ತುಮುಲ್ ಖುರ್ಚಿ ಪ್ರಕರಣ | ಕೊನೆಗೂ ದಲಿತ ಅಧಿಕಾರಿಗೆ ಚೇರ್ ವ್ಯವಸ್ಥೆ

Date:

ತುಮಕೂರು ಹಾಲು ಒಕ್ಕೂಟದಲ್ಲಿ ಹಣಕಾಸು ವಿಭಾಗದ ಅಧಿಕಾರಿ ವಿನಯ್ ಎಂಬುವವರಿಗೆ  ಚೇರ್ ನೀಡಿಲ್ಲ ಎಂದು ಚೀಲದ ಮೇಲೆ ಕುಳಿತು ಕೆಲಸ ಮಾಡುವುತ್ತಿರುವುದು ಮಾಧ್ಯಮಗಳಲ್ಲಿ ವರದಿಯಾಗುತ್ತಿದ್ದಂತೆ ವಿನಯ್ ಅವರಿಗೆ ಸೂಕ್ತ ಚೇರು, ಟೆಬಲ್, ಕ್ಯಾಬಿನ್ ವ್ಯವಸ್ಥೆ ಮಾಡಿಕೊಡಲಾಗಿದೆ.

- Advertisement -

ತುಮಕೂರು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ ಶ್ರೀನಿವಾಸನ್ ಮುಂದೆ ನಿಂತು ವಿನಯ್ ಅವರಿಗೆ ಸುಸಜ್ಜಿತ ಚೇಂಬರ್ ವ್ಯವಸ್ಥೆ ಮಾಡಿಕೊಟ್ಟಿದ್ದಾರೆ. ವಿನಯ್ ಪರಿಸ್ಥಿತಿಯನ್ನರಿತ ತುಮುಲ್ ಎಂಡಿ ಇವತ್ತು ತಾನೇ ವಿನಯ್ ಕೆಲಸ ಮಾಡುತ್ತಿದ್ದ ಸ್ಥಳಕ್ಕೆ ತೆರಳಿ ಪರಿಸ್ಥಿತಿಯನ್ನರಿತು ವಿನಯ್ ಗೆ ಚೆನ್ನಾಗಿರುವ ಚೇಂಬರ್ ವ್ಯವಸ್ಥೆ ಮಾಡಿಸಿಕೊಟ್ಟಿದ್ದಾರೆ. ಅಲ್ಲದೇ ಬೇರೆ ಏನಾದರು ಸಮಸ್ಯೆ ಇದ್ಯಾ ಎಂದು ವಿಚಾರಿಸಿಕೊಂಡಿದ್ದಾರೆ.   ಇದೊಂದು ಸಣ್ಣ ವಿಚಾರ, ಕೂತು ಬಗೆಹರಿಸಿಕೊಳ್ಳಬಹುದಿತ್ತು,  ನಡೆದೋಗಿದೆ‌ ಇನ್ನು ಮುಂದೆ  ಈ ರೀತಿಯ ಘಟನೆಗಳು ನಡೆಯದಂತೆ ನೋಡಿಕೊಳ್ಳುತ್ತೇವೆ ಜೊತೆಗೆ ವಿನಯ್ ಗೆ ಕಿರುಕುಳ ನೀಡುತ್ತಿದ್ದಾರೆ ಎನ್ನಲಾದ ಮಂಜುನಾಥ್ ಎಂಬ ಅಧಿಕಾರಿ ವಿರುದ್ಧ ಆಡಳಿತ ಮಂಡಳಿ ಗಮನಕ್ಕೆ ತಂದು  ಕ್ರಮ ಕೈಗೊಳ್ಳಲಾಗುವುದು ಎಂದು ತುಮುಲ್ ಎಂಡಿ ಶ್ರೀನಿವಾಸನ್ ಈದಿನ ಡಾಟ್ ಕಾಮ್ ಗೆ ಮಾಹಿತಿ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...
1002115385

 ಈಗಾಗಲೆ ಎಂಡಿಯವರು ನನ್ನನ್ನ ಕರೆಸಿ ಮಾತನಾಡಿದ್ದಾರೆ. ನಡೆದಿದ್ದೆಲ್ಲಾ ನಮ್ಮ ಎಂಡಿ ಆವರ ಬಳಿ ಹೇಳಿದ್ದೇನೆ, ಈಗ ತಾತ್ಕಾಲಿಕವಾಗಿ ಚೇಂಬರ್ ವ್ಯವಸ್ಥೆ ಮಾಡಿಕೊಟ್ಟಿದ್ದಾರೆ. ನಾಳೆ ಸಂಪೂರ್ಣವಾಗಿ ದೊಡ್ಡ ಟೇಬಲ್ ಹಾಗೂ,‌ ಕುರ್ಚಿಗಳನ್ನು ಕೊಡುತ್ತಾರೆ ಎಂದು ವಿನಯ್ ಹೇಳಿದ್ದಾರೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕೋಲಾರ | 108 ಆಂಬ್ಯುಲೆನ್ಸ್ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ: ಕೆ.ನಾರಾಯಣಗೌಡ

ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ...