಾ ಮೈದಾನದಲ್ಲಿ ನಡೆದ ಪ್ರತಿಭಟನಾ ಸಮಾವೇಶವು ಭಾರತೀಯ ರಾಜಕಾರಣದಲ್ಲಿ ಮತ್ತೊಂದು ಮಹತ್ವದ ರಾಜಕೀಯ ಮೈಲಿಗಲ್ಲಾಗಿ ದಾಖಲಾಗಿದೆ. ಚುನಾವಣಾ ಆಕ್ರಮ, ಎಸ್‌ಐಆರ್ ಷಡ್ಯಂತ್ರದ ವಿರುದ್ಧ ಮತ್ತು ಮುಖ್ಯ ಚುನಾವಣಾ...

ಮಣಿಪುರವನ್ನು ಜನಾಂಗೀಯ ಘರ್ಷಣೆಯ ದಳ್ಳುರಿಗೆ ತಳ್ಳಿ ಕೈಚೆಲ್ಲಿದೆ ಮೋ-ಶಾ...

ಮ್ಯಾನ್ಮಾರ್‌ನೊಂದಿಗೆ ಸುಮಾರು 400 ಕಿಲೋಮೀಟರ್ ಗಡಿ ಹಂಚಿಕೊಳ್ಳುವ ಈಶಾನ್ಯ ಭಾರತದ ಗಡಿ ರಾಜ್ಯ ಮಣಿಪುರದಲ್ಲಿ ಶತಮಾನಗಳಿಂದ ಬೆಳೆದು ಬಂದಿದ್ದ ಸೌಹಾರ್ದತೆಯ ಬೇರುಗಳನ್ನು ಸಂಪೂರ್ಣವಾಗಿ ಕೊಳೆತು ಹೋಗಲು ಕೇಂದ್ರ ಸರ್ಕಾರ ಬಿಟ್ಟಂತಿದೆ. 2023ರಿಂದ ನಡೆಯುತ್ತಿರುವ...

ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದ ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ, ಕೃಷಿಗಾಗಿ ಸಾಲ ಪಡೆದಿದ್ದ ರೈತನಿಗೆ ಸಾಲ ಮರುಪಾವತಿಸಲು ಸಾಧ್ಯವಾಗಿಲ್ಲ ಎಂಬ ಕಾರಣಕ್ಕೆ ಆತನ ಸುಮಾರು ನಾಲ್ಕು ಕೋಟಿ ರೂಪಾಯಿ ಮೌಲ್ಯದ ಜಮೀನನ್ನು ಕೇವಲ 34.80 ಲಕ್ಷ ರೂಪಾಯಿಗೆ ಹರಾಜು ಮಾಡಲಾಗಿದೆ. ಇದರಿಂದ ರೈತ ಕುಟುಂಬವನ್ನು ಬೀದಿಗೆ ತಳ್ಳುವ ಕೆಲಸವನ್ನು ಬ್ಯಾಂಕ್ ಮಾಡಿದೆ ಎಂದು ಆರೋಪಿಸಿದರು.

1004325407

ಬ್ಯಾಂಕ್ ತನ್ನ ತಪ್ಪನ್ನು ಸರಿಪಡಿಸಿಕೊಂಡು ರೈತನ ಕ್ಷಮೆ ಕೇಳಬೇಕು. ಹರಾಜು ಮಾಡಿರುವ ಭೂಮಿಯನ್ನು ಪುನಃ ರೈತರಿಗೆ ನೀಡದಿದ್ದರೆ ರಾಜ್ಯದಾದ್ಯಂತ ಇರುವ ಕರ್ನಾಟಕ ಬ್ಯಾಂಕ್ ಶಾಖೆಗಳಿಗೆ ಬೀಗ ಜಡಿದು ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಸಂವಿಧಾನದ ಪರಿಚ್ಛೇದ 21ರ ಪ್ರಕಾರ ಪ್ರತಿಯೊಬ್ಬರಿಗೂ ಬದುಕುವ ಹಕ್ಕಿದೆ. ಆದರೆ ಬ್ಯಾಂಕ್ ರೈತನ ಬದುಕಿನ ಆಧಾರವಾಗಿರುವ ಜಮೀನನ್ನೇ ಕಿತ್ತುಕೊಳ್ಳುವ ಮೂಲಕ ಸಂವಿಧಾನ ವಿರೋಧಿ ನಡೆ ಅನುಸರಿಸಿದೆ ಎಂದು ನಾಗೇಂದ್ರ ಆಕ್ರೋಶ ವ್ಯಕ್ತಪಡಿಸಿದರು.

1004325405

ಬ್ಯಾಂಕುಗಳು ರಿಯಲ್ ಎಸ್ಟೇಟ್ ದಂಧೆಯಂತೆ ಕಾರ್ಯನಿರ್ವಹಿಸುತ್ತಿವೆ ಎಂದು ಆರೋಪಿಸಿದ ಅವರು, ಸಾಲ ಮರುಪಾವತಿಯಲ್ಲಿ ವಿಳಂಬ ಮಾಡುವ ರೈತರ ವಿರುದ್ಧ ನ್ಯಾಯಾಲಯದಲ್ಲಿ ಡಿಕ್ರಿ ಪಡೆದು, ರೈತರಿಗೆ ಹಾಗೂ ಸಾರ್ವಜನಿಕರಿಗೆ ಸೂಕ್ತ ಮಾಹಿತಿ ನೀಡದೆ ಆನ್‌ಲೈನ್ ಹರಾಜು ನಡೆಸಲಾಗುತ್ತಿದೆ. ಬಂಡವಾಳಶಾಹಿಗಳು ಮತ್ತು ರಿಯಲ್ ಎಸ್ಟೇಟ್ ಉದ್ಯಮಿಗಳೊಂದಿಗೆ ಶಾಮೀಲಾಗಿ ತಮಗೆ ಬೇಕಾದವರಿಗೆ ಜಮೀನುಗಳನ್ನು ಹರಾಜು ಮಾಡಲಾಗುತ್ತಿದೆ ಎಂದು ದೂರಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕಾರ್ಪೊರೇಟ್ ಕಂಪನಿಗಳ ಲಕ್ಷಾಂತರ ಕೋಟಿ ರೂಪಾಯಿ ಸಾಲ ಮನ್ನಾ ಮಾಡುತ್ತಿವೆ. ಆದರೆ ರೈತರ ಸಾಲ ಮನ್ನಾ ಮಾಡಲು ಮುಂದಾಗುತ್ತಿಲ್ಲ. ಸಾಲದ ಶೂಲಕ್ಕೆ ಸಿಲುಕಿರುವ ರೈತರು ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು.

1004325396

ಯಾವುದೇ ಬ್ಯಾಂಕ್ ಅಥವಾ ಮೈಕ್ರೋಫೈನಾನ್ಸ್ ಸಂಸ್ಥೆಗಳು ರೈತರ ಜಮೀನು, ಮನೆಗಳನ್ನು ಕಿತ್ತುಕೊಳ್ಳಲು ಮುಂದಾದರೆ ರೈತ ಸಂಘ ತೀವ್ರ ಹೋರಾಟ ನಡೆಸಲಿದೆ. ರೈತರ ಒಂದು ಗುಂಟೆ ಜಮೀನನ್ನೂ ಬ್ಯಾಂಕುಗಳು ಕಿತ್ತುಕೊಳ್ಳಲು ಅವಕಾಶ ನೀಡುವ ಆನ್‌ಲೈನ್ ಹರಾಜು ಕಾನೂನಿಗೆ ತಡೆ ತರಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಒತ್ತಾಯಿಸಿದರು.

ಪ್ರತಿಭಟನೆಯ ಬಳಿಕ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ನೇತೃತ್ವದಲ್ಲಿ ಸಂಘದ ಪದಾಧಿಕಾರಿಗಳು, ಲೀಡ್ ಬ್ಯಾಂಕ್ ಮ್ಯಾನೇಜರ್ ಚೈತನ್ಯ, ಕರ್ನಾಟಕ ಬ್ಯಾಂಕ್ ಜನರಲ್ ಮ್ಯಾನೇಜರ್ ಗೋಪಾಲಕೃಷ್ಣ ಸಾಮಗ, ಡಿಜಿಎಂ ಹನುಮಂತಪ್ಪ, ಭಾಸ್ಕರ್, ಎಜಿಎಂ ಶೇಷಾದ್ರಿ, ಉಪವಿಭಾಗಾಧಿಕಾರಿ ಮೋಹನ್ ಹಾಗೂ ತಹಸೀಲ್ದಾರ್ ಕುಂಇ ಅಹಮದ್ ಅವರ ನಡುವೆ ಸುಮಾರು ಒಂದು ಗಂಟೆ ಕಾಲ ಚರ್ಚೆ ನಡೆಯಿತು.

1004325399

ಚರ್ಚೆಯ ವೇಳೆ, ಉಪವಿಭಾಗಾಧಿಕಾರಿಗಳ ನೇತೃತ್ವದಲ್ಲಿ ಹರಾಜಿನ ಮೂಲಕ ಜಮೀನು ಪಡೆದಿರುವ ವ್ಯಕ್ತಿಯನ್ನು ಕರೆಸಿ ಮಾತನಾಡಿ, ರೈತನಿಗೆ ಜಮೀನು ಮರಳಿಸುವ ಪ್ರಯತ್ನ ಮಾಡುವುದಾಗಿ ಬ್ಯಾಂಕ್ ಅಧಿಕಾರಿಗಳು ತಿಳಿಸಿದರು. ಇದಕ್ಕಾಗಿ 15 ದಿನಗಳ ಕಾಲಾವಕಾಶ ಕೋರಿದರು.

ಅಧಿಕಾರಿಗಳ ಭರವಸೆಗೆ ಒಪ್ಪಿಗೆ ಸೂಚಿಸಿದ ರೈತ ಸಂಘದ ರಾಜ್ಯಾಧ್ಯಕ್ಷ ನಾಗೇಂದ್ರ ಹಾಗೂ ರೈತರು, ನಿಗದಿತ ಅವಧಿಯಲ್ಲಿ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಕೈಬಿಟ್ಟರು.

ಪ್ರತಿಭಟನೆಯಲ್ಲಿ ರೈತ ಸಂಘದ ರಾಜ್ಯ ಕಾರ್ಯದರ್ಶಿಗಳಾದ ವಸಂತಕುಮಾರ್, ರವಿಕಿರಣ್ ಪೂರ್ಣಚ್ಚ, ಉಪಾಧ್ಯಕ್ಷರಾದ ಮಹೇಶ್ ಪ್ರಭು, ಕೆಂಪುಗೌಡ, ಮಲ್ಲಯ್ಯ, ಶಿವಾನಂದ ಕುಗ್ವೆ, ಭೂತಯ್ಯ, ಮಹಿಳಾ ಘಟಕದ ಮಂಜುಳ ಅಕ್ಕಿ, ನೇತ್ರಾವತಿ, ರಮ್ಯರಾಮಣ್ಣ, ಮಮತ, ರತ್ನಮ್ಮ, ಜಿಲ್ಲಾಧ್ಯಕ್ಷ ಗೋವಿಂದರಾಜು, ತಾಲ್ಲೂಕು ಅಧ್ಯಕ್ಷ ಶ್ರೀನಿವಾಸಗೌಡ ಸೇರಿದಂತೆ ವಿವಿಧ ಜಿಲ್ಲೆಗಳ ರೈತರು, ದಲಿತ ಮುಖಂಡರು ಹಾಗೂ ಜಮೀನು ಕಳೆದುಕೊಂಡ ರೈತ ಕುಟುಂಬದ ಸದಸ್ಯರು ಭಾಗವಹಿಸಿದ್ದರು.

ವರದಿ : ಗಿರೀಶ್ ಕೆ ಭಟ್, ತುರುವೇಕೆರೆ 

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ನಕಲಿ ಔಷಧ, ಕಲಬೆರಕೆ ಆಹಾರದ ಜಾಲದ ಬಗ್ಗೆ ಎಚ್ಚರಿಕೆ ಇರಲಿ : ಮುರುಳೀಧರ ಹಾಲಪ್ಪ

ಆಹಾರ ಮತ್ತು ಔಷಧ ಎರಡಕ್ಕೂ ನೇರ ಸಂಬಂಧವಿದೆ. ಕಲಬೆರಕೆ ಆಹಾರ ಸೇವಿಸಿ...

ತುಮಕೂರು | ಕನ್ನಡ ಭಾಷೆಗೆ ಅಭಿನಯಿಸುವ ಶಕ್ತಿಯಿದೆ : ಕೃಷ್ಣೇಗೌಡ

 ಭಾಷೆ ಎನ್ನುವುದು ಕೇವಲ ಸಂವಹನದ ಸಾಧನವಲ್ಲ. ಸಂಗೀತ, ಭಾವನೆ, ಕೋಪ, ಕಾಮ,...

ತುಮಕೂರು | ರಾಮಾಯಣ, ಮಹಾಭಾರತ ಜನಜೀವನದ ಮೇಲೆ ಆಳವಾದ ಪ್ರಭಾವ ಬೀರಿವೆ : ಡಾ. ಸಿ.ಜಿ. ಲಕ್ಷ್ಮೀಪತಿ

 ರಾಮಾಯಣ ಮತ್ತು ಮಹಾಭಾರತ ನಮ್ಮ ಬದುಕಿನ ಅವಿಭಾಜ್ಯ ಅಂಗಗಳಾಗಿದ್ದು, ವ್ಯಕ್ತಿಯ ಜೀವನ...

ಗುಬ್ಬಿ | ವಕೀಲರ ಮೇಲಿನ ಹಲ್ಲೆ ಖಂಡಿಸಿ ಕಾರ್ಯಕಲಾಪ ಬಹಿಷ್ಕಾರ

 ಗೌರಿಬಿದನೂರು ಪಟ್ಟಣದಲ್ಲಿ ಹಿರಿಯ ವಕೀಲ ಸಣ್ಣಕ್ಕಿ ಅವರ ಮೇಲೆ ನಡೆದ ಚೂರಿ...